AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಸಹವಾಸದಿಂದ ದುರಭ್ಯಾಸವು ಬರಲಿದೆ-ಎಚ್ಚರ

ಈ ದಿನ ಯಾರಿಗೆ ಸೂಕ್ತ? ಧಾರ್ಮಿಕ ಕಾರ್ಯಕ್ರಮ ನಡೆಸಬಹುದೇ? ವೃತ್ತಿಯಲ್ಲಿ ಬದಲಾವಣೆಗಳು ಇವೆಯೇ ಎಂಬಿತ್ಯಾದಿ ಮಾಹಿತಿಗಳು ದಿನಭವಿಷ್ಯದಲ್ಲಿ ತಿಳಿದುಕೊಳ್ಳಬಹುದು. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 14) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ದಿನಭವಿಷ್ಯ, ಸಹವಾಸದಿಂದ ದುರಭ್ಯಾಸವು ಬರಲಿದೆ-ಎಚ್ಚರ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Dec 14, 2023 | 12:30 AM

Share

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 14) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಗುರುವಾರ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಪೂರ್ವಾಷಾಢ, ಯೋಗ: ಗಂಡ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:51 ರಿಂದ 03:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:50 ರಿಂದ 08:14ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:39 ರಿಂದ 11: 03ರ ವರೆಗೆ.

ಸಿಂಹ ರಾಶಿ : ನಿಮ್ಮ ಆನಾರೋಗ್ಯದ ಸುಧಾರಣಗೆ ಕೇವಲ ವಿಶ್ರಾಂತಿಯೊಂದೇ ಸಾಲದು. ಸ್ವಲ್ಪ ಚಟುವಟಿಕೆಯೂ ಬೇಕಾದೀತು. ಭೂಮಿಯ ಮೇಲೆ ಹಣವನ್ನು ಹೂಡುವಿರಿ. ನಿಮಗೆ ಇಂದು ಶುಭವಾರ್ತೆಯು ಬರುವುದು. ಇಂದು ನಿಮ್ಮವರ ಬಗ್ಗೆಯೇ ಯೋಚಿಸಲು ಸಮಯ ಸಿಗದು. ದಿನದ ಆರಂಭವು ಬಹಳ ಉತ್ಸಾಹದಿಂದ ಇರಲಿದ್ದು ಎಲ್ಲ ಜೊತೆ ಸೌಹಾರ್ದವಾಗಿ ಇರುವಿರಿ. ಕಛೇರಿಯಲ್ಲಿ ಎಂದಿನ ಉತ್ಸಾಹವು ಇರದು. ಆಪ್ತರಿಂದ ನಿಮಗೆ ಉಡುಗೊರೆ ಸಿಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಲ್ಲಿ ಪೂರ್ಣ ತೃಪ್ತಿ ಇರದು. ಯಾರ ಜೊತೆಯಾದರೂ ಬೆರೆಯಬೇಕು ಅನ್ನಿಸುವುದು. ಸಂಗಾತಿಗೆ ಕಿರಿಕಿರಿ ಉಂಟಾಗುವಂತೆ ಮಾಡುವಿರಿ. ಕಡ್ಡಿ ಮುರಿದಂತೆ ಮಾತನ್ನು ಹೇಳುವುದು ಬೇಡ. ಎಲ್ಲ ತಪ್ಪುಗಳಿಗೂ ನಿಮ್ಮನ್ನೇ ಬೆರಳು ಮಾಡಿ ತೋರಿಸಬಹುದು. ಸರಿಯಾದ ಉತ್ತರವನ್ನು ನೀಡಬೇಕಾಗುತ್ತದೆ. ಅಧಿಕಾರಿಗಳ ಪ್ರಶ್ನೆಗೆ ಸಮಂಜಸ ಉತ್ತರವನ್ನು ನೀಡಿ.

ಕನ್ಯಾ ರಾಶಿ : ನಿಮ್ಮ ಆರೋಗ್ಯದ ಮೇಲೆ ಆಗುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಸರಿಯಾಗಿ ನಿವಾರಿಸಿಕೊಳ್ಳುವಿರಿ. ಸಹವಾಸದಿಂದ ದುರಭ್ಯಾಸವು ಬರಲಿದೆ. ಸಂಗಾತಿಯ ಜೊತೆ ಪ್ರೀತಿಯ ಮಾತೆಕತೆಯು ಆರಂಭವಾಗಿ ಕಲಹದಲ್ಲಿ ಮುಕ್ತಾಯವಾಗುವುದು. ಕಾರ್ಯಗಳಿಗೆ ಅಡೆತಡೆ ಉಂಟಾಗುವ ಶಂಕೆಯು ದೂರವಾಗುವುದು. ಮಿತವಾದ ಆಹಾರ ಸೇವನೆಯನ್ನು ಮಾಡುವಿರಿ. ಮಿತ್ರರ ಜೊತೆ ಪ್ರವಾಸ ಹೋಗಬಹುದು. ಹಿರಿಯರಿಂದ ನಿರೀಕ್ಷಿತ ಲಾಭವು ಸಿಗಲಿದ್ದು ಸಂತೋಷವಾಗುವುದು. ಎಲ್ಲ ತೊಂದರಗಳಿಗೂ ಯಾರನ್ನೋ ಬೈಯುತ್ತಾ ಕುಳಿತಿರುವುದರಲ್ಲಿ ಅರ್ಥವಿರದು. ಇಂದು ವೈಯಕ್ತಿಕ ಕಾರ್ಯಗಳನ್ನು ಮಾಡಿ ಮುಗಿಸಿಕೊಳ್ಳುವಿರಿ. ಚರ್ಮಕ್ಕೆ ಸಂಬಂಧಿಸಿದಂತೆ ಏನಾದರೂ ಕಾಣಿಸಿಕೊಳ್ಳಬಹುದು. ನಿಶ್ಚಲವಾದ ಮನಸ್ಸನ್ನು ಯಾರಾದರೂ ಕಲಕಿ ಹಾಳು ಮಾಡಬಹುದು. ಎಲ್ಲರನ್ನೂ ನಿಮ್ಮ ಪರವಾಗಿ ಮಾಡಿಕೊಳ್ಳಲು ಪ್ರಯತ್ನಿಸುವಿರಿ.

ತುಲಾ ರಾಶಿ : ನಿಮ್ಮ ಕುಟುಂಬದ ಸದಸ್ಯರು ಇಂದು ನಿಮ್ಮ ಅಧಿಕಾರದಿಂದ ಸಹಾಯವನ್ನು ಬಯಸುತ್ತಾರೆ. ನಿಮಗೂ ಅದು ಅನಿವಾರ್ಯವಾದೀತು. ಅನಪೇಕ್ಷಿತ ಚರ್ಚೆಯು ನಿಮ್ಮ ನೆಮ್ಮದಿಯನ್ನು ಹಾಳುಮಾಡೀತು. ಉದ್ಯೋಗದಲ್ಲಿ ಅಕಸ್ಮಾತ್ ಬದಲಾವಣೆಗಳು ಆಗಬಹುದು. ಆಲಸ್ಯದ ಪ್ರವೃತ್ತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಕ್ರಿಯಾಶೀಲತೆಗೆ ಬೇಕಾದ ಕ್ರಮವನ್ನು ತೆಗೆದುಕೊಳ್ಳುವುದು ಅನಿವಾರ್ಯ ಆಗಬಹುದು. ನಿಮ್ಮ ವಾಹನದಿಂದ ನಿಮಗೆ ಅಲ್ಪ ಲಾಭವಾಗುವುದು. ಅನುಮಾನದ ಬುದ್ಧಿಯಿಂದಲೇ ಅವಕಾಶಗಳನ್ನು ಕಳೆದುಕೊಳ್ಳುವಿರಿ. ನಕಾರಾತ್ಮಕ ಆಲೋಚನೆಯನ್ನು ಇಂದು ಹೆಚ್ಚು ಮಾಡುವಿರಿ. ಮಕ್ಕಳ ವಿವಾಹಕ್ಕಾಗಿ ನೀವು ಓಡಾಡಿ ಆಯಾಸಪಡುವಿರಿ. ನಿಮ್ಮ ಜವಾಬ್ದಾರಿಯ ಮನೋಭಾವಕ್ಕೆ ಹೆಚ್ಚು ಒತ್ತಡವು ಬರಬಹುದು. ನಿಮ್ಮ ಇಂದಿನ ವರ್ತನೆಯಿಂದ ಬಂಧುಗಳಿಗೆ ಅಸಮಾಧಾನವಾಗುವುದು. ಸರ್ಕಾರದಿಂದ ಆಗಬೇಕಾದ ಕಾರ್ಯಗಳಲ್ಲಿ ಹಿನ್ನಡೆಯಾಗುವುದು. ಹಳೆಯ ರಹಸ್ಯ ವಿಚಾರವು ಪುನಃ ಬೆಳಕಿಗೆ ಬರಬಹುದು.

ವೃಶ್ಚಿಕ ರಾಶಿ : ಭೂಮಿಯ ವ್ಯವಹಾರವು ಅಡೆತಡೆಗಳಿಲ್ಲದೇ ಸಾಗುವುದು. ನಿಮ್ಮ ಕಾರ್ಯವನ್ನು ಕೆಲವರು ಆಡಿಕೊಳ್ಳಬಹುದು. ಸಂಗಾತಿಯ ಮಾತುಗಳಿಂದ ಸಿಟ್ಟಾಗುವ ಸಾಧ್ಯತೆ ಇದೆ. ಇನ್ನೊಬ್ಬರ ವ್ಯಕ್ತಿತ್ವವನ್ನು ಅನುಕರಣೆ ಮಾಡುವಿರಿ. ಮನೆಯಲ್ಲಿ ಮಂಗಲಕಾರ್ಯವನ್ನು ಮಾಡಲು ಪ್ರಯತ್ನಿಸುವಿರಿ. ನೌಕರರ ವಿಚಾರಕ್ಕೆ ನೀವು ಸಿಟ್ಟುಗೊಳ್ಳುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಮತ್ತೆ ಮತ್ತೆ ನಿಮಗೆ ಅನಾರೋಗ್ಯವು ಕಾಣಿಸಿಕೊಂಡಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯಿರಿ ಮತ್ತು ದೈವಜ್ಞರನ್ನು ಸಂಪರ್ಕಿಸಿ ದೈವಾನುಕೂಲದ ಬಗ್ಗೆಯೂ ಮಾತನಾಡಿ. ನಿಮ್ಮ ಪೊರ್ವಯೋಜಿತ ಕಾರ್ಯಗಳನ್ನು ಕ್ರಿಯಾರೂಪಕ್ಕೆ ತರಲು ನಿಮಗೆ ಸಾಧ್ಯವಾಗದು. ಏನಾದರೂ ಅಡೆತಡೆಗಳು ಬರಬಹುದು. ನೌಕರರು ನಿಮ್ಮ ಮೇಲೆ ಅಪನಂಬಿಕೆಯನ್ನು ಇಡಬಹುದು. ನಿಮಗೆ ಯಾರೂ ಸ್ಪಂದನೆ ಕೊಡದೇ ಹೋಗಬಹುದು.