AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರು ರಾಜಕೀಯದಲ್ಲಿ ವಿವಾದಸ್ಪದ ಮಾತುಗಳನ್ನಾಡಿ ಕೆಂಗಣ್ಣಿಗೆ ಗುರಿಯಾಗುವರು

5 ಮಾರ್ಚ್​​​ 2025: ಈ ರಾಶಿಯವರು ರಾಜಕೀಯದಲ್ಲಿ ವಿವಾದಸ್ಪದ ಮಾತುಗಳನ್ನಾಡಿ ಕೆಂಗಣ್ಣಿಗೆ ಗುರಿಯಾಗುವರು. ತುಲಾ ರಾಶಿಯಿಂದ ಮೀನ ರಾಶಿ ವರೆಗಿನ ಇಂದಿನ ದಿನಭವಿಷ್ಯ ಇಲ್ಲಿದೆ. ಈ ಪೈಕಿ ಯಾವ ರಾಶಿಯವರ ಭವಿಷ್ಯ ಹೇಗಿದೆ ಎನ್ನುವುದನ್ನು ತಿಳಿಯಿರಿ.

ಈ ರಾಶಿಯವರು ರಾಜಕೀಯದಲ್ಲಿ ವಿವಾದಸ್ಪದ ಮಾತುಗಳನ್ನಾಡಿ ಕೆಂಗಣ್ಣಿಗೆ ಗುರಿಯಾಗುವರು
Daily Horoscope
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 05, 2025 | 1:42 AM

Share

 ನಿತ್ಯ ಪಂಚಾಗ:   ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಶತಭಿಷಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಬುಧ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ವೈಧೃತಿ, ಕರಣ : ಬಾಲವ, ಸೂರ್ಯೋದಯ – 06 – 48 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:44 – 14:13, ಯಮಘಂಡ ಕಾಲ 08:17 – 09:46, ಗುಳಿಕ ಕಾಲ11:15 – 12:44

ತುಲಾ ರಾಶಿ::ಸಾಲದ ಹೊರೆಯು ಭಾರಕ್ಕಿಂತ ಕಿರಿಕಿರಿಯನ್ನು ಹೆಚ್ಚು ಮಾಡುವುದು. ವ್ಯವಹಾರದಲ್ಲಿ ಸಂಬಂಧವನ್ನು ಬೆಸೆದು ವ್ಯವಹಾರವನ್ನೂ ಸಂಬಂಧವನ್ನೂ ಎರಡನ್ನೂ ಹಾಳುಮಾಡಿಕೊಳ್ಳುವಿರಿ. ದಾಖಲೆಗಳ ವಿಚಾರದಲ್ಲಿ ಜಾಗರೂಕರಾಗಿರಿ. ಟೀಕೆಗಳನ್ನು ನಿರ್ಲಕ್ಷಿಸಿ. ಶುಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೀರಿ. ನಿಮಗೆ ಬೇಡದ ವಸ್ತುಗಳನ್ನು ನೀವು ಇನ್ನೊಬ್ಬರಿಗೆ ದಾನವಾಗಿ ಕೊಡುವಿರಿ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ರಾಜಕೀಯದಲ್ಲಿ ವಿವಾದಸ್ಪದ ಮಾತುಗಳು ಆಡಿ ಎಲ್ಲರ ಕೆಂಗಣ್ಣಿಗೆ ಸಿಲುಕುವಿರಿ. ಮುಖಂಡರ ಜೊತೆ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ. ಕೆಲಸಗಳಲ್ಲಿ ನೀವು ಜಯವನ್ನು ಸಾಧಿಸಬಹುದು. ಸೊಂಟದ ನೋವು ಅಧಿಕವಾಗಿ ಕಾಡಬಹುದು. ಸಂಗಾತಿಯ ಮೇಲೆ ಯಾರದೋ ಕಾರಣಕ್ಕೆ ಮುನಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ: :ಔದಾರ್ಯದ ಪ್ರದರ್ಶನದಿಂದ ನಿಮ್ಮ ಸಂಪತ್ತಿಗೆ ಕುತ್ತು ಬಂದೀತು. ಮಾತಿಗಿಂತ ಮೌನವೇ ಸೂಕ್ತವೆನಿಸೀತು. ಯಾರದೋ ಪ್ರಚೋದನೆಯಿಂದ ತಪ್ಪು ಹಾದಿಯಲ್ಲಿ ಹೋಗುವಿರಿ. ಹೊಸ ಸಮಸ್ಯೆಗಳು ಸೃಷ್ಟಿಯಾಗದಂತೆ ಎಚ್ಚರ ವಹಿಸಿ. ಕೆಲಸದ ಆರಂಭದಲ್ಲಿ ಅಡೆತಡೆಗಳು ಎದುರಾಗುತ್ತವೆ. ಆಲೋಚನೆಗಳಲ್ಲಿ ಬದಲಾವಣೆ ಉಂಟಾಗಲಿದೆ. ನಿಮ್ಮ ವೃತ್ತಿಯಲ್ಲಿ ಭವಿಷ್ಯವನ್ನು ಹೆಚ್ಚಿಸಲು ನಿಮ್ಮ ಪರಿಣತಿಯನ್ನು ಬಳಸಿ. ಇಂದು ನಿಮ್ಮ ಮಾರ್ಗದರ್ಶನವನ್ನು ಕೇಳಿಕೊಂಡು ಬರಬಹುದು. ಇಂದಿನ ನಿಮ್ಮ ಕೆಲಸಗಳು ಬಹಳ ವಿಳಂಬವಾಗುದು. ಮಕ್ಕಳ‌ ಜೊತೆ ಅನ್ಯೋನ್ಯ ಸಂಬಂಧವು ಕಾಣಿಸಿಕೊಂಡೀತು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ಶಿಸ್ತಿನ ವ್ಯವಹಾರವನ್ನು ಬಿಡದೇ ಮುಂದುವರಿಸುವಿರಿ. ನಿಮ್ಮ ಬಳಿ ಇರುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾರ್ಯವನ್ನು ಪೂರೈಸಿಕೊಳ್ಳಿ. ಹೊಸ ವಸ್ತುವಿಗೆ ಧನವನ್ನು ವ್ಯಯಮಾಡುವುದು ಬೇಡ.

ಧನು ರಾಶಿ: :ನೌಕರರಿಗೆ ಸರಿಯಾದ ಕಾರ್ಯವನ್ನು ಹಂಚಿ, ಆಗಬೇಕಾದುದನ್ನು ಪೂರೈಸಿಕೊಳ್ಳುವಿರಿ. ಅಜ್ಞಾತವಾಸದಿಂದ ಹೊರಬಂದಂತೆ ಎಲ್ಲರೂ ನಿಮ್ಮನ್ನು ಮಾತನಾಡಿಸಿಯಾರು. ನಿಮ್ಮ ಮಾತು ಸುಳ್ಳಾಗಲಿದ್ದು ನಂಬಿಕೆಯನ್ನು ಕಳೆದುಕೊಳ್ಳುವಿರಿ. ಮೇಲಾಧಿಕಾರಿಗಳಿಗೆ ನಿಮ್ಮ ಮೇಲೆ ಕೆಲವು ತಪ್ಪುಕಲ್ಪನೆ ಇರಬಹುದು. ಯಾವುದೇ ವಿಚಾರದಲ್ಲಿ ಅನಗತ್ಯ ಹಸ್ತಕ್ಷೇಪ ಸೂಕ್ತವಲ್ಲ. ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡಿ. ಕುಟುಂಬದಲ್ಲಿ ನಿಮ್ಮ ಪ್ರಾಮುಖ್ಯವು ಅರಿವಿಗೆ ಬರಬಹುದು. ಬೇಡದ ಆಲೋಚನೆಯನ್ನು ದೂರಮಾಡಿಕೊಳ್ಳಿ. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು. ಸೋಲಿನ ಚಿಂತೆಯನ್ನು ಬಿಟ್ಟು ಸ್ಪರ್ಧೆಯಲ್ಲಿ ತೊಡಗಿ. ಉದ್ಯೋಗವನ್ನು ಬಿಡುವ ಸಂದರ್ಭವೂ ಬರಬಹುದು. ಮನೋ ವ್ಯಥೆಯನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಸಂಬಂಧಗಳಲ್ಲಿ ವಿಷಮತೆ ಕಾಣಿಸಿಕೊಂಡೀತು. ನಿಮ್ಮ ಗುರಿಯನ್ನು ತಲುಪಲು ಬೇರೆ ಮಾರ್ಗವನ್ನೂ ಅನುಸರಿಸಬೇಕಾದೀತು.

ಮಕರ ರಾಶಿ::ನಿಮ್ಮ ಅದೃಷ್ಟವನ್ನು ಸರಿಯಾಗಿ ಬೆಳೆಸಿಕೊಂಡು ಆಗಬೇಕಾದುದನ್ನು ಮಾಡಿಸಿಕೊಳ್ಳುವಿರಿ. ನಿಮ್ಮ ನಡವಳಿಕೆಯನ್ನು ಇತರರಿಗೆ ಸಾಬೀತುಮಾಡಬೇಕಿಲ್ಲ. ಉದ್ಯೋಗಿಗಳಿಗೆ ಉನ್ನತ ಅಧಿಕಾರಿಗಳ ಜೊತೆ ಸರಿಯಾದ ಹೊಂದಾಣಿಕೆಯನ್ನು ಮಾಡಿಕೊಳ್ಳುವಿರಿ. ಆತ್ಮೀಯ ಸಂಬಂಧವು ಕಾರಣಾಂತರಗಳಿಂದ ಕಡಿತವಾಗಿದ್ದು ನೀವು ಪುನಃ ಸ್ಥಾಪಿಸಿಕೊಂಡು ಎಂದಿನಂತೆ ನೆಮ್ಮದಿಯಿಂದ ಇರುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು. ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ಯಾರಾದರೂ ರಾಜಕೀಯ ವ್ಯಕ್ತಿಗಳ ಸಂಪರ್ಕವನ್ನು ನೀವು ಮಾಡುವಿರಿ. ದೈವದ ಮೇಲೆ ಭಕ್ತಿ ಉಂಟಾದೀತು. ಸ್ತ್ರೀಯರು ತಾಳ್ಮೆಯನ್ನು ಕಳೆದುಕೊಂಡು ಕೂಗಾಡಬಹುದು. ನಿಮ್ಮ ಅಭಿಪ್ರಾಯವನ್ನು ಹೇಳಬೇಕಾದಲ್ಲಿ ಹೇಳುವ ರೀತಿಯಲ್ಲಿ ಹೇಳಿ.

ಕುಂಭ ರಾಶಿ: :ವೈಚಾರಿಕ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಮಗೆ ಇಷ್ಟವಾದೀತು. ಬೋಧನೆಯ ವಿಚಾರದಲ್ಲಿ ಆಸಕ್ತಿಯನ್ನು ಹೆಚ್ಚಿಸಿಕೊಳ್ಳುವಿರಿ. ವ್ಯಾಪಾರದಲ್ಲಿ ಅಜಾಗರೂಕರಾಗಿ ಇರುವುದು ಸರಿಯಲ್ಲ. ಯಾರಿಗೂ ತೊಂದರೆ ಕೊಡಬೇಡಿ. ಪ್ರೀತಿಪಾತ್ರರಿಗೆ ಆರ್ಥಿಕ ನೆರವು ನೀಡುತ್ತೀರಿ. ನಿಮ್ಮ ಒಳಗೊಳ್ಳುವಿಕೆಯಿಂದ ಸಮಸ್ಯೆ ಸಕಾರಾತ್ಮಕವಾಗುತ್ತದೆ. ಸ್ನೇಹ ಸಂಬಂಧ ಬಲಗೊಳ್ಳುತ್ತವೆ. ಸಂಗಾತಿಯ ಬೇಸರವನ್ನು ಮಾತುಗಳಿಂದ ಸರಿಮಾಡುವಿರಿ. ಅಮೂಲ್ಯ ವಸ್ತುವಿನ ಲಾಭದಿಂದ ಸಂತಸವಾಗಲಿದೆ. ಸಹಾಯವನ್ನು ಮಾಡಿ ಸಂತೃಪ್ತಿಯನ್ನು ಪಡೆಯುವಿರಿ. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು. ನಿಮ್ಮ ಕೆಲಸಕ್ಕೆ ಅಧಿಕಾರಿಗಳು ಪ್ರಶಂಸಿಸುವರು. ಬಹಳ ದಿನಗಳಿಂದ ನಡೆಯುತ್ತಿದ್ದ ನ್ಯಾಯಾಲಯದ ವ್ಯವಹಾರವನ್ನು ಮುಕ್ತಾಯ ಮಾಡಿಕೊಳ್ಳುವಿರಿ. ಮಿತ್ರರೆಂದು ಹೇಳಿಕೊಂಡು ಯಾರಾದರೂ ಬರಬಹುದು. ಸರಿಯಾದ ಮೂಲದಿಂದ ಬಂದ ಸುದ್ದಿ ಮಾತ್ರ ನಂಬಲು ಅರ್ಹವಾಗಿರುವುದು.

ಮೀನ ರಾಶಿ: :ಇಂದು ನಿಮಗೆ ಆಸೆಗಳನ್ನು ಪೂರೈಸಲು ನಿಮಗೆ ಸಾಧ್ಯವಾದರೂ ತೃಪ್ತಿಯು ಮಾತ್ರ ಇಲ್ಲವಾಗುವುದು. ನಿಮಗೆ ಕಛೇರಿಯಲ್ಲಿ ಅನುಕೂಲಕರವಾದ ವಾತಾವರಣವು ಇರಲಿದೆ. ಸ್ನೇಹಿತರ ಜೊತೆಗೆ ದೂರಪ್ರಯಾಣವನ್ನು ಮಾಡುವಿರಿ. ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಹೂಡಿಕೆಗಳು ಹೆಚ್ಚಾಗುವುದಿಲ್ಲ. ಬೇಜವಾಬ್ದಾರಿ ನಿರ್ಧಾರಗಳು ಹಾನಿಯನ್ನುಂಟುಮಾಡಬಹುದು. ಅನುಭವಿ ಜನರ ಸಲಹೆಯನ್ನು ಅನುಸರಿಸಿ. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ನಿಮ್ಮನ್ನು ನಗಿಸುವ ಪ್ರಯತ್ನ ಮಾಡಿದರೂ ನೀವು ಯಾವುದೋ ಆಲೋಚನೆಯಲ್ಲಿಯೇ ಇರುವಿರಿ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು. ಕುಟುಂಬದ ಹೊಣೆಗಾರಿಕೆಯನ್ನು ನಿರ್ವಹಿಸುವುದು ಕಷ್ಟವಾಗಬಹುದು. ಅಕ್ರಮ ಕೆಲಸಗಳು ಎಲ್ಲರಿಗೂ ತಿಳಿಯಬಹುದು.

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು