Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 9 March: ಯಾರದೋ ಅಮೂಲ್ಯ ಸಮಯವನ್ನು ನೀವು ಬಳಸಿಕೊಳ್ಳುವಿರಿ

ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದಶಮೀ ತಿಥಿ, ಭಾನುವಾರ ಅವಶ್ಯಕತೆಯ ಪೂರೈಕೆ, ಅಧಿಕಾರ ಚಲಾವಣೆ, ನ್ಯಾಯಕ್ಕೆ ಹೋರಾಟ, ಕೂಟದಲ್ಲಿ ಭಾಗಿ ಇದೆಲ್ಲ ಈ ದಿನದಲ್ಲಿ ಇರಲಿದೆ. ಅತಿಯಾದ ಒತ್ತಡದಿಂದ ಮಾಡುವ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

Horoscope Today 9 March: ಯಾರದೋ ಅಮೂಲ್ಯ ಸಮಯವನ್ನು ನೀವು ಬಳಸಿಕೊಳ್ಳುವಿರಿ
ಯಾರದೋ ಅಮೂಲ್ಯ ಸಮಯವನ್ನು ನೀವು ಬಳಸಿಕೊಳ್ಳುವಿರಿ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 09, 2025 | 12:02 AM

ಬೆಂಗಳೂರು, ಮಾರ್ಚ್​ 09: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ದಶಮೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸೌಭಾಗ್ಯ, ಕರಣ : ಕೌಲವ, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:12 – 18:41, ಯಮಘಂಡ ಕಾಲ 12:43 – 14:13, ಗುಳಿಕ ಕಾಲ15:42 – 17:12.

ಮೇಷ ರಾಶಿ: ಇಂದು ದೂರದ ಬಂಧುಗಳು ಸಹಾಯಕ್ಕಾಗಿ ನಿಮ್ಮನ್ನು ಭೇಟಿಯಾಗಲು ಬರಬಹುದು.‌ ಅತಿಥಿಗಳಿಗೆ ಸತ್ಕಾರವನ್ನು ಮಾಡಿ ಸಂತೋಷಪಡಿಸುವಿರಿ.‌ ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ.ಇಂದು ನಿಮ್ಮ ವಿರೋಧಿಗಳು ಸಕ್ರಿಯವಾಗಿರಿರಬಹುದು. ಇದರಿಂದ ಕಚೇರಿಯಲ್ಲಿ ಕಾರ್ಯಗಳಿಗೆ ಅಡೆತಡಗಳು ಬರುವುದು. ಇಂದು ಕಚೇರಿಯಲ್ಲಿ ನಿಮ್ಮ ಮೇಲಧಿಕಾರಿಯ ಸಲಹೆಯನ್ನು ನಿರ್ಲಕ್ಷಿಸಬೇಡಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮ ಇರಿಸಿಕೊಳ್ಳುವುದು ಕಷ್ಟ. ವಾತಾವರಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ.

ವೃಷಭ ರಾಶಿ: ನಿಮಗೆ ಬೇಕಾದುದನ್ನು ಮಾತ್ರ ಕೇಳಿಸಿಕೊಳ್ಳುವಿರಿ. ಸಾಲವನ್ನು ಪಡೆದು ಅವರ ಜೊತೆ ವಾಗ್ವಾದವನ್ನು ಮಾಡುವುದು ಬೇಡ.‌ ಸುಂದರವಾದ ಸ್ಥಳಕ್ಕೆ ಹೋಗಬೇಕು ಎನಿಸುವುದು. ಅನಾರೋಗ್ಯವನ್ನು ನಿರ್ಲಕ್ಷಿಸುವುದು ಬೇಡ. ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳಿವೆ. ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಕೊಡಿ. ಕಚೇರಿ ರಾಜಕೀಯದಿಂದ ದೂರವಿರುವಿರಿ ಹಾಗೂ ಕುಟುಂಬದ ಜೊತೆಗೆ ಹೆಚ್ಚು ಸಮಯ ಕಳೆಯಿರಿ. ನೀವು ಹಾಳುಮಾಡಿಕೊಳ್ಳುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ನಿಮಗೆ ಬೇಕಾದುದನ್ನು ಪಡೆಯಲು ನಿಮಗೆ ಇಚ್ಛೆ ಇರುವುದು. ಪರಾವಲಂಬನೆ ಅನಿವಾರ್ಯ ಆದೀತು. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ.‌ ಸ್ನೇಹ ಸಂಬಂಧಗಳನ್ನು ದೂರ ಮಾಡಿಕೊಳ್ಳುವಿರಿ. ಸುಮ್ಮನೆ ಕಾಲಹರಣವಾಗುವುದು ನಿಮಗೆ ಗೊತ್ತಾಗದು.

ಮಿಥುನ ರಾಶಿ: ಮಕ್ಕಳ ವಿವಾಹದ ಚಿಂತೆ ಕಾಡಬಹುದು. ನಿಮ್ಮ ತಪ್ಪಿನಿಂದ ಮಕ್ಕಳಿಗೆ ತೊಂದರೆಯಾದೀತು. ನಿಮ್ಮ ಬಗ್ಗೆ ಸ್ಪಷ್ಟತೆ ಇರಲಿ. ಉಸಿರಿಗೆ ಸಂಬಂಧಿಸಿದ ತೊಂದರೆ ಕಾಣಿಸಿಕೊಳ್ಳಬಹುದು. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಆದಾಯವನ್ನು ಹೆಚ್ಚಿಸಲು ಹೊಸ ಮಾರ್ಗಗಳನ್ನು ನೋಡಿ. ಹಣ ಸಂಪಾದಿಸಲು ಕಷ್ಟಪಟ್ಟು ಕೆಲಸ ಮಾಡುತ್ತಿರಿ. ಇಂದು ವ್ಯವಹಾರದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಮಾತುಕತೆ ಮೂಲಕ ಪರಿಹರಿಸಲಾಗುವುದು. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಒಂದೇ ವಿಚಾರಕ್ಕೆ ಮತ್ತೆ ಮತ್ತೆ ಬೇಸರಿಸುವ ಅವಶ್ಯಕತೆ ಇಲ್ಲ. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ವಾಹನ ಸವಾರರು ಜಾಗರೂಕತೆ ಅವಶ್ಯಕ.

ಕರ್ಕಾಟಕ ರಾಶಿ: ಅನಾರೋಗ್ಯದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳುವುದು ಸಾಹಸವಾದೀತು. ಭೂಮಿಯನ್ನು ಖರೀದಿಸುವ ಬಗ್ಗೆ ಸಮಾಲೋಚನೆ ಮಾಡುವಿರಿ. ಪ್ರಮುಖ ವ್ಯವಹಾರ ಸಂಬಂಧಿತ ನಿರ್ಧಾರಗಳನ್ನು ಮುಂದೂಡಿ. ಕುಟುಂಬದ ಸದಸ್ಯರೊಂದಿಗೆ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಸಮಸ್ಯೆಗಳನ್ನು ಚರ್ಚಿಸಿ. ಅವಶ್ಯಕತೆಗಳ ಪೂರೈಕೆಯು ಕಷ್ಟ ಎನಿಸಬಹುದು. ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಇರಲಿದೆ. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ಹೊಸ ಯಂತ್ರಗಳನ್ನು ಸ್ವೀಕರಿಸುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ಸಂಗಾತಿಯಿಂದ ಉಡುಗೊರೆಯು ಅನಿರೀಕ್ಷಿತವಾಗಿ ಸಿಗಬಹುದು.

ಸಿಂಹ ರಾಶಿ: ಸುಳ್ಳನ್ನೇ ಸತ್ಯ ಮಾಡಲು ನಿಮ್ಮ ಸಮಯವನ್ನು ವ್ಯರ್ಥ ಮಾಡುವಿರಿ. ಕೊರತೆಯನ್ನು ನೆನೆದು ದುಃಖಿಸುವುದು ಬೇಡ. ಕಾಲಕ್ಕೆ ಸಿಗಬೇಕಾದುದು ಸಿಗಲಿದೆ. ಬಹಳ ದಿನಗಳಿಂದ ಬಾಕಿ ಉಳಿದಿರುವ ಹಣವನ್ನು ತೀರಿಸುವಿರಿ. ಉದ್ಯೋಗಸ್ಥರಿಗೆ ಬಡ್ತಿಗೆ ಹೊಸ ಅವಕಾಶಗಳು ಸಿಗಲಿವೆ. ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಎಂದಿಗಿಂತ ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಚಿಂತೆಯು ಕಾಡಬಹುದು. ಏನೇ ಮಾಡಿದರೂ ಹೊಸ ಮಾದರಿಯಲ್ಲಿ ಅದು ಇರಲಿದೆ. ಸಹಾಯವನ್ನು ಹೇಳಿಕೊಳ್ಳಲಾರಿರಿ. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ನ್ಯಾಯ ಸಮ್ಮತವಾಗಿ ಇದ್ದು ಎಲ್ಲವನ್ನೂ ಎದುರಿಸುವಿರಿ. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುದು. ಕಛೇರಿಯ ಕೆಲಸವನ್ನು ಹಂಚಿಕೊಂಡು ಮಾಡುವಿರಿ.

ಕನ್ಯಾ ರಾಶಿ: ಆಪ್ತರನ್ನು ದೂರವಿರಿಸಿಕೊಂಡು ಸಂಕಟಪಡುವಿರಿ. ವಿಶ್ವಾಸಘಾತವಾದರೆ ನಿಮಗೆ ನೋವಾಗಲಿದೆ. ವಿದ್ಯಾರ್ಥಿಗಳ ಶ್ರಮವು ವ್ಯರ್ಥವಾಗುವುದು. ವೈವಾಹಿಕ ಜೀವನದಲ್ಲಿನ ಸಮಸ್ಯೆಗಳು ಬಗೆಹರಿಯಲಿವೆ. ನೀವು ಕುಟುಂಬ ಸದಸ್ಯರೊಂದಿಗೆ ಎಲ್ಲೋ ಪ್ರಯಾಣಿಸಲು ಯೋಜಿಸಬಹುದು. ವ್ಯಾಪಾರದಲ್ಲಿ ವಿಸ್ತರಣೆಯಾಗಲಿದೆ. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಅತಿಯಾದ ವಿಷಾದದಿಂದ ಯಾರ ಜೊತೆಯೂ ಬೆರೆಯುವ ಮನಸ್ಸಿರದು. ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ವಸ್ತುಗಳು ಕಳ್ಳತನವಾಗಬಹುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ನಿಮ್ಮ ಉತ್ಸಾಹಕ್ಕೆ ಯಾರಾದರೂ ಭಂಗಮಾಡಬಹುದು. ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು.

ತುಲಾ ರಾಶಿ: ಅಪರಿಚಿತರ ಸಂಪರ್ಕವನ್ನು ಬಳಸಿಕೊಂಡು ಲಾಭ ಮಾಡಿಕೊಳ್ಳುವಿರಿ. ಉತ್ಪನ್ನಗಳನ್ನು ಮಾರಾಟ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳುವಿರಿ. ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಸಹೋದ್ಯೋಗಿಗಳೊಂದಿಗೆ ಅನಗತ್ಯ ವಾದಗಳನ್ನು ತಪ್ಪಿಸಿ. ಕೆಲವರಿಗೆ ಪೂರ್ವಿಕರ ಆಸ್ತಿಯಿಂದ ಆರ್ಥಿಕ ಲಾಭವಾಗಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ವ್ಯವಹಾರದಲ್ಲಿ ಊಹಿಸಿದ್ದಕ್ಕಿಂತ ಹೆಚ್ಚಿನ ಲಾಭವು ಸಿಗುವುದು. ಉದರಬಾಧೆಯಿಂದ ಕಷ್ಟಪಡುವಿರಿ. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ಆಸ್ತಿಯ ಕಲಹವನ್ನು ನ್ಯಾಯಾಲಯಕ್ಕೆ ತಡಗೆದುಕೊಂಡು ಹೋಗುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಅಲ್ಪರ ಸಹವಾಸದಿಂದ ಅಭಿಮಾನಕ್ಕೆ ತೊಂದರೆಯಾಗುವುದು. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಸಂಗಾತಿಯಿಂದ ನಿಮಗೆ ನೂತನ ವಸ್ತ್ರಗಳು ಬರಬಹುದು. ನಿಮ್ಮ ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಕೆಲಸದಲ್ಲಿ ಪ್ರಾಮಾಣಿಕತೆ ಕಡಿಮೆ ಆದಂತೆ ತೋರಬಹುದು.

ವೃಶ್ಚಿಕ ರಾಶಿ: ನಿಮ್ಮ ಹಣದ ನಷ್ಟಕ್ಕೆ ಮಾತ್ಯಾರನ್ನೋ ದೂರುವುದು ಬೇಡ. ಹೊಸ ಉದ್ಯೋಗವು ನಿಮಗೆ ಆರ್ಥಿಕತೆಯಿಂದ ನೆಮ್ಮದಿಯನ್ನು ನೀಡುವುದು. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವ ಇಚ್ಛೆ ಇರಲಿದೆ. ವೈಯಕ್ತಿಕ ಬೆಳವಣಿಗೆಯತ್ತ ಗಮನ ಹರಿಸಿ. ನಿಮ್ಮ ದೈನಂದಿನ ದಿನಚರಿಯಿಂದ ವಿರಾಮ ತೆಗೆದುಕೊಳ್ಳಿ. ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ವ್ಯಾಪಾರವು ಲಾಭಾಂಶವನ್ನು ಹೆಚ್ಚು ಪಡೆಯುವುದು. ನಿಮ್ಮ ಕೆಲಸಗಳಿಗೆ ಆತ್ಮಸಾಕ್ಷಿಯೇ ಮುಖ್ಯವಾಗಿರುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯ ಬೆಂಬಲವು ಸಿಗದೇಹೋಗಬಹುದು. ನಿಮ್ಮ ಹಿತೈಷಿಗಳಾದರೂ ಅವರ ಜೊತೆಗಿನ ಒಡನಾಟವು ಮಿತಿಯಲ್ಲಿ ಇರಲಿ. ಇಂದಿನ ಕಾರ್ಯದಲ್ಲಿ ಮುನ್ನಡೆಯಿರಲಿದ್ದು ನಿಮ್ಮ ಬಗ್ಗೆ ಸದಭಿಪ್ರಾಯವು ಇರುವುದು. ಆಪ್ತರ ಜೊತೆ ಮಾಡಿದ‌ ಸಮಾಲೋಚನೆಯಿಂದ ಮನಸ್ಸಿಗೆ ಸಂತೋಷ ಸಿಗುವುದು. ವಾಸಸ್ಥಳದ ಬದಲಾವಣೆಯಿಂದ ಹೊಂದಿಕೊಳ್ಳುವುದು ಕಷ್ಟವಾದೀತು.

ಧನು ರಾಶಿ: ಸರ್ಕಾರದ ಕಾರ್ಯವನ್ನು ಮಾಡಲು ಹೆಚ್ಚು ಆಯಾಸಗೊಳ್ಳಬೇಕಾಗುವುದು. ದೂರದಲ್ಲಿರುವವರೆಗೆ ಮನೆಯ ನೆನಪು ಕಾಡಬಹುದು. ನೀವು ಇಂದು ಎಲ್ಲರಿಂದ ವಿಶ್ವಾಸವನ್ನು ಕಳೆದುಕೊಳ್ಳಬಹುದು. ಮಂಗಲ ಕಾರ್ಯಗಳಿಂದ ನೆಮ್ಮದಿ ಇರುವುದು. ಮಿತ್ರನ ನಂಬಿಕೆಯನ್ನು ಕಳೆದುಕೊಂಡು, ಆದ ನಷ್ಟಕ್ಕೆ ದುಃಖಿಸುವಿರಿ. ಸ್ಥಿರಾಸ್ತಿಯನ್ನು ವ್ಯವಹಾರ‌ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಮಿತ್ರರ ಮನಸ್ತಾಪವನ್ನು ನೀವು ಬಗೆಹರಿಸಿಕೊಳ್ಳುವಿರಿ. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾಗಿ ಇರುವುದಿಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ‌ ಇರುಬುದು. ಸಾಹಿತ್ಯದಲ್ಲಿ ಆಸಕ್ತಿ ಮೂಡುವ ಸಾಧ್ಯತೆ ಇದೆ. ಪ್ರೀತಿಯಿಂದ ಕೊಟ್ಟ ವಸ್ತುವನ್ನು ಮತ್ತೆ ಕೊಡುವುದು ಬೇಡ. ಸಂಗಾತಿಯ ಜೊತೆ ಸಣ್ಣ ವಿಚಾರಗಳಿಗೂ ಜಗಳವಾಡುಬಿರಿ. ಮಕ್ಕಳ ಬಗ್ಗೆ ನಿಮ್ಮ ಭಾವನೆ ತಪ್ಪಾಗಬಹುದು.

ಮಕರ ರಾಶಿ: ಸ್ತ್ರೀಯರ ಜೊತೆಗೆ ನಿಮ್ಮ ಅಧಿಕ ಒಡನಾಟವು ಇರುವುದು. ಉದ್ಯೋಗಕ್ಕೆ ಸಂಬಂಧಿಸಿದಂತೆ ಕಿರಿಕಿರಿಯನ್ನು ಅನುಭವಿಸಿದರೂ ಅದನ್ನು ವ್ಯಕ್ತ ಮಾಡುವುದು ಬೇಡ. ಕಾರ್ಯಗಳನ್ನು ಪೂರ್ಣಗೊಳಿಸಲು ಹೆಚ್ಚು ವಿಳಂಬ ಮಾಡಬೇಡಿ. ಸಂಬಂಧಗಳಲ್ಲಿ ಉತ್ತಮ ಪರಸ್ಪರ ತಿಳುವಳಿಕೆ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕೆಲಸದಲ್ಲಿ ಅಡೆತಡೆಗಳ ನಡುವೆಯೂ ಯಶಸ್ಸನ್ನು ಪಡೆಯುತ್ತಾರೆ. ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ಹಳೆಯ ಮನೆಯ ದುರಸ್ತಿ ಕಾರ್ಯವು ಜರುಗಲಿದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ‌ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಬಹುದು. ಸ್ವಂತ ವಾಹನದಿಂದ ನೀವು ಲಾಭವನ್ನು ಗಳಿಸುವಿರಿ. ನಿಮ್ಮ ವರ್ತನೆಯನ್ನು ಇತರರು ಅನುಕರಿಸಿಯಾರು.

ಕುಂಭ ರಾಶಿ: ಸಿಟ್ಟು ಮಾಡಿಕೊಂಡು ಮನೆಯಿಂದ ಹೊರಟರೂ ವ್ಯವಹಾರದಲ್ಲಿ ಲಾಭ ಬರುವ ಕಾರಣ ಅನಿವಾರ್ಯವಾಗಿ ಶಾಂತರಾಗಬೇಕಾದೀತು. ‌ಹೊಸ ಆದಾಯದ ಮೂಲಗಳಿಂದ ಆರ್ಥಿಕ ಲಾಭವಿದೆ. ಯಾವುದೇ ಅಡೆತಡೆಯಿಲ್ಲದೆ ಎಲ್ಲಾ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ ಮನೆಯ ಬಗ್ಗೆಯೆರ ಹೆಚ್ಚು ಯೋಚಿಸುವಿರಿ. ಅನಾರೋಗ್ಯವು ಉತ್ಸಾಹವನ್ನು ಕಡಿಮೆ ಮಾಡುವುದು. ಗೌಪ್ಯವಾಗಿ ನಿಮ್ಮ ಅಂತರಂಗವನ್ನು ತಿಳಿದುಕೊಳ್ಳಲು ಶತ್ರುಗಳು ಪ್ರಯತ್ನಿಸಬಹುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಛೇರಿಯಲ್ಲಿ ಅನಗತ್ಯವಾಗಿ ಮಾತನಾಡಿ ಸುಮ್ಮನೇ ವ್ಯಕ್ತಿತ್ವವನ್ನು ಹಾಳುಮಾಡಿಕೊಳ್ಳುವುದು ಬೇಡ. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವರು. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು. ಆಪ್ತರ ಮಾತಿನ ಮೇಲೆ ಭರವಸೆ ಇಡಿ.

ಮೀನ ರಾಶಿ: ಮನೆಯಲ್ಲಿ ನಡೆಯು ಸಮಾರಂಭಕ್ಕೆ ಖರ್ಚು ನಿಮ್ಮ ಊಹೆಯನ್ನೂ ಮೀರಬಹುದು. ಸಾಲದ ಚಿಂತೆಯಲ್ಲಿ ನೀವು ಎಲ್ಲವನ್ನೂ ಮರೆಯುವಿರಿ. ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಎಲ್ಲರ ಜೊತೆಗೂ ವಾಗ್ವಾದಕ್ಕೆ ಹೋಗುವುದು ಬೇಡ. ಯಾರಿಗೂ ದೊಡ್ಡ ಮೊತ್ತದ ಸಾಲ ನೀಡಬೇಡಿ. ಹಿಂದಿರುಗಿಸಲು ನೀವು ತೊಂದರೆಗಳನ್ನು ಎದುರಿಸಬಹುದು. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ಅತಿಯಾದ ಒತ್ತಡದಿಂದ ಮಾಡುವ ಕೆಲಸದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು. ಯಾರಿಂದಲಾದರೂ ಹಿತವಚನದ ಅವಶ್ಯಕತೆ ಇರುವುದು. ಸ್ತ್ರೀಯರಿಂದ ಇಂದು ಸಹಾಯವನ್ನು ಪಡೆಯುವಿರಿ. ಹಣದ ವಿಚಾರದಲ್ಲಿ ನಿಮಗೆ ಸರಿಯಾದ ಮಾರ್ಗದರ್ಶನ ಬೇಕಾಗುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು