Horoscope Today 23 March: ಈ ರಾಶಿಯವರು ನಿರ್ಧಾರವನ್ನು ನಿಧಾನವಾಗಿ ತೆಗೆದುಕೊಂಡು ದುಃಖಿಸವರು
ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ನವಮೀ ತಿಥಿ, ಭಾನುವಾರ ಒಳ್ಳೆಯದ ಕಡೆ ಮನಸ್ಸು, ಇನ್ನೊಬ್ಬರ ಸಂಪತ್ತಿನ ಮೇಲೆ ಕಣ್ಣು, ಪ್ರಭಾವದ ಬಳಕೆ ಇದೆಲ್ಲ ಈ ದಿನದ ವಿಶೇಷ. ಮಿತ್ರರ ಸಲಹೆಗಳು ನಿಮಗೆ ಪೂರಕ ಮಾನಸಿಕತೆಯನ್ನು ತಂದುಕೊಡಬಹುದು. ಕೆಲವು ಜನರು ಸವಾಲಿನ ಕಾರ್ಯಗಳನ್ನು ನಿಭಾಯಿಸಲು ತೊಂದರೆಗಳನ್ನು ಎದುರಿಸಬಹುದು.

ಬೆಂಗಳೂರು, ಮಾರ್ಚ್ 23, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ನವಮೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ವರಿಯಾನ್, ಕರಣ : ತೈತಿಲ, ಸೂರ್ಯೋದಯ – 06 – 35 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 17:12 – 18:43, ಯಮಘಂಡ ಕಾಲ 12:39 – 14:10, ಗುಳಿಕ ಕಾಲ 15:41 – 17:12
ಮೇಷ ರಾಶಿ: ನಿಮ್ಮಲ್ಲಿ ಎಂತಹ ಮಾನಸಿಕತೆ ಇದ್ದರೂ ಇನ್ನೊಬ್ಬರ ಜೊತೆ ನಿರ್ಭಾವುಕರಾಗಿ ವರ್ತಿಸುವುದು ಬೇಡ. ನಿಮ್ಮ ಮೇಲಿನ ಅರೋಪಕ್ಕೆ ಯೋಗ್ಯ ಸಮಜಾಯಿಷಿ ಅಗತ್ಯವಿರುವುದು. ಪೂರ್ವಾಗ್ರಹವಿಲ್ಲದೇ ಎಲ್ಲದನ್ನೂ ಒಪ್ಪಿಕೊಳ್ಳುವುದು ಉತ್ತಮ. ಮಿತ್ರರ ಸಲಹೆಗಳು ನಿಮಗೆ ಪೂರಕ ಮಾನಸಿಕತೆಯನ್ನು ತಂದುಕೊಡಬಹುದು. ಕೆಲವು ಜನರು ಸವಾಲಿನ ಕಾರ್ಯಗಳನ್ನು ನಿಭಾಯಿಸಲು ತೊಂದರೆಗಳನ್ನು ಎದುರಿಸಬಹುದು. ಇಂದು ನೀವು ಅಗತ್ಯ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಯೋಚಿಸುವಿರಿ. ಒಳ್ಳೆಯದನ್ನು ಸಾಧಿಸುವ ನಿಮಗೆ ಇಂದಿನ ನಿಮ್ಮ ಪ್ರಯತ್ನವು ಸಂಪೂರ್ಣವಾಗಿ ಇರಲಿ. ಉದ್ಯೋಗಕ್ಕೆ ಸೇರುವಾಗ ಅಲ್ಪದೂರದ ದೃಷ್ಟಿಯಾದರೂ ಬೇಕು. ಶೀಘ್ರ ಯಶಸ್ಸಿನ ಹಂಬಲವು ಅತಿಯಾಗಿ ಕಾಣಿಸುವುದು. ಸಿಕ್ಕ ಸೌಲಭ್ಯವನ್ನು ದುರುಪಯೋಗ ಮಾಡಿಕೊಳ್ಳುವಿರಿ. ನಿಮ್ಮ ನೀವು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳಲು ಇಷ್ಟಪಡುವಿರಿ. ಹೂಡಿಕೆಯತ್ತ ಗಮನಹರಿಸುವುದು ಸದ್ತಕ್ಕೆ ಬೇಡ. ದುರ್ಬಲರಿಗೆ ಅಲ್ಪ ಸಹಾಯವನ್ನು ಮಾಡುವಿರಿ. ರೂಪವು ನಿಮ್ಮ ಕೆಲವು ಕಾರ್ಯಕ್ಕೆ ಅಡ್ಡಿಯಾದೀತು.
ವೃಷಭ ರಾಶಿ: ಆಲಸ್ಯದ ಮನೋಭಾವವು ನಿಮಗೆ ಯಾವುದನ್ನೂ ಸ್ವೀಕರಿಸುವ ಮಾನಸಿಕತೆಯನ್ನೂ ತರದು. ಅನಗತ್ಯ ಸಲಹೆಯನ್ನು ಕೊಡುವುದು ಕಡಿಮೆ ಮಾಡಿ. ಕೇಳಿದರಷ್ಟೇ ಹೇಳಿದರೆ ಸಾಕು. ನಿಮ್ಮ ಸಂತೋಷಕ್ಕೆ ಅಡ್ಡಿಯಾಗುವ ಕೆಲಸವನ್ನು ಮಾಡಲಾರಿರಿ. ವ್ಯಾಪಾರ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ಗೊಂದಲಕ್ಕೆ ಒಳಗಾಗಬಹುದು. ಉದ್ಯೋಗವನ್ನು ಹುಡುಕುತ್ತಿರುವ ಜನರು ಅನಧಿಕೃತ ಜನರ ಸಂಪರ್ಕದಿಂದ ತೊಂದರೆಗಳನ್ನು ಎದುರಿಸಬೇಕಾಗಬಹುದು. ನಿರೀಕ್ಷಿತ ಪ್ರತಿಸ್ಪಂದವು ನಿಮ್ಮ ಮಾತಿಗೆ ಸಿಗದೇ ಇರುವುದು. ವಿದ್ಯಾರ್ಥಿಗಳ ಅಸಮಾಧಾನವನ್ನು ಕಳೆಯುವಿರಿ. ಉದ್ವೇಗಕ್ಕೆ ಒಳಗಾಗುವ ಸಂದರ್ಭವು ಬರಬಹುದು. ಧನಲಾಭದ ನಿರೀಕ್ಷೆಯಲ್ಲಿ ನೀವು ಇರುವುದಿಲ್ಲ. ಅತ್ಯುತ್ಸಾಹವು ನಿಮಗೆ ಹಾನಿಯನ್ನು ಮಾಡೀತು. ದ್ವೇಷವನ್ನು ಮರೆತು ಪ್ರೀತಿಯಿಂದ ಇರಲು ಪ್ರಯತ್ನಿಸುವಿರಿ. ಆಪತ್ತಿಗಾಗಿ ಇಟ್ಟ ಸಂಪತ್ತಿನ ವಿನಿಯೋಗ ಮಾಡುವ ಸ್ಥಿತಿಯು ಬರುವುದು. ಏಕಾಂಗಿಯಾಗಿ ಇರುವುದನ್ನು ಇಷ್ಟಪಡುವುದು ಅನಿವಾರ್ಯವಾಗಲಿದೆ. ನಿಮ್ಮನ್ನು ಪ್ರಕಟಪಡಿಸಿಕೊಳ್ಳುವುದು ಇಷ್ಟವಿದ್ದರೂ ಸಾಧಿಸಲು ಆಗದು.
ಮಿಥುನ ರಾಶಿ: ಇಂದು ಆಪ್ತರ ಜೊತೆ ಕುಳಿತು ನಿಮ್ಮ ಕಾರ್ಯವು ಗುರಿಯ ಕಡೆಗೆ ಇದೆಯೇ ಎಂದು ಅವಲೋಕನ ಮಾಡುವಿರಿ. ಉದ್ಯೋಗದ ಸ್ಥಳವನ್ನು ಬದಲಿಸಬೇಕು ಎಂಬ ಇಚ್ಛೆ ಇದ್ದರೂ ಸರಿಯಾದ ಉದ್ಯೋಗವು ಪ್ರಾಪ್ತವಾಗದು. ಸಹೋದರರ ಬಾಂಧವ್ಯವು ಸಡಿಲಾಗುವುದು. ಹಣಕಾಸಿನಿಂದ ಆಗುವ ಯಾವುದೇ ಅಪಾಯವನ್ನು ತೆಗೆದುಕೊಳ್ಳುವ ಮನಸ್ಸು ಮಾಡುವುದು ಬೇಡ. ಸಂಬಂಧದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಮಕ್ಕಳ ಆರೋಗ್ಯದ ಬಗ್ಗೆ ಮನಸ್ಸು ಚಿಂತಿಸಲಿದೆ. ಅಸಮಾಧಾನವನ್ನು ಹೊರಹಾಕಲು ಸರಿಯಾದ ಸನ್ನಿವೇಶವು ಸಿಗುವುದು. ಇಂದಿನ ಕಾರ್ಯದಲ್ಲಿ ರೋಚಕತೆಯಿರಲಿದೆ. ಹತ್ತಾರು ವಿಚಾರಗಳನ್ನು ನೀವು ಒಂದೇ ಬಾರಿ ಆಲೋಚನೆ ಮಾಡಬೇಕಾಗುವುದು. ಅನವಶ್ಯಕ ವಿವಾದವನ್ನು ಹುಟ್ಟುಹಾಕಿಕೊಳ್ಳುವಿರಿ. ಅಪರಿತರು ನಿಮ್ಮನ್ನು ಪರಿಚಯ ಮಾಡಿಕೊಳ್ಳಬಹುದು. ಇಬ್ಬರ ನಡುವಿನ ಜಗಳದಲ್ಲಿ ಮಧ್ಯಸ್ತಿಕೆ ವಹಿಸುವಿರಿ. ಸಮಾರಂಭಗಳಿಗೆ ಹೋಗುವ ಸಾಧ್ಯತೆ ಇದೆ. ಸಂಗಾತಿಯ ನಡುವಿನ ಸಂಬಂಧವು ದುರ್ಬಲವಾಗಲಿದ್ದು, ಗಟ್ಟಿಯಾಗಲು ತಂತ್ರವನ್ನು ಬಳಸುವಿರಿ.
ಕರ್ಕಾಟಕ ರಾಶಿ: ಇಂದು ನಿಮ್ಮ ವ್ಯವಹಾರದಲ್ಲಿ ಆಗುವ ಅಲ್ಪ ಲಾಭದಿಂದ ತೃಪ್ತಿಯನ್ನು ಕಾಣುವುದು ಅನಿವಾರ್ಯ. ಬಂಧುಗಳ ಮಾತನ್ನು ತಿರಸ್ಕಾರ ಮಾಡುವ ಮನಸ್ಸಿದ್ದರೂ ಮತ್ತೆ ಮತ್ತೆ ನಿಮ್ಮನ್ನು ಬಂದು ಚುಚ್ಚಬಹುದು. ಜೀವನದ ದೀರ್ಘಕಾಲದ ಸಮಸ್ಯೆಗಳು ಬಗೆಹರಿಯುತ್ತವೆ. ನೀವು ಇದ್ದಕ್ಕಿದ್ದಂತೆ ಕುಟುಂಬದ ಜೊತೆ ಎಲ್ಲೋ ಪ್ರಯಾಣಿಸಲು ತೀರ್ಮಾನಮಾಡಿ ಹೊರಡುವಿರಿ. ಇಂದು ಸಂಬಂಧಗಳಲ್ಲಿ ತಪ್ಪು ತಿಳುವಳಿಕೆ ಹೆಚ್ಚಾಗುತ್ತದೆ. ಉಪಕಾರದ ಸ್ಮರಣೆಯು ಅಲ್ಲಗಳೆದು ಸಂತೋಷದಿಂದ ಇರುವಿರಿ. ನಿಮ್ಮಿಂದ ಕೆಲಸವಾಗಲು ನಿಮ್ಮನ್ನು ಹೊಗಳಬಹುದು. ಕಾರ್ಯಗಳಲ್ಲಿ ಸಿಗುವ ಪೂರ್ಣಜಯದಿಂದ ನಿಮಗೆ ಖುಷಿಯಾಗಲಿದೆ. ಹಿರಿಯರಿಗೆ ಕೊಡುವ ಅಗೌರವವು ನಿಮಗೂ ಮುಳುವಾಗಬಹುದು ಎಂಬ ಆಲೋಚನೆ ಮನಸ್ಸಿನಲ್ಲಿ ಇರಬೇಕಾದೀತು. ಧಾರ್ಮಿಕ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿಯು ಇರುವುದು. ನೀವು ಸ್ವಾರ್ಥಿಗಳಂತೆ ಕಾಣುವಿರಿ. ಎಲ್ಲವೂ ನಿಮ್ಮದಾಗಬೇಕು ಎನ್ನುವ ಬಯಕೆ ಇರಿವುದು. ಅವಿವಾಹಿತರ ವಿವಾಹಕ್ಕೆ ಸಂಬಂಧಿಸಿದಂತೆ ಶುಭ ವಾರ್ತೆಯು ಇರಲಿದೆ.
ಸಿಂಹ ರಾಶಿ: ಸಂಗಾತಿಯ ಜೊತೆಗಿನ ಭಿನ್ನಾಭಿಪ್ರಾಯಗಳು ಶಾಶ್ವತವಾಗಿ ಇರದಂತೆ ನೋಡಿಕೊಳ್ಳಿ. ಇಷ್ಟವಿಲ್ಲದಿದ್ದರೂ ಕೆಲವು ಮಾತಗಳನ್ನಾಡುವ ಸಂದರ್ಭ ಬರಲಿದೆ. ಒತ್ತಡವನ್ನು ತಣಿಸಿಕೊಳ್ಳಲು ದುರಭ್ಯಾಸವನ್ನು ರೂಢಿಸಿಕೊಳ್ಳಬೇಕಸದೀತು. ಸ್ನೇಹಿತರ ಜೊತೆಗೆ ಸಮಯ ಕಳೆಯುವಿರಿ. ಇಂದು ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಯಾವುದೋ ಕಾರಣಕ್ಕೆ ಕೊಟ್ಟ ಹಣ ವಾಪಾಸಾಗದು. ತಂದೆಯ ಆರೋಗ್ಯದ ಕಡೆ ಗಮನ ಬೇಕು. ನಿಮ್ಮ ಕೋಪವು ಸನ್ನಿವೇಶವಶದಿಂದ ನಿಯಂತ್ರಣಕ್ಕೆ ಬದಲಿದೆ. ಇನ್ನೊಬ್ಬರ ಸ್ವತ್ತನ್ನು ಅಪೇಕ್ಷಿಸುವುದು ಬೇಡ. ಮೋಹದಿಂದ ಹೊರಬರುವುದು ಕಷ್ಟವಾದೀತು. ಕಾನೂನಿನ ಹಾದಿಯು ನಿಮ್ಮನ್ನು ರಕ್ಷಿಸಬಹುದು. ನಿಮ್ಮ ಶತ್ರುಗಳು ಬಲಗೊಳ್ಳುವ ಸಾಧ್ಯತೆ ಇದೆ. ಚರಾಸ್ತಿಯ ಸಲುವಾಗಿ ಕಾನೂನು ಹೋರಾಟ ಮಾಡಬೇಕಾದೀತು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನೇರವಾದ ಮಾತಿನಿಂದ ತೊಂದರೆಯಾಗಬಹುದು. ಕುಶಲತೆಯಿಂದ ಕೆಲಸವನ್ನು ಮಾಡಿ. ಹೂಡಿಕೆಯ ವ್ಯವಹಾರವು ಕೆಲವರಲ್ಲಿ ಮಾತ್ರ ಇರಲಿ. ಸಹನೆಯನ್ನು ನೀವು ಪ್ರಯತ್ನದ ಮೂಲಕ ಬೆಳೆಸಿಕೊಳ್ಳಬೇಕಾದೀತು.
ಕನ್ಯಾ ರಾಶಿ: ಇಂದು ನಿಮ್ಮ ಕಾರ್ಯತತ್ಪರತೆಯು ಇತರರಿಗೆ ಮಾದರಿಯಾದೀತು. ಯಾರಿಗೂ ತಪ್ಪು ಸಂದೇಶಗಳನ್ನು ಕೊಡುವುದು ಬೇಡ. ನಿಮ್ಮ ಸಂಸ್ಥೆಗೆ ಹೆಚ್ಚಿನ ಮನ್ನಣೆಯು ಸಿಗುವುದು. ನಿಮ್ಮ ಲಾಭವನ್ನು ಗ್ರಾಹಕರಿಂದ ಹೆಚ್ಚು ಮಾಡಿಕೊಳ್ಳುವಿರಿ. ಸಂತೋಷದ ಸಮಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುವಿರಿ. ಹರಿದು ಹೋದ ಮನಸ್ಸುಗಳನ್ನು ಕೂಡಿಸುವುದು ಕಷ್ಟವಾದೀತು. ಜೀವನದಲ್ಲಿ ಉತ್ಸಾಹ ತುಂಬಿಕೊಳ್ಳುವ ವ್ಯಕ್ತಿಯನ್ನು ಹುಡುಕಿಕೊಳ್ಳಿ. ಹೊಸ ಯೋಜನೆಗೆ ಜವಾಬ್ದಾರಿ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕಾಲಹರಣ ಮಾಡಲು ಅನವಶ್ಯಕ ಮಾತುಗಳನ್ನು ಆಡುವಿರಿ. ಆಲಸ್ಯ ಮನೋಭಾವವನ್ನು ಕಡಿಮೆ ಮಾಡಿಕೊಳ್ಳಿ. ಸಾಮಾಜಿಕ ಕೆಲಸದಲ್ಲಿ ನೀವು ಕಳೆದುಹೋಗಬಹುದು. ದೂರದ ವಾಹನ ಚಾಲನೆಯಲ್ಲಿ ಜಾಗರೂಕತೆ ಇರಲಿ. ಮಿತ್ರರಿಗೆ ಸಹಾಯ ಮಾಡಿ ನೀವು ತೊಂದರೆಯಲ್ಲಿ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಆಕಸ್ಮಿಕ ಧನಲಾಭವು ನಿಮಗೆ ಸ್ವಲ್ಪ ಸಮಾಧಾನಿರುವುದು. ಪ್ರಾಣಿಗಳಿಂದ ಅಧಿಕ ಭಯವುಂಟಾಗಬಹುದು.
ತುಲಾ ರಾಶಿ: ಅತಿಯಾದ ಸೌಕರ್ಯಗಳು ನಿಮಗೆ ಮತ್ತೇನನ್ನೋ ಬಗೆಯಬಹುದು. ಸಾಮಾಜಿಕ ಕಾರ್ಯದಿಂದ ನಿಮ್ಮ ಉದ್ಯಮಕ್ಕೆ ಸಹಾಯವಾಗಬಹುದು. ಭವಿಷ್ಯದ ಕಾರಣಕ್ಕೆ ಹಣವನ್ನು ಯಾರಿಗೂ ಹೇಳದೇ ಗೌಪ್ಯವಾಗಿ ಇಡುವಿರಿ. ಆರೋಗ್ಯದ ಸಮತೋಲನವನ್ನು ಇಟ್ಟುಕೊಳ್ಳುವುದು ಮುಖ್ಯವಾಗುವುದು. ಯೋಚಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯಮಿಗಳು ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು. ಹಿತಶತ್ರುಗಳಿಂದ ಹಲವು ತೊಂದರೆಗಳು ಬರಬಹುದು. ಕೃತಜ್ಞತೆ ಭಾವವನ್ನು ಪ್ರಕಟಿಸುವಿರಿ. ಹೊಗಳಿಕೆಯನ್ನು ಬಹಳ ಸಂಕೋಚದಿಂದ ಪಡೆಯುವಿರಿ. ಸಿಗದ ಹಣದ ಬಗ್ಗೆ ನಿಮಗೆ ಬೇಸರವಿರದು. ಬಂಧುಗಳು ಮನಸ್ಸಿಗೆ ನೋವಾಗುವ ಮಾತುಗಳನ್ನು ಆಡಿದರೂ ಅದನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವುದಿಲ್ಲ. ಧಾರ್ಮಿಕ ಭಾವವು ನಿಮ್ಮಲ್ಲಿ ಜಾಗರೂಕವಾಗಬಹುದು. ಪ್ರೀತಿಯ ವಿಚಾರದಲ್ಲಿ ಬುದ್ಧಿವಾದವನ್ನು ಹೇಳುವರು. ಕೆಲವರನ್ನು ನೀವು ನಂಬಬೇಕಾಗುತ್ತದೆ. ಪ್ರೀತಿಯಿಂದ ಗೆಲ್ಲುವುದು ನಿಮಗೆ ಶುಭಕರವಾಗಬಹುದು.
ವೃಶ್ಚಿಕ ರಾಶಿ: ಸೇವೆಯಲ್ಲಿ ಇಂದು ನೀವು ತೃಪ್ತಿ ಕಾಣುವಿರಿ. ಹಣದಲ್ಲಿ ಖರ್ಚಿನ ಭಾಗವೇ ಹೆಚ್ಚಿರಲಿದೆ. ಕುಟುಂಬದ ಆಸ್ತಿಗಾಗಿ ಮಾತುಕತೆಗಳು ತಾರಕ್ಕೆ ಹೋಗಬಹುದು. ಅಧಿಕಾರವು ಕ್ಷಣಿಕ ಎಂಬ ಭಾವವು ನಿಮ್ಮೊಳಗೆ ಇರಲಿ. ನಿಮ್ಮ ಜೊತೆಗಿರುವವರನ್ನು ಚೆನ್ನಾಗಿ ನೋಡಿಕೊಳ್ಳುವಿರಿ. ಬಂಧುಗಳ ಪ್ರೀತಿಯು ನಿಮಗೆ ಸಿಗುವುದು. ರಹಸ್ಯವನ್ನು ಭೇದಿಸುವ ಕುತೂಹಲ ಇರಲಿದೆ. ಗಣ್ಯರ ಜೊತೆ ಮಾತುಕತೆ ನಡೆಸುವಿರಿ. ದೂರವಾಣಿಯ ಕರೆಯಿಂದ ನಿಮಗೆ ಆತಂಕ ಎದುರಾಗಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆಯುವರು. ದೀರ್ಘಕಾಲ ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬದ ಕಾರ್ಯದಿಂದ ಆಯಾಸವು ಬರಲಿದೆ. ಸಂಗಾತಿಯ ಬಗ್ಗೆ ಆರೋಗ್ಯದ ಕಾಳಜಿ ತೋರಿಸುವಿರಿ. ಅವರ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟವಾದೀತು. ನಿಗದಿತ ಅವಧಿಯಲ್ಲಿ ನಿಮ್ಮ ಕೆಲಸಗಳನ್ನು ಪೂರ್ಣ ಮಾಡಿಕೊಳ್ಳುವಿರಿ. ನೀವು ಇಷ್ಟಪಟ್ಟಿದ್ದನ್ನು ಕಳೆದುಕೊಳ್ಳುವ ಸಂದರ್ಭವು ಬರಬಹುದು. ಪತ್ನಿಯ ಕಡೆಯವರಿಂದ ಅಹಿತಕರವಾದ ಮಾತುಗಳು ಕೇಳಿಬರಬಹುದು.
ಧನು ರಾಶಿ: ನಿಮ್ಮ ಪ್ರತಿಭೆಯ ಅನಾವರಣಕ್ಕೆ ಇಂದು ಅವಕಾಶವು ಸಿಗಬಹುದು. ಚಿಕ್ಕ ಚಿಕ್ಕ ಸಮಸ್ಯೆಗಳನ್ನು ಲೆಕ್ಕಿಸಲಾರಿರಿ. ದಾಂಪತ್ಯದಲ್ಲಿ ತಾಳ್ಮೆಯ ಅವಶ್ಯಕೆ ಎದ್ದು ತೋರಬಹುದು. ನಿಮ್ಮಿಂದಾಗಿ ಕುಟುಂಬದ ಕಲಹವು ನಿಲ್ಲುವುದು. ಇಂದಿನ ಕಾರ್ಯದಲ್ಲಿ ಜಯವನ್ನು ಗಳಿಸುವಿರಿ. ಒಂದ ಕಡೆ ನಿಂತಲ್ಲಿ ನಿಲ್ಲಲಾಗದು. ಆಸ್ತಿಯಲ್ಲಿ ಹೂಡಿಕೆ ಮಾಡುವ ಮೊದಲು ಸರಿಯಾಗಿ ಯೋಚಿಸಿ. ನಿಮ್ಮ ಮಾತನ್ನು ನಿಯಂತ್ರಿಸಿ. ಇಂದು ನೀವು ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಬಹುದು. ನಿಮ್ಮನ್ನು ದೂರುವ ಆಪ್ತರು ಒಳ್ಳೆಯದಕ್ಕೆ ಹೇಳುವರು ಎಂಬ ಭಾವವಿರಲಿ. ರಾಜಕಾರಣಿಗಳಿಗೆ ಸಮಾಜದಿಂದ ಗೌರವವನ್ನು ಪಡೆಯಬೇಕು ಎನ್ನುವ ಆಸೆ ಇರಲಿದೆ. ವಿದ್ಯಾರ್ಥಿಗಳು ಓದಿಗೆ ಸಮಯವು ಸಿಗದೇ ಕಷ್ಟವಾಗುವುದು. ತಂದೆಯ ಆರೋಗ್ಯವು ವ್ಯತ್ಯಾಸವಾಗಲಿದ್ದು ಸೂಕ್ತ ಚಿಕಿತ್ಸೆಯನ್ನು ಕೊಡಿಸುವಿರಿ. ಬಹಳ ದಿನಗಳ ಅನಂತರ ಉತ್ತಮ ಭೋಜನವು ಸಿಗವುದು. ಹಣಕಾಸಿಗೆ ಸಂಬಂಧಿಸಿದ ಆರೋಪದ ಬಗ್ಗೆ ಏನನ್ನೂ ನೀವು ಹೇಳಲಾರಿರಿ.
ಮಕರ ರಾಶಿ: ನಿಮ್ಮ ಗುಣವನ್ನು ದುರುಪಯೋಗ ಮಾಡಿಕೊಳ್ಳಬಹುದು. ದೊಡ್ಡ ವ್ಯಕ್ತಿಗಳೆಂದು ಯಾರಾದರೂ ಹೇಳಿ ನಿಮಗೆ ವಂಚಿಸಬಹುದು. ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹಿಂಜರಿಯುವಿರಿ. ಬರಬೇಕಾದ ಹಣವು ನಿಮಗೆ ಪೂರ್ತಿಯಾಗಿ ಬಾರದೇ ಬೆರಸರವಾದೀತು. ಉದ್ಯೋಗಸ್ಥರು ಸವಾಲಿನ ಕೆಲಸಗಳನ್ನು ಬಹಳ ಎಚ್ಚರಿಕೆಯಿಂದ ನಿಭಾಯಿಸಬೇಕು. ನಿಮ್ಮ ವೃತ್ತಿಜೀವನದಲ್ಲಿ ಸಕಾರಾತ್ಮಕ ಮನಸ್ಥಿತಿಯೊಂದಿಗೆ ಮುನ್ನಡೆಯಿರಿ. ಚಂಚಲ ಮನಸ್ಸನ್ನು ನಿಯಂತ್ರಿಸಲು ಕಷ್ಟವಾದೀತು. ಇದರಿಂದ ಕೆಲಸದಲ್ಲಿ ಹಿನ್ನಡೆಯಾಗುವುದು. ಕೊಡುಕೊಳ್ಳುವ ವ್ಯವಹಾರವು ಪ್ರಮಾಣಿಕವಾಗಿ ಇರಲಿ. ಉತ್ತಮ ಉದ್ಯೋಗವನ್ನು ಕಳೆದುಕೊಳ್ಳಬಹುದು. ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ನಿರಾಕರಿಸುವಿರಿ. ನಿಮ್ಮ ಆಸ್ತಿಯನ್ನು ಪಡೆಯಲು ಬೇರೆಯವರ ದೃಷ್ಟಿ ಇರುವುದು. ಕೆಲವರಿಗೆ ನಿಮ್ಮ ಉಪಕಾರವು ಸಿಗುವುದು. ಸಂಗಾತಿಯ ಅಸಹಜ ಮಾತುಗಳಿಂದ ನಿಮಗೆ ಕಷ್ಟವಾಗುವುದು. ನಿಮ್ಮನ್ನು ಕುಟುಂಬವು ನಿರ್ಲಕ್ಷ್ಯಿಸಿದಂತೆ ಕಾಣುವುದು. ಕುರುಡಾಗಿ ಯಾವುದನ್ನೂ ನಂಬುವುದು ಬೇಡ.
ಕುಂಭ ರಾಶಿ: ಇಂದು ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಏನೂ ಬೇಡವೆಂಬ ಭಾವವು ಬರಬಹುದು. ಇಂದು ಆಲಂಕಾರಿಕ ವಸ್ತುಗಳ ವ್ಯಾಪಾರದಲ್ಲಿ ಲಾಭವನ್ನು ನಿರೀಕ್ಷಿಸುವಿರಿ. ಇದು ಪ್ರೀತಿಯ ಸಂಬಂಧಗಳಲ್ಲಿ ಮಾಧುರ್ಯವನ್ನು ತರುತ್ತದೆ. ಕೆಲಸದ ಜವಾಬ್ದಾರಿಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಿ. ಇಂದು ಖರ್ಚುಗಳನ್ನು ನಿಯಂತ್ರಿಸಿ. ವ್ಯವಹಾರದಲ್ಲಿ ಆತ್ಮವಿಶ್ವಾಸದಿಂದ ಇರಿ. ಭಯಪಡುವ ಅವಶ್ಯಕತೆ ಇರುವುದಿಲ್ಲ. ಸ್ಥಿರಾಸ್ತಿಯ ಖರೀದಿಯ ಯೋಗವಿದ್ದರೂ ಯೋಗವಿದೆ. ವಿವಾಹಕ್ಕೆ ಅನ್ಯರಿಂದ ಅಡಚಣೆ ಬರಬಹುದು. ಆದಾಯಕ್ಕಿಂತ ಹೆಚ್ಚು ಖರ್ಚು ಹೆಚ್ಚಿದ್ದು ನಿಮಗೆ ನಿಯಂತ್ರಣವು ಕಷ್ಟವಾದೀತು. ದೃಷ್ಟಿದೋಷವು ನಿಮಗೆ ಅಧಿಕವಾಗಬಹುದು. ಚಿರಪರಿಚಯವು ನಿಮಗೆ ಹೊಸತಾಗಿ ಕಾಣಿಸಬಹುದು. ಸಲಹೆಯನ್ನು ಪಡೆದು ನಿಮ್ಮ ನಿರ್ಧಾರವನ್ನು ಮಾಡಿ. ಅನ್ಯ ಆಲೋಚನೆಯಲ್ಲಿ ದಿನವನ್ನು ಕಳೆಯುವಿರಿ. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ಸಹೋದರನಿಂದ ವಂಚನೆಯಾದ ಅನುಮಾನ ಇರುವುದು.
ಮೀನ ರಾಶಿ: ಇಂದು ವಿದ್ಯಾರ್ಥಿಗಳಿಗೆ ಸಿಹಿ ವಾರ್ತೆಯು ಸಿಗಬಹುದು. ಮನೆಯ ಹಿರಿಯರು ನಿಮಗೆ ಉಪದೇಶ ಕೊಡಬಹುದು. ನಿಮಗೆ ಗೌರವವು ಪ್ರಾಪ್ತವಾಗುವ ಸಾಧ್ಯತೆ ಇದೆ. ಆರ್ಥಿಕ ಸಮಸ್ಯೆಯಾದೀತು. ಕುಟುಂಬದ ಹಿರಿಯ ಸದಸ್ಯರ ಮಾತುಗಳಿಂದ ನಿಮಗೆ ನೋವಾಗಬಹುದು. ಹಳೆಯ ಸ್ನೇಹಿತರನ್ನು ಭೇಟಿ ಮಾಡುವಿರಿ. ಇಂದು ವ್ಯಾಪಾರದಲ್ಲಿ ಆರ್ಥಿಕ ಲಾಭ ದೊರೆಯಲಿದೆ. ಶತ್ರುಗಳನ್ನು ನಿಮ್ಮ ಪ್ರಭಾವವನ್ನು ಬಳಸಿ ನಿಗ್ರಹ ಮಾಡುವಿರಿ ಬಿಡುವಿಲ್ಲದ ದುಡಿಮೆಯು ನಿಮಗೆ ಕಷ್ಟವಾಗಬಹುದು. ಕೃಷಿಯಲ್ಲಿ ಲಾಭ. ಆಸ್ತಿಯ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಕಷ್ಟವಾದೀತು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವಾಗುವುದು. ಯಾರನ್ನೂ ನೀವು ತಪ್ಪಾಗಿ ಗ್ರಹಿಸುವುದು ಬೇಡ. ನಿಮ್ಮ ನಡೆಯಿಂದ ವಿರೋಧಿಗಳು ಹುಟ್ಟಿಕೊಳ್ಳಬಹುದು. ಉನ್ನತ ಸ್ಥಾನದ ನಿರೀಕ್ಷೆಯಲ್ಲಿ ಇರುವಿರಿ. ಹೊಸ ವಾಹನ ಖರೀದಿ ಮಾಡುವುದನ್ನು ಕೈ ಬಿಡುವಿರಿ. ಸಹೋದರರ ಜೊತೆಗಿನ ಸಂಬಂಧವು ಒಂದು ಮಾತಿನಿಂದ ಹಾಳಾಗಲಿದೆ.
-ಲೋಹಿತ ಹೆಬ್ಬಾರ್-8762924271 (what’s app only)