Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಶಿಯವರ ವ್ಯಾಪಾರವು ವಿಸ್ತರಿಸಬಹುದು

ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ದ್ವಾದಶೀ ತಿಥಿ, ಗುರುವಾರ ಸಂತೋಷ ಮತ್ತು ಉತ್ಸಾಹದ ದಿನವಾಗಿರಲಿದೆ. . ಅತ್ಯಂತ ಕಷ್ಟಕರವಾದ ಕೆಲಸವನ್ನು ಸುಲಭವಾಗಿ ಮಾಡಿ ಮುಗಿಸುವಿರಿ. ಸಂತಾನದಿಂದ ಒಳ್ಳೆಯ ಸುದ್ದಿಯನ್ನು ಪಡೆಯುವಿರಿ ಈ ದಿನದ ವಿಶೇಷವಾಗಿದೆ

ಈ ರಾಶಿಯವರ ವ್ಯಾಪಾರವು ವಿಸ್ತರಿಸಬಹುದು
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: Mar 27, 2025 | 1:10 AM

ನಿತ್ಯ ಪಂಚಾಗ: ಶಾಲಿವಾಹನ ಶಕೆ 1947 ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಶುಭ, ಕರಣ : ಗರಜ, ಸೂರ್ಯೋದಯ – 06 – 32 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:09 – 15:41, ಯಮಘಂಡ ಕಾಲ 06:33 – 08:04, ಗುಳಿಕ ಕಾಲ 09:36 – 11:07

​ಮೇಷ ರಾಶಿ: ನೈತಿಕ ಹೊಣೆಗಾರಿಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಇಂದು ಆದಷ್ಟು ಕಾಲ್ಪನಿಕ ಜಗತ್ತಿನಿಂದ ವಾಸ್ತವಕ್ಕೆ ಬಂದು ಆಲೋಚಿಸಿ. ವಿದ್ಯಾರ್ಥಿಗಳು ತಮ್ಮ ಬುದ್ಧಿವಂತಿಕೆಯನ್ನು ತೋರಿಸಬಹುದು. ಸಮಾಧಾನದಿಂದ ಕಾರ್ಯ ನಿರ್ವಹಿಸಿ ದೂರದ ಗುರಿಯನ್ನು ಸುಲಭವಾಗಿ ಮುಟ್ಟುವಿರಿ. ಪ್ರಣಯಕ್ಕೆ ಈ ದಿನವು ಒಳ್ಳೆಯದು. ಆದಷ್ಟು ನೀರಿನಿಂದ ದೂರವಿರಿ. ಸಂಗಾತಿಯ ಕಡೆಯಿಂದ ನಿಮಗೆ ಹೊಗಳಿಕೆ ಸಿಗುವುದು. ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ಸ್ನೇಹಿತರಿಂದ ಅಲ್ಪ ಆರ್ಥಿಕ ಲಾಭವು ನಿಮಗೆ ಸಿಗುವುದು. ಆರಾಮಾಗಿ ಇರಲು ನೀವು ಹೆಚ್ಚು ಇಷ್ಟಪಡುವಿರಿ. ಅತಿಯಾದ ಆಯಾಸವನ್ನು ಮಾಡಿಕೊಳ್ಳದೇ ಕಾರ್ಯವನ್ನು ಮಾಡುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ.

ವೃಷಭ ರಾಶಿ: ನಿಮ್ಮ ಕಾರ್ಯದಿಂದ ಖ್ಯಾತಿಯನ್ನು ಪಡೆಯುತ್ತೀರಿ. ಕುಟುಂಬದ ಜೊತೆಗಿನ ನಿಮ್ಮ ಈ ದಿನವು ಉತ್ತಮವಾಗಿರುತ್ತದೆ. ವ್ಯವಹಾರದಲ್ಲಿ ಸಹೋದ್ಯೋಗಿಗಳ ನಿರೀಕ್ಷಿತ ಬೆಂಬಲವು ಸಿಗುವುದು. ಹಣವನ್ನು ಉಳಿಸಿಕೊಳ್ಳಲು ನಿಮ್ಮ ಪ್ರಯತ್ನವು ಫಲಕೊಡುವುದು. ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಿ ಅಪಹಾಸ್ಯಕ್ಕೆ ಯಾವುದೇ ಕಾರಣಕ್ಕೂ ಸಿಕ್ಕಿಬೀಳಬೇಡಿ. ಮನೆಯಲ್ಲಿ ಸಂತೋಷದ ವಾತಾವರಣ ಇರುತ್ತದೆ. ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹತಿಸುವಿರಿ. ನೂತನ ವಸ್ತುಗಳನ್ನು ಖರೀದಿಸುವಿರಿ. ಕಾಲಹರಣದ ಬದಲು ಉಪಯೋಗಕ್ಕೆ ಬರುವಂತೆ ಈ ದಿನವನ್ನು ರೂಪಿಸಿಕೊಳ್ಳಿ. ಈ ದಿನ ಹಸಿವು ಬಾಯಾರಿಕೆ ಅಧಿಕವಾಗಿರುವುದು.

ಮಿಥುನ ರಾಶಿ: ಸಣ್ಣ ವಿಚಾರವನ್ನೂ ಅತಿಯಾಗಿ ವಿಮರ್ಶಿಸಿದರೆ ಸಂಬಂಧದ ದಿಕ್ಕು ತಪ್ಪುವುದು. ನಿಮ್ಮ ವ್ಯಾಪಾರವು ವಿವಿಧ ಕಾರಣಗಳಿಂದ ವಿಸ್ತರಿಸಬಹುದು. ಮಕ್ಕಳ ಬಗ್ಗೆ ನಿಮ್ಮೊಳಗೆ ಆತಂಕವು ಉಂಟಾಗಬಹುದು. ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ. ಸರಿಯಾದ ಸಮಯಕ್ಕೆ ಸ್ನೇಹಿತರೊಬ್ಬರು ಬಂದು ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ. ನಿಮ್ಮ ಆಲೋಚನೆಗಳು ಅಸ್ಥಿರ ಮತ್ತು ದ್ವಂದ್ವಗಳಿಂದ ಕೂಡಿರುತ್ತದೆ. ವಾಹನ ಸೌಕರ್ಯವು ಪ್ರಾಪ್ತಿಯಾಗಲಿದೆ. ಹೊಸ ಬಟ್ಟೆ ಖರೀದಿಸಲಾಗುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಹೊಂದಾಣಿಕೆಯ ಮನೋಭಾವವು ಇರಬೇಕಾದೀತು.

ಕರ್ಕಾಟಕ ರಾಶಿ: ನೀವು ಇಂದು ಹೊಸ ಕೆಲಸವನ್ನು ಪ್ರಾರಂಭಿಸದಿರುವುದು ಒಳ್ಳೆಯದು. ರೋಗಕ್ಕೆ ಸೂಕ್ತ ಚಿಕಿತ್ಸೆಯನ್ನು ಮಾಡಿಕೊಳ್ಳುವ ಕಡೆ ಗಮನವಿರಲಿ. ಸರ್ಕಾರಿ ಉದ್ಯೋಗದಲ್ಲಿ ಇರುವವರಿಗೆ ಶುಭಸುದ್ದಿ ಕೇಳುವ ದಿನ ಇಂದು. ಮಾತು ಮತ್ತು ನಡವಳಿಕೆಯನ್ನು ಮಿತದಲ್ಲಿ ಇರಿಸಿಕೊಳ್ಳುವುದು ಒಳ್ಳೆಯ ಪ್ರಯೋಜನ ಸಿಗಲಿದೆ. ಅತಿ ಸೂಕ್ಷ್ಮವಾಗುವುದೂ ಮನಸ್ಸಿಗೆ ತೊಂದರೆಯಾಗುತ್ತದೆ. ಅನ್ಯ ಆಲೋಚನೆಯಿಂದ ನೀವು ಹಣವನ್ನು ಹೆಚ್ಚು ಖರ್ಚುಮಾಡಬೇಕಾಗುವುದು. ಕಾನೂನು ಬಾಹಿರ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಿ. ಮನಸ್ಸಿನ ಶಾಂತಿಯನ್ನು ಪಡೆಯಲು ಶ್ರಮಿಸಬೇಕು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು. ಕಳೆದುಕೊಂಡದ ವಸ್ತುವಿನ ಬಗ್ಗೆ ಮೋಹವಿರುವುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳ ಮಾಡಿಕೊಳ್ಳಿ.

ಸಿಂಹ ರಾಶಿ: ಇಂದು ನೀವು ಮಾತನ್ನು ಮಿತಿಯಲ್ಲಿ ಆಡಬೇಕಾಗುವುದು. ಮೇಲಧಿಕಾರಿಗಳ ಋಣಾತ್ಮಕ ಹೇಳಿಕೆಯು ನಿಮಗೆ ನೋವುಂಟು ಮಾಡಬಹುದು. ಈ ದಿನ ನೀವು ಆಲಸ್ಯದಿಂದ ಇರುವಿರಿ. ನೀವು ಕೈಗೊಂಡ ನಿರ್ಧಾರ ದಿಂದ ಹಲವರಿಗೆ ಬೇಸರ ಉಂಟಾಗಬಹುದು ಎಚ್ಚರ. ಯಾರದ್ದೋ ಮಾತು ಕೇಳಿ ನಿಮ್ಮ ಒಳ್ಳೆಯ ನಿರ್ಧಾರವನ್ನು ಬದಲಿಸದಿರಿ. ಸಂತಾನದ ವಿಚಾರದಲ್ಲಿ ಮನೆಯವರ ನಡುವೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣದ ಬಗ್ಗೆ ಸರಿಯಾದ ನಿರ್ಧಾರವಿರಲಿ. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ಕಳೆಯುವಿರಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಕೆಲವರ ಸ್ವಭಾವು ಇಷ್ಟವಾಗದೇ ಅವರಿಂದ ದೂರವಿರಲು ಪ್ರಯತ್ನಿಸುವಿರಿ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆಯು ಇಷ್ಟವಾಗದು. ಕೆಲವನ್ನು ನೀವು ನಿರ್ಲಕ್ಷಿಸುವುದೇ ಸೂಕ್ತ. ವ್ಯಾಪರವು ಹೆಚ್ಚಿನ ಲಾಭವನ್ನು ಕೊಟ್ಟರೂ ಖರ್ಚು ಮಾಡುವ ಅನಿವಾರ್ಯತೆಯು ಬರಬಹುದು.

ಕನ್ಯಾ ರಾಶಿ: ಇಂದು ನಿಮ್ಮ ಉದ್ಯೋಗ ಅನುಕೂಲಕರ ವಾತಾವರಣವಿರುತ್ತದೆ. ಹಿರಿಯರ ಜೊತೆ ಪ್ರಮುಖ ವಿಚಾರಗಳ ಕುರಿತು ಚರ್ಚೆಗಳಲ್ಲಿ ಭಾಗವಹಿಸುವಿರಿ. ನೀವು ಮಾಡಬೇಕು ಎಂದುಕೊಂಡ ಕೆಲಸಕ್ಕೆ ಹಲವೆಡೆಯಿಂದ ಅಡ್ಡಿ ಬರಬಹುದು. ನಿಮ್ಮ ಬಗ್ಗೆ ಪ್ರಚಾರದ ಗೀಳನ್ನು ಕಡಿಮೆ ಮಾಡಿಕೊಳ್ಳಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ತಾಯಿಗೆ ನಿಮ್ಮಂದ‌ ಯಾವುದಾದರೊಂದು ಲಾಭವಾಗಬಹುದು. ಯಾರದೋ ಮೂಲಕ ಸರ್ಕಾರಿ ಕೆಲಸದಲ್ಲಿ ಯಶಸ್ಸನ್ನು ಕಾಣುವಿರಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು ಶ್ರಮವು ಅಪೇಕ್ಷಿತವಾಗಬಹುದು. ಅಚಾತುರ್ಯದಿಂದ ನಡೆದ ಘಟನೆಯು ನಿಮ್ಮನ್ನು ಕಾಡಬಹುದು. ಯಾರದೋ ಹುಚ್ಚುತನಕ್ಕೆ ನೀವು ಬಲಿಯಾಗುವಿರಿ. ಅಧ್ಯಯನದ ವಿಧಾನವನ್ನು ಬದಲಿಸಿಕೊಳ್ಳಿ. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇವಲ ಓಡಾಟವಾಗುವುದು. ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿ ಎಲ್ಲರ ಕೋಪಕ್ಕೆ ಗುರಿಯಾಗುವಿರಿ.

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು