Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today May 11, 2024: ಶನಿವಾರದ ದಿನಭವಿಷ್ಯ, ಯಾವ ರಾಶಿಗೆ ಏನು ಫಲ?

2024 ಮೇ 11ರ ದಿನ ಭವಿಷ್ಯ: ಶನಿವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಶನಿವಾರದ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today May 11, 2024:  ಶನಿವಾರದ ದಿನಭವಿಷ್ಯ, ಯಾವ ರಾಶಿಗೆ ಏನು ಫಲ?
ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ರಮೇಶ್ ಬಿ. ಜವಳಗೇರಾ

Updated on: May 10, 2024 | 6:29 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:18 ರಿಂದ 10:54ರ ವರೆಗೆ, ಯಮಘಂಡ ಕಾಲ 14:05 ರಿಂದ 15:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:07 ರಿಂದ 07:43ರ ವರೆಗೆ.

ಮೇಷ ರಾಶಿ :ಇಂದು ನಿಮ್ಮ ಕಾರ್ಯದಲ್ಲಿ ವೇಗಕ್ಕಿಂತ ಉದ್ವೇಗವೇ ಹೆಚ್ಚು ಕಾಣಿಸುವುದು. ಹೊಸ ವಿಚಾರಗಳ ಅನ್ವೇಷಣೆಯು ನಿಮಗೆ ಖುಷಿಕೊಡುವುದು. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ಕೆಲವು ಏರಿಳಿತಗಳು ಇರಬಹುದು. ಉತ್ಸಾಹದಲ್ಲಿ ಅಥವಾ ತಮಾಷೆಯಲ್ಲಿ ಹೇಳಲಾದ ಯಾವುದನ್ನಾದರೂ ನಿಮ್ಮ ಪ್ರೀತಿಪಾತ್ರರು ಅಥವಾ ಸ್ನೇಹಿತರು ಕೆಟ್ಟದಾಗಿ ತೆಗೆದುಕೊಳ್ಳುತ್ತಾರೆ, ಆದ್ದರಿಂದ ಜಾಗರೂಕರಾಗಿರಿ. ಆದಾಯದ ಮೂಲವನ್ನು ನೀವು ಹೆಚ್ಚಿಸಿಕೊಳ್ಳಲು ಬಯಸುವಿರಿ. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ಸ್ತ್ರೀಯರ ಮಾತಿಗೆ ಮನಸೋಲುವ ಸಾಧ್ಯತೆ ಇದೆ.

ವೃಷಭ ರಾಶಿ :ನೀವು ಕುಟುಂಬ ಮತ್ತು ನಿಮ್ಮ ಆಪ್ತರ ಜೊತೆ ಸಮಯ ಕಳೆಯುವುದರಿಂದ ಸದ್ಭಾವ ಬೆಳೆಯುವುದು. ಹಣಕಾಸಿನ ವಿಷಯಗಳಲ್ಲಿ ಯಾರಾದರೂ ನಿಮಗೆ ಸಹಾಯ ಮಾಡುತ್ತಾರೆ. ನಿಮ್ಮ ಸ್ವಭಾವದಿಂದ ನಿಮ್ಮ ಸುತ್ತಮುತ್ತಲಿನ ಜನರನ್ನು ಮೆಚ್ಚಿಸಲು ನಿಮಗೆ ಸಾಧ್ಯವಾಗುತ್ತದೆ. ನೀವು ಕೆಲಸದಲ್ಲಿ ಏನಾದರೂ ಕೋಪಗೊಳ್ಳಬಹುದು. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟವಾದೀತು. ಭವಿಷ್ಯದ ನಿಮ್ಮ ಕಲ್ಪನೆಗೆ ಒಂದು ರೂಪವು ಸಿಕ್ಕಂತೆ ತೋರುವುದು. ದಿನ ನಿತ್ಯದ ಚಟುವಟಿಕೆಗಳು ಬೇಸರ ತರಿಸುವುದು. ಏನಾದರೂ ಹೊಸತನ್ನು ಮಾಡಲು ಇಷ್ಟಪಡುವಿರಿ. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಹೊಸ ಮನೆಯನ್ನು ಖರೀದಿಸುವ ಬಗ್ಗೆ ಸಂಗಾತಿಯ ಜೊತೆ ಚರ್ಚಿಸುವಿರಿ. ಆಡಿದ ತಪ್ಪು ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು.

ಮಿಥುನ ರಾಶಿ :ನಿಮ್ಮ ಕಾರ್ಯವನ್ನು ಕಂಡು ಮೇಲಧಿಕಾರಿಗಳು ಪ್ರಶಂಸಿಸುವರು. ಅಧ್ಯಯನದಲ್ಲಿ ನೀವು ಮಾಡುವ ಪ್ರಯತ್ನಗಳು ಲಾಭದಾಯಕವೆಂದು ಸಾಬೀತುಪಡಿಸುತ್ತದೆ ಮತ್ತು ನಿಮ್ಮ ಗುರಿಗಳನ್ನು ಸಾಧಿಸಲು ನಿಮ್ಮನ್ನು ಹತ್ತಿರಕ್ಕೆ ತರುತ್ತದೆ. ರಜೆಯ ಮೇಲೆ ಎಲ್ಲೋ ಹೋಗುವ ಸಾಧ್ಯತೆ ಇದೆ. ಹೊಸ ಉದ್ಯೋಗಕ್ಕೆ ಸ್ಥಳಾಂತರವಾಗುವ ಸಾಧ್ಯತೆ ಇದೆ. ವಿದ್ಯಾಭ್ಯಾಸದ ಬಗ್ಗೆ ಪ್ರೀತಿ ಕಡಿಮೆ ಆಗಲಿದೆ. ಹಣಕ್ಕೆ ಸಂಬಂಧಿಸಿದ ವಿಷಯಗಳಿಗೆ ಸಮಯವು ಉತ್ತಮವಾಗಿದೆ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಕಛೇರಿಯಲ್ಲಿ ನಿಮಗೆ ಆರಾಮಾಗಿ ಇರುವ ಯೋಚನೆ ಇರುವುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ಯಾರಾದರೂ ನಿಮ್ಮ ಮಾತನ್ನು ನಂಬುವರು. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ.

ಕಟಕ ರಾಶಿ :ಆರ್ಥಿಕವಾಗಿ ನೀವು ಅದೃಷ್ಟವಂತರು. ಬಾಂಧವ್ಯವನ್ನು ಉಳಿಸಿಕೊಳ್ಳುವುದು ನಿಮಗೆ ಹಿಡಿಸದು. ದಿನವನ್ನು ಇರಿಸಿಕೊಳ್ಳಲು ಪ್ರಯತ್ನಿಸಿ ಆರೋಗ್ಯದ ಬಗ್ಗೆ ತೃಪ್ತಿಕರವಾಗಿರುತ್ತದೆ. ನಿಮ್ಮ ಪರವಾಗಿ ಮಾತನಾಡಲು ಯಾರಾದರೂ ಬೇಕಾಗುತ್ತಾರೆ. ಆದ್ದರಿಂದ ಈ ಪರಿಸ್ಥಿತಿಯಿಂದ ಓಡಿಹೋಗಬೇಡಿ. ಕೆಲಸದಲ್ಲಿ ನೀವು ಏನನ್ನು ನಿರೀಕ್ಷಿಸುತ್ತೀರೋ ಅದು ಶೀಘ್ರದಲ್ಲೇ ಆಗುವ ಸಾಧ್ಯತೆಯಿದೆ. ವಿದ್ಯಾಭ್ಯಾಸಕ್ಕೆ ಸಮಯ ಚೆನ್ನಾಗಿದೆ. ಉತ್ತಮ ಪ್ರದರ್ಶನದಿಂದಾಗಿ ಯಶಸ್ಸಿನ ಸಾಧ್ಯತೆಗಳು ಹೆಚ್ಚುತ್ತಿವೆ. ಕೃತಜ್ಞತೆಯು ಅನಿವಾರ್ಯವಾಗಿ ಬೇಕಾಗುವುದು. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ಹಿತಶತ್ರುಗಳು ನಿಮ್ಮ ಸಂಪತ್ತನ್ನು ಬಳಸಿಕೊಳ್ಲಕುವರು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ.

ಸಿಂಹ ರಾಶಿ :ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮ‌ ಅವಕಾಶಗಳು ಇರಲಿದ್ದು ಅದನ್ನು ಬಳಸಿಕೊಳ್ಳುವಿರಿ. ನೀವು ತುಂಬಾ ಆರೋಗ್ಯ ಪ್ರಜ್ಞೆ ಹೊಂದಿರುತ್ತೀರಿ ಮತ್ತು ಆರೋಗ್ಯ ಸಂಬಂಧಿತ ಪ್ರಯತ್ನಗಳು ಯಶಸ್ವಿ ಫಲಿತಾಂಶಗಳನ್ನು ನೀಡುತ್ತವೆ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಲ್ಲ. ಏಕಾಂತದಲ್ಲಿ ಇರುವುದು ನಿಮಗೆ ಇಷ್ಟವಾಗದು. ನಿಮ್ಮ ಕೆಲವು ಜೀವನದಲ್ಲಿ ಪ್ರೀತಿ ಬರಬಹುದು. ನಿಮಗೆ ತುಂಬಾ ಅದೃಷ್ಟಶಾಲಿ ಎಂದು ಸಾಬೀತುಪಡಿಸುತ್ತದೆ, ಅಲ್ಲಿ ನೀವು ಅಂತಿಮವಾಗಿ ನಿಮ್ಮ ದಾರಿಯನ್ನು ಮಾಡಲು ಸಾಧ್ಯವಾಗುತ್ತದೆ. ಇಂದು ಸಮಯವನ್ನು ಕಳೆಯುವುದು ಕಷ್ಟವಸದೀತು. ಮಾತಿನ‌ ಮೇಲೆ ಹಿಡಿತ ತಪ್ಪಬಹುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಹೆಚ್ಚು ಮಾತನಾಡುವಿರಿ.

ಕನ್ಯಾ ರಾಶಿ :ವೃತ್ತಿಯಲ್ಲಿ ಹಾಗೆಯೇ ಉಳಿದ ಕಾರ್ಯಗಳ ಗಮನ ಹೆಚ್ಚಾಗುವುದು. ಕೆಲವು ಸಂದರ್ಭಗಳಿಂದಾಗಿ ನಿಮ್ಮ ಕೆಲಸದ ಪ್ರಯತ್ನಗಳು ವಿಳಂಬವಾಗುವ ಸಾಧ್ಯತೆಯಿದೆ. ಅನಂತರ ತೊಂದರೆ ತಪ್ಪಿಸಲು, ಯಾವುದೇ ಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಮೊದಲು ಯೋಚಿಸಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟವಾಗುವುದು. ಮನೆಯಲ್ಲಿ ಕೆಲಸ ಮಾಡುವಾಗ ಕೆಲಸಕ್ಕೆ ಆದ್ಯತೆ ನೀಡಿ, ಇದರಿಂದ ಯಾವುದೇ ಪ್ರಮುಖ ಕೆಲಸವು ತಪ್ಪಿಸಿಕೊಳ್ಳುವುದಿಲ್ಲ. ಪ್ರೇಮ ಸಂಬಂಧಗಳು ಮಿಶ್ರವಾಗಿರುತ್ತದೆ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ನಿಮ್ಮನ್ನು ಬೇರೆ ಕಾರ್ಯಗಳಿಗೆ ಕರೆದುಕೊಂಡು ಹೋಗಿ, ನಿಮ್ಮ ಯೋಜನೆಯನ್ನು ಹಾಳುಮಾಡುವರು. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ಹಳೆಯ ಉದ್ಯೋಗಕ್ಕೆ ಪುನಃ ಮರಳುವಿರಿ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ.

ತುಲಾ ರಾಶಿ :ಇಂದು ನೀವು ಅನ್ಯರಿಂದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಆದ್ದರಿಂದ ಅವರ ಅಭಿಪ್ರಾಯವನ್ನು ಗೌರವಿಸಿ ಮತ್ತು ಅವರಿಗೆ ಸ್ವಲ್ಪ ಜಾಗವನ್ನು ನೀಡಿ. ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಸಲಹೆಯು ನಿಮಗೆ ಪ್ರಯೋಜನಕಾರಿಯಾಗಿದೆ. ಕೆಲಸದ ಸ್ಥಳದಲ್ಲಿ ಕಾಳಜಿಯನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ಹುಂಬುತನ ಸ್ವಭಾವದಿಂದ ಸಮಸ್ಯೆಗಳು ಉಂಟಾಗಬಹುದು. ನೌಕರರನ್ನು ಚೆನ್ನಾಗಿ ಇಟ್ಟುಕೊಳ್ಳುವುದು ಮುಖ್ಯವಾಗುವುದು. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ನಿಮ್ಮ ವೇತನದ ಬಗ್ಗೆ ಹೇಳಬೇಕಾಗಿಬರಬಹುದು. ಬಂದ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಉತ್ತಮ. ಯಾವ ಸಂದರ್ಬದಲ್ಲಿಯೂ ಇಂದು ನಿಮ್ಮವರನ್ನು ಬಿಟ್ಟುಕೊಡಲಾರಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು.

ವೃಶ್ಚಿಕ ರಾಶಿ :ಯಾವುದನ್ನಾದರೂ ಒಪ್ಪಿಕೊಳ್ಳುವ ಮೊದಲು ನಿಮ್ಮ ಒತ್ತಡವನ್ನು ಗಮನಿಸಿಕೊಳ್ಳಿ. ನೀವು ಪ್ರೇಮ ಸಂಬಂಧದಲ್ಲಿ ಬೇಸರವನ್ನು ಅನುಭವಿಸಬಹುದು, ಆದ್ದರಿಂದ ಪ್ರೀತಿಯ ಸಂಬಂಧವನ್ನು ಕೇಂದ್ರೀಕರಿಸಿ ಮತ್ತು ನಿಮ್ಮ ಸಂಗಾತಿಯ ಜೊತೆ, ಮಕ್ಕಳ ಜೊತಡ ಸಮಯ ಕಳೆಯಲು ಆಗದು. ವೈಯಕ್ತಿಕ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಿ, ತಪ್ಪಿಸಿಕೊಳ್ಳಬೇಡಿ. ವೈರಿಗಳನ್ನು ನೀವೇ ಸ್ವತಃ ಸೃಷ್ಟಿಸಿಕೊಳ್ಳುವಿರಿ. ಆದಾಯದಿಂದ ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಮನೆಯ ಮುಂದೆ ಬಂದವರನ್ನು ಖಾಲಿ ಕೈಯಲ್ಲಿ ಕಳುಹಿಸುವುದು ಬೇಡ. ಏನಾದರೂ ಕೊಟ್ಟು ಕಳುಹಿಸಿ. ಹಣಕಾಸಿನ ಉದ್ಯೋಗದಲ್ಲಿ ಇರುವವರಿಗೆ ಉತ್ತಮ ಅವಕಾಶವು ಸಿಗುವುದು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಭಕ್ತಿಯು ಕಡಿಮೆ ಆದಂತೆ ನಿಮಗೆ ಅನ್ನಿಸುವುದು.

ಧನು ರಾಶಿ :ಸುಮ್ಮನೇ ಇನ್ನೊಬ್ಬರ ಭವಿಷ್ಯದ ಬಗ್ಗೆ ಮಾರ್ಗದರ್ಶನ ಮಾಡುವುದು ಬೇಡ. ನೀವು ಎಂದಿಗಿಂತಲೂ ನಿಮ್ಮ ಸಂಗಾತಿಗೆ ಹತ್ತಿರವಾಗಲಿದ್ದೀರಿ. ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಗೃಹಿಣಿಯರು ಮನೆಯನ್ನು ಆಯೋಜಿಸುವ ಬಗ್ಗೆ ಯೋಚಿಸಬಹುದು. ನಿಮ್ಮ ಗುರಿಗಳನ್ನು ಸಾಧಿಸಲು ಯಾರಾದರೂ ನಿಮಗೆ ಅಡೆತಡೆಗಳನ್ನು ಉಂಟುಮಾಡಬಹುದು. ಬುದ್ಧಿವಂತಿಕೆಯಿಂದ ಕೆಲಸವನ್ನು ಮಾಡಿ ನಿಭಾಯಿಸಿಕೊಳ್ಳಿ. ಪರಿಚಿತ ಜನರನ್ನು ಭೇಟಿಯಾಗುವ ಸಂತೋಷವನ್ನು ಹಂಚಿಕೊಳ್ಳುವಿರಿ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಅಧಿಕೃತ ಮಾಡಿಕೊಳ್ಳದೇ ಯಾವುದನ್ನೂ ಹೇಳುವುದು ಬೇಡ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಸ್ವಂತ ಕೆಲಸಕ್ಕೆ ಸಮಯವು ಸಿಗದೇ ಎಲ್ಲವನ್ನೂ ಉಳಿಸಿಕೊಳ್ಳುವಿರಿ.

ಮಕರ ರಾಶಿ :ಇಂದು ನಿಮಗೆ ಪ್ರೇಮವು ಸಂತೋಷವನ್ನು ಕೊಡದೇಹೊಇಗಬಹುದು. ನಿಮ್ಮ ಸಂಗಾತಿಗೆ ಈ ವಾರ ಸ್ಥಳಾವಕಾಶ ಬೇಕಾಗುತ್ತದೆ, ಅವರ ಅಭಿಪ್ರಾಯವನ್ನು ಗೌರವಿಸಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ಸಿಗುವ ಸಲಹೆಯು ನಿಮಗೆ ಪ್ರಯೋಜನಕಾರಿಯಾಗಿದೆ. ನಿಮಗೆ ಪ್ರಯೋಜನಕಾರಿಯಾಗಿದೆ. ಎಲ್ಲದೂ ನಿಮ್ಮದೇ ಎಂಬ ಮನೋಭಾವ ಬೇಡ. ಕಾಳಜಿ ವಹಿಸುವುದನ್ನು ನೋಡುವುದು ನಿಮ್ಮನ್ನು ಉತ್ತಮ ಮನಸ್ಥಿತಿಯಲ್ಲಿ ಇರಿಸುತ್ತದೆ. ಪಾಲುದಾರಿಕೆಯಲ್ಲಿ ನಿಮ್ಮ ಪಾಲುದಾರಿಕೆಯೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಹಂಚಿಕೊಳ್ಳುವ ಬಗ್ಗೆ ಸಮಾಧಾನ ಇರದು. ಯೋಗ್ಯ ಸಂಬಂಧವನ್ನು ವಿವಾಹಕ್ಕೆ ಹುಡುಕಿಕೊಳ್ಳುವಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ.

ಕುಂಭ ರಾಶಿ :ದಿನದ ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವಿರಿ. ಮನೆಯಲ್ಲಿಯೇ ಇದ್ದು ಮಕ್ಕಳ ಜೊತೆ ಕಾಲವನ್ನು ಕಳೆಯುವಿರಿ. ಮನೆಯ ನವೀಕರಣದ ಬಗ್ಗೆ ಯಾರನ್ನಾದರೂ ಸಂಪರ್ಕಿಸಿ ಮುಂದುವರಿಯುವಿರಿ. ನಿಮ್ಮವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿಯನ್ನು ತೋರಿಸಲಿದ್ದಾರೆ. ಆಹಾರವನ್ನು ನಿಯಂತ್ರಿಸುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಓಡಾಟದ ಕೆಲಸಕ್ಕೆ ನಿಮ್ಮನ್ನು ಬಳಸಿಕೊಳ್ಳಬಹುದು. ಉತ್ಸಾಹವೂ ಇರಲಿದೆ. ಯಾರನ್ನೋ ನಿಂದಿಸುವುದು ಅಭ್ಯಾಸ ಮಾಡಿಕೊಳ್ಳುವುದು ಬೇಡ.‌ ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ.

ಮೀನ ರಾಶಿ :ಕುಟುಂಬದಲ್ಲಿ ನಿಮ್ಮ ಯಶಸ್ಸಿನ ಎಲ್ಲರೂ ಖುಷಿಪಡುವರು. ವೃತ್ತಿಜೀವನಕ್ಕೆ ಬೇಕಾದ ಸಿದ್ಧತೆಯಲ್ಲಿ ಇರುವಿರಿ. ಕೆಲಸದಲ್ಲಿ ಪೂರ್ವಭಾವಿಯಾಗಿ ತಿಳಿದುಕೊಳ್ಳಲು ಹೋದರೆ, ಕೆಲಸಗಳನ್ನು ಅನಾಯಸವಾಗಿ ನಡೆಸಬಹುದು. ಉತ್ತಮ ಕಾರ್ಯವೊಂದನ್ನು ಪ್ರಾರಂಭಿಸಿ. ಅದು ತನ್ನಷ್ಟಕ್ಕೇ ಬೆಳೆದುಕೊಳ್ಳುತ್ತದೆ. ಇಂದು ಶುಭಸೂಚನೆಗಳು ಇರಲಿವೆ. ಅದನ್ನು ಗಮನಿಸಿಕೊಂಡು ಕಾರ್ಯದಲ್ಲಿ ಮುಂದಡಿಯಿಡಿ. ದೂರದೂರಿಗೆ ಪ್ರವಾಸಕ್ಕೆ ಹೋಗುವ ಮನಸ್ಸು ಮಾಡಲಿದ್ದೀರಿ. ನಿಮ್ಮನ್ನು ನೀವು ದುರ್ಬಲ ಮಾಡಿಕೊಳ್ಳುವುದು ಬೇಡ. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ಯಾರದೋ ಬೇಸರವನ್ನು ಮತ್ಯಾರದೋ ಮೇಲೆ ತೀರಿಸಿಕೊಳ್ಳುವಿರಿ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಅಪ್ರಯೋಜಕ ಸಂಗತಿಗಳು ಮುಖ್ಯವಾದೀತು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆ ಇರದು.

-ಲೋಹಿತ ಹೆಬ್ಬಾರ್ – 8762924271 (what’s app only)

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !