Horoscope Today May 03, 2024: ಶುಕ್ರವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?

| Updated By: Digi Tech Desk

Updated on: May 28, 2024 | 11:54 AM

2024 ಮೇ 03 ರ ದಿನ ಭವಿಷ್ಯ: ಶುಕ್ರವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಶುಕ್ರವಾರದ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today May 03, 2024: ಶುಕ್ರವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?
ಪ್ರಾತಿನಿಧಿಕ ಚಿತ್ರ
Follow us on

ರಾಶಿ ಭವಿಷ್ಯ (Horoscope) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮೇ​​​​​ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ದಶಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಬ್ರಹ್ಮ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 48 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ10:55 ರಿಂದ 12:30ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:14 ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:45 ರಿಂದ 09:20ರ ವರೆಗೆ

ಮೇಷ ರಾಶಿ : ಇಂದು ನೀವು ಮಾಡಿದ ಸಾಲವನ್ನು ಮರುಪಾವತಿಸಿ ಸಮಾಧಾನಗೊಳ್ಳುವಿರಿ. ದೀರ್ಘಕಾಲದಿಂದ ಮಾಡುತ್ತಿದ್ದ ಕೆಲಸಗಳು ಮುಕ್ತಾಯವಾಗುವುವು. ಸಂಬಂಧಿಕರ ಸಹವಾಸ, ಸಹಾಯಗಳು ಸಿಗಲಿವೆ. ನಿಮ್ಮ ಅಂತಸ್ಸತ್ತ್ವ ಗಟ್ಟಿ ಇರುವುರಿಂದ ಯಾರ ಮಾತಿಗೂ ಕಿವಿಗೊಡದೆ ನೀವು ನಿರ್ಧರಿಸಿದ ಕೆಲಸದಲ್ಲಿ ಮುಂದುವರಿಯುತ್ತೀರಿ. ಇಂದು ನಿಮ್ಮಲ್ಲಿ ಕ್ರೀಡಾ ಮನೋಭಾವವು ಇಲಿದೆ. ವಿದ್ಯಾರ್ಥಿಗೆಳಿಗೆ ಶೈಕ್ಷಣಿಕವಾಗಿ ಸರಿಯಾದ ಮಾರ್ಗದರ್ಶನ ಅಗತ್ಯವಿರುವುದು. ವಾಹನ ಚಾಲನೆಯನ್ನು ಎಚ್ಚರಿಕೆಯಿಂದ ಮಾಡಿ. ಯಾರಾದರೂ ಶ್ರೇಷ್ಠ ವ್ಯಕ್ತಿಗಳ ಭೇಟಿಯು ಆಗಸ್ಮಿಕವಾಗಿ ಆಗಲಿದೆ. ಅವರ ಒಡನಾಟವನ್ನು ಇಟ್ಟುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ಕಳೆದುಕೊಂಡ ವಸ್ತುವನ್ನು ಮರಳಿ ಪಡೆಯಬೇಕಾದ ಸ್ಥಿತಿ ಬರಬಹುದು.

ವೃಷಭ ರಾಶಿ : ಹಣವನ್ನು ಉಳಿಸಿಕೊಳ್ಳಬೇಕು ಎಂದು ಪ್ರಯತ್ನಿಸಿದರೂ ನಿಮ್ಮ ಕೈ ಮೀರಿ ಹೋಗುವ ಸಂದರ್ಭವೇ ಇರುವುದು. ಪ್ರಯಾಣವನ್ನು ಅತಿಯಾಗಿ ಮಾಡಬೇಡಿ.‌ ಹಣದ ವಿಚಾರವಾಗಿ ಮನೆಯಲ್ಲಿ ಜಗಳವಾಹಬಹುದು. ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹೋಗಬೇಡಿ.‌ ಸಮಯ ವ್ಯರ್ಥವಾಗುತ್ತಿದೆ ಎಂದು ತಿಳಿದಿದ್ದರೂ ಅನ್ಯ ಮಾರ್ಗವಿಲ್ಲದೇ ಇರಬೇಕಾದೀತು. ಅಧ್ಯಾತ್ಮದಿಂದ ನಿಮಗೆ ನೆಮ್ಮದಿ ಸಿಗಲಿದೆ. ನಿಮ್ಮ ಇಂದಿನ ಕಾರ್ಯದಲ್ಲಿ ಸಾವಧಾನತೆ ಇರಲಿದೆ. ನಿಜವಾದ ಯಶಸ್ಸಿಗೆ ಅಡ್ಡದಾರಿಯನ್ನು ಹುಡುಕಿ ಪ್ರಯೋಜನವಾಗದು. ಯಾರದೋ ಸುದ್ದಿಯನ್ನು ಮತ್ಯಾರಿಗೋ ಹೇಳುತ್ತ ಸಮಯವನ್ನು ಕಳೆಯುವಿರಿ. ಮಕ್ಕಳಲ್ಲಿ ಸ್ಪರ್ಧಾಮನೋಭಾವವನ್ನು ಹೆಚ್ಚಿಸುವಿರಿ. ಕುಮಾರ್ಗದಿಂದ ಆದಾಯವನ್ನು ಪಡೆಯುವಿರಿ. ಭೂಮಿಯ ಖರೀದಿಗೆ ಮನಸ್ಸಾಗುವುದು.

ಮಿಥುನ ರಾಶಿ : ಇಂದು ಉದ್ಯೋಗದ ಚಿಂತೆಯಿಂದ ಯಾವ ಪ್ರಯೋಜನವಾಗದು. ಚಿಂತನೆಯಿಂದ ಮಾತ್ರ ಬಂದಿರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಬಗೆ ಅರಿಯದಾದೀತು. ನಿಮ್ಮ ವಿವಾಹದ ಮಾತುಕತೆಗಳಿಂದ ಬಹಳ ನೆಮ್ಮದಿ ನೀಡುವುದು. ಅಪರೂಪದ ಸ್ನೇಹಿತನ‌ ಜೊತೆ ಸುತ್ತಾಟ. ವ್ಯರ್ಥವೆನಿಸಿದರೂ ನಿಮಗೆ ಬೇಕಾದ ಅಂಶಗಳು ಅವನಿಂದ ಸಿಗಲಿದೆ. ನಿಮ್ಮ ಗೊಂದಲಗಳಿಗೆ ತೆರೆ ಬೀಳಲಿದೆ. ವೈದ್ಯರಿಗೆ ಇಂದು ಉತ್ತಮದಿನವಾಗಿಲ್ಲ. ನೀವೂ ದೈವಕ್ಕೆ ಶರಣಾಗಲೇ ಬೇಕು. ಆಪ್ತರು ನೀಡಿದ ವಸ್ತುವನ್ನು ಕಳೆದುಕೊಳ್ಳುವಿರಿ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿ ಇರುವುದು. ಸದಾಕಾಲ ಸಂತೋಷದಿಂದ ಇರಲು ನೀವೇ ಏನಾದರೂ ಕ್ರಮವನ್ನು ಅನುಸರಿಸುವಿರಿ. ಸ್ವಯಂ ಕೃತ ಅಪರಾಧವೇ ನಿಮಗೆ ಮುಳುವಾಗಬಹುದು. ಆಕಸ್ಮಿಕ ಲಾಭದ ನಿರೀಕ್ಷೆಯಲ್ಲಿ ನೀವು ಇರುವಿರಿ. ಬೇಕಾದಷ್ಟು ಮಾತ್ರ ಮಾತುಗಳನ್ನಾಡಿ.

ಕಟಕ ರಾಶಿ : ಇಂದು ಪ್ರಭಾವೀ ವ್ಯಕ್ತಿಗಳ ಸಹವಾಸದಿಂದ ಯಾವುದಾದರೂ ಸ್ಥಾನವು ಪ್ರಾಪ್ತಿಯಾಗಲಿದೆ. ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವಿರಿ. ವಾಹನದಿಂದ‌ ಬಿದ್ದು ಪೆಟ್ಟು ಮಾಡಿಕೊಳ್ಳಬೇಡಿ. ಮಾತನ್ನು ಸರಿಯಾಗಿ ಆಡಿ. ಇಲ್ಲವಾದರೆ ಅನೇಕ ಶುಭಕಾರ್ಯಗಳಿಂದ, ಉತ್ತಮ ಕಾರ್ಯಗಳಿಂದ ವಂಚಿತರಾಗುವಿರಿ. ಮಕ್ಕಳ ವಿಚಾರವಾಗಿ ದಂಪತಿಗಳ ಮಧ್ಯದಲ್ಲಿ ವೈಮನಸ್ಯವು ಉಂಟಾಗಬಹುದು. ಸಹೋದರರಿಗೆ ಆರ್ಥಿಕ ಸಹಾಯ ಮಾಡುವಿರಿ. ನಿಮ್ಮಿಬ್ಬರ ಮಾತಿನ‌ಚಕಮಕಿಯಲ್ಲಿ ಕೂಸು ಬಡವಾದೀತು. ಮನೆಯಲ್ಲಿ ಆಸ್ತಿಯ ವಿಚಾರವಾಗಿ ಸಣ್ಣ ಬಿರುಸಿನ ಮಾತುಗಳು ಕೇಳಿಬರಬಹುದು. ಕತ್ತಲೆಯನ್ನು ಶಪಿಸುವುದಕ್ಕಿಂತ ಬೆಳಕನ್ನು ಹುಡುಕುವುದು ಉತ್ತಮ. ಮನಸ್ಸಿನ ದುಗುಡವನ್ನು ಶಾಂತಮಾಡಿಕೊಳ್ಳುವಿರಿ. ಕೋಪವನ್ನು ಬಲವಂತವಾಗಿ ತಡೆಯುವಿರಿ. ನಿಮ್ಮ ವಿಚಾರವನ್ನು ನೀವು ಗುಪ್ತವಾಗಿ ತಿಳಿದುಕೊಳ್ಳುವಿರಿ. ಸಿಟ್ಟಿನ ಕೈಗೆ ನಿಮ್ಮನ್ನು ಕೊಡುವುದು ಬೇಡ.

ಸಿಂಹ ರಾಶಿ : ಇಂದು ವಿವಾಹಕ್ಕೆ ಸಂಬಂಧಿಸಿದ ಮಾತುಕತೆಗಳಿಂದ ಸಂತೋಷವಾಗಲಿದೆ. ಇಂದು ದಿನವಿಡೀ ದೇಹದ ಆಲಸ್ಯ, ಮನಸ್ಸಿನಲ್ಲಿ ಇರುವ ಜಾಡ್ಯದಿಂದ ಯಾವ ಕಾರ್ಯಗಳೂ ಆಗದು. ದಿವಸ ಚಟುವಟಿಕೆಗಳಿಗಿಂತ ಭಿನ್ನವಾದ ಯಾವುದಾದರೂ ಆಸಕ್ತಿಯಿರುವ ಕೆಲಸಗಳ ಬಗ್ಗೆ ಗಮನಹರಿಸಿ. ನಿಮಗೆ ಗೌರವಕ್ಕೆ ತೊಂದರೆ ಆಗಬಹುದು. ಆರೋಗ್ಯವು ಕೆಡಲಿದ್ದು ಹತ್ತಾರು ಆಲೋಚನೆಗಳು ಬರಬಹುದು. ಕೃಷಿಯಲ್ಲಿ ತೊಡಗಿಕೊಳ್ಳುವಿರಿ. ನಿಮ್ಮನ್ನು ಭಾವನಾತ್ಮಕವಾಗಿ ಕಟ್ಟಿಹಾಕಬಹುದು. ವಿರೋಧಿಗಳ ಮಾತಿನ ಭರದಲ್ಲಿ ನಿಮ್ಮ ಮಾತು ಗೌಣವಾಗಬಹುದು. ನಿಮ್ಮನ್ನು ನಿಂದಿಸುವವರನ್ನು ನೀವು ದೂರವಿರಿಸುವಿರಿ. ಪ್ರಯಾಣದಿಂದ ಆಯಾಸವಾಗಲಿದೆ. ಮಕ್ಕಳಿಲ್ಲದೇ ಬೇಸರವಾಗಲಿದೆ. ಏಕಾಂಗಿಯಾಗಿ ಇರುವುದು ಕಷ್ಟವಾಗುವುದು.

ಕನ್ಯಾ ರಾಶಿ : ನಿಮ್ಮ ಕಾರ್ಯಕ್ಷೇತ್ರವನ್ನು ಉತ್ತಮ ಮಾಡಿಕೊಳ್ಳುವುದು ನಿಮ್ಮದಾಗಿರಲಿದೆ. ಉನ್ನತಸ್ಥಾನದ ಪ್ರಸ್ತಾಪವೂ ಆಗಬಹುದು. ನಿಮ್ಮ ಜೀವನದಲ್ಲಿ ಪ್ರಮುಖರು ಯಾರೆಂಬ ಸರಿಯಾದ ಚಿತ್ರಣವು ನಿಮಗೆ ಸಿಗಲಿದೆ. ವಾತರೋಗದಿಂದ ಬಳಲುವ ಸಾಧ್ಯತಯಿದೆ. ಮನೆಯಲ್ಲಿಯೇ ಉಂಟಾದ ಜಗಳವನ್ನು ಅಲ್ಲಿಯೇ ಪರಿಹರಿಸಿಕೊಳ್ಳಿ. ಯಾರಿಗೂ ಹೇಳಿಕೊಳ್ಳದೇ ನೀವೊಬ್ಬರೇ ರೋಗವನ್ನು ಅನುಭವಿಸುವಿರಿ. ಕೆಲವರ ಸಹವಾಸದಿಂದ ನಿಮ್ಮ ದಿಕ್ಕು ತಪ್ಪಬಹುದು. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಉತ್ತಮಸ್ಥಾನವು ಸಿಗಲಿದೆ. ವಿದೇಶೀಯ ವ್ಯಾಪಾರವು ಹೆಸರಿಗಷ್ಟೇ ಇರುವುದು. ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು. ನಿಮ್ಮನ್ನು ಪರೋಕ್ಷವಾಗಿ ಯಾರದರೂ ನಿಂದಿಸಬಹುದು. ಮನಸ್ಸಿನಲ್ಲಿ ಸಾವಧಾನತೆ ಇರದು. ವಾಹನದಲ್ಲಿ ಸಂಚಾರಕ್ಕೆ ತಡೆಯಾಗಲಿದೆ.

ತುಲಾ ರಾಶಿ : ಮಕ್ಕಳ ಭವಿಷ್ಯದ ಬಗ್ಗೆ ಅತಿಯಾದ ಭಯವು ನಿಮ್ಮನ್ನು ಕಾಡಯವುದು. ನಿಮ್ಮಿಂದ ನಿಮ್ಮ ತಂದೆ, ತಾಯಿಯರು ಸಂಕಟಪಡಬಹುದು. ವಿವಾಹಯೋಗವು ನಿಮಗಿದೆ. ಯಾವುದಾದರೂ ಉಪಯೋಗಕ್ಕೆ ಬರುವ ಕೆಲಸಕ್ಕೆ ಕೈ ಹಾಕಿ.‌‌ ನಿಮ್ಮ ಮುಂದಿನ ಮಾರ್ಗಕ್ಕೆ ಉತ್ತಮ ಸಹಾಯಕನಾದೀತು. ನಿಮ್ಮದಾದ ಕೆಲವು ಜವಾಬ್ದಾರಿಯನ್ನು ಬಿಡುವುದು ಬೇಡ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ರಾಜಕೀಯದಲ್ಲಿ ವಿವಾದಸ್ಪದ ಮಾತುಗಳು ಆಡಿ ಎಲ್ಲರ ಕೆಂಗಣ್ಣಿಗೆ ಸಿಲುಕುವಿರಿ. ಮುಖಂಡರ ಜೊತೆ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಅಮೂಲ್ಯವಾದ ವಸ್ತುಗಳು ಪಡೆದುಕೊಳ್ಳುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ. ನೀವಾಡುವ ಸುಳ್ಳಿನಿಂದ ನಂಬಿಕೆ ದೂರಾಗುವುದು.

ವೃಶ್ಚಿಕ ರಾಶಿ : ನಿಮ್ಮ‌ ಮನಸ್ಸನ್ನು ಕಲಕಲೆಂದೇ ಕೆಲವರು ಹೊಂಚುಹಾಕುವ ಸಾಧ್ಯತೆ ಇದೆ. ಅವುಗಳಿಗೆ ಕಿವಿಗೊಡಬೇಡಿ. ಆರ್ಥಿಕವಾಗಿ ಇಂದು ಸಬಲರಾಗುವಿರಿ.‌ ಪ್ರೀತಿಪಾತ್ರರಾದವರ ಭೇಟಿಯು ಸಂತೋಷವನ್ನು ಹೆಚ್ಚಿಸೀತು. ಹಿರಿಯರ ಮಾತುಗಳು ನಿಮ್ಮ ಮನಸ್ಸಿಗೆ ನಾಟಿ ಇಲ್ಲಿಯವರೆಗಿನ ಕಾರ್ಯಕ್ಕೆ ಪಾಶ್ಚಾತ್ತಾಪವನ್ನು ಅನುಭವಿಸುವಿರಿ. ಸುಲಭವಾದುದನ್ನು ಕ್ಲಿಷ್ಟ ಮಾಡಿಕೊಳ್ಳುವಿರಿ. ತಾಯಿಯಿಂದ‌ ನಿಮ್ಮ ಕಾರ್ಯಕ್ಕೆ ಅನುಕೂಲವು ಒದಗಿಬರುವುದು. ಚಾಲಕರು ಸ್ವಲ್ಪ ಎಚ್ಚರಿಕೆಯಿಂದ ಚಲಾಯಿಸಿ. ಮಕ್ಕಳ‌ ಜೊತೆ ಅನ್ಯೋನ್ಯ ಸಂಬಂಧವು ಕಾಣಿಸಿಕೊಂಡೀತು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು. ಯಾರನ್ನೂ ಮೀರಿಸುವ ಹಂಬಲದಿಂದ ಕೆಲಸ ಮಾಡುವುದು ಬೇಡ.

ಧನು ರಾಶಿ : ಯಾವುದಕ್ಕೂ ದುಡುಕುವ ಅಗತ್ಯ ಇರದು. ಅಂತಹ ಸಂದರ್ಭವನ್ನು ನಿರ್ಲಕ್ಷಿಸುವುದು ಉತ್ತಮ. ನಿಮ್ಮನ್ನು ಕಂಡು ಅಸೂಯೆ ಪಡುವ ಜನರಿರುತ್ತಾರೆ ನಿಮ್ಮ ಸುತ್ತ. ಅವರನ್ನು ನಗಣ್ಯ ಮಾಡಬೇಡಿ. ನಿಮ್ಮ ಮೇಲೆ ಸಲ್ಲದ ಪಿತೂರಿಗಳನ್ನು ಮಾಡಿಯಾರು.‌ಅವರ ಮೇಲೆ ಒಂದು ಕಣ್ಣಿರಲಿ. ಸ್ನೇಹಿತರ ಜೊತೆ ಮನಸ್ಸು ಬಿಚ್ಚಿ ಮಾತನಾಡಿ. ಶುಭಸಮಾಚಾರ ನಿಮಗೆ ಗೊತ್ತಾಗಲಿದೆ. ಕುಟುಂಬದಲ್ಲಿ ನಿಮ್ಮ ಪ್ರಾಮುಖ್ಯವು ಅರಿವಿಗೆ ಬರಬಹುದು. ಬೇಡದ ಆಲೋಚನೆಯನ್ನು ದೂರಮಾಡಿಕೊಳ್ಳಿ. ನಿಮ್ಮ ದಿನದ ಅನುಕೂಲತೆಯನ್ನು ನೋಡಿ ಕಾರ್ಯಕ್ಕೆ ಒಪ್ಪಿಗೆ ನೀಡಿ. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು. ಸೋಲಿನ ಚಿಂತೆಯನ್ನು ಬಿಟ್ಟು ಸ್ಪರ್ಧೆಯಲ್ಲಿ ತೊಡಗಿ.

ಮಕರ ರಾಶಿ : ಇಂದು ಸಂಗಾತಿಗೆ ಪ್ರಿಯವಾದುದನ್ನೇ ಮಾಡುವಿರಿ. ಸರ್ಕಾರಿ ಕೆಲಸಗಳು ನಿಧಾನವಾಗಿ ಮುಂದುವರಿಯುವುದು. ಮಾತಿನಿಂದ ಮಾತ್ರ ಎಲ್ಲವೂ ಸರಿಯಾಗುವುದು ಎನ್ನುವ ಭ್ರಮೆಯಿಂದ ಹೊರಬನ್ನಿ. ಭವಿಷ್ಯದ ಯೋಚನೆಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ನಿಮ್ಮ ವ್ಯವಹಾರವನ್ನು ಯಾರೋ ನಿಯಂತ್ರಿಸಿದಂತೆ ಅನ್ನಿಸುವುದು. ಯಾವ ಬಲವನ್ನು ನಂಬದೇ ಸ್ವಪ್ರಯತ್ನದಿಂದ ಎಲ್ಲವನ್ನೂ ಮಾಡಲು ಬಯಸುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು. ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ನಿಮ್ಮ ಗುಟ್ಟನ್ನು ಬಿಟ್ಟಕೊಡುವುದು ಬೇಡ. ಮಕ್ಕಳಲ್ಲಿ ಪ್ರೀತಿ ಅಧಿಕವಾಗುವುದು.

ಕುಂಭ ರಾಶಿ : ಹೂಡಿಕೆಗಳು ನಿಮಗೆ ಪ್ರಯೋಜನಕಾರಿಯಾಗಲಿವೆ. ಆರ್ಥಿಕ ಸುಧಾರಣೆಯು ತಕ್ಕಮಟ್ಟಿಗೆ ಇರಲಿದೆ. ಯಾರೊಂದಿಗೂ ಸಂಪೂರ್ಣ ನಿಜವನ್ನು ಹೇಳಿಬಿಡಬೇಡಿ. ಅಪರೂಪದ ವ್ಯಕ್ತಿಗಳ ಭೇಟಿಯಾಗುವ ಸಾಧ್ಯತೆ ಇದೆ. ವೃತ್ತಿಗೆ ಸಂಬಂಧಿಸಿದಂತೆ ಶುಭದಿನವಾಗಿದೆ. ಇನ್ನೊಬ್ಬರನ್ನು ನೋಡಿ ನಿಮ್ಮ ಅಸೂಯೆಪಡಬೇಡಿ. ದೂರದ ಪ್ರಯಾಣವನ್ನು ಮಾಡಲಿದ್ದೀರಿ. ಒಂಟಿತನವು ಕಾಡಬಹುದು. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ನಿಮ್ಮ ಇಂದಿನ ನಡೆಯು ಅನೂಹ್ಯವಾಗಿರುವುದು. ಸಾಮಾಜಿಕವಾದ ಸ್ಥಾನಮಾನ ಹೆಚತಚಾಗುವುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು. ನಿಮ್ಮ ಕೆಲಸಕ್ಕೆ ಅಧಿಕಾರಿಗಳು ಪ್ರಶಂಸಿಸುವರು.

ಮೀನ ರಾಶಿ : ನಿಮ್ಮ ಬೆಲೆಯುಳ್ಳ ಯಾವುದಾದರೂ ವಸ್ತುವು ಕೈ ತಪ್ಪಿ ಹೋಗಬಹುದು. ಆಲೋಚಿಸದೇ ಯಾವುದೇ ಸಾಹಸದ ಕಾರ್ಯವನ್ನು, ಕೆಲಸವನ್ನು ಮಾಡಬೇಡಿ. ಅನಾರೋಗ್ಯವು ನಿಮ್ಮನ್ನು ಕಾಡಲಿದೆ. ಪಿತ್ರಾರ್ಜಿತ ಭೂಮಿಯ ವ್ಯವಹಾರದಲ್ಲಿ ಹೆಚ್ಚಿನ ಲಾಭವಾಗಲಿದೆ. ವೃತ್ತಿಯಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಬೇಸರಬಾಗಬಹುದು. ಮಧ್ಯವರ್ತಿಗಳ ಜೊತೆ ನಿಮ್ಮ ಸಂಬಂಧ ಕೆಡಬಹುದು. ಹಣದ ವಿಷಯದಲ್ಲಿ ಮೋಸ ಹೋಗುವ ಸಂದರ್ಭವಿದೆ. ನಿಮ್ಮನ್ನು ನೌಕರರು ಹೋಗಳುವರು. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ಸಹನೆಯ ಪರೀಕ್ಷೆಯಲ್ಲಿ ನೀವು ಗೆಲ್ಲುವಿರಿ. ನಿಮ್ಮನ್ನು ನಗಿಸುವ ಪ್ರಯತ್ನ ಮಾಡಿದರೂ ನೀವು ಯಾವುದೋ ಆಲೋಚನೆಯಲ್ಲಿಯೇ ಇರುವಿರಿ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

Published On - 5:18 pm, Thu, 2 May 24