AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today May 08 2024: ಬುಧವಾರದ ದಿನಭವಿಷ್ಯ, ಯಾವ ರಾಶಿಗೆ ಏನು ಫಲ?

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 08 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope Today May 08 2024: ಬುಧವಾರದ ದಿನಭವಿಷ್ಯ, ಯಾವ ರಾಶಿಗೆ ಏನು ಫಲ?
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ರಮೇಶ್ ಬಿ. ಜವಳಗೇರಾ|

Updated on:May 07, 2024 | 6:41 PM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಆಯುಷ್ಮಾನ್, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ 12:29 ರಿಂದ 14:04ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:44 ರಿಂದ 09:19ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:54 ರಿಂದ 12:29ರ ವರೆಗೆ.

ಮೇಷ ರಾಶಿ :ಇಂದು ಯಾರಿಗೂ ಹೇಳದ ಮರೆಯಲಾಗದ ಕೆಲವು ಘಟನೆಯಿಂದ ಮಾನಸಿಕ ಹಿಂಸೆಯನ್ನು ಅನುಭವಿಸುವಿರಿ. ಸವಾಲುಗಳು ಬೇಡವೆಂದರೂ ಬರುತ್ತವೆ. ಮನೆಯಲ್ಲಿ ನೆಮ್ಮದಿ ಇರದೇ ಸಿಟ್ಟು, ಕೂಗು ಇವೆಲ್ಲ ಇರಲಿವೆ. ಇಂದು ಏನನ್ನಾದರೂ ಮಾಡಿದರೆ ಯೋಚಿಸಿ ಮಾಡಿ. ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವ ವಿಧಾನವನ್ನು ಕಂಡುಕೊಳ್ಳುವುದು ಅವಶ್ಯಕ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ಯಾವುದೇ ದಾಖಲೆಗಳಿಲ್ಲದೇ ವ್ಯವಹಾರ ಬೇಡ. ಅನಂತರ ಅದೇ ತಿರುಗು ಬಾಣವಾಗಿ ಚುಚ್ಚುವುದು. ಕುಟುಂಬದವರ ಬಗೆಗಿನ ನಿಂದನೆಯನ್ನು ಸಹಿಸಲಾರಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ಆಪ್ತರನ್ನಾದರೂ ಒಂದು ಮಿತಿಯಲ್ಲಿ ಇಡಿ.

ವೃಷಭ ರಾಶಿ :ಇಂದು ನೀವು ಅಕಾರಣವಾಗಿ ಉದ್ವೇಗ ಒಳಗಾಗುವಿರಿ. ಸಂಪತ್ತು ಬರುವುದು ಮಾತ್ರ ಕಾಣಿಸುತ್ತದೆ. ನೋಡು ನೋಡುತ್ತಿದ್ದಂತೆ ಎಲ್ಲವೂ ಖಾಲಿಯಾಗುವುದು. ಕೂಡಿಟ್ಟ ಹಣವೆಲ್ಲವೂ ಕರಗುತ್ತಿದೆ ಎನ್ನುವ ಭಯವು ಉಂಟಾಗಲಿದೆ. ಒಳ್ಳೆಯ ಕಾರ್ಯಕ್ಕೆ ಹಣವನ್ನು ಖರ್ಚು ಮಾಡಿ. ವಿವೇಚನೆಯಿಂದ ನಡೆದುಕೊಳ್ಳಿ. ಹಣವನ್ನು ದುಂದುವೆಚ್ಚ ಮಾಡದೇ ಸತ್ಕಾರ್ಯಕ್ಕೆ ಕೊಡಿ. ಮಾತನಾಡುವಾಗ ಎಚ್ಚರವಿರಲಿ. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವ್ಯವಹಾರದಲ್ಲಿ ವಂಚನೆಯಾಗುವುದು ಗೊತ್ತಾಗಿ ಸರಿ ಮಾಡಿಕೊಳ್ಳುವಿರಿ. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಮಾದರಿಯಾದೀತು.

ಮಿಥುನ ರಾಶಿ :ಇಂದು ಆಹಾರದ ಸಮಯದಲ್ಲಿ ವ್ಯತ್ಯಾಸವಾಗಿ ತೊಂದರೆ ಅನುಭವಿಸುವಿರಿ. ಒಳ್ಳೆಯ ಕಾಲವನ್ನು ಎದುರುನೋಡುತ್ತ ಕುಳಿತಿರುವಿರಿ. ಮನೆಯಲ್ಲಿ‌ ಯಾರೂ ಹೇಳಿಕೊಳ್ಳಲಾಗದ ಅಸಮಾಧಾನವಿರಲಿದೆ.‌ ಪ್ರೀತಿಪಾತ್ರರ ಜೊತೆ ಹೆಚ್ಚು ಸಲುಗೆಯಿಂದ ಇರುವಿರಿ. ನಿಮ್ಮ ಕಷ್ಟಕ್ಕೆ ಆದವರನ್ನು ಮರೆಯಬೇಡಿ. ಸ್ತ್ರೀಮೂಲದಿಂದ ಧನಸಹಾಯವು ಸಿಗಲಿದೆ.‌ ಅಲ್ಪ ಭೋಜನವನ್ನು ಮಾಡುವ ಸಂದರ್ಭ ಬದಲಿದೆ. ವೃತ್ತಿಯನ್ನು ಬಿಟ್ಟು ಹೆಚ್ಚಿನ ಆದಾಯದ ಕಡೆಗೆ ಗಮನಹರಿಸುವಿರಿ. ಇನ್ನೊಬ್ಬರ ಮೇಲಿನ‌ ಆರೋಪವನ್ನು ಸತ್ಯ ಮಾಡಲು ನೀವು ಸುಳ್ಳು ಹೇಳುವಿರಿ. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಸಂಗಾತಿಗೆ ಸಮಯವನ್ನು ಕೊಡುತ್ತೇನೆಂದರೂ ಆಗದು. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ.

ಕಟಕ ರಾಶಿ :ನಿಮ್ಮ ಆಸೆಗಳು ಕೈಗೂಡುವ ಹಂತದಲ್ಲಿ ಇದ್ದು ಇನ್ನಷ್ಟು ಪ್ರಯತ್ನದಿಂದ ಗುರಿಯನ್ನು ಮುಟ್ಟಬಹುದು. ಅತಿಯಾದ ಪ್ರವಾಸಕ್ಕೆ ಮನಸ್ಸು ಮಾಡುವಿರಿ. ಮನಸ್ಸಿಗೆ ಹಿತವಾದ ಸಂಗತಿಗಳು ನಡೆಯಲಿದೆ. ಇಂದು ನಿಮ್ಮ ಕೆಲಸವು ಅಡೆತಡೆಗಳಿಲ್ಲದೆ ಮುಂದೆ ಸಾಗುತ್ತದೆ. ಸರ್ಕಾರಿ ನೌಕರರಿಗೂ ಈಗ ಶುಭವಾಗಲಿದೆ. ಹೊಸ ವಾಹನ ಖರೀದಿ ಯೋಗ ಇದೆ. ‌ ವಿದೇಶ ಪ್ರಯಾಣದ ಸಂದರ್ಭವೂ ಬರಬಹುದು. ಆರೋಗ್ಯ ಉತ್ತಮವಾಗಿರಲಿದೆ. ದುಂದುವೆಚ್ಚದ ಕಡೆ ಗಮನವಿರಲಿ. ಇಷ್ಟವಸದ ಸಂಗತಿಯ ಕಡೆ ತೆರಕಳಿದರೆ ಅಹಿತಕರ ಸಂಗತಿಯನ್ನು ಮರೆಯಬಹುದು. ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭೌತಿಕ ವಸ್ತುಗಳು ನಿಮಗೆ ಅಲ್ಪಸಂತೋಷವನ್ನು ಕೊಟ್ಟೀತು. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ಚಿಂತೆಗಳನ್ನು ಇನ್ನೊಬ್ಬರಿಂದ ಕೇಳುವಿರಿ.

ಸಿಂಹ ರಾಶಿ :ನಿಮ್ಮ ವಸ್ತುವೇ ಆಗಿದ್ದರೂ ನೀವು ಅದನ್ನು ಪಡೆಯಲು ಮುಜುಗರ ಮಾಡಿಕೊಳ್ಳುವಿರಿ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಇರಲಿವೆ. ಮೇಲಧಿಕಾರಿಗಳು ನಿಮ್ಮನ್ನು ಪ್ರಶಂಸಿಸುವರು. ಪ್ರವಾಸವನ್ನು ಮಾಡುವ ನಿರ್ಧಾರಕ್ಕೆ ಬರಲಿದ್ದೀರಿ. ಮನಸ್ಸಿಗೆ ಖುಷಿಯಾಗುವಂಥ ಕೆಲಸಗಳನ್ನು ಮಾಡಲಿದ್ದೀರಿ.‌ ಇಂದು ಹಣದ ಹರಿವು ಬಹಳ ಉತ್ತಮವಾಗಿರಲಿದೆ. ಅಪರಿಚಿತರು ನಿಮ್ಮ ಹಾದಿ ತಪ್ಪಿಸಬಹುದು. ಪಾಲುದಾರಿಕೆಯಲ್ಲಿ ಅಸಹಜ ಮಾತುಕತೆಗಳು ಬರಬಹುದು. ಆರ್ಥಿಕ ವಿಚಾರಕ್ಮೆ ದಾಂಪತ್ಯದಲ್ಲಿ ಮನಸ್ತಾಪ‌ಬರಬಹುದು. ಸಂಪೂರ್ಣವಾದ ಮನಸ್ಸಿನಿಂದ ಕಾರ್ಯವನ್ನು ಮಾಡಲಾಗದು‌. ಪ್ರತಿಷ್ಠಿತ ಸಂಸ್ಥೆಯ ಉನ್ನತ ಅಧಿಕಾರದ ಪ್ರಾಪ್ತಿಯ ಅವಕಾಶವು ಬರಬಹುದು. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಇರದು. ಕೆಲವು ವಿಚಾರದಲ್ಲಿ ನಿಮ್ಮ ಊಹೆಯು ತಪ್ಪಾದೀತು. ಕೆಲವು ಸ್ವಭಾವವನ್ನು ಬದಲಾಯಿಸಬೇಕು ಎನಿಸುವುದು.

ಕನ್ಯಾ ರಾಶಿ :ಒತ್ತಡಗಳಿಂದ ದೂರವಾಗಲು ಕಷ್ಡವಾಗುವುದು. ಇಂದು ನಿಮ್ಮವರ ಬಗ್ಗೆ ಅನುಮಾನ ಕಾಡಬಹುದು. ಪರೀಕ್ಷಿಸದೇ ಯಾವ ತೀರ್ಮಾನಕ್ಕೂ ಬರುವುದು ಬೇಡ. ಉದ್ವೇಗಕ್ಕೆ ಒಳಗಾಗಲು ಅನೇಕ ಸಂದರ್ಭಗಳು ಬರಬಹುದು. ತಾಳ್ಮೆಯಿಂದಲೇ ಇರಿ. ಹಣಕಾಸಿನ ಒತ್ತಡದಿಂದ ಮನೆಯಲ್ಲಿ ಅಶಾಂತಿಯು ನಿರ್ಮಾಣವಾದೀತು. ಮನಸ್ಸನ್ನು ಹಿಡಿತದಲ್ಲಿ ಶಾಂತರಾಗಿರಿ.‌ ಯಾವುದೇ ಅಹಿತಕರ ಭಾವವನ್ನು ತೋರಿಸಬೇಡಿ. ಇನ್ನೊಬ್ಬರ ಸಮಸ್ಯೆಯನ್ನು ಪರಿಹರಿಸಲು ಹೋಗಿ ನೀವೇ ಸಿಕ್ಕಿಕೊಳ್ಳಬೇಕಾಗುವುದು. ಬೇಕಾದಷ್ಟು ಅನುಕೂಲತೆಗಳಿದ್ದರೂ ಬೇಕೆಂಬ ಆಸೆಯು ನಿಮ್ಮನ್ನು ಬಿಡದು. ಸಂಗಾರಿಯ ಮೇಲಿನ ಪ್ರೀತಿಯು ಕಡಿಮೆಯಾದಂತೆ ತೋರುವುದು. ಕೆಲವರಿಗೆ ಸೌಕರ್ಯಗಳು ಕಡಿಮೆಯಾದಂತೆ ಅನ್ನಿಸುವುದು. ಕಛೇರಿಯ ಕಾರ್ಯದ ನಿಮಿತ್ತ ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು.

ತುಲಾ ರಾಶಿ :ಗೌರವ ಸಿಗಲೆಂದೇ ಇಂದು ಕಾರ್ಯವನ್ನು ಮಾಡುವಿರಿ. ಅವಿವಾಹಿತರಿಗೆ ವಿವಾಹವಾಗುವ ಸೂಚನೆಯು ಗೊತ್ತಾಗಬಹುದು. ಬಂಧುಗಳ ಭೇಟಿಯಾಗಲಿದ್ದೀರಿ. ಇದು ನಿಮ್ಮ ‌ಮುಂದಿನ ಕಾರ್ಯಕ್ಕೆ ಅನುಕೂಲಕರವಾಗಿರಲಿದೆ. ಮನೆಯಲ್ಲಿ ದೇವಕಾರ್ಯಗಳು ನಡೆಯುವುವು. ವ್ಯಕ್ತಿ ಅವನ ಯೋಗ್ಯತೆಗೆ ಅನುಸಾರವಾಗಿ ಅಭಿವೃದ್ಧಿಯನ್ನು ಹೊಂದುವನು. ಕಛೇರಿಯಲ್ಲಿ ನಿಮ್ಮ ವರ್ತನೆಯ ಬಗ್ಗೆ ಸಂದೇಹ ಬರಬಹುದು. ನಿಮ್ಮ ಮೇಲೆ ಯಾರಾದರೂ ಕಣ್ಣಿಟ್ಟಾರು. ಬಾಂಧವರ ನಡುವೆ ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ನಿಮ್ಮ ವರ್ತನೆಗಳು ಯಾರ ಮೇಲಾದರೂ ಪ್ರಭಾವ ಬೀರಬಹುದು. ಮೇಲಧಿಕಾರಿಗಳ ಜೊತೆ ಸಭ್ಯತೆಯಿಂದ ವರ್ತಿಸಿ. ವಿವಾಹದ ವಿಳಂಬದಿಂದ ನಿಮಗೆ ಬೇಸರವಾದೀತು. ನಿಮ್ಮ ತಪ್ಪಿನಿಂದ ಹಿರಿಯರ ಕೆಂಗಣ್ಣಿಗೆ ಗುರಿಯಾಗುವಿರಿ.

ವೃಶ್ಚಿಕ ರಾಶಿ :ಇಂದು ನೀವು ಬಹಳ ನಿಧಾನವಾಗಲಿದೆ. ನಿಮ್ಮ‌ಮೇಲೆ ಅಪವಾದವನ್ನು ತರಲಿದ್ದಾರೆ. ನಿಃಸ್ವಾರ್ಥವಾಗಿ ಇಚಮಷ್ಟಪಡುವವರನ್ನು ಸಂಶಯಿಸಬೇಡಿ.‌ ನಿಮ್ಮ ಜೊತೆಗಿರುವವರು ಯಾರು ಯಾವ ರೀತಿಯವರು ಎಂಬುದು ಗೊತ್ತಾಗುತ್ತದೆ. ನೀವು ನಡೆಯಬೇಕಾದ ದಾರಿಯು ಸರಿ ಇದ್ದು ಅತ್ತ ಸಾಗುವಿರಿ. ಅಧ್ಯಾತ್ಮದಲ್ಲಿ ಇರಲು ಹೆಚ್ಚು ಮನಸ್ಸು ಬಯಸುತ್ತಿದೆ. ಅನಿರೀಕ್ಷಿತ ಗೆಲುವಿನಿಂದ ಖುಷಿ ಸಿಗುವುದು. ಇಂದು ನಿಮ್ಮ ಪ್ರೀತಿಪಾತ್ರರ ಭೇಟಿಯಾಗಲಿದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಮಕ್ಕಳ ನಿರೀಕ್ಷೆಯಲ್ಲಿ ಇರುವವರಿಗೆ ಶುಭಸುದ್ದಿಯು ಸಿಗಬಹುದು. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು. ಭೂಸ್ವಾದೀನವನ್ನು ಮಾಡಿಕೊಳ್ಳುವ ಸಂದರ್ಭವು ಬರಬಹುದು. ಆದಾಯದ ಸ್ವಲ್ಪ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸುವಿರಿ.

ಧನು ರಾಶಿ :ಇನ್ನೊಬ್ಬರ ನಡತೆ ಇಷ್ಟವಾಗದೇ ಇದ್ದರೆ ಅದನ್ನು ಹೇಳುವ ಕ್ರಮದಲ್ಲಿ ಹೇಳಿ. ಇಲ್ಲವಾದರೆ ಕಲಹವಾಗುವುದು. ವಿದೇಶಿ ವಸ್ತುಗಳ ವ್ಯವಹಾರ ಮಾಡುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು. ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು. ಉದ್ಯಮದಲ್ಲಿ ಪ್ರೇಮವಾಗಬಹುದು. ಸಂಗಾತಿಯೇ ನಿಮ್ಮ ಕೆಲಸಗಳಿಗೆ ಮುನ್ನುಗ್ಗಿ ಸಹಾಯ ಮಾಡುವರು. ಸರ್ಕಾರಿ ಕಚೇರಿಯ ಕೆಲಸಗಳಲ್ಲಿ ಸ್ವಲ್ಪ ಚುರುಕುತನ ಕಾಣಬಹುದು. ಧಾರ್ಮಿಕ ಕೆಲಸವನ್ನು ಮಾಡುವವರಿಗೆ ಸಮಾಜದಿಂದ ಸಾಕಷ್ಟು ಸಹಾಯ ದೊರೆಯುತ್ತದೆ. ಯಾರದ್ದಾದರೂ ಮನವೊಲಿಸುವ ಕೆಲಸವು ನಿಮಗೆ ಬರಬಹುದು. ಇದರಿಂದ‌ ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ಋಣವನ್ನು ಸ್ವಲ್ಪವೂ ಉಳಿಸದೇ ಮುಗಿಸಿ. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಆಸ್ತಿಯ ಗಳಿಕೆಯಲ್ಲಿ ಇಂದು ಅನಾಯಾಸವಾಗಿ ಯಾವುದೂ ನಡೆಯದು.

ಮಕರ ರಾಶಿ :ನಿಮ್ಮನ್ನು ವಿರೋಧಿಸುವವರು ನಿಮ್ಮ ಬಗ್ಗೆ ಬೇಡದ ಸಂಗತಿಗಳನ್ನು ಹರಿದುಬಿಡುವರು. ಸಂಗಾತಿಯೊಂದಿಗೆ ಸ್ನೇಹದಿಂದ ವರ್ತಿಸಿ. ಇಲ್ಲವಾದರೆ ಭಿನ್ನಾಭಿಪ್ರಾಯಗಳು ಸವಕಾಶ ಸಿಗುತ್ತದೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಬಹುಜನರ ಅಭಿಪ್ರಾಯವನ್ನು ಹೆಚ್ಚಿಗೆ ಗೌರವಿಸುವುದು ಒಳ್ಳೆಯದು. ಮಾತಿನಲ್ಲಿ ಹೆಚ್ಚಿನ ಎಚ್ಚರವಿರಲಿ, ಯಾರ ವಿರುದ್ಧವೂ ಕುಹುಕ ಮಾಡುವುದು ಬೇಡ. ವಿವಾಹದ ಬಗ್ಗೆ ಬೇಸರವುಂಟಾಗುವುದು. ಹಣದ ಹರಿವು‌ ಕಡಿಮೆ ಇರುವುದರಿಂದ ಖರ್ಚನ್ನು ಸರಿಯಾಗಿ ನಿಭಾಯಿಸುವುದು ಒಳ್ಳೆಯದು. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಕೊಡುಕೊಳ್ಳುವ ವ್ಯವಹಾರದಲ್ಲಿ ದಾಖಲೆಗಳು ಸರಿಯಾಗಿರಲಿ.

ಕುಂಭ ರಾಶಿ :ವಿದ್ಯಾರ್ಥಿಗಳಿಗೆ ಎಲ್ಲರಿಂದ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತದೆ. ವ್ಯವಹಾರಗಳ ಬಗ್ಗೆ ಪಾಲುದಾರರ ಜೊತೆ ತಕ್ಷಣದಲ್ಲಿ ಮಾತನಾಡಬೇಕಾದ ಹಾಗೂ ತೀರ್ಮಾನ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಮಾತಿನಿಂದ ಕಾರ್ಯ ಸಾಧನೆ ಮಾಡಿ ಮೆಚ್ಚುಗೆ ಪಡೆಯುವಿರಿ. ಆರ್ಥಿಕ ಪರಿಸ್ಥಿತಿಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಹಣದ ಒಳಹರಿವು ಸಾಮಾನ್ಯವಾಗಿರುತಗತವೆ. ಗೃಹ ನಿರ್ಮಾಣದ ಕೆಲಸದಲ್ಲಿ ಅತಿ ಆತುರ ಬೇಡ. ಆರೋಪ ಪ್ರತ್ಯಾರೋಪವೇ ಹೆಚ್ಚಾಗಿತ್ತದೆ. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ಇಂದಿನ ವ್ಯರ್ಥ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ಆಕಸ್ಮಿಕವಾಗಿ ತೊಂದರೆ ಆಗಬಹುದು. ಕೆಲವರಿಂದ ದೂರ ಇರವುದು ಉತ್ತಮ.

ಮೀನ ರಾಶಿ :ಇಂದು ಕೆಲವು ವಿಷಯಗಳಲ್ಲಿ ಕಠಿಣ ನಿರ್ಧಾರ ಬೇಕಾಗುತ್ತದೆ. ನೀವು ಅಪೇಕ್ಷಿಸಿದ್ದ ಯಾತ್ರೆಗೆ ಸಿದ್ಧತೆ ಮಾಡಿಕೊಳ್ಳುವಿರಿ. ವೃತ್ತಿರಂಗದಲ್ಲಿ ನಿಮ್ಮ ಸ್ಥಾನವು ಹೆಚ್ಚಾಗುವುದಿಲ್ಲ. ಕೆಲಸಕ್ಕೂ ಇನ್ನೊಬ್ಬರ ಮೇಲೆ ಅವಲಂಬಿಸಬೇಡಿ. ಹೆಚ್ಚು ಚುರುಕಾಗಿ ಜನಗಳ ಮಧ್ಯೆ ಓಡಾಡುವುದು ಅತಿ ಅಗತ್ಯ. ಹಣದ ಒಳಹರಿವು ನಿಮ್ಮ ಅಗತ್ಯಕ್ಕೆ ತಕ್ಕಂತೆ ಇರುತ್ತದೆ. ಎಲ್ಲದಕ್ಕೂ ನಿಮ್ಮನ್ನು ಕೇಳಬೇಕು ಎನ್ನುವುದು ಅಸಾಧ್ಯವಾದುದು. ಸ್ಥಿರಾಸ್ತಿ ವಿಚಾರಗಳನ್ನು ತೀರ್ಮಾನ ಮಾಡಲು ಹೋದ ನಮಗೆ ನಮ್ಮ ಗೋಜಲುಗಳನ್ನು ಕಂಡು ಗಾಬರಿಯಾಗುವುದು ಬೇಡ. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿಗಾಗಿ ಪ್ರಯತ್ನಿಸುವಿರಿ. ಬೆರೆಯುವುದು ಕಷ್ಟವಾದೀತು. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಸಹೋದ್ಯೋಗಿಗಳ‌ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)

Published On - 6:36 pm, Tue, 7 May 24

ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ