Horoscope Today May 09, 2024: ಗುರುವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?
2024 ಮೇ 09ರ ದಿನ ಭವಿಷ್ಯ: ಗುರುವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಗುರುವಾರದ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 09) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಸೌಭಾಗ್ಯ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 50 ನಿಮಿಷಕ್ಕೆ, ರಾಹು ಕಾಲ 14:05 ರಿಂದ 15:40ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:08 ರಿಂದ 07:43ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:19 ರಿಂದ 10:54ರ ವರೆಗೆ.
ಮೇಷ ರಾಶಿ :ನೀವು ಇಂದು ನೀರಿಗೆ ಸಂಬಂಧಿಸಿದ ಉದ್ಯಮದಲ್ಲಿ ಆದಾಯ ಹೆಚ್ಚಾಗುವುದು. ಇದರಿಂದ ಆರ್ಥಿಕ ಸಮಸ್ಯೆ ದೂರವಾಗಿ ನೆಮ್ಮದಿಯನ್ನು ಕಾಣುವಿರಿ. ಆರೋಗ್ಯದಲ್ಲಿ ಸುಧಾರಣೆ ನಿಮ್ಮ ಜೀವನಕ್ಕೆ ಹೊಸ ಉತ್ಸಾಹವನ್ನೂ ತರುತ್ತದೆ. ಕುಟುಂಬದ ಸದಸ್ಯರ ಮಾತನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ಮಕ್ಕಳನ್ನು ಸತ್ಕಾರ್ಯಕ್ಕೆ ತೊಡಗಿಸುವಿರಿ. ನಿಮ್ಮ ಅನನುಕೂಲತೆಯನ್ನು ಯಾರ ಬಳಿಯೂ ಹೇಳಲಾರಿರಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಶಾರೀರಿಕ ತೊಂದರೆಗಳನ್ನು ತೆಗೆದುಕೊಳ್ಳದೇ ಬಹಳ ನಾಜೂಕಿನಿಂದ ಕಾರ್ಯವನ್ನು ಮಾಡುವಿರಿ.
ವೃಷಭ ರಾಶಿ :ಇಂದು ವಿದ್ಯುತ್ ಉಪಕರಣಗಳ ಬಳಕೆಯು ಹೆಚ್ಚಾಗಿರುವುದು. ಇದರಿಂದ ಆರೋಗ್ಯವು ಕಡಿಮೆ ಆಗುವುದು. ಹೊಸ ವಸ್ತುಗಳಾದರೂ ಅವಶ್ಯಕತೆ ಇದ್ದರೆ ಮಾತ್ರ ಖರೀದಿಸಿ. ನಿಮಗೆ ಬೇಕಾದುದನ್ನು ಪಡೆಯಲು ನಿಮಗೆ ಇಚ್ಛೆ ಇರುವುದು. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವಿರಿ. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಅಪರಿಚಿತರಿಂದ ನಿಮಗೆ ಉಪದೇಶ ಸಿಗಲಿದೆ ಅದು ನಿಮಗೆ ಕಿರಿಕಿರಿ ಎನಿಸುವುದು. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ. ಅಪರಿಚಿತರ ಜೊತೆಗಿನ ಮಾತುಗಳು ನಿಮಗೆ ಹಿತವೆನಿಸುವುದು. ನಿಮ್ಮ ಮಿತಿಯಲ್ಲಿ ಉಳಿತಾಯ ಮಾಡುವಿರಿ. ನಿಮ್ಮ ಅಸ್ತಿತ್ವವನ್ನು ಗುರುತಿಸಿಲ್ಲ ಎಂಬ ಬೇಸರ ಇರುವುದು. ಯಾರಿಗಾದರೂ ಇಂದು ಸಾಲವಾಗಿ ಹಣವನ್ನು ಕೊಡುವಿರಿ.
ಮಿಥುನ ರಾಶಿ :ಇಂದು ನಿಮ್ಮ ವೈವಾಹಿಕ ಜೀವನದಲ್ಲಿ ಸಂಗಾತಿಯಿಂದ ಒತ್ತಡ ಬರುವುದು. ಅದನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಾಗುವುದು ಅಥವಾ ಮೆಲ್ಲಗೆ ತಳ್ಳಿಹಾಕಬೇಕಾಗುವುದು. ಕಷ್ಟದಿಂದ ಪಡೆದ ಸಂಪತ್ತನ್ನು ಖರ್ಚುಮಾಡಲು ಮನಸ್ಸಾಗದು. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರವು ನಡೆಯಬಹುದು. ಯಂತ್ರಗಳ ಬಳಕೆಯನ್ನು ನೀವು ಕಡಿಮೆ ಮಾಡುವಿರಿ. ಒಂದೇ ವಿಚಾರಕ್ಕೆ ಮತ್ತೆ ಮತ್ತೆ ಬೇಸರಿಸುವ ಅವಶ್ಯಕತೆ ಇಲ್ಲ. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಅನಗತ್ಯ ಮಾತುಗಳಿಗಿಂತ ಮೌನವೇ ಲೇಸೆನಿಸಬಹುದು. ಸತ್ಯವನ್ನೇ ಆದರೂ ಹೇಳುವ ಕ್ರಮದಲ್ಲಿ ಹೇಳಿ.
ಕಟಕ ರಾಶಿ :ಇಂದು ನಿಮ್ಮ ಉದ್ಯಮದಲ್ಲು ಉತ್ತಮ ಗಳಿಕೆಗೆ ಅವಕಾಶಗಳು ತೆರದುಕೊಳ್ಳುವುವು. ಹಳೆಯ ಹೂಡಿಕೆಯಿಂದ ಉಪಯೋಗವಾಗಲಿದೆ. ವಾಹನದ ದುರಸ್ತಿಯನ್ನು ಮಾಡಬೇಕಾಗಿಬರಬಹುದು. ಇನ್ನೊಬ್ಬರ ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗ ಮಾಡಬೇಕಾದೀತು. ಮಕ್ಕಳ ವಿಚಾರದಲ್ಲಿ ಸಲಿಗೆ ಬೇಡ. ನಿಮ್ಮನ್ನು ನಿರ್ಲಕ್ಷಿಸಿ ಏನನ್ನಾದರೂ ಮಾಡಬಹುದು. ಪ್ರೀತಿಯು ಸುಖಾಂತ್ಯ ಕಾಣಬಹುದು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ಹೊಸ ಯಂತ್ರಗಳನ್ನು ಸ್ವೀಕರಿಸುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ಯಾರನ್ನೂ ನೀವು ಕೇವಲವಾಗಿ ನೋಡುವುದು ಬೇಡ. ಅವರದ್ದೇ ಆದ ಸ್ಥಾನವು ಅವರಿಗೆ ಕೊಡಿ. ನಿಮ್ಮನ್ನು ಅವಲಂಬಿಸಿದವರಿಗೆ ಕಷ್ಟ ಕೊಡುವಿರಿ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು.
ಸಿಂಹ ರಾಶಿ :ಇಂದು ಆಪ್ತರಿಂದ ಹಣವನ್ನು ಸಾಲವಾಗಿ ಪಡೆಯಬೇಕಾಗಬಹುದು. ನಿಮಗೆ ಉನ್ನತ ಸ್ಥಾನವನ್ನು ನೀಡುವ ಕುರಿತು ಚರ್ಚೆಗಳು ನಡೆಯುವುದು. ನಿಮ್ಮ ಸಂಗಾತಿಯ ಜೊತೆ ಸುತ್ಯಾಡುವಿರಿ. ಎಂದಿಗಿಂತ ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರಲಿದೆ. ಇದು ನಿಮ್ಮ ಚಿಂತೆಗೆ ಕಾರಣವಾಗಲಿದೆ. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ನ್ಯಾಯಾಲಯದಲ್ಲಿ ನಿಮ್ಮ ಪರವಾಗಿ ಸಾಕ್ಷಿಯು ಸಿಗದೇಹೋಗಬಹುದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸಬಲರ ಜೊತೆ ಗೊತ್ತಿಲ್ಲದೇ ದ್ವೇಷವನ್ನು ಸಾಧಿಸುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಪ್ರವಾಸದಿಂದ ತೊಂದರೆಯಾಗಬಹುದು. ನಿಮ್ಮ ಪ್ರಾಮಾಣಿಕ ಪ್ರಯತ್ನವನ್ನು ಬಿಡದೇ ಮುಂದುವರಿಯಲಿ.
ಕನ್ಯಾ ರಾಶಿ :ಇಂದು ನಿಮ್ಮ ಆರ್ಥಿಕ ವ್ಯವಹಾರವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಿರಿ. ಸ್ಪರ್ಧಾತ್ಮಕವಾಗಿ ಸೋಲುವ ಸಂಭವವಿದೆ. ಉದ್ಯೋಗದಲ್ಲಿ ಇರುವವರಿಗೆ ಕೆಲವು ಆಯ್ಕೆಗಳನ್ನು ಯಾರಾದರೂ ಕೊಡಬಹುದು. ಪೂರ್ವಾಪರಗಳನ್ನು ನೋಡಿಕೊಂಡು ಮುಂದುವರಿಯಿರಿ. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಮನೆಯ ಸ್ಥಳವನ್ನು ಬದಲಾಯಿಸಬೇಕಾಗಬಹುದು. ನಿಮ್ಮ ವಸ್ತುಗಳು ಕಳ್ಳತನವಾಗಬಹುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ಇಂದು ಕೈಗೊಂಡ ಪ್ರವಾಸದಲ್ಲಿ ನಿಮಗೆ ತೃಪ್ತಿ ಸಿಗದು. ಎಲ್ಲವನ್ನೂ ಬಲ್ಲವರಂತೆ ತೋರಿಸಿಕೊಳ್ಳುವಿರಿ. ನಿಮ್ಮ ಉತ್ಸಾಹಕ್ಕೆ ಯಾರಾದರೂ ಭಂಗಮಾಡಬಹುದು. ಮಕ್ಕಳ ಜೊತೆ ಎಲ್ಲಿಗಾದರೂ ಸುತ್ತಾಡಲು ಹೋಗುವಿರಿ.
ತುಲಾ ರಾಶಿ :ಇಂದು ವ್ಯಾಪಾರದ ಪೈಪೋಟಿಯು ನಿಮ್ಮ ನೆಮ್ಮದಿಯನ್ನು ಕೆಣಕಬಹುದು. ಪರರ ಬಗ್ಗೆ ಇರುವ ಅಸಮಾಧಾನವನ್ನು ಹೇಳಿಕೊಂಡು ಕಳೆಯುವಿರಿ. ಕುಟುಂಬದಲ್ಲಿ ನೀವು ಬಹಳ ಚಾಣಾಕ್ಷತನದಿಂದ ವ್ಯವಹರಿಸುವಿರಿ. ಸಾಮಾಜಿಕ ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ದುಡುಕಿ ಮಾತನಾಡಿ ಸತ್ಯವನ್ನು ಹೇಳುವಿರಿ. ದೈವಭಕ್ತಿಯಿಂದ ಮನಸ್ಸಿನ ಗೊಂದಲವನ್ನು ಪರಿಹರಿಸಿಕೊಂಡು ಸ್ಥೈರ್ಯವನ್ನು ತಂದುಕೊಳ್ಳುವಿರಿ. ವಿನಾಕಾರಣ ಯಾರ ಮೇಲಾದರೂ ಅಧಿಕಾರವನ್ನು ಚಲಾಯಿಸುವಿರಿ. ಇಂದಿನ ಆಹಾರವು ಆರೋಗ್ಯವನ್ನು ಕೆಡಿಸಬಹುದು. ಅಲ್ಪರ ಸಹವಾಸದಿಂದ ಅಭಿಮಾನಕ್ಕೆ ತೊಂದರೆಯಾಗುವುದು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳಬೇಕಾಗುವುದು. ಹಣಕಾಸಿನ ವ್ಯವಹಾರವು ಪಾರದರ್ಶಕವಾಗಿ ಇರಲಿ. ಮಕ್ಕಳ ಖರ್ಚಿಗೆ ಹಣವನ್ನು ಕೊಡುವಿರಿ.
ವೃಶ್ಚಿಕ ರಾಶಿ :ಎಲ್ಲವನ್ನೂ ದೈವಾನುಕೂಲದಂತೆ ಆಗುತ್ತದೆ ಎಂದು ಸುಮ್ಮನಿರದೇ ನಿಮ್ಮ ಪ್ರಯತ್ನವನ್ನೂ ಮಾಡಿ. ವೃತ್ತಿಯಲ್ಲಿ ಕೆಲವು ಅನಿರೀಕ್ಷಿತ ಜವಾಬ್ದಾರಿಯನ್ನು ನಿರ್ವಹಣೆ ಮಾಡಬೇಕಾಗಿಬರಬಹುದು. ಪ್ರೀತಿಪಾತ್ರರಿಂದ ನಿಮ್ಮ ಬಗ್ಗೆ ಹೆಚ್ಚಿನ ಒಲವು ಇರುವುದು. ಹೊಸ ಉದ್ಯೋಗವು ನಿಮಗೆ ಆರ್ಥಿಕತೆಯಿಂದ ನೆಮ್ಮದಿಯನ್ನು ನೀಡುವುದು. ಗೃಹ ನಿರ್ಮಾಣದ ಬಗ್ಗೆ ಯೋಗ್ಯ ವ್ಯಕ್ತಿಗಳ ಜೊತೆ ಸಂವಹನ ನಡೆಸಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವ ಇಚ್ಛೆ ಇರಲಿದೆ. ಬಂಧುಗಳು ನಿಮ್ಮ ಸಮಸ್ಯೆಗೆ ಸ್ಪಂದಿಸುವರು. ಅಂದುಕೊಂಡಿದ್ದನ್ನು ಸಾಧಿಸಲು ಅಪರಿಚಿತರ ಸಹಾಯವೂ ಲಭ್ಯವಾಗುವುದು. ಹುಡುಗಾಟದ ಬುದ್ಧಿಯಿಂದ ಕೆಲವು ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ಸಂಗಾತಿಯ ಬೆಂಬಲವು ಸಿಗದೇಹೋಗಬಹುದು. ನಿಮ್ಮವರ ಜೊತೆಗಿನ ಒಡನಾಟವು ಮಿತಿಯಲ್ಲಿ ಇರಲಿ.
ಧನು ರಾಶಿ :ಇಂದು ಉದ್ಯಮಿಗಳು ಬಹಳ ಓಡಾಟದಿಂದ ಲಾಭವನ್ನು ಪಡೆಯುವಿರಿ. ಸರ್ಕಾರಿ ಉದ್ಯೋಗವು ಕಿರಿಕಿರಿ ಎನಿಸುವಂತೆ ಮಾಡಿದರೂ ನೀವು ಅದನ್ನು ಬಿಡಲಾರಿರಿ. ಕುಟುಂಬದವರು ನಿಮ್ಮಿಂದ ಹೆಚ್ಚಿನ ನಿರೀಕ್ಷೆಯನ್ನು ಮಾಡುತ್ತಾರೆ. ಆಕಸ್ಮಿಕವಾಗಿ ವಿಶೇಷ ವ್ಯಕ್ತಿಗಳ ಭೇಟಿಯಾಗಲಿದೆ. ಮಂಗಲ ಕಾರ್ಯಗಳಿಂದ ನೆಮ್ಮದಿ ಇರುವುದು. ಸ್ಥಿರಾಸ್ತಿಯನ್ನು ವ್ಯವಹಾರ ಜ್ಞಾನದ ಕೊರತೆಯಿಂದ ಕಳೆದುಕೊಳ್ಳಬಹುದು. ಯುಕ್ತಿಯಿಂದ ಕೆಲಸ ಮಾಡುವುದು ಒಳಿತು. ಮಿತ್ರರ ಮನಸ್ತಾಪವನ್ನು ನೀವು ಬಗೆಹರಿಸಿಕೊಳ್ಳುವಿರಿ. ಬಂಧುಗಳ ನಡುವೆ ಪರಸ್ಪರ ಸೌಹಾರ್ದವು ಬೆಳೆಯಬಹುದು. ಭೂಮಿಯ ಖರೀದಿಸಲು ಸಂಗಾತಿಯ ಜೊತೆ ಆರಂಭಿಕ ಚರ್ಚೆ ನಡೆಸುವಿರಿ. ಸಹೋದರರ ನಡುವೆ ಆರ್ಥಿಕ ಸಂಬಂಧವು ಉತ್ತಮವಾಗಿ ಇರುವುದಿಲ್ಲ. ವಯಸ್ಸಿಗೆ ಬಂದ ಮಕ್ಕಳ ವಿವಾಹದ ಚಿಂತೆ ಇರುಬುದು. ಉದ್ಯಮದಲ್ಲಿ ಸ್ವಲ್ಪಮಟ್ಟಿನ ಒತ್ತಡ ಕಾಣಿಸುವುದು.
ಮಕರ ರಾಶಿ :ಇಂದು ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ತೊಂದರೆಗಳು ಎದುರಾಗದೇ ಕಾರ್ಯಗಳು ಮುಗಿಯುವುದು. ಯಾರಿಂದಲಾದರೂ ಪ್ರಶಂಸೆಯನ್ನು ನಿರೀಕ್ಷಿಸುವಿರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆಗೆ ಗಮನವು ಅಧಿಕವಾಗಲಿದೆ. ಸ್ನೇಹಿತರು ನಿಮ್ಮನ್ನು ಅಪಮಾನ ಮಾಡಬಹುದು. ನ್ಯಾಯಾಲಯದ ವಿಷಯದಲ್ಲಿ ನಿಮ್ಮ ಊಹೆಯು ಸರಿಯಾಗದು. ಮನೆಯಲ್ಲಿ ಮಕ್ಕಳು ನಿಮ್ಮನ್ನು ಲೆಕ್ಕಕ್ಕೆ ತೆಗದುಕೊಳ್ಳದೇ ಹೋಗಬಹುದು. ನಿಮ್ಮ ಸರಿಯಾದ ಕೆಲಸವನ್ನು ಮಾಡಿ. ಹಳೆಯ ಮನೆಯ ದುರಸ್ತಿ ಕಾರ್ಯವು ಜರುಗಲಿದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗಲಿದೆ. ಇಂದಿನ ಹೆಚ್ಚಿನ ವಿಚಾರಗಳನ್ನು ನಕರಾತ್ಮಕವಾಗಿಯೇ ಚಿಂತಿಸುವಿರಿ. ದಾಂಪತ್ಯಕ್ಕೆ ಹೆಚ್ಚು ಒತ್ತು ಕೊಡುವಿರಿ. ದೂರ ಪ್ರಯಾಣವು ನಿಮಗೆ ಇಂದು ಅನಿವಾರ್ಯವಾದೀತು. ಬೇಕಾದ ವಸ್ತುವು ಕಣ್ಮರೆಯಾಗಿ ಹುಡುಕಾಟ ಮಾಡುವಿರಿ. ಎಲ್ಲರಿಂದ ಪ್ರೀತಿ ಕಡಿಮೆಯಾದಂತೆ ತೋರುವುದು.
ಕುಂಭ ರಾಶಿ :ಇಂದು ನಿಮ್ಮ ಚೌಕಟ್ಟನ್ನು ಮೀರಿ ವರ್ತಿಸಬೇಕಾಗುವುದು. ಸುತ್ತಲಿನ ಪರಿಸ್ಥಿತಿಯನ್ನು ಗಮನಿಸಿಕೊಂಡು ವ್ಯವಹರಿಸಿ. ನಿಮ್ಮ ಪೂರ್ವಯೋಜನೆಗಳು ತಲೆಕೆಳಗಾಗಬಹುದು. ಅನಾರೋಗ್ಯದಿಂದ ನಿಮ್ಮ ಉತ್ಸಾಹವು ಕುಗ್ಗಬಹುದು. ಮಾತಿನ ಮೇಲೆ ನೀವು ಹಿಡಿತವನ್ನು ಸಾಧಿಸಬೇಕಾದೀತು. ಕಛೇರಿಯಲ್ಲಿ ಅನಗತ್ಯವಾಗಿ ಮಾತನಾಡಿ ಸುಮ್ಮನೇ ವ್ಯಕ್ತಿತ್ವವನ್ನು ಹಾಳುಮಾಡಿಕೊಳ್ಳುವುದು ಬೇಡ. ಯಾರಾದರೂ ವ್ಯಕ್ತಿತ್ವನ್ನು ಅನುಸರಿಸುವ ಮೊದಲು ನಿಮ್ಮ ಬಗ್ಗೆ ಅರಿವು ಇರಲಿ. ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಆಸಕ್ತಿಯಿಂದ ತೊಡಗುವಿರಿ. ಕಲಾವಿದರು ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಬಡ್ತಿಯನ್ನು ಅಪೇಕ್ಷಿಸುವಿರಿ. ಮೇಲಧಿಕಾರಿಗಳ ಮಾತುಗಳು ನಿಮ್ಮನ್ನು ಕಾಡಬಹುದು.
ಮೀನ ರಾಶಿ :ಇಂದು ನಿಮ್ಮ ವ್ಯಾಪಾರದಲ್ಲಿ ವೆಚ್ಚಗಳು ಕಡಿಮೆ ಹಾಗೂ ಆದಾಯವು ಅಧಿಕವೂ ಆಗಲಿದೆ. ಸ್ವಂತ ಉದ್ಯಮಿಗಳು ಹೆಚ್ಚಿನ ಲಾಭವನ್ನೂ ಪಡೆಯುವರು. ಅವಿವಾಹಿತರಿಗೆ ವಿವಾಹಕ್ಕೆ ಸಂಬಂಧಿಸಿದ ಏರ್ಪಾಡುಗಳು ಆಗಲಿವೆ. ಇಂದು ನಿಮಗೆ ಮಾತಿನಿಂದಾಗಿ ತೊಂದರೆಗಳು ಬರಬಹುದು. ಎಲ್ಲರ ಜೊತೆಗೂ ವಾಗ್ವಾದಕ್ಕೆ ಹೋಗುವುದು ಬೇಡ. ಕುಟುಂಬದ ಸಮಸ್ಯೆಗೆ ಧಾರ್ಮಿಕ ಕಾರ್ಯವನ್ನು ಮಾಡಿ ಪರಿಹಾರವನ್ನು ಮಾಡಿಕೊಳ್ಳಲು ಇಚ್ಛಿಸುವಿರಿ. ಕಳೆದುಕೊಂಡ ವಸ್ತುವನ್ನು ಬೇರೆ ರೀತಿಯಲ್ಲಿ ಪಡೆದುಕೊಳ್ಳುವಿರಿ. ಯಾರನ್ನೂ ಅವಲಂಬಿಸುವುದು ನಿಮಗೆ ಇಷ್ಟವಾಗದು. ಇಂದು ನೀವು ಅಂದುಕೊಂಡಂತೆ ಆಗಿದ್ದು ಖುಷಿಯಿಂದ ಇರುವಿರಿ. ವಾಹನ ಖರೀದಿಯ ಆಲೋಚನೆಯನ್ನು ಸದ್ಯ ಕೈ ಬಿಡುವಿರಿ. ವಿದ್ಯಾಭ್ಯಾಸದ ಬಗ್ಗೆ ಅನಾದರ ಬರಬಹುದು.
-ಲೋಹಿತ ಹೆಬ್ಬಾರ್ – 8762924271 (what’s app only)
Published On - 7:12 pm, Wed, 8 May 24




