ನಿತ್ಯ ಭವಿಷ್ಯ: ಇಂದು ಈ ರಾಶಿಯವರು ತಮ್ಮನ್ನು ತಾವೇ ಅವಲೋಕಿಸಿಕೊಳ್ಳುವುದು ಉತ್ತಮ…

ನವೆಂಬರ್ 08, 2026ರ ನಿತ್ಯ ಭವಿಷ್ಯ. ಶಾಲಿವಾಹನ ಶಕ ೧೯೪೯ರ ಈ ದಿನದಂದು ಪ್ರತಿಯೊಂದು ರಾಶಿಗಳಿಗೂ ವಿಭಿನ್ನ ಫಲಗಳಿವೆ. ವೈಯಕ್ತಿಕ ಅವಲೋಕನ, ಆರ್ಥಿಕ ನಿರ್ಧಾರಗಳು, ಸಂಬಂಧಗಳ ಸುಧಾರಣೆ ಮತ್ತು ವೃತ್ತಿಜೀವನದಲ್ಲಿನ ಸವಾಲುಗಳ ಕುರಿತು ಜ್ಯೋತಿಷ್ಯ ಮಾರ್ಗದರ್ಶನ ನೀಡಲಾಗಿದೆ. ಇಂದು ನಿಮ್ಮ ಅದೃಷ್ಟ ಮತ್ತು ಶುಭಾಶುಭ ಸಮಯಗಳನ್ನು ಅರಿತುಕೊಂಡು ದಿನವನ್ನು ಯಶಸ್ವಿಯಾಗಿ ಮುನ್ನಡೆಸಿ.

ನಿತ್ಯ ಭವಿಷ್ಯ: ಇಂದು ಈ ರಾಶಿಯವರು ತಮ್ಮನ್ನು ತಾವೇ ಅವಲೋಕಿಸಿಕೊಳ್ಳುವುದು ಉತ್ತಮ...
ದಿನ ಭವಿಷ್ಯ
Image Credit source: Getty images
Edited By:

Updated on: Nov 08, 2026 | 3:38 AM

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಆಶ್ವಯುಜ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಭಾನುವಾರದಂದು ಸಂಧಾನಕ್ಕೆ ಪ್ರಯತ್ನ, ಓಡಾಟ ವಿಫಲ, ಶಾಂತಿಗೆ ಭಂಗ, ದೇಹಪೀಡೆ, ವಾಹನ ಖರೀದಿ, ಶತ್ರುವಿನಿಂದ‌ ಪರಾಜಯ, ಸೃಜನಾತ್ಮಕತೆಗೆ ಹಣವ್ಯಯ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಆಶ್ವಯುಜ, ಸೌರ ಮಾಸ : ತುಲಾ, ಮಹಾನಕ್ಷತ್ರ : ಸ್ವಾತಿ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವಿಷ್ಕಂಭ, ಕರಣ : ಭದ್ರ ಸೂರ್ಯೋದಯ – 06 – 16 am, ಸೂರ್ಯಾಸ್ತ – 05 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16:23 – 17:50, ಯಮಗಂಡ ಕಾಲ 12:03 – 13:30, ಗುಳಿಕ ಕಾಲ 14:57 – 16:23

Loading...

ಮೇಷ ರಾಶಿ :
ಯಾವುದಾದರೂ ಸಮಾಜ ಬಾಹಿರ ಕೃತ್ಯಗಳಲ್ಲಿ ಸಿಕ್ಕಿಕೊಳ್ಳುವ ಸಂಭವವಿರಲಿದೆ. ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು. ವಿವಾಹವಾಗಲಿರುವವರನ್ನು ಅಕಾಸ್ಮಾತ್ ಭೇಟಿಯಾಗುವಿರಿ. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿಯ ನಿರೀಕ್ಷೆ ಇರುವುದು. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ.

ವೃಷಭ ರಾಶಿ :
ಯಾವುದಕ್ಕೂ ನಿರಾಸೆ ಇಟ್ಟುಕೊಳ್ಳುವುದು ಬೇಡ. ಸಮಯವು ಬೇಕಾಗಬಹುದು. ಅಧಿಕ ಖರ್ಚಿನಿಂದ ಇಂದಿನ‌ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ವಾಸಸ್ಥಳವನ್ನು ಬದಲಿಸಬೇಕಾಗುವುದು. ಯಂತ್ರಗಳಿಂದ ದೇಹಕ್ಕೆ ತೊಂದರೆ ಆಗಬಹುದು. ಬಂದ ಅವಕಾಶವನ್ನು ಬಿಟ್ಟು ಅನಂತರ ದುಃಖಿಸುವುದರಲ್ಲಿ ಅರ್ಥವಿರದು. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು. ಬಹಳ ದಿನಗಳ ಅನಂತರ ಇಂದು ಸಂಗಾತಿಯು ಸಮಯವನ್ನು ಕೇಳಬಹುದು

ಮಿಥುನ ರಾಶಿ :
ನಿಮಗೆ ತಾಯಿಯರ ಸೇವೆಯನ್ನು ಮಾಡುವ ಅವಕಾಶವು ಸಿಗುವುದು. ನಂಬಿಕೆಯು ಭಗ್ನವಾಗಬಹುದು. ಎಲ್ಲರ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಸ್ನೇಹಿತರಿಗೆ ಸ್ಪಂದಿಸಬೇಕಾಗುವುದು. ಸಹೋದ್ಯೋಗಿಗಳಿಂದ ಕಾರ್ಯಗಳಿಗೆ ವಿಘ್ನವು ಉಂಡಾಗುವುದು. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಪಾಲುದಾರಿಕೆಯಲ್ಲಿ ವ್ಯತ್ಯಾಸವನ್ನು ಮಾಡಬೇಕಾದೀತು. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು.

ಕರ್ಕಾಟಕ ರಾಶಿ :
ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ಹಿತಶತ್ರುಗಳ ಕಾರಣದಿಂದ ಅವಕಾಶದಿಂದ ವಂಚಿತರಾಗುವಿರಿ. ವಾಹನ ಸಂಚಾರದಲ್ಲಿ ವ್ಯತ್ಯಯವಾಗುವುದು‌. ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಆಸ್ತಿಯ ಗಳಿಕೆಯಲ್ಲಿ ಎಲ್ಲವೂ ಅನಾಯಾಸವಾಗಿ ನಡೆಯದು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ.

ಸಿಂಹ ರಾಶಿ :
ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹವಿರುವುದು. ಗೆಲುವು ಕಷ್ಟಸಾಧ್ಯವಾದೀತು. ಅನಿರೀಕ್ಷಿತ ಪ್ರಯಾಣವಾದರೂ ಕಾರ್ಯದಲ್ಲಿ ಜಯ ಸಿಕ್ಕೀತು. ಬಹಳ ದಿನಗಳ‌ ಅನಂತರ ಬಂಧುಗಳ ಮನೆಗೆ ಹೋಗುವುದರಿಂದ ಉತ್ತಮ‌ ಆತಿಥ್ಯ ಪ್ರಾಪ್ತವಾಗುವುದು. ನೆರೆಹೊರೆಯವರು ನಿಮ್ಮ ಮನೆಯ ಬಗ್ಗೆ ಆಡಿಕೊಳ್ಳುವರು. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ. ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ.

ಕನ್ಯಾ ರಾಶಿ :
ಮಾನಸಿಕ ಆಘಾತವು ಇಂದು ಅನಿರೀಕ್ಷಿತ ಆಗಬಹುದು. ಬಾಂಧವರ ನಡುವೆ ವ್ಯವಹಾರದ ಕಾರಣ ಭಿನ್ನಾಭಿಪ್ರಾಯ ಬರಬಹುದು. ಇಂದಿನ‌ ‌ಮನೆಯ ವಾತಾವರಣದುಮನದ ನಿಮ್ಮ ಅಧ್ಯಯನಕ್ಕೆ ತೊಡಬಲಕಾಗಬಹುದು. ದಾಯಾದಿಗಳು ನಿಮ್ಮ ಮೇಲೆ ಅಪವಾದವನ್ನು ಮಾಡಬಹುದು. ದಾಂಪತ್ಯದ ಒಡಕನ್ನು ದೊಡ್ಡದಾಗಿಸಿಕೊಳ್ಳುವುದು ಬೇಡ. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು.

ತುಲಾ ರಾಶಿ :
ನಿಮ್ಮ ವಿವಾಹದ ಪ್ರಸ್ತಾಪಗಳು ಅನಿರೀಕ್ಷಿತವಾಗಿ ಬರಬಹುದು. ಇಂದಿನ ಲಾಭವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಸುಮ್ಮನೇ ನಿಮ್ಮಷ್ಟಕ್ಕೆ ಇರಿ. ವಾಹನದ ಕಾರಣ ಕಲಹವಾಗುವುದು. ಕಛೇರಿಯ ಕಾರ್ಯದ ನಿಮಿತ್ತ ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು. ಮನೆಯಲ್ಲಿ ನಿಮ್ಮ ಸಂಭ್ರಮವನ್ನು ಆಚರಿಸಲು ಆಗದು. ಆಲಸ್ಯದ ಕಾರಣ ನಿಮ್ಮ ಕಾರ್ಯವು ಪೂರ್ಣವಾಗದು. ಸಂಗಾತಿಯ ಮಾತನ್ನು ನೀವು ಗಂಭೀರವಾಗಿ ಪರಿಗಣಿಸುವುದಿಲ್ಲ.

ವೃಶ್ಚಿಕ ರಾಶಿ :
ನಿಮ್ಮ ಗೌರವಕ್ಕೆ ಯಾರಿಂದಲಾದರೂ ಚ್ಯುತಿಯಾಗಬಹುದು. ಉದ್ಯಮವನ್ನು ಮಾರಾಟಮಾಡುವ ಆಲೋಚನೆ ಮಾಡುವಿರಿ. ಅಕ್ರಮ ವ್ಯವಹಾರಗಳು ಎಲ್ಲರಿಗೂ ಗೊತ್ತಾದೀತು. ಉದ್ಯೋಗದಲ್ಲಿ ಪ್ರಗತಿ ಇಲ್ಲ ಎಂದು ಬೇಸರಗೊಂಡಿದ್ದರೆ ನಿಮಗೆ ಅಲ್ಪ ನೆಮ್ಮದಿಯ ಸಂಗತಿಯು ಇರಲಿದೆ. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ಕಣ್ಣಿನ ತೊಂದರೆಯು ಹೆಚ್ಚಾಗಬಹುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಅಸಮಾಧಾನಗೊಳ್ಳುವರು.

ಧನು ರಾಶಿ :
ನೀವು ಪ್ರಯಾಣವನ್ನು ಅನಿವಾರ್ಯ ಕಾರಣಕ್ಕೆ ಮಾಡಬೇಕಾಗಬಹುದು. ಪ್ರೇಮವು ಸಾಕೆನಿಸಬಹುದು. ಸುಮ್ಮನೇ ಕುಳಿತುಕೊಳ್ಳುವುದು ಇಷ್ಟವಾಗದು. ಸಂತಾನ ಯೋಗದಿಂದ ನಿಮಗೆ ಖುಷಿ ಸಿಗಲಿದೆ. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಮಹಿಳೆಯರ ಉದ್ಯಮದಲ್ಲಿ ಆತಂಕದ ವಾತಾವರಣ ಕಾಣಿಸುವುದು. ಉದ್ಯೋಗದ ಸ್ಥಳವು ಬೆಲೆಯು ಕಡಿಮೆ‌ ಆದಂತೆ ತೋರುವುದು.

ಮಕರ ರಾಶಿ :
ನೀವು ಹಿರಿಯರ ಜೊತೆ ಗೌರವಯುತವಾಗಿ ವರ್ತಿಸಿ. ಸಹಿಸಲಾಗದ ದೇಹಪೀಡೆಯಿಂದ ಒದ್ದಾಡುವಿರಿ. ಕೆಲವರು ಅಕಾರಣವಾಗಿ ಬಿಟ್ಟುಹೋಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಉದ್ಯೋಗದಲ್ಲಿ ದೂರದೃಷ್ಟಿ ಇರಲಿ. ಕೃಷಿ ಚಟುವಟಿಕೆಯಲ್ಲಿ ಆಸಕ್ತಿಯು ಅಧಿಕವಾಗಬಹುದು. ಇಂದು ನಿಮ್ಮ ಸಹಾಯದಿಂದ ಕುಟುಂಬವು ಸಂತೋಷಗೊಳ್ಳುವುದು.

ಕುಂಭ ರಾಶಿ :
ಅಧಿಕ ಸಂಪತ್ತಿನ ವ್ಯಯ ತಾನಾಗಿಯೇ ಆಗುವುದು. ಸಾಮರಸ್ಯದ ಅಭಾವದಿಂದ ಮಾನಸಿಕ ಸ್ಥಿತಿಯು ಅಸಮತೋಲನವಾಗಲಿದೆ. ನಿರೀಕ್ಷಿತ ಲಾಭವು ಆಗದಿದ್ದರೂ ನೆಮ್ಮದಿಗೆ ಕೊರತೆ ಕಾಣದು. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಕಿವಿಯ ನೋವಿನಿಂದ ಸಂಕಟವಾಗುವುದು. ಅಲ್ಪ ಸಮಯವಾದರೂ ವ್ಯವಹಾರಕ್ಕೆ ಒತ್ತುನೀಡುವಿರಿ. ಸ್ನೇಹಿತರ ಒತ್ತಾಯದ ಮೇರೆಗೆ ಪ್ರಯಾಣ ಮಾಡುವಿರಿ. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು.

ಮೀನ ರಾಶಿ :
ಮನಸ್ಸಿನ ಕಿರಿಕಿರಿಯನ್ನು ಅನುಭವಿಸದೇ ಅನ್ಯ ಮಾರ್ಗವಿರದು. ಅನಿರೀಕ್ಷಿತ ತಿರುವುಗಳು ನಿಮ್ಮನ್ನು ಉದ್ವಿಗ್ನಗೊಳಿಸಬಹುದು. ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ವಿಶ್ವಾಸಾರ್ಹ ವ್ಯಕ್ತಿಗಳಿಗೆ ಮಾತ್ರ ಸಾಲವನ್ನು ಕೊಡುವಿರಿ. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಸಂಬಂಧಗಳನ್ನು ಚೆನ್ನಾಗಿ ಇಟ್ಟಕೊಳ್ಳಲು ಇಷ್ಟಪಡುವಿರಿ. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು.

-ಲೋಹಿತ್ ಹೆಬ್ಬಾರ್ – 8762924271 (what’s app only)

ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
Loading...
Unable to load recommendations.
Follow Us