AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 17 November: ಇಂದು ಈ ರಾಶಿಯವರ ಹಳೆಯ ಕೆಲಸಗಳಿಗೆ ಮತ್ತೆ ಚಾಲನೆ

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಶರತ್ ಋತುವಿನ ಕಾರ್ತಿಕ ಮಾಸದ ಶುಕ್ಲ ಪಕ್ಷದ ಅಷ್ಟಮೀ ತಿಥಿಯ ಮಂಗಳವಾರದಂದು ಆಸ್ತಿ ಹಂಚಿಕೆ, ಕಠೋರ ಮಾತು, ಏಕಾಂತ, ಅನ್ಯ ವೃತ್ತಿಯ ಹುಡುಕಾಟ, ಗೃಹೊಪಯೋಗಿ ವಸ್ತು ಖರೀದಿ, ಸ್ಪರ್ಧೆಗೆ ತಯಾರಿ, ಆಲಸ್ಯ, ಬಂಧುಗಳ ಭೇಟಿ ಇವೆಲ್ಲ ಈ ದಿನದ ವಿಶೇಷ.

Horoscope Today 17 November: ಇಂದು ಈ ರಾಶಿಯವರ ಹಳೆಯ ಕೆಲಸಗಳಿಗೆ ಮತ್ತೆ ಚಾಲನೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on:Nov 17, 2026 | 1:06 AM

Share

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಶರತ್, ಚಾಂದ್ರಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ವಿಶಾಖಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಗಂಡ, ಕರಣ : ಭದ್ರ, ಸೂರ್ಯೋದಯ – 06 – 20 am, ಸೂರ್ಯಾಸ್ತ – 05 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:57 – 16:23, ಯಮಗಂಡ ಕಾಲ 09:12 – 10:38, ಗುಳಿಕ ಕಾಲ 12:04 – 13:31.

ಮೇಷ ರಾಶಿ: ನಿಮ್ಮ ಸಹೋದ್ಯೋಗಿಗಳು ನಿಮಗೆ ಅನಿವಾರ್ಯವಾಗಿ ಬಂದ ಸಂಕಟಕ್ಕೆ ಧನಸಹಾಯ ಮಾಡುವರು. ಉದ್ಯಮದಲ್ಲಿ ಬರುವ ಎಂತಹ ಸಮಸ್ಯೆಯನ್ನೂ ಪರಿಹರಿಸಿಕೊಳ್ಳುವಿರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವು ಸಂತೋಷಗೊಳ್ಳುವರು. ಅಪರಿಚಿತರನ್ನು ನಂಬಿ ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ನಿಮ್ಮನ್ನು ಇಷ್ಟಪಡುವವರಿಗೆ ಅಲ್ಪ ಸಮಯವನ್ನಾದರೂ ಕೊಡುವುದು ಅನಿವಾರ್ಯ.

ವೃಷಭ ರಾಶಿ: ನೀವು ವ್ಯಾಪಾರಸ್ಥರಾಗಿದ್ದರೆ, ನೀವು ಕೆಲಸದ ನಿಮಿತ್ತ ಪ್ರಯಾಣಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿರೂ, ಖರ್ಚೂ ಇರಲಿದೆ. ಕೆಲಸವನ್ನು ಹಂಚಿಕೊಂಡು ಮಾಡಿ. ಇದು ಕಾರ್ಯಕ್ಕೆ ವೇಗವನ್ನು ಹೆಚ್ಚಿಸುವುದು. ಆಪ್ತರಿಂದ ನಡೆವಳಿಕೆಗೆ ಟೀಕೆಗಳು ಬರಬಹುದು. ಇದರಿಂದ ನಿಮ್ಮ ನಡುವಿನ ಸಂಬಂಧವು ಕೆಡಬಹುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ.

ಮಿಥುನ ರಾಶಿ: ಹೊಸ ಒಪ್ಪಂದವನ್ನು ಮಾಡುವಾಗ ಹೆಚ್ಚು ಜಾಗರೂಕತೆ ಇರಲಿ. ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಸಂಬಂಧಗಳಲ್ಲಿ ಮೃದುತನ ಇರಲಿ. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ. ಅಸ್ಥಿರವಾದ ಮನಃಸ್ಥಿತಿಯು ಕಾರ್ಯವನ್ನು ಹಾಳುಮಾಡುವುದು. ಪ್ರಯಾಣ ಮಾಡುವ ಅನಿವಾರ್ಯತೆ ಸೃಷ್ಟಿಯಾಗಬಹುದು.

ಕರ್ಕಾಟಕ ರಾಶಿ: ನಿಮ್ಮದೇ ಹಣ ಮರಳಿ ಬರುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು.‌ ಹೊಸ ವೃತ್ತಿಯನ್ನು ಹುಡುಕುತ್ತಿದ್ದರೆ ಉತ್ತಮ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವಿರಿ. ಧನ ಸಂಪಾದನೆಯಲ್ಲಿ ಹೆಚ್ಚು ಆಸಕ್ತಿಯನ್ನು ತೋರಿಸುವಿರಿ. ಮನೆಯ ಬಗ್ಗೆ ಪ್ರೀತಿ ಹೆಚ್ಚಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆಯನ್ನು ಬಲದಿಂದ ತಂದುಕೊಳ್ಳಿ.

ಸಿಂಹ ರಾಶಿ: ಕಷ್ಟದ ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸಿ. ನೀವು ಸಾಲವನ್ನು ತೆಗೆದುಕೊಂಡಿದ್ದರೆ, ಅದನ್ನು ಸಾಧ್ಯವಾದಷ್ಟು ಬೇಗ ಮರುಪಾವತಿಸಿ. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನಬೇಕು. ಯುಕ್ತಿಯಿಂದ ಕೆಲಸವನ್ನು ಸಾಧಿಸಿದ ಎಲ್ಲವೂ ಕ್ಷೇಮ. ನಿಮ್ಮ ನಡವಳಿಕೆಯು ಕೆಲವರಿಗೆ ಇಷ್ಟವಾಗದೇ ಇರಬಹುದು.

ಕನ್ಯಾ ರಾಶಿ: ಅಪರಿಚಿತರು ಮಾರಾಟದ ವಿಚಾರದಲ್ಲಿ ಮೋಸ ಮಾಡುವರು. ಇಂದಿನ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವೇ ಸೃಷ್ಟಿಸುವಿರಿ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಇಂದಿನ ಕಾರ್ಯವು ಪೂರ್ಣವಾಗುವ ತನಕ ನಿಮಗೆ ಮಾನಸಿಕ ವಿಶ್ರಾಂತಿಯು ಇರದು. ನಿಮ್ಮ ಮಾತು ವಿವಾದವನ್ನು ಹುಟ್ಟುಹಾಕಬಹುದು. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭ ಗಳಿಸುವಿರಿ.

ತುಲಾ ರಾಶಿ: ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ನಡೆದಾಡುವಾಗ ಜಾಗರೂಕತೆ ಬೇಕು. ಪುಣ್ಯಕ್ಷೇತ್ರಕ್ಕೆ ಕುಟುಂಬ ಜೊತೆ ಹೋಗಲಿದ್ದೀರಿ.

ವೃಶ್ಚಿಕ ರಾಶಿ: ನಿಮ್ಮ ಪ್ರೀತಿಪಾತ್ರರ ಜೊತೆ ತುಂಬಾ ಮೋಜಿನಿಂದ ಇರುವಿರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿ ಇರುವುದು. ಆರ್ಥಿಕತೆಯಿಂದ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ಸ್ನೇಹಿತರೊಂದಿಗೆ ಯೋಜನೆ ಯಶಸ್ವಿಯಾಗುತ್ತದೆ. ದುಡಿಯುವ ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ಧನಾತ್ಮಕ ಚಿಂತನೆಯಿಂದ ಕಳೆದುಕೊಂಡ ಉತ್ಸಾಹವು ಬರುವುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ.

ಧನು ರಾಶಿ: ಹಳೆಯ ಘಟನೆಗಳಿಂದ ಪಾಪಪ್ರಜ್ಞೆ ಕಾಡಬಹುದು. ಕೆಲಸದ ಜಾಗದಲ್ಲಿ ಇನ್ನೊಬ್ಬರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಇಂದು ಉತ್ತಮ ಲಾಭವನ್ನು ಪಡೆಯುವರು. ಕೆಲಸದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ. ಅವಕಾಶದ ಕೊರತೆಯಿಂದ ನಿಮಗೆ ಹತಾಶೆ.‌ ನಿಮ್ಮ ಕಲ್ಪನೆಯಂತೆ ಎಲ್ಲವೂ ಆಗದು ಎಂಬ ಸತ್ಯವು ತಿಳಿಯಲಿದೆ. ಯೋಜನೆಯನ್ನು ಮಾಡುವಾಗ ಸರಿಯಾಗಿ ಇರಲಿ.

ಮಕರ ರಾಶಿ: ನಿಮ್ಮ ಕೆಲಸವು ಇಂದು ಅಪೂರ್ಣವಾಗಿದ್ದರೆ, ನಿಮ್ಮ ಮೇಲೆ ತುಂಬಾ ಕೋಪಗೊಳ್ಳಬಹುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ಮನೆಯ ವಾತಾವರಣ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಗೊಂದಲವನ್ನು ಮಾಡಿಕೊಂಡು ಹಣವನ್ನು ಕಳೆದುಕೊಳ್ಳಬೇಕಾಗಬಹುದು.

ಕುಂಭ ರಾಶಿ: ಚರಾಸ್ತಿಯನ್ನು ನೀವು ಕೈ ಬಿಡಬೇಕಾಗುತ್ತದೆ. ಇಂದು ನಿಮ್ಮ ಮನಸ್ಸು ಅನೇಕರ ಸಲಹೆಗಳ ಕಾರಣದಿಂದ ಬಹಳ ಚಂಚಲವಾಗಿರಲಿದೆ. ನೀವು ಆರ್ಥಿಕ ನಷ್ಟವನ್ನು ಎದುರಿಸಬೇಕಾಗುವುದು. ಕುಟುಂಬದಲ್ಲಿ ಒಳ್ಳೆಯ ಸಂವಾದ ನಡೆಯಬಹುದು. ಸಂಗಾತಿಯ ಆರೋಗ್ಯವು ಕ್ಷೀಣಿಸಿದ್ದು ನಿಮಗೆ ಆತಂಕವು ಹೆಚ್ಚಾಗಬಹುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ವ್ಯಾಪಾರವನ್ನು ವಿನಮ್ರತೆಯಿಂದ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ.

ಮೀನ ರಾಶಿ: ರಾಜಕೀಯ ಬಲದಿಂದ ಇಂದು ಕಾರ್ಯಗಳು ಸಿದ್ಧಿಸುವುದು. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಹಕಾರ ಸಿಗಲಿದೆ. ಉದ್ಯಮಿಗಳು ಇಂದು ದೊಡ್ಡ ಲಾಭವನ್ನು ಗಳಿಸುವ ಯೋಜನೆಯನ್ನು ನಿರೀಕ್ಷಿಸುವರು. ಇಂದು ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸುವಿರಿ. ನಿಮಗೆ ಅವಶ್ಯಕತೆ ಇರುವಷ್ಟು ಬಳಸಿಕೊಂಡು, ಇನ್ನೊಬ್ಬರ ವಸ್ತುವನ್ನು ಹಿಂದಿರುಗಿಸುವಿರಿ.

ಲೋಹಿತ್ ಹೆಬ್ಬಾರ್-8762924271 (what’s app only)

Published On - 1:05 am, Tue, 17 November 26

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಬಿಗ್ ಬಾಸ್ ಟಾಪ್ 5 ಯಾರು? ಗೆಲ್ಲೋದು ಯಾರು? ಭವಿಷ್ಯ ನುಡಿದ ಸೋನಿಕಾ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ