Horoscope Today 08 November: ಈ ರಾಶಿಯವರು ಸಾಲದಿಂದ ಮುಕ್ತಿ ಹೊಂದಲು ಆದಾಯ ಮೂಲ ಹುಡುಕುವರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಕೃಷ್ಣ ಪಕ್ಷದ ತೃತೀಯಾ ತಿಥಿ ಶನಿವಾರ ಸ್ವಾದಿಷ್ಟ ಭೋಜನ, ಅಪೂರ್ಣ ಕಾರ್ಯ, ಶತ್ರುಪೀಡೆ, ಆದಾಯದ ಲೆಕ್ಕಾಚಾರ, ಭೂಮಿಯ ವಶ, ವಿದೇಶ ಗಮನದ ಗೊಂದಲ, ಪ್ರತ್ಯಕ್ಷ ಸಾಕ್ಷಿ ಇವೆಲ್ಲ ಇಂದಿನ ವಿಶೇಷ.

Horoscope Today 08 November: ಈ ರಾಶಿಯವರು ಸಾಲದಿಂದ ಮುಕ್ತಿ ಹೊಂದಲು ಆದಾಯ ಮೂಲ ಹುಡುಕುವರು
Horoscope
Updated By: ಗಂಗಾಧರ​ ಬ. ಸಾಬೋಜಿ

Updated on: Nov 08, 2025 | 12:02 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ವಿಶಾಖಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪರಿಘ, ಕರಣ : ಕೌಲವ, ಸೂರ್ಯೋದಯ – 06 – 16 am, ಸೂರ್ಯಾಸ್ತ – 05 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:10 – 10:37, ಗುಳಿಕ ಕಾಲ 06:17 – 07:43 ಯಮಗಂಡ ಕಾಲ 13:30 – 14:57.

ಮೇಷ ರಾಶಿ: ಸೀಮಿತ ಪರಿಧಿಯನ್ನು ಬಿಟ್ಟು ಯಾರೊಂದಿಗೂ ಏನನ್ನೂ ಹಂಚಿಕೊಳ್ಳಲಾರಿರಿ. ನಿಮಗೆ ಪ್ರತಿಭೆ, ಸಾಮರ್ಥ್ಯಗಳು ಇವೆ ಎಂದು ಅನ್ನಿಸದೇ ಹೋಗಬಹುದು. ಇಂದು ಅಂದುಕೊಂಡ ದೇವರ‌ ಕಾರ್ಯವು ನಡೆಯದೇಹೋಗಬಹುದು. ಯಾವುದಾದರೂ ಸಮಾಜ ಬಾಹಿರ ಕೃತ್ಯಗಳಲ್ಲಿ ಸಿಕ್ಕಿಕೊಳ್ಳುವ ಸಂಭವವಿರಲಿದೆ. ಸ್ತ್ರೀಯರಿಗೆ ನಾನಾ ರೀತಿಯಿಂದ ಅನುಕೂಲವಾಗಬಹುದು. ವಿವಾಹವಾಗಲಿರುವವರನ್ನು ಅಕಾಸ್ಮಾತ್ ಭೇಟಿಯಾಗುವಿರಿ. ಇಂದಿನ ಕಾರ್ಯಗಳಲ್ಲಿ ಪ್ರಗತಿ ಇರಲಿದ್ದು ಸಂತೋಷವಾಗುವುದು. ಉದ್ಯೋಗದಲ್ಲಿ ಭಡ್ತಿಯ ನಿರೀಕ್ಷೆ ಇರುವುದು. ಸಾದಿಷ್ಟವಾದ ಭೋಜನದಿಂದ ಸಂತೃಪ್ತಿ ಇರಲಿದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಸಹೋದ್ಯೋಗಿಗಳ‌ ಜೊತೆ ಭಿನ್ನಾಭಿಪ್ರಾಯ ಬಂದು ಅದು ವೈಯಕ್ತಿಕ ಶತ್ರುತ್ವ ಬರಬಹುದು. ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿ ತೋರಿಸುವಿರಿ.

ವೃಷಭ ರಾಶಿ: ದೈಹಿಕವಾಗಿ ಕೊಡುವ ಅಥವಾ ಆಗುವ ಹಿಂಸೆಯನ್ನು ಸಹಿಸಲಾರಿರಿ. ವೃತ್ತಿಯಲ್ಲಿ ಹೊಂದಾಣಿಕೆಯನ್ನು ರೂಢಿಸಿಕೊಳ್ಳುವಿರಿ. ಅನಿರೀಕ್ಷಿತ ಪ್ರಯಾಣದಿಂದ ಆಯಾಸವು ಅಧಿಕವಾದೀತು. ಯಾವುದಕ್ಕೂ ನಿರಾಸೆ ಇಟ್ಟುಕೊಳ್ಳುವುದು ಬೇಡ. ಸಮಯವು ಬೇಕಾಗಬಹುದು. ಅಧಿಕ ಖರ್ಚಿನಿಂದ ಇಂದಿನ‌ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ವಾಸಸ್ಥಳವನ್ನು ಬದಲಿಸಬೇಕಾಗುವುದು. ಮನಸ್ಸಿಗೆ ನಿಮ್ಮವರು ಆಡಿದ ಮಾತುಗಳು ಹಿಂಸೆಯನ್ನು ಕೊಡಬಹುದು. ನೆಮ್ಮದಿ ಕೆಡಿಸುವ ಬಂಧುಗಳಿಂದ ದೂರ ಇರುವುದು ಉತ್ತಮ. ಇಂದಿನ ಅಪ್ರಯೋಜನಕಸರಿ ಓಡಾಟದಿಂದ ನಿಮಗೆ ಆಯಾಸವಾಗುವುದು. ಇಷ್ಟರೊಳಗೆ ಆಗಬೇಕಾದ ಸರ್ಕಾರಿ ಕೆಲಸವು ಮತ್ತೂ ಮುಂದಕ್ಕೆ ಹೋಗುವುದು. ಯಂತ್ರಗಳಿಂದ ದೇಹಕ್ಕೆ ತೊಂದರೆ ಆಗಬಹುದು. ಬಂದ ಅವಕಾಶವನ್ನು ಬಿಟ್ಟು ಅನಂತರ ದುಃಖಿಸುವುದರಲ್ಲಿ ಅರ್ಥವಿರದು. ಆರ್ಥಿಕ ತೊಂದರೆಗೆ ನೀವು ಬಂಧುಗಳ ಸಹಾಯವನ್ನು ಪಡೆಯಬಹುದು. ಬಹಳ ದಿನಗಳ ಅನಂತರ ಇಂದು ಸಂಗಾತಿಯು ಸಮಯವನ್ನು ಕೇಳಬಹುದು

ಮಿಥುನ ರಾಶಿ: ಸಂಪರ್ಕ ಸಾಧನಗಳು ಹಾಳಾದ ಕಾರಣ ಮನೆಯಲ್ಲಿ ಆತಂಕ ಸೃಷ್ಟಿಯಾಗಲಿದೆ. ಸಕಾರಾತ್ಮಕ ಅಂಶಗಳನ್ನು ಹೆಚ್ಚು ಸ್ವೀಕರಿಸಿ. ಇಂದು ತಂದೆ ಹಾಗು ತಾಯಿಯರ ಸೇವೆಯನ್ನು ಮಾಡುವ ಅವಕಾಶವು ನಿಮಗೆ ಸಿಗುವುದು. ನಂಬಿಕೆಯು ಭಗ್ನವಾಗಬಹುದು. ಎಲ್ಲರ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ಸ್ನೇಹಿತರಿಗೆ ಸ್ಪಂದಿಸಬೇಕಾಗುವುದು. ಸಹೋದ್ಯೋಗಿಗಳಿಂದ ಕಾರ್ಯಗಳಿಗೆ ವಿಘ್ನವು ಉಂಡಾಗುವುದು. ಸಾಲದಿಂದ ಬಿಡುಗಡೆ ಹೊಂದಲು ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳುವಿರಿ. ಸ್ಥಿರಾಸ್ತಿಯ ಸಂಪಾದನೆಗೆ ಆಪ್ತರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಇಂದು ವಿದೇಶಕ್ಕೆ ಪ್ರಯಾಣ ಹೋಗುವ ಅವಕಾಶಗಳು ತೆರೆದುಕೊಳ್ಳಬಹುದು. ಪ್ರಯಾಣದಲ್ಲಿ ಅಪಾಯದ ಸ್ಥಿತಿ ತಲುಪುವಿರಿ. ನಿಮ್ಮ ಪ್ರಯತ್ನಕ್ಕೆ ಫಲವು ಇಂದೇ ಸಿಗಲಿ ಎಂಬ ನಿರೀಕ್ಷೆ ಬೇಡ. ಇಂದು ನೀವು ತಂದೆಯವರಿಗೆ ಎದುರು ಮಾತನಾಡಿ ಅವರ ಮನಸ್ಸನ್ನು ನೋಯಿಸುವಿರಿ. ಪಾಲುದಾರಿಕೆಯಲ್ಲಿ ವ್ಯತ್ಯಾಸವನ್ನು ಮಾಡಬೇಕಾದೀತು. ಸುಮ್ಮನೇ ಎಲ್ಲಗಾದರೂ ಹೋಗಬೇಕು ಎಂದು ಅನ್ನಿಸುವುದು.

ಕರ್ಕಾಟಕ ರಾಶಿ: ದಿನದ ಹಾಗೂ ತಿಂಗಳ ಖರ್ಚನ್ನು ಲೆಕ್ಕಹಾಕುವಿರಿ. ನಿಮಗೆ ಅಧಿಕವಾದಂತೆ ತೋರುತ್ತದೆ. ಖರೀದಿಸಿದ ವಸ್ತುಗಳನ್ನು ಉಪಭೋಗ ಮಾಡಲಾಗದು. ಇಂದು ನೀವು ಯಾರನ್ನೂ ಲಘುವಾಗಿ ಕಾಣುವುದು ಬೇಡ. ಹಿತಶತ್ರುಗಳ ಕಾರಣದಿಂದ ಅವಕಾಶದಿಂದ ವಂಚಿತರಾಗುವಿರಿ. ವಾಹನ ಸಂಚಾರದಲ್ಲಿ ವ್ಯತ್ಯಯವಾಗುವುದು‌. ಎಲ್ಲ ರೀತಿಯಿಂದಲೂ ಅನುಕೂಲವಾಗಲಿ ಎಂಬ ಮನೋಭಾವವು ಇರಲಿದೆ. ಇಂದು ಕಿಂಚಿತ್ತಾದರೂ ಪರಹಿತವನ್ನು ಬಯಸಿ. ನಿಮ್ಮ ಅಳಿದುಳಿದ ಶತ್ರುಗಳು ನಾಶವಾಗುವರು. ಏನು ಬೇಕಾದರೂ ಮಾಡುತ್ತೇನೆ ಎಂಬ ಉತ್ಸಾಹ ಇರಲಿದೆ. ನಿಮ್ಮದೇ ಶ್ರಮದಿಂದ ಭೂಲಾಭವನ್ನು ಮಾಡಿಕೊಂಡರೂ ನಿಮಗೆ ಸಲ್ಲದ ಮಾತುಗಳನ್ನು ಕೇಳಬೇಕಾದೀತು. ಆಸ್ತಿಯ ಗಳಿಕೆಯಲ್ಲಿ ಎಲ್ಲವೂ ಅನಾಯಾಸವಾಗಿ ನಡೆಯದು. ಬಹಳ ದಿನಗಳ ಅನಂತರ ಮನೆಯಲ್ಲಿ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಬರಬಹುದು. ಸಣ್ಣ ವಿಚಾರಕ್ಕೆ ನೀವು ಕೋಪಗೊಂಡು ಮನಸ್ಸನ್ನು ಹಾಳು ಮಾಡಿಕೊಳ್ಳುವಿರಿ. ನಿಮ್ಮ ಆರಾಮದ ದಿನಚರಿಯಲ್ಲಿಯೂ ಇಂದು ಕಿರಿಕಿರಿ.

ಸಿಂಹ ರಾಶಿ: ಸವಾಲನ್ನು ಗೆದ್ದು ತೋರಿಸುವುದಕ್ಕಿಂತ ಹಾಗಯೇ ಉಳಿಸಿಕೊಳ್ಳುವುದು ಕಷ್ಟ. ಪ್ರತ್ಯಕ್ಷವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ಕೆಟ್ಟ ಕೆಲಸಕ್ಕೆ ಪ್ರೋತ್ಸಾಹ ಕೊಡುವಿರಿ. ನೀವು ಇಂದು ಹೊಸತನವನ್ನು ತೆರೆದ ಮನಸ್ಸಿನಿಂದ ಸ್ವಾಗತಿಸುವಿರಿ. ಸ್ಪರ್ಧೆಯಲ್ಲಿ ಭಾಗವಹಿಸುವ ಉತ್ಸಾಹವಿರುವುದು. ಗೆಲುವು ಕಷ್ಟಸಾಧ್ಯವಾದೀತು. ಅನಿರೀಕ್ಷಿತ ಪ್ರಯಾಣವಾದರೂ ಕಾರ್ಯದಲ್ಲಿ ಜಯ ಸಿಕ್ಕೀತು. ಬಹಳ ದಿನಗಳ‌ ಅನಂತರ ಬಂಧುಗಳ ಮನೆಗೆ ಹೋಗುವುದರಿಂದ ಉತ್ತಮ‌ ಆತಿಥ್ಯ ಪ್ರಾಪ್ತವಾಗುವುದು. ನೆರೆಹೊರೆಯವರು ನಿಮ್ಮ ಮನೆಯ ಬಗ್ಗೆ ಆಡಿಕೊಳ್ಳುವರು. ಇಂದು ನಿಮ್ಮ ಪ್ರೀತಿಪಾತ್ರರ ಭೇಟಿಯಾಗಲಿದೆ. ಶುಭ ಕಾರ್ಯದಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರಲಿದೆ. ಆಸ್ತಿಯ ಮಾರಾಟದಿಂದ ನಿಮಗೆ ಹೆಚ್ಚಿನ ಲಾಭವು ಸಿಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಅಸ್ತಿತ್ವವು ಹೆಚ್ಚಾಗಿ ತೋರುವುಸು. ಭೂಸ್ವಾದೀನವನ್ನು ಮಾಡಿಕೊಳ್ಳುವ ಸಂದರ್ಭವು ಬರಬಹುದು. ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸಲು ಸಿದ್ಧರಿರುವಿರಿ. ತಪ್ಪನ್ನು ನೀವು ಒಪ್ಪಿಕೊಳ್ಳಲಾರಿರಿ. ಸಹೋದರರ ನಡುವೆ ವಾಗ್ವಾದವು ಆಗಬಹುದು.

ಕನ್ಯಾ ರಾಶಿ: ನಿಮ್ಮ ಸಮಯ ಹಾಗೂ ಅನುಕೂಲತೆಯನ್ನು ಇಟ್ಟಕೊಂಡು ಇನ್ನೊಬ್ಬರಿಗೆ ಸಮಯ ಕೊಡಿ. ಇಂದು ನಿಮ್ಮ ಹಳೆಯ ಕಾರ್ಯಗಳನ್ನೇ ಯಾರಾದರೂ ನೆನಪಿಸಿಯಾರು. ಮಾನಸಿಕ ಆಘಾತವು ಇಂದು ಅನಿರೀಕ್ಷಿತ ಆಗಬಹುದು. ಬಾಂಧವರ ನಡುವೆ ವ್ಯವಹಾರದ ಕಾರಣ ಭಿನ್ನಾಭಿಪ್ರಾಯ ಬರಬಹುದು. ಇಂದಿನ‌ ‌ಮನೆಯ ವಾತಾವರಣದುಮನದ ನಿಮ್ಮ ಅಧ್ಯಯನಕ್ಕೆ ತೊಡಬಲಕಾಗಬಹುದು. ದಾಯಾದಿಗಳು ನಿಮ್ಮ ಮೇಲೆ ಅಪವಾದವನ್ನು ಮಾಡಬಹುದು. ದಾಂಪತ್ಯದ ಒಡಕನ್ನು ದೊಡ್ಡದಾಗಿಸಿಕೊಳ್ಳುವುದು ಬೇಡ. ಕಾರ್ಯದಲ್ಲಿ ಜಯವಿದ್ದರೂ ಆರ್ಥಿಕ ನಷ್ಟವು ಆಗಬಹುದು. ಹಿತಶತ್ರುಗಳ ಕಾರಣದಿಂದ ಇಂದಿನ ವ್ಯವಹಾರವು ಹಿಂದೆ ಸಾಗಲಿದೆ. ವಿವಾಹದ ವಿಳಂಬದಿಂದ ನಿಮಗೆ ಬೇಸರವಾದೀತು. ನಿಮ್ಮ ತಪ್ಪಿನಿಂದ ಹಿರಿಯರ ಕೆಂಗಣ್ಣಿಗೆ ಗುರಿಯಾಗುವಿರಿ. ತಂದೆಯ ಜೊತೆ ನಿಮ್ಮ ಭವಿಷ್ಯದ ಚಿಂತನೆಯನ್ನು ಮಾಡಲಿದ್ದೀರಿ. ಇಂದಿನ ಶುಭವಾರ್ತೆಯು ನಿಮ್ಮ ಕಾರ್ಯಕ್ಕೆ ಉತ್ಸಾಹವನ್ನು ಕೊಡುವುದು. ನೀವು ಪರಾವಲಂಬನೆಯನ್ನು ಕಡಿಮೆ‌ಮಾಡುವಿರಿ.

ತುಲಾ ರಾಶಿ: ನಿಮಗೆ ಬಲವನ್ನು ತುಂಬುವವರು ಯಾರಾದರೂ ಬೇಕಾಗಲಿದೆ.‌ ನೌಕರರಿಗೆ ಸರಿಯಾದ ಜವಾಬ್ದಾರಿಯನ್ನು ಕೊಡುವಿರಿ. ಇಂದು ನಿಮ್ಮ ವಿವಾಹದ ಪ್ರಸ್ತಾಪಗಳು ಬರಬಹುದು. ಇಂದಿನ ಲಾಭವನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ಸುಮ್ಮನೇ ನಿಮ್ಮಷ್ಟಕ್ಕೆ ಇರಿ. ವಾಹನದ ಕಾರಣ ಕಲಹವಾಗುವುದು. ಕಛೇರಿಯ ಕಾರ್ಯದ ನಿಮಿತ್ತ ಓಡಾಟವನ್ನು ಮಾಡಬೇಕಾಗಿದ್ದು ನಿಮಗೆ ಕಷ್ಟವಾದೀತು. ವಿತಂಡ ವಾದವನ್ನು ಮಾಡಿ ಎಲ್ಲರಿಂದ ದೂರಾಗುವಿರಿ. ಶತ್ರುಗಳು ಮಾನಸಿಕ ಕಿರುಕುಳವನ್ನು ಯಾವ ರೀತಿಯಿಂದಲೂ ಕೊಡಬಹುದು. ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಇಟ್ಟುಕೊಳ್ಳುವುದು ಉತ್ತಮ. ನಿಮ್ಮ ಮಾತುಗಳನ್ನು ಸಹಿಸುವುದು ಕೆಲವರಿಗೆ ಕಷ್ಟ. ಹಿರಿಯರ ತಿಳಿವಳಿಕೆಯು ಅಪಮಾನದಂತೆ ಕಾಣಬಹುದು. ಇಂದು ಮನೆಯಲ್ಲಿ ನಿಮ್ಮ ಸಂಭ್ರಮವನ್ನು ಆಚರಿಸಲು ಆಗದು. ಆಲಸ್ಯದ ಕಾರಣ ನಿಮ್ಮ ಕಾರ್ಯವು ಪೂರ್ಣವಾಗದು. ಸಂಗಾತಿಯ ಮಾತನ್ನು ನೀವು ಗಂಭೀರವಾಗಿ ಪರಿಗಣಿಸುವುದಿಲ್ಲ. ಯಾರಿಂದಲಾದರೂ ಆರ್ಥಿಕ ಬೆಂಬಲವನ್ನು ನಿರೀಕ್ಷಿಸುವಿರಿ.

ವೃಶ್ಚಿಕ ರಾಶಿ: ಶೈಕ್ಷಣಿಕ ಅಂಶಗಳ ಕಡೆ ಗಮನ ಕಡಿಮೆಯಾಗಿ, ಸಾಮಾಜಿಕ ಕಾರ್ಯಗಳು ಹೆಚ್ಚಾಗುವುದು. ಧಾರ್ಮಿಕ ಆಚರಣೆಯನ್ನು ಸಂಭ್ರಮದಿಂದ ಮಾಡುವಿರಿ. ಇಂದು ನಿಮ್ಮ ಗೌರವಕ್ಕೆ ಯಾರಿಂದಲಾದರೂ ಚ್ಯುತಿಯಾಗಬಹುದು. ಉದ್ಯಮವನ್ನು ಮಾರಾಟಮಾಡುವ ಆಲೋಚನೆ ಮಾಡುವಿರಿ. ಅಕ್ರಮ ವ್ಯವಹಾರಗಳು ಎಲ್ಲರಿಗೂ ಗೊತ್ತಾದೀತು. ಉದ್ಯೋಗದಲ್ಲಿ ಪ್ರಗತಿ ಇಲ್ಲ ಎಂದು ಬೇಸರಗೊಂಡಿದ್ದರೆ ನಿಮಗೆ ಅಲ್ಪ ನೆಮ್ಮದಿಯ ಸಂಗತಿಯು ಇರಲಿದೆ. ನೌಕರರ ಕಾರ್ಯವು ನಿಮಗೆ ಸಂತೋಷವನ್ನು ತರದು. ಪ್ರಶಸ್ತಿಗಳ ಬಗ್ಗೆ ಹೆಚ್ಚಿನ ಗಮನ ಹಾಕಲಾರಿರಿ. ಸಂಪೂರ್ಣವಾದ ಮನಸ್ಸಿನಿಂದ ಕಾರ್ಯವನ್ನು ಮಾಡಲಾಗದು‌. ವ್ಯವಹಾರವು ಕಾನೂನಾತ್ಮಕ ತೊಡಕಿನಿಂದ ನಿಲ್ಲಬಹುದು. ಲಾಭವಿಲ್ಲದ ಕಾರ್ಯದಲ್ಲಿ ಆಸಕ್ತಿಯು ಇರದು. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ಕಣ್ಣಿನ ತೊಂದರೆಯು ಹೆಚ್ಚಾಗಬಹುದು. ನಿಮ್ಮ ಮೇಲಧಿಕಾರಿಗಳು ನಿಮ್ಮ ಕೆಲಸಕ್ಕೆ ಅಸಮಾಧಾನಗೊಳ್ಳುವರು. ನಿಮಗೆ ಗೊತ್ತಿಲ್ಲದೇ ಇರುವ ವಿಚಾರಗಳನ್ನು ಕೇಳಿ ಪಡೆಯಿರಿ.

ಧನು ರಾಶಿ: ಪ್ರತಿಭೆಯ ಅನಾವಾರಣಕ್ಕೆ ಮಕ್ಕಳಿಗೆ ಸಹಾಯ ಮಾಡುವಿರಿ. ಚರಾಸ್ತಿಯ ಹಂಚಿಕೆಯನ್ನು ನೀವು ಪಕ್ಷಪಾತದಿಂದ ಮಾಡುವಿರಿ. ನೀವು ಪ್ರಯಾಣವನ್ನು ಅನಿವಾರ್ಯ ಕಾರಣಕ್ಕೆ ಮಾಡಬೇಕಾಗಬಹುದು. ಪ್ರೇಮವು ಸಾಕೆನಿಸಬಹುದು. ಸುಮ್ಮನೇ ಕುಳಿತುಕೊಳ್ಳುವುದು ಇಷ್ಟವಾಗದು. ಸಂತಾನ ಯೋಗದಿಂದ ನಿಮಗೆ ಖುಷಿ ಸಿಗಲಿದೆ. ಎಂದೋ ಮಾಡಿದ ಕಾರ್ಯವು ಇಂದು ನಿಮ್ಮನ್ನು ಬಂದು ಸೇರಬಹುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ನಿಮಗೆ ವೈಭವೀಕರಿಸುವ ಯಾವ ಅಂಶಗಳೂ ಇಷ್ಟವಾಗದು. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಮಹಿಳೆಯರ ಉದ್ಯಮದಲ್ಲಿ ಆತಂಕದ ವಾತಾವರಣ ಕಾಣಿಸುವುದು. ಉದ್ಯೋಗದ ಸ್ಥಳವು ಬೆಲೆಯು ಕಡಿಮೆ‌ ಆದಂತೆ ತೋರುವುದು. ಕ್ಷಣಿಕ ಸುಖಕ್ಕಾಗಿ ಸಂಪತ್ತನ್ನು ಅಧಿಕವಾಗಿ ತ್ಯಾಗ ಮಾಡುವಿರಿ.

ಮಕರ ರಾಶಿ: ವೈಯಕ್ತಿಕ ಕಾರ್ಯಗಳನ್ನು ಇಂದೂ ಸಹ ಮಾಡಲಾಗದು. ನಿಮ್ಮನ್ನು ಆಪ್ತರು ಬೇರೆ ಕಡೆಗೆ ಕರೆದೊಯ್ಯುವರು. ಬೇಕಾದ ವಸ್ತುಗಳನ್ನು ಅಗ್ಗದಲ್ಲಿ ಖರೀದಿಸಲು ಪ್ರಯತ್ನಿಸುವಿರಿ. ನೀವು ಹಿರಿಯರ ಜೊತೆ ಗೌರವಯುತವಾಗಿ ವರ್ತಿಸಿ. ಸಹಿಸಲಾಗದ ದೇಹಪೀಡೆಯಿಂದ ಒದ್ದಾಡುವಿರಿ. ಕೆಲವರು ಅಕಾರಣವಾಗಿ ಬಿಟ್ಟುಹೋಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಅಭ್ಯಾಸವನ್ನು ನಿಲ್ಲಿಸದೇ ನಿರಂತರವಾಗಿಸುವಿರಿ. ಸಮಯದ ಹೊಂದಾಣಿಕೆ ಇದ್ದರೆ ಮಾತ್ರ ಸಾಧನೆ ಸಾಧ್ಯ. ಎಲ್ಲರಿಂದ ದೂರವಾಗಲು ಬಯಸುವಿರಿ. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ. ಉದ್ಯೋಗದಲ್ಲಿ ದೂರದೃಷ್ಟಿ ಇರಲಿ. ಕೃಷಿ ಚಟುವಟಿಕೆಯಲ್ಲಿ ಆಸಕ್ತಿಯು ಅಧಿಕವಾಗಬಹುದು. ಇಂದು ನಿಮ್ಮ ಸಹಾಯದಿಂದ ಕುಟುಂಬವು ಸಂತೋಷಗೊಳ್ಳುವುದು.

ಕುಂಭ ರಾಶಿ: ಚಿಕ್ಕದಾದರೂ ತೊಂದರೆ ಇಲ್ಲ, ಬಾಳಿಕೆ ಬರುವಂತಹದ್ದನ್ನು ಖರೀದಿಸಿ. ಹಿರಿಯರಾಗಿ ಉತ್ತಮ‌ ಮಾರ್ಗದರ್ಶನ ಮಾಡಬೇಕಾಗುವುದು. ಇಂದು ಅಧಿಕ ಸಂಪತ್ತಿನ ವ್ಯಯ ಆಗುವುದು. ಸಾಮರಸ್ಯದ ಅಭಾವದಿಂದ ಮಾನಸಿಕ ಸ್ಥಿತಿಯು ಅಸಮತೋಲನವಾಗಲಿದೆ. ನಿರೀಕ್ಷಿತ ಲಾಭವು ಆಗದಿದ್ದರೂ ನೆಮ್ಮದಿಗೆ ಕೊರತೆ ಕಾಣದು. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಮಾದರಿಯಾದೀತು. ನಿಮ್ಮ‌ ಮಾತನಿಂದ ಇನ್ನೊಬ್ಬರನ್ನು ಘಾಸಿ ಮಾಡುವಿರಿ. ವಿದೇಶ ಪ್ರಯಾಣದ ತಯಾರಿಯಲ್ಲಿ ಇರುವಿರಿ. ಕಿವಿಯ ನೋವಿನಿಂದ ಸಂಕಟವಾಗುವುದು. ಅಲ್ಪ ಸಮಯವಾದರೂ ವ್ಯವಹಾರಕ್ಕೆ ಒತ್ತುನೀಡುವಿರಿ. ಸ್ನೇಹಿತರ ಒತ್ತಾಯದ ಮೇರೆಗೆ ಪ್ರಯಾಣ ಮಾಡುವಿರಿ. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು.

ಮೀನ ರಾಶಿ: ಇಂದು ನಿಮಗೆ ಅಧಿಕ ವಿಶ್ರಾಂತಿಯ ಅಪೇಕ್ಷೆ ಇರುವುದು. ನಿಮ್ಮ ಮೂಲ ಧನವನ್ನು ತೆಗೆಯಬೇಕಾಗಬಹುದು. ಇಂದು ಮನಸ್ಸಿನ ಕಿರಿಕಿರಿಯನ್ನು ಅನುಭವಿಸದೇ ಅನ್ಯ ಮಾರ್ಗವಿರದು. ಅನಿರೀಕ್ಷಿತ ತಿರುವುಗಳು ನಿಮ್ಮನ್ನು ಉದ್ವಿಗ್ನಗೊಳಿಸಬಹುದು. ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ವಿಶ್ವಾಸಾರ್ಹ ವ್ಯಕ್ತಿಗಳಿಗೆ ಮಾತ್ರ ಸಾಲವನ್ನು ಕೊಡುವಿರಿ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ಯಾರ ಕಾರ್ಯದಲ್ಲಿಯೂ ಹಸ್ತಕ್ಷೇಪ ಬೇಡ. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಸಂಬಂಧಗಳನ್ನು ಚೆನ್ನಾಗಿ ಇಟ್ಟಕೊಳ್ಳಲು ಇಷ್ಟಪಡುವಿರಿ. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು. ಕೆಲವು ಸಂಬಂಧಗಳು ಹತ್ತಿರವಾಗಬಹುದು.

ಲೋಹಿತ ಹೆಬ್ಬಾರ್ – 8762924271 (what’s app only)