Rashi Bhavishya: ಸಂಗಾತಿಯ ಸಣ್ಣ ಮಾತು ನಿಮಗೆ ದೋಷವಾಗಿ ಕಾಣಬಹುದು

ಭವಿಷ್ಯದ ಬಗ್ಗೆ ಚಿಂತೆ ಎಲ್ಲರಲ್ಲೂ ಇದ್ದೇ ಇರುತ್ತದೆ. ಹೀಗಾಗಿ ಒಂದಷ್ಟು ಮಂದಿ ದಿನಭವಿಷ್ಯ ನೋಡುತ್ತಾರೆ. ಇದರ ಜೊತೆಗೆ ನಿತ್ಯ ಪಂಚಾಂಗವನ್ನೂ ವೀಕ್ಷಿಸುತ್ತಾರೆ. ಹಾಗಿದ್ದರೆ, ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಜನವರಿ 12) ಭವಿಷ್ಯಹೇಗಿದೆ ಎಂಬುದು ಇಲ್ಲಿದೆ.

Rashi Bhavishya: ಸಂಗಾತಿಯ ಸಣ್ಣ ಮಾತು ನಿಮಗೆ ದೋಷವಾಗಿ ಕಾಣಬಹುದು
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 12, 2024 | 12:10 AM

ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಜನವರಿ 12) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಶ್ರವಣಾ, ಯೋಗ: ಹರ್ಷಣ, ಕರಣ: ಬವ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 19 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:16 ರಿಂದ 12:41ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:30 ರಿಂದ 04:55ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:27 ರಿಂದ 09:51ರ ವರೆಗೆ.

ಸಿಂಹ ರಾಶಿ: ಯಾರನ್ನಾದರೂ ಪ್ರಶಂಸಿಸುವ ಮನಸ್ಸಾಗುವುದು. ನಿಯಮಿತ ಆಹಾರದಿಂದ ನಿಮಗೆ ಸೌಖ್ಯವು ಸಿಗಬಹುದು. ನೂತನ ವಾಹನದಿಂದ ಅಹ್ಲಾದಕರವಾಗಿ ಇರುವಿರಿ. ಸಂಗಾತಿಯ ಸಣ್ಣ ಮಾತೂ ನಿಮಗೆ ದೋಷವಾಗಿ ಕಾಣಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ದಾನದಿಂದ ಯಶಸ್ಸು ಪ್ರಾಪ್ತವಾಗುವುದು. ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಸರಳತೆಯು ನಿಮ್ಮ ಸ್ವಭಾವವಾಗಿರಲಿ.

ಕನ್ಯಾ ರಾಶಿ: ಹಳೆಯ ವಸ್ತುಗಳನ್ನು ಮಾರಾಟ ಮಾಡಿ ಬೇಕಾದುದನ್ನು ಖರೀದಿಸುವ ಅನಿವಾರ್ಯತೆ ಬರಬಹುದು. ನಿಮ್ಮ ಅಹಂಕಾರವು ಹತಾಶೆಯನ್ನು ತರಿಸೀತು. ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ನಿಮ್ಮ ಮಾತುಗಳು ಪಾಲನೆಯಗದೇ ಇರಬಹುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಹಣಕಾಸಿನ ಉಳಿತಾಯದ ಬಗ್ಗೆ ಅಧಿಕ ಗಮನ ಕೊಡುವಿರಿ.

ತುಲಾ ರಾಶಿ: ನಿಮ್ಮ ಉದ್ಯಮವನ್ನು ವಿಸ್ತರಿಸುವ ಬಗ್ಗೆ ಚಿಂತನೆ ನಡೆಸುವಿರಿ. ಸಾಹಸದಿಂದ ಇಂದಿನ‌ ಕೆಲಸವನ್ನು ಪೂರ್ಣಮಾಡುವಿರಿ. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಆಗುತ್ತದೆ ಎಂದು ಏನನ್ನಾದರೂ ಮಾಡುವುದು ಉಚಿತವಾಹದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಬೇಕಾದಷ್ಟು ಅವಕಾಶಗಳನ್ನು ಬಿಡುವುದು ನಿಮಗೆ ಅಭ್ಯಾಸಬಾಗಬಹುದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ.

ವೃಶ್ಚಿಕ ರಾಶಿ: ಇಂದು ನೀವು ತುರ್ತು ಪ್ರಯಾಣವನ್ನು ಮಾಡಬೇಕಾಗಬಹುದು. ಕಛೇರಿಯ ಕಲಹದಲ್ಲಿ ಭಾಗಿಯಾಗದೇ ನಿಮ್ಮಷ್ಟಕ್ಕೇ ಇದ್ದು ಬಿಡಿ. ತಂದೆಗೆ ಬೇಕಾದ ಧನಸಹಾಯವನ್ನು ನೀವು ಮಾಡುವಿರಿ. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಸಾಹೋದರ್ಯದಲ್ಲಿ ಅನಗತ್ಯ ಮಾತುಗಳು ಬರಬಹುದು. ಅಸ್ವಾಭಾವಿಕ ಬೆಳವಣಿಗೆಯು ನಿಮಗೆ ಬೇಸರವನ್ನು ತರಿಸೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖಗಯಸ್ಥರಾಗಲು ಆಹ್ವಾನವು ಬರಬಹುದು. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ಆಪ್ತರಿಂದ ನಿಮಗಾಗದವರ ಬಗ್ಗೆ ಮಾಹಿತಿಯನ್ನು ಪಡೆಯುವಿರಿ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ