AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಸ್ವತಂತ್ರ ಆದಾಯ ಇಟ್ಟುಕೊಳ್ಳಿ, ಖಾಸಗಿ ವೃತ್ತಿಯಲ್ಲಿ ಆದಾಯ ಹೆಚ್ಚಿಸಿಕೊಳ್ಳಲು ಮಾತನಾಡಲಿದ್ದಾರೆ

ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಕಾರ್ಯ ಆರಂಭಿಸುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಇಂದು ಡಿಸೆಂಬರ್ 11 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

Horoscope: ದಿನಭವಿಷ್ಯ, ಈ ರಾಶಿಯವರು ಸ್ವತಂತ್ರ ಆದಾಯ ಇಟ್ಟುಕೊಳ್ಳಿ, ಖಾಸಗಿ ವೃತ್ತಿಯಲ್ಲಿ ಆದಾಯ ಹೆಚ್ಚಿಸಿಕೊಳ್ಳಲು ಮಾತನಾಡಲಿದ್ದಾರೆ
ಇಂದಿನ ರಾಶಿಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Dec 11, 2023 | 12:45 AM

Share

ಕೈ ಉಜ್ಜಿ ಮುಖಕ್ಕೆ ಒತ್ತಿ ನಿಧಾನವಾಗಿ ಕಣ್ಣು ತೆರೆದು ಪ್ರಪಂಚವನ್ನು ನೋಡಿದ ನಂತರ ಇಂದು ತಮ್ಮ ಭವಿಷ್ಯ ಹೇಗಿದೆ ಎಂದು ಅರಿತುಕೊಳ್ಳುತ್ತಾರೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 11) ರಾಶಿಭವಿಷ್ಯ (Horoscope) ಹೇಗಿದೆ ಎಂಬುದು ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಅನೂರಾಧಾ, ಯೋಗ: ಸುಕರ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:13 ರಿಂದ 09:37ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:01 ರಿಂದ ಮಧ್ಯಾಹ್ನ 12:26ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:50 ರಿಂದ 03:14ರ ವರೆಗೆ.

ಧನು ರಾಶಿ: ನಿಮ್ಮವರ ರಕ್ಷಣೆಯ ಹೊಣೆಯು ನಿಮ್ಮ ವರ್ತನೆಯಲ್ಲಿ ಇರಲಿದೆ. ಹಿತಶತ್ರುಗಳ ಬಾಧೆಯು ನಿಮಗೆ ಇನ್ನಷ್ಟು ಬೆಳೆಯಲು ಉತ್ತೇಜನವನ್ನು ಕೊಡುವುದು. ಯಾರಾದರೂ ನಿಮ್ಮನ್ನು ಚೇಡಿಸಬಹುದು. ವಾಹನ ಖರೀದಿಗೆ ಗೊಂದಲದ ಮನಸ್ಸು ಬೇಡ. ವೃತ್ತಿಯನ್ನೇ ಬದಲಾಯಿಸುವ ಆಸೆ ಬರಬಹುದು. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಉದ್ಯೋಗದಲ್ಲಿ ಒತ್ತಡವು ಅಧಿಕವಾಗಿ ಇರಲಿದೆ. ಅದು ದಾಂಪತ್ಯದಲ್ಲಿ ಮೇಲೂ ಪರಿಣಾಮವನ್ನು ಬೀರುವುದು. ಹೂಡಿಕೆಯ ವಿಚಾರವನ್ನು ಸ್ನೇಹಿತರ ಮೂಲಕ ಗೊತ್ತುಮಾಡಿಕೊಳ್ಳುವಿರಿ. ಸಿಟ್ಟಿನಿಂದ ಕೂಗಾಡುವಿರಿ. ಸಹೋದರನ ಕಡೆಯಿಂದ ಸಹಾಯವನ್ನು ಅಪೇಕ್ಷಿಸುವಿರಿ. ನಿಮ್ಮ ಕಾರ್ಯಕ್ಕೆ ಧನಸಹಾಯವನ್ನು ಸಾಲವಾಗಿ ಪಡೆಯುವಿರಿ. ತಪ್ಪುಗಳನ್ನು ಒಪ್ಪಿಕೊಂಡು ಸರಿಮಾಡಿಕೊಳ್ಳುವಿರಿ.

ಮಕರ ರಾಶಿ: ಅಪರಿಚಿತರ ಜೊತೆ ಸಲುಗೆಯ ಸಂಪರ್ಕ ಏರ್ಪಡಲಿದೆ. ತಂದೆ ಮಕ್ಕಳ ಕಲಹವು ಮಿತಿಯನ್ನು ಮೀರಬಹುದು. ನಿಮ್ಮ ಸ್ವಭಾವವನ್ನು ತಿದ್ದಿಕೊಳ್ಳಬೇಕಾಗುವುದು. ದುಸ್ಸ್ವಭಾವವನ್ನು ಹೆಚ್ಚಿಸಿಕೊಳ್ಳುವಿರಿ. ಹೊಸ ಉದ್ಯೋಗಕ್ಕೆ ನಿಮ್ಮ ಮನಸ್ಸು ತೆರದುಕೊಳ್ಳುವುದು. ಹಿತಶತ್ರುಗಳು ಲಾಭವನ್ನು ತಪ್ಪಿಸುವರು. ಸತ್ಯದ ಮಾತಿನಿಂದ ನಿಮಗೇ ಸಂಕಷ್ಟವು ಬರಬಹುದು. ಸಮಾಜದಿಂದ ಸಿಗುವ ಗೌರವವೂ ನಿಮಗೆ ಬಾರದು. ಬಂಧುಗಳು ನಿಮ್ಮ ಸಹಾಯವನ್ನು ಕೇಳಬಹುದು. ಇಂದು ನಿಮ್ಮಿಂದ ಕುಟುಂಬವು ಸಂತೋಷಗೊಳ್ಳುವುದು. ನಿದ್ರೆಯಲ್ಲಿ ಕೆಟ್ಟ ಕನಸುಗಳನ್ನು ಕಂಡು ಚಿಂತೆಗೊಳ್ಳುವಿರಿ. ಉತ್ತಮ ಕಾಲದ ನಿರೀಕ್ಷೆಯಲ್ಲಿ ನೀವು ಇರುವಿರಿ. ದುಂದುವೆಚ್ಚವನ್ನು ನಿಯಂತ್ರಿಸುವಲ್ಲಿ ಸ್ವಲ್ಪ ಮಟ್ಟಿಗೆ ಯಶಸ್ವಿಯಾಗುವಿರಿ. ಸಹೋದ್ಯೋಗಿಗಳು ನಿಮ್ಮ ಬಗ್ಗೆ ನಕಾರಾತ್ಮಕ ಅಂಶಗಳು ಅಧಿಕಾರಿಗಳಿಗೆ ಹೇಳಬಹುದು.

ಕುಂಭ ರಾಶಿ: ಉತ್ತಮ ಮಾತಿನಿಂದ ಸಜ್ಜನರನ್ನು ಸಂಪಾದಿಸಿಕೊಳ್ಳುವಿರಿ. ಸಮಾಜದ ಲಾಭಕ್ಕಾಗಿ ಕಾರ್ಯವನ್ನು ಮಾಡುವಿರಿ. ಸ್ತ್ರೀಯರಿಗೆ ಕೃಷಿಯ ಬಗ್ಗೆ ಆಸಕ್ತಿ ಬರಬಹುದು. ಸಂಗಾತಿಯ ಮನೋಭಾವವನ್ನು ಅರಿತುಕೊಳ್ಳಲು ಕಷ್ಟವಾದೀತು. ದೂರದ ಸ್ಥಳಕ್ಕೆ ಪ್ರವಾಸ ಹೋಗುವ ಸಂದರ್ಭವು ಬರಬಹುದು. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸವಾಗುವುದು. ಕೇಳದೇ ಯಾರಿಗೂ ಉಪದೇಶವನ್ನು ನೀಡುವುದು ಬೇಡ. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಕಛೇರಿಯ ಒತ್ತಡವನ್ನು ಮನೆಯವರೆಗೂ ತರುವುದು ಬೇಡ. ಇಂದಿನ ಆದಾಯದಿಂದ ನಿಮ್ಮ ಆಸೆಗಳನ್ನು ತೀರಿಸಿಕೊಳ್ಳುವಿರಿ. ನೀವು ಪರಿಚಿತರಿಂದ ಸಹಾಯವನ್ನು ಅಪೇಕ್ಷಿಸುವಿರಿ. ಕಛೇರಿಯಲ್ಲಿ ಎಲ್ಲರ ಜೊತೆ ಸೌಹಾರ್ದದಿಂದ ವರ್ತಿಸಿ. ಪ್ರೀತಿಯ ವಿಚಾರದಲ್ಲಿ ಇಂದು ಬೇಸರವಾಗಬಹುದು. ನಿಮಗೆ ಅಗೌರವ ತೋರಬಹುದು. ಅನಾರೋಗ್ಯವು ಚಿಕಿತ್ಸೆಯ ಮೂಲಕ ಸರಿಮಾಡಿಕೊಳ್ಳಬೇಕಾಗುವುದು.

ಮೀನ ರಾಶಿ: ದೇವರ ಮೇಲಿನ ನಂಬಿಕೆಯು ಕ್ಷೀಣವಾಗುವ ಸಾಧ್ಯತೆ ಇದೆ. ನೌಕರರ ತೊಂದರೆಯಿಂದ ಉದ್ಯಮದಲ್ಲಿ ಹಿನ್ನಡೆಯಾಗಬಹುದು. ನಿಮ್ಮದಾದ ಸ್ವತಂತ್ರ ಆದಾಯವನ್ನು ಇಟ್ಟುಕೊಳ್ಳಿ. ಖಾಸಗಿ ವೃತ್ತಿಯಲ್ಲಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮಾತನಾಡುವಿರಿ. ಶತ್ರುಗಳಿಗೆ ನೀವೇ ಕೇಂದ್ರಬಿಂದು ಆಗಿರಬಹುದು. ನಿಮ್ಮ ಲೆಕ್ಕಾಚಾರವು ತಪ್ಪಾಗಬಹುದು. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು. ನಿಮಗೆ ತಾಳ್ಮೆಯೂ ಬಹಳ ಮುಖ್ಯವಾಗುವುದು. ಅಧ್ಯಾತ್ಮದಲ್ಲಿ ಹೆಚ್ಚು ಮನಸ್ಸು ಇರುವುದು. ನಿಮ್ಮ ವ್ಯಾಪಾರದಿಂದ ಅಧಿಕ ಲಾಭವು ಸಿಗುವುದು. ಅಧಿಕಾರಿ ವರ್ಗದವರ ಕಣ್ಣು ನಿಮ್ಮ ಮೇಲೆ ಇರಲಿದೆ. ಸಣ್ಣ ಅಹಂಕಾರವು ನಿಮ್ಮೊಳಗೆ ಏಳಬಹುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ