Horoscope: ದಿನ ಭವಿಷ್ಯ; ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯ, ಪ್ರಯಾಣ ಅನಿವಾರ್ಯ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜೂ. 11 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನ ಭವಿಷ್ಯ; ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯ, ಪ್ರಯಾಣ ಅನಿವಾರ್ಯ
ದಿನ ಭವಿಷ್ಯ; ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯ, ಪ್ರಯಾಣ ಅನಿವಾರ್ಯ
Follow us
|

Updated on: Jun 11, 2024 | 12:12 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಮಂಗಳವಾರ (ಜೂನ್ 11) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ಧ್ರುವ, ಕರಣ: ವಣಿ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:47 ರಿಂದ ಸಂಜೆ 05:24ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:18 ರಿಂದ 10:55ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:32 ರಿಂದ 02:10ರ ವರೆಗೆ.

ಧನು ರಾಶಿ: ನೀವು ಪ್ರಯಾಣವನ್ನು ಅನಿವಾರ್ಯ ಕಾರಣಕ್ಕೆ ಮಾಡಬೇಕಾಗಬಹುದು. ಅನಿರೀಕ್ಷಿತ ಎದುರಾದ ಖರ್ಚಿನಿಂದಾಗಿ ಸ್ನೇಹಿತರಲ್ಲಿ ಹಣವನ್ನು ಕೇಳುವಿರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ವಿವಾದಗಳೂ ತಾರಕಕ್ಕೆ ಹೋಗಬಹುದು. ನಿಮ್ಮ ಮತ್ತು ಮೇಲಧಿಕಾರಿಗಳ ನಡುವೆ ಮನಸ್ತಾಪ ಉಮನಟಾಗಬಹುದು. ನಿಮ್ಮ ಕಾರ್ಯಕ್ಕೆ ಮೆಚ್ಚುಗೆ ಸಿಗಲಿದೆ. ಇಂದು ಬೇಸರಗೊಳ್ಳುವ ವಿಚಾರಗಳು ಬರಬಹುದು. ಸುಖ ಹಾಗೂ ದುಃಖವನ್ನು ಸಮವಾಗಿ ತೆಗೆದುಕೊಳ್ಳಬೇಕಾದೀತು. ಅತಿಯಾದ ಸೌಖ್ಯವನ್ನು ಪಡೆಯಲು ಹೋಗಿ ಅನಾಹುತವನ್ನು ಮಾಡಿಕೊಳ್ಳಬಹುದು. ಸಣ್ಣ ಸಮಸ್ಯೆಯನ್ನು ದೊಡ್ಡ ಮಾಡಿಕೊಳ್ಳಲಿದ್ದೀರಿ. ಬಂಧುಗಳು ನಿಮ್ಮ ಸಹಾಯಕ್ಕೆ ಬರಬಹುದು. ಯಾರಾದರೂ ನಿಮ್ಮನ್ನು ಚೇಡಿಸಬಹುದು. ಸ್ನೇಹಿತರಿಗೆ ನಿಮ್ಮದಾದ ಕೆಲವು ಆಯ್ಕೆಗಳನ್ನು ಹೇಳಿ. ಧಾರ್ಮಿಕ ಆಚರಣೆಯು ನಿಮ್ಮ ಮನಸ್ಸಿಗೆ ಹಿತವೆನಿಸುವುದು.‌

ಮಕರ ರಾಶಿ: ನೀವು ಹಿರಿಯರ ಜೊತೆ ಗೌರವಯುತವಾಗಿ ವರ್ತಿಸಿ. ಕಾರ್ಯಗಳು ಶೀಘ್ರವಾಗಿ ಫಲಿಸದೇ ಇರುವುದು ನಿಮಗೆ ಬೇಸರ ತಂದೀತು. ನಿಮ್ಮ ವೇಗಕ್ಕೆ ಸಕಾಲದಲ್ಲಿ ಆಗುವ ಕಾರ್ಯಗಳೂ ತುಂಬ ದೀರ್ಘವೆನಿಸುತ್ತದೆ. ಹಣಕಾಸಿನ ವಿಚಾರವಾಗಿ ದಾಂಪತ್ಯದಲ್ಲಿ ಸಣ್ಣ ಕಲಹವಾಗಬಹುದು. ಯಾರದೋ ಮಾತಿನ ಆಧಾರದ ಮೇಲೆ ನೀವು ನಿಮ್ಮವರನ್ನು ದ್ವೇಷಿಸಬಹುದು. ಉದ್ಯೋಗದಲ್ಲಿ ಒತ್ತಡವಿದ್ದು ಅದನ್ನು ನಿಭಾಯಿಸುವ ಕ್ರಮವನ್ನು ಕಲಿತುಕೊಳ್ಳಿ. ನಿಮ್ಮ ಕೆಲಸದಲ್ಲಿ ಅಕಸ್ಮಾತ್ ತೊಂದರೆಗಳು ಬರುವುದು. ಎಲ್ಲವನ್ನೂ ಸಮಾನಮನಸ್ಸಿನಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳುವಿರಿ. ಆಪ್ತರ ಜೊತೆ ಒಂದಿಷ್ಟು ಸಮಯವನ್ನು ಕಳೆಯಬಹುದು. ಕುಟುಂಬದಲ್ಲಿ ಭಿನ್ನಮತ ಇರಲಿದೆ‌. ಸಮಾಜದಿಂದ ಸಿಗುವ ಗೌರವವು ನಿಮಗೆ ಬಂಧನದಂತೆ ಅನ್ನಿಸಬಹುದು. ಇಂದು ನಿಮ್ಮ ಸಹಾಯದಿಂದ ಕುಟುಂಬವು ಸಂತೋಷಗೊಳ್ಳುವುದು.

ಕುಂಭ ರಾಶಿ: ಇಂದು ಅಧಿಕ ಸಂಪತ್ತಿನ ವ್ಯಯ ಆಗುವುದು. ಕಾರ್ಯ ಮಾಡುವ ಧೈರ್ಯವಿದ್ದರೂ ಕಾರ್ಯದಲ್ಲಿ ನಿರಾಸಕ್ತಿಯೂ ಕಾಣಿಸಬಹುದು. ದೂರದಲ್ಲಿರುವ ನಿಮಗೆ ಸಂಗಾತಿಯ ಸಂಗ ಸಿಗುವ ಸಾಧ್ಯತೆ ಇದೆ. ನಟನೆಯಲ್ಲಿ ಆಸಕ್ತಿಯಿರುವವರಿಗೆ ಅವಕಾಶಗಳು ಲಭ್ಯವಾಗುತ್ತವೆ. ಇಂದು ನ್ಯಾಯಾಲಯದಲ್ಲಿ ತೀರ್ಪು ಬರಲಿದೆ. ಎಂತಹದೇ ತೀರ್ಮಾನ ಬಂದರೂ ಸ್ವೀಕರಿಸಿ‌. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ. ಮನೆಯಿಂದ ದೂರವಿರುವ ನೀವು ಬೇಸರಗೊಳ್ಳುವಿರಿ. ನಿಮ್ಮ ಸ್ನೇಹಿತರು ನಿಮ್ಮ ಗುಟ್ಟನ್ನು ಹೊರಹಾಕಿಯಾರು. ಧಾರ್ಮಿಕವಾಗಿ ಆಸಕ್ತಿಯನ್ನು ಇಟ್ಟುಕೊಳ್ಳುವಿರಿ. ಕಾಲು ನೋವು ಕಾಣಿಸಿಕೊಂಡೀತು. ಹಿರಿಯರಿಂದ ಆಶೀರ್ವಾದವು ಸಿಗಲಿದೆ. ಭೂಮಿಯ ವ್ಯವಹಾರದಲ್ಲಿ ನೀವು ಲಾಭಗಳಿಸಬಹುದಾಗಿದೆ‌. ಆಪ್ತರೇ ನಿಮ್ಮ ಬಗ್ಗೆ ಹಗುರಾಗಿ ಮಾತನಾಡುವರು. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು. ಇಂದಿನ ಆದಾಯದಿಂದ ನಿಮ್ಮ ಪಡೆಯಬೇಕಾದುದನ್ನು ಪಡೆಯುವಿರಿ.

ಮೀನ ರಾಶಿ: ಇಂದು ಮನಸ್ಸಿನ ಕಿರಿಕಿರಿಯನ್ನು ಅನುಭವಿಸದೇ ಅನ್ಯ ಮಾರ್ಗವಿರದು. ಸ್ವಬುದ್ಧಿಯಿಂದ ಕಾರ್ಯಗಳನ್ನು ಮಾಡುವಿರಿ. ನಿಮ್ಮ ಪ್ರೇಮವು ಸನ್ಮಾರ್ಗದಲ್ಲಿ ಕರೆದುಕೊಂಡು ಹೋಗದು. ಇಂದು ನಿಮಗೆ ಹೊಸತನ್ನೇನಾದರೂ ಮಾಡುವ ಮನಸ್ಸಿದ್ದರೂ ಬೇಕಾದ ವ್ಯವಸ್ಥೆ, ಪರಿಸ್ಥಿತಿಗಳು ಇಲ್ಲದೇ ನಿಲ್ಲಿಸಬೇಕಾದೀತು. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಗೊಂದಲಗಳು ಎದುರಾಗುವುದು. ಉದ್ಯೋಗದಲ್ಲಿ ಸ್ವಲ್ಪ ಹಿನ್ನಡೆಯಾಗುವ ಸಾಧ್ಯತೆ ಇದೆ. ಗೊಂದಲಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ತೀರ್ಮಾನಕ್ಕೆ ಬರದೇ ಅನುಭವಿಸಬೇಕಾಗಬಹುದು. ಅನುಭವಿಗಳ ಮಾರ್ಗದರ್ಶನ ಪಡೆಯಿರಿ. ಮಾತನ್ನು ಹಿತವೂ ಮಿತವೂ ಆಗುವಂತೆ ಮಾಡಿ. ಶತ್ರುಗಳು ನಿಮಗೆ ಹೆಚ್ಚು ತೊಂದರೆಯನ್ನು ಕೊಡಬಹುದು. ಬಂಧುಗಳ ಜೊತೆ ವಿವಾದವು ಏರ್ಪಡಲಿದ್ದು ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು.

ತಾಜಾ ಸುದ್ದಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು