Horoscope: ಈ ರಾಶಿಯವರು ಆರ್ಥಿಕ ನಷ್ಟದಿಂದ ಒತ್ತಡಕ್ಕೆ ಒಳಗಾಗುವಿರಿ-ಎಚ್ಚರ

ಈ ದಿನ ಯಾರಿಗೆ ಸೂಕ್ತ? ಧಾರ್ಮಿಕ ಕಾರ್ಯಕ್ರಮ ನಡೆಸಬಹುದೇ? ವೃತ್ತಿಯಲ್ಲಿ ಬದಲಾವಣೆಗಳು ಇವೆಯೇ ಎಂಬಿತ್ಯಾದಿ ಮಾಹಿತಿಗಳು ದಿನಭವಿಷ್ಯದಲ್ಲಿ ತಿಳಿದುಕೊಳ್ಳಬಹುದು. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ ಇಂದಿನ (ಡಿಸೆಂಬರ್ 13) ಭವಿಷ್ಯ ಹೇಗಿದೆ ಎಂಬುದು ಇಲ್ಲಿದೆ.

Horoscope: ಈ ರಾಶಿಯವರು ಆರ್ಥಿಕ ನಷ್ಟದಿಂದ ಒತ್ತಡಕ್ಕೆ ಒಳಗಾಗುವಿರಿ-ಎಚ್ಚರ
ರಾಶಿ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 13, 2023 | 12:35 AM

ನಿತ್ಯ ಎದ್ದ ಕೂಡಲೇ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುವ ಅಭ್ಯಾಸ ಕೆಲವರಲ್ಲಿ ಇರುತ್ತದೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ? ಇದೆಯಾ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಇಂದಿನ (ಡಿಸೆಂಬರ್ 13) ನಿಮ್ಮ ರಾಶಿಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶೀರ್ಷ, ಪಕ್ಷ: ಶುಕ್ಲ, ವಾರ: ಬುಧವಾರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಮೂಲಾ, ಯೋಗ: ಶೂಲ, ಕರಣ: ನಾಗವಾನ್, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:27 ರಿಂದ 01:51ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:14 ರಿಂದ 09:38ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:02 ರಿಂದ 12: 27ರ ವರೆಗೆ.

ಸಿಂಹ ರಾಶಿ : ಆರ್ಥಿಕ ಲಾಭವು ನಿಮ್ಮ ಮನಸ್ಸನ್ನು ಚಂಚಲಗೊಳಿಸುವ ಸಾಧ್ಯತೆಯಿದೆ. ಆಭರಣದ ಖರೀದಿಯನ್ನು ಒತ್ತಾಯದಿಂದ ಮಾಡಿಸಿಕೊಳ್ಳುವಿರಿ. ನಿಮ್ಮ ಅಂತರಂಗವನ್ನು ವ್ಯಕ್ತಪಡಿಸಲು ನಿಮಗೆ ಸೂಕ್ತ ಸಮಯವು ಲಭ್ಯವಾಗದೇ ಇರಬಹುದು. ಕಲಾವಿದರು ಉತ್ತಮ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳುವರು. ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಬಹಳ ದಿನಗಳ ಅನಂತರ ನ್ಯಾಯಾಲಯದಿಂದ ಸಿಕ್ಕ ಜಯವು ಸಂತಸವನ್ನು ಉಂಟುಮಾಡುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ. ಇಂದು ತುರ್ತಾಗಿ ಬೇಕಾಗಿರುವ ಹಣವನ್ನು ಹೊಂದಿಸಲು ನಿಮಗೆ ಕಷ್ಟವಾಗುವುದು. ಫಲಿತಾಂಶದ ಕುತೂಹಲವು ನಿಮ್ಮ ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಕೃಷಿಗೆ ಸಂಬಂಧಿಸಿದಂತೆ ಹೊಸ ಕಲ್ಪನೆಯನ್ನು ಇಟ್ಟುಕೊಳ್ಳುವಿರಿ. ಕಛೇರಿಯ ಕಾರ್ಯದಿಂದ ಆಯಾಸವಾಗಬಹುದು.

ಕನ್ಯಾ ರಾಶಿ : ನೀವು ಇಂದು ಕೆಲವು ವಿಷಯಗಳ ಬಗ್ಗೆ ನಿಮ್ಮ ಸಂಗಾತಿಯ ಜೊತೆ ಮಾತನಾಡದೇ ಇರುವುದು ಲೇಸು. ಕುಟುಂಬಕ್ಕಾಗಿ ಬಿಡುವು ಮಾಡಿಕೊಳ್ಳಿ. ಅನಿರೀಕ್ಷಿತ ಪ್ರಯಾಣ ಹೋಗುವ ಸಾಧ್ಯತೆ ಇದೆ. ನಿಮ್ಮದಾದ ಕೆಲವು ಅಸಂಬದ್ಧ ವ್ಯವಸ್ಥೆಯನ್ನು ನೀವು ಸರಿ ಮಾಡಿಕೊಳ್ಳಬೇಕಾಗುವುದು. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ನಿಮ್ಮ ಯೋಜನೆಯನ್ನು ಪ್ರಯೋಗಕ್ಕೆ ತರಲು ಪೂರ್ಣ ಯಶಸ್ಸನ್ನು ಪಡೆಯಲಾರಿರಿ. ಮನಸ್ಸಿನಿಂದ ನೀವು ಕೆಲವು ವಿಚಾರವನ್ನು ತೆಗೆದುಹಾಕುವುದು ಉತ್ತಮ. ಅಪನಂಬಿಕೆಯಿಂದ ನಿಮಗೆ ತೊಂದರೆ ಆಗಬಹುದು. ವಸತಿ ಸ್ಥಾನವನ್ನು ಬದಲಿಸಬೇಕಾದೀತು. ಯಾರನ್ನೋ ನೋಡಿ ಹೊಟ್ಟಿ ಉರಿ ಮಾಡಿಕೊಳ್ಳುವುದು ಬೇಡ. ಸ್ಪರ್ಧಾತ್ಮಕ ವಿಚಾರದಲ್ಲಿ ಸೋಲುವ ಸಂಭವವಿದೆ.

ತುಲಾ ರಾಶಿ : ನಿಮ್ಮನ್ನು ಬೇಡವೆಂದು ದೂರವಿಟ್ಟವರೇ ಇಂದು ನಿಮ್ಮ ಸಮೀಪ ಬಂದು ನಿಲ್ಲುವರು. ನೀವು ಇಂದು ಎಲ್ಲರ ಆಕರ್ಷಕ ಕೇಂದ್ರವಾಗಿ ಇರುವಿರಿ. ನಿಮ್ಮ ಕುರಿತು ಕೆಲವು ಸತ್ಯಗಳು ಗೊತ್ತಾಗಲಿದೆ. ಉಗುರಿನಿಂದ ಆಗುವ ಕಾರ್ಯಕ್ಕೆ ಕೊಡಲಿ ಏಟು ತರುವುದು ಉಚಿತವಲ್ಲ. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ದುಡುಕಿ ಯಾವುದನ್ನೂ ಮಾಡುವುದು ಬೇಡ. ನಿಮಗಮ ಸ್ಥಿರಾಸ್ತಿಯ ಮಾರಾಟದಲ್ಲಿ ಏಕಮುಖವಾದ ಅಭಿಪ್ರಾಯ ಬೇಡ. ನಿಮ್ಮ ಕೆಲವು ಆಸೆಗಳನ್ನು ಪೂರೈಸಿಕೊಳ್ಳುವಿರಿ. ಸಮಾಜವು ನಿಮ್ಮ ಸಾಧನೆಯನ್ನು ಗುರುತಿಸೀತು. ನಿಮಗೆ ಗೊತ್ತಿರುವ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಬಗ್ಗೆ ಬಂದ ಆರೋಪವನ್ನು ಜಾಣ್ಮೆಯಿಂದ ಪರಿಹಿರಿಸಿಕೊಳ್ಳುವಿರಿ. ನಿಮ್ಮ ಉದ್ಯಮಕ್ಕೆ ಹೆಚ್ಚಿನ ಸಮಯವನ್ನು ಕೊಡುವುದು ಅಗತ್ಯ. ಸುಳ್ಳನ್ನೇ ಸತ್ಯವೆಂದು ನಂಬುವಿರಿ.

ವೃಶ್ಚಿಕ ರಾಶಿ : ಆರ್ಥಿಕ ನಷ್ಟದಿಂದ ಒತ್ತಡಕ್ಕೆ ಒಳಗಾಗುವಿರಿ. ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸಿ. ಬರುವ ಸಮಸ್ಯೆಯನ್ನು ಗಂಭೀರವಾಗಿ ಸ್ವೀಕರಿಸುವುದು ಬೇಡ. ಹಿಂದೆ ಕೊಟ್ಟ ಸಾಲವು ಮರಳಿ ಬರುವ ನಿರೀಕ್ಷೆಯಲ್ಲಿ ಇರುವಿರಿ. ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ. ದೈಹಕ ಕಾರ್ಯದಲ್ಲಿ ತೊಡಗಿದವರಿಗೆ ಹೆಚ್ಚು ಆದಾಯವು ಇರುವುದು. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ಧಾರ್ಮಿಕ ಸೇವೆಯಲ್ಲಿ ನೀವು ಭಾಗಿಗಳಾಗುವಿರಿ. ನಿದ್ರಾಹೀನತೆಯಿಂದ ಕಿರಿಕಿರಿ ಉಂಟಾಗುವುದು. ಮಕ್ಕಳ ವರ್ತನೆಯು ಹಿಡಸದೇ ಇರುವುದು. ಸಾಮಾಜಿಕ ಕಾರ್ಯದಲ್ಲಿ ನೋವನ್ನು ಮರೆಯುವಿರಿ. ಆದರೂ ಏನನ್ನೂ ಹೇಳದೇ ಇರುವಿರಿ. ಕಾರ್ಯದ ಬಗ್ಗೆ ಅತಿಯಾದ ಆಲೋಚನೆಯಿಂದ ತಲೆನೋವು ಬರಬಹುದು. ಪ್ರೀತಿಗಾಗಿ ಇಂದು ಹೆಚ್ಚು ಸಮಯವನ್ನು ಕೊಡುವಿರಿ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ