Horoscope: ರಾಶಿಭವಿಷ್ಯ, ಇನ್ನೊಬ್ಬರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಬೇಡಿ
ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್ 17 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಬೆಳಗ್ಗೆ 10:52 ರಿಂದ 12:17ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:01 ರಿಂದ 09:26ರ ವರೆಗೆ.
ಮೇಷ ರಾಶಿ: ಅಡೆತಡೆಯ ಪ್ರಯಾಣವನ್ನೂ ಲೆಕ್ಕಿಸದೇ ಮುನ್ನಡೆಯುವಿರಿ. ಉದ್ಯಮಿಗಳು ಇಂದು ದೊಡ್ಡ ಲಾಭವನ್ನು ಗಳಿಸುವ ಯೋಜನೆಯು ಸಿಗುವುದು. ಇಂದು ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ಹೊರಗಿನ ಆಹಾರವನ್ನು ತ್ಯಜಿಸಲು ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ಮಕ್ಕಳ ಮೇಲೆ ಒಂದು ಕಣ್ಣಿರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ ಆಗುವುದು. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸುವಿರಿ. ನಿಮಗೆ ಅವಶ್ಯಕತೆ ಇರುವಷ್ಟು ಬಳಸಿಕೊಂಡು, ಇನ್ನೊಬ್ಬರ ವಸ್ತುವನ್ನು ಹಿಂದಿರುಗಿಸುವಿರಿ.
ವೃಷಭ ರಾಶಿ: ಸಹೋದ್ಯೋಗಿಗಳ ನಡುವೆ ಸಖ್ಯವುಂಟಾಗುವುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೀವು ತುಂಬಾ ಆಯಾಸವನ್ನು ಪಡುವಿರಿ. ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ವ್ಯಾಪಾರವನ್ನು ನಮ್ರರಾಗಿ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮಗೆ ಇಷ್ಟವಾದ ಕೊಡುಗೆಯು ಸಿಗಬಹುದು. ಇಂದಿನ ಆದಾಯವನ್ನು ಪ್ರಕಟಮಾಡುವುದು ಬೇಡ.
ಮಿಥುನ ರಾಶಿ: ಕಛೇರಿಯಲ್ಲಿ ನಿಮ್ಮ ಎಲ್ಲ ಕೆಲಸಗಳನ್ನು ನೀವು ತ್ವರಿತವಾಗಿ ಪೂರ್ಣಗೊಳಿಸ ಬೇಕಾಗುವುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ಮನೆಯ ವಾತಾವರಣ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟಕೊಳ್ಳಿ. ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸುವಿರಿ. ಪ್ರೀತಿಯಿಂದ ಹೊರಬರಲು ಆಗದು. ಕೆಲಸದಲ್ಲಿ ನೈಪುಣ್ಯತೆಯನ್ನು ಬೆಳೆಸಿಕೊಂಡಿರುವಿರಿ.
ಕರ್ಕಾಟಕ ರಾಶಿ: ವೃತ್ತಿಯ ಸ್ಥಳದಲ್ಲಿ ಇನ್ನೊಬ್ಬರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಬೇಡಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಇಂದು ಉತ್ತಮ ಲಾಭವನ್ನು ಪಡೆಯುವರು. ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಧನವ್ಯಯವಾದರೂ ದೊಡ್ಡ ಸಮಸ್ಯೆ ಆಗುವುದಿಲ್ಲ. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು. ನಿಮ್ಮ ಕಲ್ಪನೆಯಂತೆ ಎಲ್ಲವೂ ಆಗದು ಎಂಬ ಸತ್ಯವು ತಿಳಿಯಲಿದೆ. ಯೋಜನೆಯನ್ನು ಮಾಡುವಾಗ ಸರಿಯಾಗಿ ಇರಲಿ. ನಿಮ್ಮ ಇಂದಿನ ವರ್ತನೆಯು ಊಹಾತೀತವಾಗಿರುವುದು.