ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್ 18 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಷಾಢಾ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಬೆಳಗ್ಗೆ 09:27 ರಿಂದ 10:52ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:43 ರಿಂದ 03:09ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:36 ರಿಂದ 08:01ರ ವರೆಗೆ.
ಮೇಷ ರಾಶಿ: ವೃತ್ತಿಯ ಜೀವನನ್ನು ಆನಂದದಿಂದ ಕಳೆಯುವಿರಿ. ಸಂಗಾತಿಯ ಭಾವನೆಗೆ ಸ್ಪಂದಿಸುವಿರಿ. ಬಂಗಾರದ ಸೂಚಿಯಾದರೂ ಕಣ್ಣನ್ನು ಚುಚ್ಚಿಕೊಳ್ಳಬಾರದು. ಸಿಟ್ಟಿನಿಂದ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಬದಲಾಣೆಗೆ ನೀವು ತೆರೆದುಕೊಳ್ಳಬೇಕಾದೀತು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು.
ವೃಷಭ ರಾಶಿ: ಉನ್ನತ ವ್ಯಾಸಂಗಕ್ಕೆ ಅವಕಾಶವು ಸಿಗುವುದು. ಕಲಾವಿದರಿಗೆ ಅಪ್ರಶಂಸೆಯು ಬರಬಹುದು. ನಿಮ್ಮ ಇಂದಿನ ಉತ್ಸಾಹವು ಯಾರಿಗೂ ಪ್ರೇರಣೆ ನೀಡುವುದು. ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುತ್ತ ಇರಬಹುದು. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ಭವಿಷ್ಯದ ಬಗ್ಗೆ ಗಂಭೀರವಾದ ಚಿಂತನೆ ಮಾಡುವಿರಿ.
ಮಿಥುನ ರಾಶಿ: ನಿಮ್ಮ ವರ್ತನೆಯು ಭಿನ್ನವಾಗಿ ಕಾಣಿಸುವುದು. ಯಾರ ಮೇಲೋ ಸಂದೇಹಪಡುವಿರಿ. ಹಣಕಾಸಿನ ವಿಚಾರದಲ್ಲಿ ಜೋಪನ. ಆಭರಣದ ಬಗ್ಗೆ ಮೋಹ ಉಂಟಾಗುವುದು. ಹಿರಿಯರಿಗೆ ಅಗೌರವದ ಮಾತುಗಳನ್ನು ಆಡಬೇಕಾದೀತು. ನಿಮ್ಮ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ಬೇಕಾದಷ್ಟು ಹಣವಿದ್ದರೂ ತುರ್ತಿಗೆ ಪ್ರಯೋಜನಕ್ಕೆ ಬಾರದು. ನಿಮ್ಮ ನಿರ್ಧಾರಕ್ಕೆ ಮನೆಯಿಂದ ನಿಮಗೆ ಬೆಂಬಲವಿರುವುದು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಬೇಕಾಗುವುದು. ವಾತಕ್ಕೆ ಸಂಬಂಧಿಸಿದ ಖಾಯಿಲೆ ಕಾಣಿಸಿಕೊಳ್ಳುವುದು.
ಕಟಕ ರಾಶಿ: ಅನಿರೀಕ್ಷಿತ ಲಾಭವನ್ನು ನೀವು ಅಪೇಕ್ಷಿಸುವಿರಿ. ಅಪರೂಪದ ವ್ಯಕ್ತಿಗಳ ಭೇಟಿಯಾಗಲಿದೆ. ಗೌಪ್ಯತೆಯನ್ನು ಹೊರ ಹಾಕುವಿರಿ. ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ದೃಷ್ಟಿಯಲ್ಲಿ ಸ್ವಾರ್ಥಿಯಂತೆ ಕಾಣಿಸುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ಇಂದು ಮನೋರಂಜನೆಗೆ ಹೆಚ್ಚಿನ ಒತ್ತು ಕೊಡುವಿರಿ. ಸಿಗದ ವಸ್ತುಗಳನ್ನು ಬಲಾತ್ಕಾರವಾಗಿ ಪಡೆಯುವ ಪ್ರಯತ್ನ ಮಾಡುವಿರಿ.