ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಭರಣೀ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 04:35 ರಿಂದ 05:59ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:20 ರಿಂದ 01:45ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:10 ರಿಂದ 04:35ರ ವರೆಗೆ.
ಮೇಷ ರಾಶಿ: ಇಷ್ಟಗಳನ್ನು ಯಾರೊಂದಿಗಾದರೂ ಹಂಚಿಕೊಳ್ಳುವಿರಿ. ಸ್ನೇಹಿತರ ಬಗ್ಗೆ ನಿಮ್ಮ ಅಭಿಪ್ರಾಯವು ಬದಲಾಗುವುದು. ನಕಾರಾತ್ಮಕ ಆಲೋಚನೆಗಳು ನಿಮ್ಮ ಮನಸ್ಸನ್ನು ಕೆಡಿಸುವುದು. ಅಸಾಧ್ಯವಾದುದನ್ನು ಸಾಧಿಸುವ ಭ್ರಮೆಯಿಂದ ಹೊರಬನ್ನಿ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆದರೂ ಮನಸ್ಸಿಗೆ ನೆಮ್ಮದಿ ಸಿಗದು. ಯಾರದೋ ವಿಚಾರಕ್ಕೆ ನೀವು ಮೂಗು ಹಾಕಿ ಸಮಯವನ್ನು ವ್ಯರ್ಥ ಮಾಡಿಕೊಳ್ಳುವಿರಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು. ಮಕ್ಕಳ ವಿವಾಹ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ಶತ್ರುಗಳ ಉಪಟಳ ಕಡಿಮೆ ಮಾಡಿಕೊಂಡು ನಿಮ್ಮಕಡೆ ಏಕಾಗ್ರವಾಗಿ ಇರಿ. ಕೆಲವು ಸಂಗತಿಗಳನ್ನು ಮನಸ್ಸು ಬಿಚ್ಚಿ ಮಾತನಾಡಿ.
ವೃಷಭ ರಾಶಿ: ನಿಮ್ಮ ಮನೋವೇಗವನ್ನು ನಿಯಂತ್ರಿಸಲು ಏನಾದರೂ ಕ್ರಮವನ್ನು ತೆಗೆದುಕೊಳ್ಳುವಿರಿ. ಅನುಭವವು ಸುಳ್ಳಾದಂತೆ ಕಾಣಿಸುವುದು. ಪ್ರೇಮದಲ್ಲಿ ಹಿನ್ನಡೆಯಾಗಲಿದೆ. ತಾಳ್ಮೆಯಿಂದ ಮುಖ್ಯ ಆಯುಧವಾಗಿ ಇರಲಿ. ವ್ಯಾಪಾರಸ್ಥರಿಗೆ ಸ್ವಲ್ಪ ಆಲಸ್ಯವು ಇರುವುದು. ಒಂದೇ ವಿಚಾರವನ್ನು ಮನನ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ. ಪ್ರಯಾಣದಿಂದ ಆಯಾಸವಾಗಬಹುದು. ನಿಮ್ಮ ಆಸೆಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಂಡು ಸಮಾಧಾನ ಪಡುವಿರಿ. ತುರ್ತು ಅವಶ್ಯಕತೆ ಇರುವುದು. ಇನ್ನೊಬ್ಬರ ಯೋಜನೆಯನ್ನು ನಿಮ್ಮದೆಂದು ಸಾಧಿಸುವಿರಿ. ಭೀತಿಯಿಂದ ನೀವು ಕೆಲಸವನ್ನು ಮಾಡದೇ ಇರುವಿರಿ. ಇರುವುದರಲ್ಲಿ ನೆಮ್ಮದಿಯನ್ನು ಕಾಣುವುದು ಮುಖ್ಯವಾದೀತು. ಮನಸ್ಸಿನ ಚಾಂಚಲತ್ಯವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ಭಿನ್ನಾಭಿಪ್ರಾಯಗಳು ಇರಲಿವೆ.
ಮಿಥುನ ರಾಶಿ: ಮರೆವು ಅಧಿಕವಾಗಿರುವುದು. ಪ್ರೀತಿಯಲ್ಲಿ ಉಂಟಾದ ಸಮಸ್ಯೆಯನ್ನು ಮಾತನಾಡಿ ಸರಿಮಾಡಿಕೊಳ್ಳುವಿರಿ. ನಿಮಗೆ ತಿಳಿದ ವಿಚಾರದ ಬಗ್ಗೆ ಹುಡುಕಾಟ ನಡೆಸುವಿರಿ. ವಿದ್ಯಾರ್ಥಿಗಳು ಸಂಶೋಧನೆಯತ್ತ ಗಮನವನ್ನು ಕೊಡುವರು. ಸಂಗಾತಿಯ ಆರೋಗ್ಯದ ಬಗ್ಗೆ ಚಿಂತೆ ಇರುವುದು. ಒಬ್ಬರೇ ನೋವನ್ನು ಅನುಭವಿಸುವುದು ಅಭ್ಯಾಸವಾಗಿಹೋಗಿದೆ. ಸರಿಯಾದ ಸಮಯಕ್ಕೆ ಉತ್ತಮ ವೈದ್ಯರ ಸಲಹೆಯನ್ನು ಪಡೆಯಿರಿ. ಕಛೇರಿಯ ಕೆಲಸವನ್ನು ಮನೆಗೂ ತಂದುಕೊಳ್ಳುವಿರಿ. ಇಂದು ಮಾನಸಿಕವಾಗಿ ನೀವು ಕುಗ್ಗುವಿರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು. ಹೊಸ ಉದ್ಯೋಗಕ್ಕೆ ಬೇಕಾದ ಸಿದ್ಧತೆಯನ್ನೂ ಆಲೋಚಿಸುವಿರಿ. ಸಾಧಿಸುವ ಛಲವನ್ನು ಯಾವುದಾರೂ ಘಟನೆ ನಿಮ್ಮನ್ನು ಎಚ್ಚರಿಸೀತು.
ಕಟಕ ರಾಶಿ: ಅಪಮಾನವು ನಿಮ್ಮ ದೊಡ್ಡ ಶತ್ರುವಿನಂತೆ ಕಾಣಿಸುವುದು. ನೆಮ್ಮದಿಯಿಂದ ಇರಲು ನಿಮಗೆ ಕಷ್ಟವಾಗುವುದು. ಉದ್ವೇಗದಲ್ಲಿ ನೀವು ಏನನ್ನಾದರೂ ಹೇಳಬಹುದು. ಇಂದಿನ ಕೆಲವು ಮಾತುಗಳು ನಿಮಗೆ ಇಷ್ಟವಾಗದೇ ಹೋಗುವುದು. ಕೆಲವು ವಿಚಾರದಲ್ಲಿ ನೀವು ಆತುರರಾಗುವಿರಿ. ವೈದ್ಯರಿಗೆ ಪ್ರಶಂಸೆಯ ದಿನ. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ ಇದೆ. ಭವಿಷ್ಯದ ಬಗ್ಗೆ ದೊಡ್ಡ ಕನಸನ್ನು ಕಟ್ಟಿಕೊಳ್ಳುವಿರಿ. ಮಕ್ಕಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ಬೇಡದ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡುವಿರಿ. ಮನೆಯ ವಾತಾರಣದಲ್ಲಿ ಇರಲು ಖುಷಿಯಾಗುವುದು. ನಿಮ್ಮ ರಹಸ್ಯವನ್ನು ನೀವು ಗೊತ್ತಿಲ್ಲದೇ ಬೇರೆಯವರ ಜೊತೆ ಹಂಚಿಕೊಳ್ಳುವಿರಿ. ಅಸಾಂವಿಧಾನಿಕ ವಿಚಾರದ ಬಗ್ಗೆ ನಿಮಗೆ ಕುತೂಹಲವು ಹೆಚ್ಚಾಗಿ ಇರುವುದು. ಸಮಯಕ್ಕೆ ಬೆಲೆಯನ್ನು ಕೊಡುವುದು ಉತ್ತಮ.