ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶಿವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:05 ರಿಂದ 09:30ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:55 ರಿಂದ 12:20ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:45 ರಿಂದ 03:10ರ ವರೆಗೆ.
ಮೇಷ ರಾಶಿ: ಅಸಂತೋಷವು ನಿಮ್ಮನ್ನು ಕಾಡುವುದು. ಸುಮ್ಮನೆ ಕುಳಿತರೆ ಒಂದಿಲ್ಲೊಂದು ಚಿಂತೆಯು ಕಾಡುವುದು. ಇಂದು ನೀವು ನಿಮ್ಮ ಉದ್ದೇಶಿಸಿದ್ದಕ್ಕಿಂತ ಅಧಿಕ ಮುನ್ನಡೆ ಸಾಧಿಸುವಿರಿ. ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ಸ್ನೇಹಿತರಿಂದ ಅಲ್ಪ ಆರ್ಥಿಕ ಲಾಭವು ನಿಮಗೆ ಸಿಗುವುದು. ಆರಾಮಾಗಿ ಇರಲು ನೀವು ಹೆಚ್ಚು ಇಷ್ಟಪಡುವಿರಿ. ಅತಿಯಾದ ಆಯಾಸವನ್ನು ಮಾಡಿಕೊಳ್ಳದೇ ಕಾರ್ಯವನ್ನು ಮಾಡುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ನಿಮ್ಮವರೇ ನಿಮಗೆ ವಂಚನೆ ಮಾಡುವರು. ಆಲಸ್ಯದಿಂದ ಹೊರ ಬಂದು ಉಪಯುಕ್ತವಾದುದನ್ನು ಮಾಡಲು ಪ್ರಯತ್ನಿಸಿ.
ವೃಷಭ ರಾಶಿ: ಅತಿಯಾದ ಆತ್ಮವಿಶ್ವಾಸವೇ ನಿಮಗೆ ಮುಳುವಾದೀತು. ಸಂದರ್ಭಕ್ಕೆ ಯೋಗ್ಯವಾದ ಮಾತುಗಳಿಗೆ ಆಡಿ. ಉತ್ಸಾಹದಿಂದ ಏನನ್ನಾದರೂ ಮಾಡಿಕೊಳ್ಳಲು ಹೋಗುವುದು ಬೇಡ. ಗೊತ್ತಿಲ್ಲದ ಕೆಲಸವನ್ನೂ ಮಾಡಲು ಹೋಗುವಿರಿ. ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಹಣದಿಂದ ಕೆಲವು ತೊಂದರೆಗಳನ್ನು ದೂರಮಾಡಿಕೊಳ್ಳುವಿರಿ. ನೋವನ್ನು ನುಂಗಿ ಬದುಕುವ ರೀತಿಯು ನಿಮಗೆ ಗೊತ್ತಾಗಲಿದೆ. ಇನ್ನೊಬ್ಬರನ್ನು ನೋವನ್ನು ನೀವು ಅರ್ಥ ಮಾಡಿಕೊಳ್ಳದೇ ವ್ಯವಹರಿಸುವಿರಿ. ನೂತನ ವಸ್ತುಗಳನ್ನು ಖರೀದಿಸುವಿರಿ. ಮನೋರಂಜನೆಯಲ್ಲಿ ನಿಮ್ಮ ಹೆಚ್ಚಿನ ಸಮಯವನ್ನು ಕಳೆಯಬೇಕಾದೀತು. ಇಂದು ನಿಮ್ಮ ಬಯಕೆಗಳನ್ನು ಪೂರೈಸಿಕೊಳ್ಳುವಿರಿ.
ಮಿಥುನ ರಾಶಿ: ಧಾರ್ಮಿಕ ಕಾರ್ಯದಲ್ಲಿ ಹೆಚ್ಚು ಪ್ರೀತಿಯು ಉಂಟಾಗಬಹುದು. ನೆರೆಯವರ ಜೊತೆ ಸೌಹಾರ್ದ ಮಾತುಕತೆ ಇರಲಿ. ಇನ್ನೊಬ್ಬರ ವೈಯಕ್ತಿಕ ವಿಚಾರದಲ್ಲಿ ಹೆಚ್ಚು ಆಸಕ್ತಿ ಇರುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಹೊಸ ಉದ್ಯಮವನ್ನು ಆರಂಭಿಸಲು ನಿಮಗೆ ಧೈರ್ಯವು ಸಾಲದು. ಅಪರಿಚಿತರ ಜೊತೆ ಸಲುಗೆ ಅನವಶ್ಯಕ. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು. ಹೊಂದಾಣಿಕೆಯ ಮನೋಭಾವವು ಇರಬೇಕಾದೀತು. ಹಣವನ್ನು ಉಳಿಸಿಕೊಳ್ಳಲು ನಿಮ್ಮ ಪ್ರಯತ್ನವು ಫಲಕೊಡುವುದು. ಇಂದಿನ ನಿಮ್ಮ ವರ್ತನೆಯು ಗಾಂಭೀರ್ಯದಿಂದ ಇರಲಿದೆ. ಹಣವನ್ನು ಯಾರಿಗಾದರೂ ಸಲಾವಾಗಿ ಕೊಡುವಾಗ ನೋಡಿಕೊಳ್ಳಿ.
ಕಟಕ ರಾಶಿ: ಆದಾಯದಲ್ಲಿ ತೊಂದರೆಯಾಗಲಿದೆ. ಪ್ರೇಮವು ಪರಿವರ್ತನೆಯಾಗಬಹುದು. ಬಾಂಧವರಲ್ಲಿ ಆಪ್ತತೆ ಹೆಚ್ಚಗುವುದು. ಅತಿಯಾದ ಪ್ರಯಾಣದಿಂದ ನೀವು ದುರ್ಬಲರಾಗುವಿರಿ. ಇತ್ತೀಚಿನ ಕೆಲವು ಸ್ಥಿತಿಗಳು ಒತ್ತಡವನ್ನು ತಂದಿರಬಹುದು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಲ್ಪದರಲ್ಲಿ ನೀವು ಪಾರಾಗಿ ನೆಮ್ಮದಿ ಪಡೆಯುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು. ಕಳೆದುಕೊಂಡದ ವಸ್ತುವಿನ ಬಗ್ಗೆ ಮೋಹವಿರುವುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳ ಮಾಡಿಕೊಳ್ಳಿ. ಬಿಡುವಿನ ಸಮಯವನ್ನು ಅಧಿಕ ಸಂಪಾದನೆಗಾಗಿ ಬಳಸಿಕೊಳ್ಳುವಿರಿ. ನಿಮ್ಮ ಸಹಜತೆಯು ಮರೆಯಾಗುವುದು.