Horoscope: ರಾಶಿಭವಿಷ್ಯ, ಈ ರಾಶಿಯವರು ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಗಳ ಜೊತೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಿ
ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.
ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನೂರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣರಾಜ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಸಾಧ್ಯ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:21 ರಿಂದ 01:46ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:06 ಗಂಟೆ 09:31 ನಿಮಿಷಕ್ಕೆ, ಗುಳಿಕ ಕಾಲ ಬೆಳಗ್ಗೆ 10:56 ರಿಂದ ಮಧ್ಯಾಹ್ನ 12:21ರ ವರೆಗೆ.
ಮೇಷ ರಾಶಿ: ಸೌಂದರ್ಯದ ವಿಚಾರಕ್ಕೆ ಹೆಚ್ಚು ಆಸಕ್ತಿ ಇರುವುದು. ಮಿತ್ರರ ವಿಷಯದಲ್ಲಿ ಅಸಮಾಧಾನವಿರುವುದು. ವ್ಯಾಪಾರಸ್ಥರು ಯಾವುದಾರೂ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳಬಹುದು. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ದಾಂಪತ್ಯದಲ್ಲಿ ಪರಸ್ಪರ ಅಭಿಪ್ರಾಯ ಭೇದವು ಕಾಣಿಸಿಕೊಂಡೀತು. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ಗೊತ್ತಿಲ್ಲದ ಕೆಲಸವನ್ನು ಒಪ್ಪಿಕೊಂಡು ಸಂಕಷ್ಟದಲ್ಲಿ ಸಿಕ್ಕಿಕೊಳ್ಳುವಿರಿ. ಆಪ್ತರನ್ನು ನೀವು ದೂರ ಮಾಡಿಕೊಳ್ಳುವುದು ಕಷ್ಟವಾಗಬಹುದು. ಕುಟುಂಬದವರನ್ನು ನೀವು ಕಳೆದುಕೊಳ್ಳಬೇಕಾದೀತು. ಪರೀಕ್ಷೆಯ ಸಿದ್ಧತೆಯಲ್ಲಿ ನಿಮ್ಮ ಸಮಯವನ್ನು ಕಳೆಯುವಿರಿ. ಇಂದು ನೀವು ಅಗತ್ಯ ಸೌಲಭ್ಯಗಳನ್ನು ಪಡೆದುಕೊಳ್ಳುವಿರಿ. ಬಾಡಿಗೆ ಮನೆಯ ಬದಲಾವಣೆಯು ಅನಿವಾರ್ಯವಾದೀತು.
ವೃಷಭ ರಾಶಿ: ಬೇಡವೆಂಬ ವಿಷಯಕ್ಕೆ ಮನಸ್ಸು ಮತ್ತೆ ಮತ್ತೆ ಹೋಗುವುದು. ಅನೇಕ ವಿಚಾರಗಳ ಬಗ್ಗೆ ಒಟ್ಟಿಗೇ ಚಿಂತಿಸುವುದು ಕಷ್ಟವಾದೀತು. ಬಂಧುಗಳ ಆಗಮನದಿಂದ ಹೆಚ್ಚು ಸಂತೋಷವು ಇರುವುದು. ನಿಮ್ಮ ಪ್ರೀತಿಪಾತ್ರರ ಜೊತೆ ಆಪ್ತವಾದ ಸಮಯವನ್ನು ಕಳೆಯುವಿರಿ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳ ಜೊತೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ವಿದ್ಯೆಯ ಕಾರಣ ಉತ್ತಮ ಆದಾಯದ ಕೆಲಸವೂ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಆರೋಗ್ಯದ ಕಡೆ ಸ್ವಲ್ಪ ಹೆಚ್ಚು ಗಮನವಿರಲಿ. ನಿಮ್ಮ ಕೆಲಸವು ಕೇವಲ ಸುತ್ತಾಟದಲ್ಲಿಯೇ ಮುಕ್ತಾಯವಾಗುವುದು. ಅಪ್ರಯೋಜಕ ವಿಚಾರದ ಬಗ್ಗೆ ಚಿಂತೆ ಮಾಡುವಿರಿ. ಆಲಂಕಾರಿಕ ವಸ್ತುಗಳ ಬಗ್ಗೆ ಅತಿಯಾದ ಅಸೆ ಇರುವುದು. ಬಂಧುಗಳು ನಿಮ್ಮ ಬಗ್ಗೆ ಹಗುರವಾದ ಭಾವವನ್ನು ಇಟ್ಟುಕೊಳ್ಳುವರು. ಸಂಗಾತಿಯ ಜೊತೆ ಪ್ರೀತಿಯನ್ನು ಹಂಚಕೊಳ್ಳುವಿರಿ.
ಮಿಥುನ ರಾಶಿ: ಮಹಿಳೆಯರು ಸ್ವಂತ ಉದ್ಯಮವನ್ನು ಆರಂಭಿಸುವ ನಿರ್ಧಾರಕ್ಕೆ ಬರಬಹುದು. ನಿಮ್ಮ ಬೆಳವಣಿಗೆಯು ನಿಮಗೆ ಸಮಾಧಾನ ತರದೇ ಇದ್ದೀತು. ಇಂದಿನ ನಿಮ್ಮ ದಿನವು ಆತ್ಮವಿಶ್ವಾಸದಿಂದ ಇರಲಿದೆ. ನಿಮ್ಮ ಕಾರ್ಯಗಳು ಅಂದುಕೊಂಡಂತೆ ಪೂರ್ಣವಾಗುವುದು. ಹಳೆಯ ವಿಚಾರವನ್ನು ಇಂದು ವಿರೋಧಿಗಳು ಪುನಃ ಮೇಲಕ್ಕೆ ತಂದು ಕಲಹ ಮಾಡಬಹುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಎಡವಿ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಛಾತಿ ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ನಿರಂತರ ಕ್ರಿಯಾಶೀಲತೆಯು ನಿಮ್ಮ ಮಾನಸಿಕ ಒತ್ತಡವನ್ನು ನಿವಾರಿಸುವುರು. ದುರ್ಜನರ ಸಹವಾಸದಿಂದ ದೂರವಿರಲು ಪ್ರಯತ್ನಿಸಿ. ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಆತಂಕವಿರಲಿದೆ.
ಕಟಕ ರಾಶಿ: ನಿಮ್ಮ ಇಂದಿನ ಎಲ್ಲ ಕೆಲಸಗಳೂ ಬಹಳ ವಿಳಂಬವಾಗಿ ಆಗುವುದು. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ಕಾನೂನಿನ ಮಾರ್ಗದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಪ್ರಯೋಜನವನ್ನು ಪಡೆಯುವಿರಿ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಇಂದು ನಿಮ್ಮ ಕೆಲಸಕ್ಕೆ ಸಂಬಂಧಿಸಿದ ಒಳ್ಳೆಯ ಸುದ್ದಿಯು ಇರಲಿದೆ. ಮನೆಯಿಂದ ದೂರ ಇರಬೇಕಾದೀತು. ಸಜ್ಜನರ ಸಹವಾಸವನ್ನು ಹೆಚ್ಚು ಇಷ್ಟಪಡುವಿರಿ. ನಿಮ್ಮ ನೋವನ್ನು ಸೂಕ್ತ ಸ್ಥಳದಲ್ಲಿ ಪ್ರಕಟಪಡಿಸಿ. ಭೋಗವಸ್ತುಗಳನ್ನು ಖರೀದಿಸುವಿರಿ. ನಿಮ್ಮ ಗೌರವಕ್ಕೆ ಸರಿಯಾದ ಕಾರ್ಯವನ್ನು ಮಾಡಿ. ಹಿರಿಯ ಹಿತವಚನವು ನಿಮಗೆ ಕಿರಿಕಿರಿಯಂತೆ ತೋರುವುದು. ಎಲ್ಲ ವಿಚಾರಕ್ಕೂ ಮೂಗನ್ನು ತೂರಿಸುವುದು ಬೇಡ. ಆಹಾರದಿಂದ ಇಂದು ಅನಾರೋಗ್ಯವು ಬರಬಹುದು.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ