ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿರುತ್ತದೆ. ಪ್ರತಿಯೊಂದು ರಾಶಿಗಳು ತಮ್ಮದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನಿಮ್ಮ ಕೆಲಸ, ವ್ಯವಹಾರ, ವಹಿವಾಟುಗಳು, ಕುಟುಂಬ, ಸ್ನೇಹಿತರೊಂದಿಗಿನ ಸಂಬಂಧ, ಆರೋಗ್ಯ ಮತ್ತು ದಿನವಿಡೀ ನಡೆಯುವ ಮಂಗಳಕರ ಮತ್ತು ಅಶುಭ ಘಟನೆಗಳ ಬಗ್ಗೆ ಇಂದಿನ (2023 ಡಿಸೆಂಬರ್ 08) ಭವಿಷ್ಯದಲ್ಲಿ ತಿಳಿಯಿರಿ.
ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜೇಷ್ಠಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಸೌಭಾಗ್ಯ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 46 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:59 ರಿಂದ 12:24 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:13 ರಿಂದ ಸಂಜೆ 04:38ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:11 ರಿಂದ 09:36ರ ವರೆಗೆ.
ಮೇಷ ರಾಶಿ: ಇಂದು ನೀವು ಒತ್ತಡಗಳಿಂದ ಮುಕ್ತರಾಗಿ ಶಾಂತವಾಗಿ ಕಾಣಿಸುವಿರಿ. ಶುದ್ಧತೆಯ ವಿಚಾರದಲ್ಲಿ ಇನ್ನಷ್ಟು ಕಾಳಜಿ ಅವಶ್ಯಕ. ಪಾಲುದಾರಿಕೆಗೆ ಸಂಬಂಧಿಸಿದಂತೆ ದೂರ ಪ್ರಯಾಣ ಮಾಡಲು ಇಂದು ಒಳ್ಳೆಯದು. ಬಡ್ತಿಯಲ್ಲಿ ಸುಧಾರಣೆ ಇರಲಿದೆ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು. ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಶುಭಸಮಾರಂಭಗಳಿಗೆ ಭೇಟಿ ಕೊಡುವಿರಿ. ಯಾರದೋ ಒತ್ತಡದಿಂದ ದಿನಚರಿಯನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಸ್ನೇಹವು ಗೊತ್ತಿಲ್ಲದಂತೆ ಪ್ರೇಮವಾಗುವುದು. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷಿಸುವುದು ಬೇಡ. ಇಂದು ದೇಹಕ್ಕೂ ಮನಸ್ಸಿಗೂ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಆಗಬೇಕಾಗಿರುವ ಕೆಲಸವನ್ನು ನೀವು ಪಟ್ಟಿ ಮಾಡಿ. ಸ್ತ್ರೀಯರ ಸಹವಾಸವು ಅಧಿಕವಾಗಿರುವುದು.
ವೃಷಭ ರಾಶಿ: ನಿಮ್ಮ ಗುರಿಯನ್ನು ಗೌಪ್ಯವಾಗಿ ಇರಿಸಿಕೊಳ್ಳಿ. ಮನಸ್ಸು ಕೆಲವು ವಿಚಾರಗಳಿಗೆ ದುರ್ಬಲವಾಗುವುದು. ನಿಮ್ಮ ಬುದ್ಧಿವಂತಿಕೆಯಿಂದ ಎಲ್ಲವನ್ನೂ ಉತ್ತಮವಾಗಿ ಮಾಡುವಿರಿ. ನಾನಾ ಕಾರಣಗಳಿಂದ ನಿಮ್ಮ ವ್ಯವಹಾರದಲ್ಲಿ ನೀವು ಉತ್ತಮವಾಗಿ ಕಾರ್ಯನಿರ್ವಹಿಸಲು ಮತ್ತು ದೊಡ್ಡ ಲಾಭವನ್ನು ಗಳಿಸಲು ಸಾಧ್ಯವಾಗದು. ವಿಷಯಾಸಕ್ತಿಯು ಅಧಿಕವಾಗಿದ್ದರೂ ಅದಕ್ಕೆ ಯೋಗ್ಯ ಜನರನ್ನು ಹುಡುಕುವಿರಿ. ಆತ್ಮೀಯರಿಂದ ನೀವು ಸಹಾಯವನ್ನು ಪಡೆಯುವಿರಿ. ಅಧಿಕವಾದ ಖರ್ಚುಗಳು ನಿಮಗೆ ಲೆಕ್ಕಕ್ಕೆ ಸಿಗದು. ಕೂಡಿಟ್ಟ ಹಣದಿಂದ ನಿಮಗೆ ಪ್ರಯೋಜನವಾದಂತೆ ಆಗುವುದು. ಹಳೆಯ ರೋಗವು ಮತ್ತೆ ಕಾಣಿಸಿಕೊಂಡು ಸಂಕಟಪಡುವಿರಿ. ಅನಿರೀಕ್ಷಿತ ಸುದ್ದಿಯು ನಿಮ್ಮ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ಇನ್ನೊಬ್ಬರನ್ನು ದೂರುತ್ತ ನಿಮ್ಮ ಕಾರ್ಯಗಳನ್ನು ಸಾಧಿಸಿಕೊಳ್ಳುವಿರಿ.
ಮಿಥುನ ರಾಶಿ: ಕೆಲಸವು ಪೂರ್ಣ ಮಾಡಿದ ತೃಪ್ತಿಯನ್ನು ಅನುಭವಿಸುವಾಗ ಮತ್ತೊಂದು ನಿಮ್ಮ ಪಾಲಿಗೆ ಬರಬಹುದು. ಈ ದಿನ ನೀವು ಅದೃಷ್ಟದ ಕಾರಣ ಉತ್ತಮ ಫಲಿತಾಂಶವನ್ನು ಪಡೆಯುವಿರಿ. ನೀವು ಪ್ರಭಾವಿ ವ್ಯಕ್ತಿಗಳ ಸಂಪರ್ಕ ಮಾಡುವಿರಿ. ನೀವು ಹೊಸ ಪಾಲುದಾರಿಕೆಗೆ ಪ್ರವೇಶಿಸಬಹುದು ಮತ್ತು ನಿಮ್ಮ ಲಾಭವನ್ನು ಹೆಚ್ಚಿಸಬಹುದು. ಹುಣ್ಣನ್ನು ಕೆರದು ಗಾಯ ಮಾಡಿಕೊಳ್ಳುವುದು. ನೀವು ಕೆಲಸಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ, ನಿಮ್ಮ ಪ್ರಯತ್ನ ಮುಂದುವರಿಯಲಿ. ವಾಹನ ಚಾಲನೆಯಲ್ಲಿ ಮಿತಿಯಿರಲಿ. ಮಾನಸಿಕ ಖಿನ್ನತೆಯಿಂದ ಹೊರಬರಲು ಸ್ನೇಹಿತರು ಸಹಾಯ ಮಾಡುವರು. ಸಂಗಾತಿಯ ನಡುವಿನ ಮಾತುಕತೆಗಳು ವಿಕೋಪಕ್ಕೆ ಹೋಗಬಹುದು. ಪ್ರೀತಿಯು ಇರಬೇಕಾದ ಸ್ಥಳದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳುವುದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗದು.
ಕರ್ಕ ರಾಶಿ: ಅಹಂಕಾರವನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ಹಲವಾರು ದಿನದ ಸಂಕಟವನ್ನು ನೀವು ಹೊರಹಾಕುವಿರಿ. ವೃತ್ತಿಪರ ಮತ್ತು ಸಾಮಾಜಿಕ ವಲಯಗಳಲ್ಲಿ ಗೌರವ ಮತ್ತು ಪ್ರತಿಷ್ಠೆಯನ್ನು ಪಡೆಯುವಿರಿ. ದಿನವು ಅನುಕೂಲಕರವಾಗಿದೆ. ವಾಹನದಿಂದ ಅಪಘಾತವು ಆಗಬಹುದು. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸ್ವಲ್ಪ ಸಮಸ್ಯೆ ಆಗಬಹುದು. ಮಿತವಾದ ಆಹಾರಸೇವನೆಯನ್ನು ಇಟ್ಟುಕೊಳ್ಳಿ. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು. ಅಸ್ಪಷ್ಟ ವಿಚಾರಗಳನ್ನು ತಿಳಿದುಕೊಳ್ಳಲು ಪ್ರಯತ್ನಿಸಿ. ಯಾರ ಮಾತನ್ನೋ ಕೇಳಿ ನೀವು ಸಮಸ್ಯೆಯನ್ನು ತಂದುಕೊಳ್ಳುವಿರಿ. ಕಣ್ಣಿನ ತೊಂದರೆ ಹೆಚ್ಚಾದೀತು. ವಿವಾಹ ಸಂಬಂಧದಿಂದ ನಿಮಗೆ ಕಿರಿಕಿರಿ ಎನಿಸಬಹುದು.
ಸಿಂಹ ರಾಶಿ: ವಿಶ್ವಾಸಘಾತದಿಂದ ನೀವು ಮೌನವಹಿಸುವಿರಿ. ವಿದೇಶದಲ್ಲಿ ಇರುವವರು ಗೊಂದಲದಲ್ಲಿ ಇರಬಹುದು. ವ್ಯವಹಾರಗಳ ವಿಷಯದಲ್ಲಿ ನಿಮ್ಮನ್ನು ಅದೃಷ್ಟವಂತರನ್ನಾಗಿ ಮಾಡುತ್ತದೆ. ನೀವು ಜನಪ್ರಿಯತೆಯನ್ನು ಗಳಿಸುವಿರಿ. ಪ್ರೇಮಿಗಳಿಗೆ ಈ ಸಮಯವು ಶುಭವಲ್ಲ. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಕಾಣಿಸುವುದು. ನಿಮ್ಮನ್ನು ಸ್ಥಾನದಿಂದ ಕೆಳಗೆ ಹಾಕಲು ನೋಡಬಹುದು. ಸಿಟ್ಟಿಗೆ ಕಾರಣವಿಲ್ಲದಿದ್ದರೂ ಸಿಟ್ಟಾಗುವಿರಿ. ಮೇಲಧಿಕಾರಿಗಳ ಬೆಂಬಲವು ನಿಮಗೆ ಸಿಕ್ಕರೂ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ನಿಮಗೆ ನಾನಾ ರೀತಿಯ ಸೌಲಭ್ಯಗಳು ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನವನ್ನು ಅನ್ಯರು ಆಕ್ರಮಿಸಿಕೊಳ್ಳಬಹುದು. ಚೋರಭೀತಿಯು ನಿಮಗೆ ಆತಂಕಪಡುವಿರಿ. ಭೂಮಿಯ ವ್ಯವಹಾರದಿಂದ ಸಂಬಂಧಗಳು ಹಾಳಾಗುವುದು.
ಕನ್ಯಾ ರಾಶಿ: ನಿಮ್ಮ ಅಪ್ರಬುದ್ಧವಾದ ಮಾತಿನಿಂದ ಸ್ನೇಹಿತರು ದೂರವಾಗುವರು. ಮಹಿಳೆಯರ ಮೇಲೆ ಅಪವಾದ ಬರುವ ಸಾಧ್ಯತೆ ಇದೆ. ಇಂದು ನೀವು ಏನೇ ಮಾಡಿದರೂ ಉತ್ಸಾಹದಿಂದ ಮಾಡುವಿರಿ. ಶ್ರದ್ಧೆಯೂ ನಿಮ್ಮಲ್ಲಿ ಅತಿಮುಖ್ಯವಾಗಿ ಕಾಣಿಸಿಕೊಳ್ಳುವುದು. ಚೆನ್ನಾಗಿ ಯೋಚಿಸಿದ ನಿರ್ಧಾರಗಳು ದೀರ್ಘಕಾಲದವರೆಗೆ ಪರಿಣಾಮಕಾರಿಯಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಆಸ್ತಿ ವ್ಯವಹಾರಗಳು ನಿಮಗೆ ಲಾಭವನ್ನು ನೀಡುವುದು. ಉದ್ವೇಗಕ್ಕೆ ಸಿಕ್ಕಿ ನಿಮ್ಮ ವರ್ತನೆಯು ಎಲ್ಲರೆದು ಹಾಸ್ಯಕ್ಕೆ ಒಳಗಾದೀತು. ಉದ್ಯೋಗಸ್ಥರಿಗೆ ಪ್ರಗತಿಯ ಸಾಧ್ಯತೆಗಳಿವೆ. ಆರ್ಥಿಕವಾದ ಸಮಾನರಲ್ಲಿ ನಿಮ್ಮ ಸಖ್ಯವು ಇರಲಿದೆ. ಮಕ್ಕಳ ನಡುವಿನ ಕಲಹವನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವಿರಿ. ದಾಂಪತ್ಯದಲ್ಲಿ ಬಿರಕು ಬಂದು ಮನೆಯಿಂದ ದೂರ ಇರುವಿರಿ. ದೈವದ ಬಗ್ಗೆ ಭಕ್ತಿಯ ಕೊರತೆ ಇರಲಿದೆ.
ತುಲಾ ರಾಶಿ: ಆಪ್ತರು ನಿಮಗೆ ಸಹಾಯಕ್ಕೆ ಬಾರದೇ ಇರಬಹುದು. ಅನ್ಯರ ಸಮಸ್ಯೆಗಳನ್ನು ಸುಲಭವಾಗಿ ಪರಿಹಾರ ಮಾಡುವಿರಿ. ವಿವಾಹದ ಚಿಂತೆಯು ದೂರಗುವುದು. ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಭವಿಷ್ಯಕ್ಕಾಗಿ ತಮ್ಮ ಮಾರ್ಗವನ್ನು ಪರಿಶೀಲಿಸಿಕೊಳ್ಳಿ. ಪ್ರೇಮ ವ್ಯವಹಾರಗಳಲ್ಲಿ ತೊಡಗಿರುವ ಜನರು ತಮ್ಮ ಸಂಗಾತಿಯ ಭಾವನೆಗಳನ್ನು ಬೆಂಬಲಿಸುವರು. ಸಾಲದಿಂದ ನಿಮ್ಮ ಅಗತ್ಯತೆಯನ್ನು ಪೂರೈಸಿಕೊಳ್ಳುವಿರಿ. ಉದ್ಯೋಗಾಕಾಂಕ್ಷಿಗಳು ಯಶಸ್ವಿಯಾಗಲು ಹೆಚ್ಚುವರಿ ಪ್ರಯತ್ನಗಳನ್ನು ಮಾಡಬೇಕು. ಮಕ್ಕಳ ಪ್ರಗತಿಯನ್ನು ನೀವು ನಿರೀಕ್ಷಿಸಿದ್ದು ಇಂದು ಸಾಫಲ್ಯವಾಗುವುದು. ಅತಿಯಾದ ವಿಶ್ವಾಸದಿಂದ ವಂಚನೆಯಾಗಲಿದೆ. ವ್ಯಾಯಾಮದ ಮೂಲಕ ನಿಮ್ಮ ದುರ್ಬಲ ದೇಹವನ್ನು ಗಟ್ಟಿ ಮಾಡಿಕೊಳ್ಳುವಿರಿ. ಅದೃಷ್ಟವನ್ನು ನಂಬಿ ನಿಮ್ಮ ಪ್ರಯತ್ನವು ಇಲ್ಲದೆಯೂ ಇರಬಹುದು. ಹೋಲಿಕೆ ಮಾಡಿಕೊಂಡು ಸಂಕಟಪಡುವಿರಿ.
ವೃಶ್ಚಿಕ ರಾಶಿ: ನಿಮಗೆ ಆಗಬೇಕಾದ ಕೆಲಸಕ್ಕೆ ಅಧಿಕಾರಿಗಳ ಜೊತೆ ಮಾತನಾಡಿ. ಆರೋಗ್ಯಕ್ಕಾಗಿ ಸೇವಿಸದ ಔಷಧವು ದುಷ್ಪರಿಣಾವನ್ನು ಉಂಟುಮಾಡೀತು. ನಿಮ್ಮ ಬಯಕೆಯು ಪೂರ್ಣವಾಗುವ ಸಾಧ್ಯತೆ ಹೆಚ್ಚು. ಅಪರಿಚಿತ ವರ್ತನೆಯು ನಿಮಗೆ ಗೊತ್ತಿಲ್ಲದೇ ಕಷ್ಟವಾದೀತು. ಇಂದು ನೀವು ಹಠಮಾರಿಯಂತೆ ತೋರುವಿರಿ. ನೀವು ಕಷ್ಟಕರ ಸಂದರ್ಭಗಳಲ್ಲಿ ಸ್ವಲ್ಪ ತಾಳ್ಮೆಯಿಂದ ವರ್ತಿಸಿ. ಆದಷ್ಟು ವಾದಗಳಿಂದ ದೂರವಿರಿ. ನಿಮ್ಮ ಕುಟುಂಬದ ಸದಸ್ಯರು ತೀರ್ಥಯಾತ್ರೆಗೆ ಹೋಗಬಹುದು. ಕೆಲಸಗಳನ್ನು ಮರೆತುಕೊಳ್ಳುವಿರಿ. ನೀವು ಜೀವನ ಸಂಗಾತಿಯ ಬೆಂಬಲದಿಂದ ಖುಷಿಪಡುವಿರಿ. ಆರ್ಥಿಕ ದೃಷ್ಟಿಯಿಂದ ಈ ದಿನವು ಉತ್ತಮವಲ್ಲ. ನಿಮಗೆ ಸ್ನೇಹಿತರಿಂದ ಧನಸಹಾಯವಾಗುವುದು. ಪ್ರಯಾಣಕ್ಕೆ ಇಂದು ಅನುಕೂಲವಲ್ಲ. ಕೆಲಸಗಳನ್ನು ಮಾಡಿಕೊಡಲು ನಿಮಗೆ ಹಣವನ್ನು ನೀಡುವರು. ಕಲಾವಿದರು ಹೆಚ್ಚಿನ ಆದಾಯವನ್ನು ಮಾಡಿಕೊಳ್ಳುವರು. ಸ್ಪರ್ಧೆಯಲ್ಲಿ ನಿಮ್ಮದೇ ಮೇಲುಗೈ ಆಗಲಿದೆ.
ಧನು ರಾಶಿ: ಸ್ನೇಹಿತರ ಜೊತೆ ಅಸಂಬದ್ಧ ವಿಚಾರಗಳಿಗೆ ಮನಸ್ತಾಪವು ಬರುವುದು. ಯಾರನ್ನೂ ಅತಿಯಾಗಿ ಬಳಸಿಕೊಳ್ಳುವುದು ಇಷ್ಟವಾಗದು. ಇಂದು ಆಸ್ತಿ ಸಂಬಂಧಿತ ವಿಷಯಗಳಲ್ಲಿ ನೀವು ಜಾಣ್ಮೆಯಿಂದ ವ್ಯವಹರಿಸುವಿರಿ. ಆಸ್ತಿಯಲ್ಲಿ ಹೂಡಿಕೆ ಮಾಡುವುದು ನಿಮಗೆ ನಿರೀಕ್ಷಿತ ಆದಾಯವನ್ನು ನೀಡುವುದಿಲ್ಲ. ತಮ್ಮ ಮೇಲಧಿಕಾರಿಗಳ ಜೊತೆ ದಕ್ಷತೆಯಿಂದ ವ್ಯವಹರಿಸುವ ಜನರಿಗೆ ಉದ್ಯೋಗದಲ್ಲಿ ಬೆಳೆಯುವ ಅವಕಾಶಗಳು ಸಿಗಲಿವೆ. ನಿಮ್ಮ ಸ್ವಭಾವವು ಇಂದಿನ ವಿಳಂಬದ ಕಾರ್ಯಕ್ಕೆ ಕಾರಣವಾಗಲಿದೆ. ನಿಮ್ಮ ವಸ್ತುಗಳನ್ನು ಭದ್ರವಾಗಿಸಿರಿಕೊಳ್ಳಿ. ದಿನದಲ್ಲಿ ಆಗಬೇಕಾದ ಕಾರ್ಯಗಳನ್ನು ಸಿದ್ಧಮಾಡಿಕೊಳ್ಳಿ.
ಪ್ರಮುಖ ವ್ಯಕ್ತಿಗಳಿಗೆ ಕಿರಿಕಿರಿ ಮಾಡಬೇಡಿ. ಮನೆಯಲ್ಲಿಯೇ ಇದ್ದು ನೆಮ್ಮದಿ ಕಾಣುವಿರಿ. ಸಮಸ್ಯೆಗಳನ್ನು ನೀವು ಹಂಚಿಕೊಳ್ಳಲು ಹಿಂಜರಿಯುವಿರಿ. ನಿಮ್ಮ ಜೀವನದ ದಿನಚರಿಯನ್ನು ಬದಲು ಮಾಡಿಕೊಳ್ಳಿ. ದಾಂಪತ್ಯದಲ್ಲಿ ನಿಮಗೆ ವೈಮನಸ್ಯ ಉಂಟಾದರೂ ಸುಮ್ಮನಿದ್ದು, ಸರಿಯಾಗುವುದು.
ಮಕರ ರಾಶಿ: ಕಛೇರಿಯ ಕಾರ್ಯಗಳಲ್ಲಿ ಪ್ರಗತಿ ಕಂಡರೂ ಸ್ವಂತ ಕೆಲಸವನ್ನು ಮಾಡಲು ಸಮಯವನ್ನು ಕೊಡಲಾಗದು. ಕುಲದೇವರ ದರ್ಶನಕ್ಕೆ ಹೋಗುವ ಹಂಬಲವು ಉಂಟಾದೀತು. ಸಾಮಾಜಿಕ ಕಾರ್ಯದಲ್ಲಿ ಪ್ರಶಂಸೆ ಸಿಕ್ಕಿ ಸಂತೋಷವಾಗವುದು. ಇಂದು, ನಿಮ್ಮ ಒಡಹುಟ್ಟಿದವರು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಸಂಪರ್ಕಿಸಬಹುದು. ಬಹಳ ದಿನಗಳ ಅನಂತರ ಸ್ನೇಹಿತರ ಜೊತೆ ಪ್ರಯಾಣ ಹೊರಟಿರುವಿರಿ. ಈ ದಿನ ನಿಮ್ಮ ಆರೋಗ್ಯದ ಬಗ್ಗೆ ನೀವು ವಿಶೇಷ ಕಾಳಜಿ ವಹಿಸಬೇಕು ಮತ್ತು ಸಮತೋಲಿತ ದಿನಚರಿಯನ್ನು ಅನುಸರಿಸಿ. ಆಸ್ತಿಯ ವಿಚಾರದಲ್ಲಿ ಶತ್ರುಗಳಿಂದ ತೊಂದರೆ ಬಂದೀತು. ನೋವುಗಳನ್ನೇ ನೆನಪಿಸಿಕೊಳ್ಳುವುದರಲ್ಲಿ ಅರ್ಥವಿರದು. ನಿಮ್ಮ ಶತ್ರುಗಳಿಂದ ಸೃಷ್ಟಿಯಾಗುವ ಕೆಲವು ಸಣ್ಣ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಅಧಿಕಾರಿಗಳ ಜೊತೆ ವ್ಯವಹರಿಸುವಾಗ ನೀವು ಜಾಗರೂಕರಾಗಿರಬೇಕು ಮತ್ತು ಅವರನ್ನು ವಿರೋಧಿಸದೇ ಕಾರ್ಯವನ್ನು ಮಾಡಿಸಿಕೊಳ್ಳಿ.
ಕುಂಭ ರಾಶಿ: ಪರಮಾಪ್ತರಿಗೆ ಅಮೂಲ್ಯವಾದ ಉಡುಗೊರೆಯೊಂದನ್ನು ನೀಡುವಿರಿ. ಅಧಿಕಾರಿಗಳ ಮನಸ್ಸನ್ನು ಗೆಲ್ಲುವ ಪ್ರಯತ್ನ ಮಾಡುವಿರಿ. ಆರ್ಥಿಕ ಅಡೆತಡೆಗಳು ಇಂದು ಕುಟುಂಬ ವೈಷಮ್ಯಕ್ಕೆ ಕಾರಣವಾಗುವುದು. ಅಂತಹ ಸಂದರ್ಭಗಳಲ್ಲಿ, ಕುಟುಂಬದ ಸದಸ್ಯರ ಜೊತೆ ಮಾತನಾಡುವಾಗ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಉಳಿದ ಸಾಲವನ್ನು ತೀರಿಸುವಿರಿ. ದುರಭ್ಯಾಸಗಳು ನಿಮ್ಮ ಏಳಿಗೆಯನ್ನು ಕುಂಠಿತ ಮಾಡೀತು. ಹಣಕ್ಕಾಗಿ ಸ್ನೇಹಿತರಿಂದ ಕಿರಿಕಿರಿಯನ್ನು ಅನುಭವಿಸಬೇಕಾದೀತು. ಅತಿಯಾದ ಅನಾರೋಗ್ಯದಿಂದ ವೈದ್ಯರ ಸಲಹೆಯನ್ನು ಪಡೆಯಿರಿ. ಸಕಾರಾತ್ಮ ಆಲೋಚನೆಗಳಿಂದ ನೀವು ಸಂತೋಷವಾಗಿ ಇರುವಿರಿ. ಇನ್ನೊಬ್ಬರ ಅನವಶ್ಯಕ ವಿಚಾರಕ್ಕೆ ನೀವು ತಲೆ ಹಾಕಬೇಕಾಗಿಬರಬಹುದು. ತಂದೆಯಿಂದ ತಪ್ಪಿನ ಕೆಲಸಕ್ಕೆ ಬೈಗುಳ ಸಿಕ್ಕೀತು. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವ ಕೊಡುವಿರಿ. ಆಸ್ತಿಯ ಸಂರಕ್ಷಣೆಗೆ ಕಷ್ಟವಾದೀತು.
ಮೀನ ರಾಶಿ: ಕುಟುಂಬದಲ್ಲಿ ಆದ ಮನಸ್ತಾಪ ಇಂದಿನ ದಿನವನ್ನೇ ಹಾಳುಮಾಡುವುದು. ಆಕಸ್ಮಿಕವಾಗಿ ಹಣದ ವ್ಯಯವೂ ಆಗಲಿದ್ದು ಮನಸ್ಸಿಗೆ ಇನ್ನಷ್ಟು ನೋವನ್ನು ಕೊಟ್ಟೀತು. ನಿಮ್ಮ ದೈಹಿಕ ಚೈತನ್ಯವನ್ನು ಕಾಪಾಡಿಕೊಳ್ಳಲು ಕೆಲವು ಸಮಯವಲ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಿರಿ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಹಣಕಾಸಿನ ವಹಿವಾಟಿನ ಜೊತೆ ವ್ಯವಹರಿಸುವಾಗ ಜಾಗರೂಕತೆ ಇರಲಿ. ಆರೋಗ್ಯದಲ್ಲಿ ಜಾಗರೂಕತೆ ಅವಶ್ಯಕ. ದೂರಪ್ರಯಾಣಕ್ಕೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಿ. ನಿಮ್ಮ ವಿವಾಹವು ಮುಂದೆ ಮುಂದೆ ಹೋಗುವುದಕ್ಕೆ ಕಾರಣವನ್ನು ದೈವಜ್ಞರಿಂದ ಪಡೆಯಿರಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುವರು. ನೀವು ಆಡಿದ ಮಾತೇ ನಿಮಗೆ ಬೇರೆಯವರ ಮೂಲಕ ಬರಲಿದೆ. ಹಳೆಯ ವಾಹನದ ಮಾರಾಟದಿಂದ ನಿಮಗೆ ಆರ್ಥಿಕ ಲಾಭವು ಆಗುವುದು. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿ ಇರುವುದು. ನಾಯಕರಿಗೆ ಕೆಲವು ತೊಂದರೆಗಳು ಬರಬಹುದು.
-ಲೋಹಿತ ಹೆಬ್ಬಾರ್ – 8762924271 (what’s app only)