Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗ ನಷ್ಟದ ಭೀತಿ ಕಾಡಬಹುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 14 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗ ನಷ್ಟದ ಭೀತಿ ಕಾಡಬಹುದು
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: May 14, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಶೂಲ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ 15:40 ರಿಂದ 17:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:18 ರಿಂದ 10:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 14:05ರ ವರೆಗೆ.

ಮೇಷ ರಾಶಿ: ನಿಮಗೆ ಇಂದು ಅಪರೂಪದ ಸಂದರ್ಭಗಳು ಎದುರಾಗಬಹುದು. ಪ್ರೀತಿಯಿಂದ ಏನನ್ನೇ ಕೊಟ್ಟರೂ ಅದನ್ನು ಸ್ವೀಕರಿಸಿ.‌ ಅದರ ಬಗ್ಗೆ ಟೀಕೆಗಳನ್ನು ಮಾಡಿ ಭಾವನೆಗೆ ಹೊಡೆತ ಕೊಡುವುದು ಬೇಡ. ಅಂತ್ಯದ ವೇಳೆಗೆ ನೀವು ಹೊಸ ಹಣದ ಮೂಲವನ್ನು ಹೊಂದಿರಬಹುದು. ನಿಮಗಾಗಿ ಅತ್ಯಂತ ಹೊಂದಾಣಿಕೆಯ ಪಾಲುದಾರ ಎಂದು ಸಾಬೀತುಪಡಿಸುವ ಯಾರಾದರೂ ಈ ನಿಮ್ಮ ಜೀವನವನ್ನು ಪ್ರವೇಶಿಸುತ್ತಾರೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯಾಗಲಿದೆ. ಹಿರಿಯರಿಂದ ಆಶೀರ್ವಾದವನ್ನು ಪಡೆಯಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ. ಎಂತಹ ನೋವನ್ನು ಸಹಿಸುವ ಸಾಮರ್ಥ್ಯ ಇದೆ ಎಂದು ದುಸ್ಸಾಹಸಕ್ಕೆ ಹೋಗುವುದು ಬೇಡ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ಸ್ನೇಹಿತರ ವಿವಾಹ ಸಮಾರಂಭದಲ್ಲಿ ಖುದ್ದಾಗಿ ಭಾಗಿಯಾಗುವಿರಿ. ನಿಮ್ಮ ಅನುಪಸ್ಥಿತಿಯಲ್ಲಿ ಕಾರ್ಯಗಳು ಆಗುವುದು.

ವೃಷಭ ರಾಶಿ: ನೀವು ಇಂದು ಏಕಾಂತದಲ್ಲಿ ಸಮಯ ಕಳೆಯಲು ಇಚ್ಛಿಸುವಿರಿ. ನಿಮಗೆ ಆತ್ಮವಿಶ್ವಾಸವನ್ನು ಪಡೆಯಲು ಮತ್ತು ನಿಮ್ಮ ಆಲೋಚನೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ನೀವು ಸಣ್ಣ ಪ್ರವಾಸವನ್ನು ಸಹ ತೆಗೆದುಕೊಳ್ಳಬಹುದು. ಜೀವನ ಸಂಗಾತಿಯನ್ನು ಹುಡುಕುತ್ತಿರುವ. ನಕಾರಾತ್ಮಕ ಪರಿಣಾಮಗಳನ್ನು ತರುತ್ತದೆ, ಆದ್ದರಿಂದ ನೀವು ವಾರದ ಕೊನೆಯ ಭಾಗದಲ್ಲಿ ಆರೋಗ್ಯದ ವಿಷಯದಲ್ಲಿ ಹೆಚ್ಚು ಬಳಲುತ್ತೀರಿ. ಕುತೂಹಲದಿಂದ ಏನನ್ನಾದರೂ ಮಾಡಲು ಹೋಗಿ ತೊಂದರೆಗೆ ಸಿಕ್ಕಿಕೊಳ್ಳುವಿರಿ. ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಕೆಲವರು ನಿಮ್ಮ ದಾರಿ ತಪ್ಪಿಸಬಹುದು. ಮಿತ್ರರ ಸಹಾನುಭೂತಿಯು ನಿಮಗೆ ಉತ್ಸಾಹವನ್ನು ಕೊಡುವುದು. ಉತ್ತಮವಾದ ಒಂದು ಉಡುಗೊರೆ ನಿಮ್ಮ ಕೈ ಸೇರಬಹುದು.

ಮಿಥುನ ರಾಶಿ: ನೀವು ಎಲ್ಲದಕ್ಕೂ ಆದ್ಯತೆಗಳು ಮತ್ತು ವೇಳಾಪಟ್ಟಿಗಳನ್ನು ಹೊಂದಿಸಿಕೊಂಡು ಕಾರ್ಯವನ್ನು ಮಾಡಿ. ನೀವು ಮತ್ತು ನಿಮ್ಮ ಸಂಗಾತಿ ಉತ್ತಮ ಸಮಯವನ್ನು ಹೊಂದಿರುತ್ತೀರಿ. ವಿಶೇಷವಾಗಿ ನಿಮ್ಮ ಅಹಂಕಾರವನ್ನು ಬದಿಗಿಟ್ಟು ತಪ್ಪುಗಳಿಗೆ ಜವಾಬ್ದಾರರಾಗಿರುತ್ತೀರಿ. ನಿಮ್ಮ ನ್ಯೂನತೆಗಳನ್ನು ಒಪ್ಪಿಕೊಳ್ಳುವುದು ನಿಮ್ಮ ಗೌರವವನ್ನು ಹೆಚ್ಚಿಸುತ್ತದೆ. ನಿಮ್ಮ ಜೀವನ ಸಂಗಾತಿಯನ್ನು ಹುಡುಕಲು ಇಂದು ಅತ್ಯುತ್ತಮ ದಿನವಾಗಲಿದೆ. ಎಲ್ಲವೂ ಗೊತ್ತಿದ್ದರೂ ಏನೂ ಗೊತ್ತಿಲ್ಲದಂತೆ ಇರುವಿರಿ. ಸರ್ಕಾರಿ ಕೆಲಸವನ್ನು ಮಾಡಿಸಿಕೊಳ್ಳುವುದು ನಿಧಾನವಾಗಲಿದೆ. ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಹೊಸ ಪರಿಚಯವು ಅತಿಯಾಗಿ ಆಪ್ತವಾಗಬಹುದು. ಯಾರ ಜೊತೆಗೂ ನೇರವಾದ ಮಾತುಗಳನ್ನು ಆಡದೇ ಕುಹಕವಾಡುವಿರಿ.‌ ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ಹಿತಶತ್ರುಗಳು ನಿಮಗೆ ಗೊತ್ತಾಗದಂತೆ ಕೆಲಸವನ್ನು ಮಾಡುವರು.

ಕರ್ಕ ರಾಶಿ: ಇಂದು ಮನೆಯಲ್ಲಿ ಬಹಳ ಕೆಲಸಗಳಿದ್ದು, ಅವುಗಳನ್ನು ಪೂರ್ಣಗೊಳಿಸಲು ನಿರತರಾಗುವಿರಿ. ಅದು ನಿಮ್ಮನ್ನು ನಿಮ್ಮ ಕುಟುಂಬಕ್ಕೆ ಹತ್ತಿರ ತರುತ್ತದೆ. ನಿಮ್ಮ ಸಹೋದ್ಯೋಗಿಗಳು ಸಹ ನಿಮಗೆ ಒಳ್ಳೆಯ ಸುದ್ದಿಯನ್ನು ನೀಡುತ್ತಾರೆ. ನಿಮ್ಮ ನಡವಳಿಕೆಯ ಬಗ್ಗೆ ನೀವು ಭಯಭೀತರಾಗಬಹುದು. ಉದ್ಯೋಗ ನಷ್ಟದ ಭೀತಿಯು ಇರಬಹುದು. ಎಂದೋ ಪಡೆದ ಸಾಲದ ಮರುಪಾವತಿಯನ್ನು ಮಾಡಬೇಕಾಗಿಬರಬಹುದು. ನಿಮ್ಮನ್ನು ನಿಂದಿಸುವವರಿಗೆ ಉತ್ತರವನ್ನು ಕೊಡುವ ಯೋಚನೆಯಲ್ಲಿಯೇ ಇರುವಿರಿ. ಭೂಮಿಯ ಖರೀದಿಯನ್ನು ಏಕಮುಖವಾಗಿ ಮಾಡುವುದು ಬೇಡ. ಬರಬೇಕಾದ ಧನಾಗಮನದ ನಿರೀಕ್ಷೆಯಲ್ಲಿ ಇಂದು ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ. ಕೆಲಸದ ಸಮಯವು ವ್ಯತ್ಯಾಸವಾಗಿದ್ದು ನಿಮಗೆ ಹೊಂದಿಕೊಳ್ಳುವುದು ಕಷ್ಟವಾದೀತು. ಕಛೇರಿಯಲ್ಲಿ ನಿಮ್ಮ ಮೇಲೆ ಸಹಾನುಭೂತಿ ಇರಬಹುದು.

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ