Horoscope: ನಿತ್ಯ ಭವಿಷ್ಯ; ಅನ್ಯರ ಕುಮ್ಮಕ್ಕಿನಿಂದ ನ್ಯಾಯಾಲಯಕ್ಕೆ ಅಲೆದಾಡಬೇಕಾದೀತು ಎಚ್ಚರ!
ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 27 ಏಪ್ರಿಲ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಪರಿಘ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:22 ರಿಂದ 10:56 ರ ವರೆಗೆ, ಯಮಘಂಡ ಕಾಲ 14:05 ರಿಂದ 15:39 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:13 ರಿಂದ 07:47 ರ ವರೆಗೆ.
ಮೇಷ ರಾಶಿ: ನೀವು ಎಲ್ಲ ಕಾರ್ಯವನ್ನು ಪಾರದರ್ಶಕತೆಯಿಂದ ಇರಲು ಬಯಸುವಿರಿ. ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ. ಉತ್ತಮವಾದ ಮಾರ್ಗಾನ್ವೇಷಣೆಯಲ್ಲಿ ಇರಿ. ವೈದ್ಯರ ಬೇಟಿಯಿಂದಾಗಿ ನಮ್ಮ ಬಹುದಿನಗಳಿಂದ ಇದ್ದ ವ್ಯಾಧಿಯು ನಾಶವಾಗುವುದು. ನಿಮ್ಮ ಕೆಲಸದ ಪರಿಣತಿಯಿಂದ ಜವಾಬ್ದಾರಿಗಳು ಹೆಚ್ಚುವುದು. ಹಣದ ಹರಿವು ನಿಮ್ಮ ಉತ್ಸಾಹವನ್ನು ಕುಂಠಿತಗೊಳಿಸದು. ಹತ್ತಿರವಿದ್ದಾಗ ಮಾತ್ರ ಗೊತ್ತಾಗುತ್ತದೆ. ನಿಮ್ಮ ಯೋಗ್ಯತೆ ತಕ್ಕ ಕೆಲಸವು ಸಿಗಲಿದ್ದು ಇನ್ನೊಬ್ಬರನ್ನು ಹೋಲಿಕೆ ಮಾಡುತ್ತ ನಿಮ್ಮ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಯಾರಿಗೂ ಉಚಿತ ಸಲಹೆ ಬೇಡ.
ವೃಷಭ ರಾಶಿ: ಯಾರ ಮಾತನ್ನು ಒಪ್ಪಿದರೂ ನಿಮ್ಮ ಆಲೋಚನೆಯನ್ನು ಬದಲಾಯಿಸುವುದಿಲ್ಲ. ತಂದೆಯಿಂದ ಧನವು ವಿಳಂಬವಾಗಿ ಬರಬಹುದು. ಅನ್ಯರ ಕುಮ್ಮಕ್ಕಿನಿಂದ ನ್ಯಾಯಾಲಯದ ಅಲೆದಾಟವನ್ನು ಮಾಡಿ ಹಣವನ್ನು ವ್ಯರ್ಥಮಾಡಿಕೊಳ್ಳಬೇಡಿ. ಪೂರ್ವಪರಿಚಿತರು ನಿಮ್ಮ ಭೇಟಿ ಮಾಡಿಯಾರು. ದಿನಚರಿಯಲ್ಲಿ ಆದ ವ್ಯತ್ಯಾಸದಿಂದ ಆರೋಗ್ಯವು ಕೆಡಬಹುದು. ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ಸಿಟ್ಟನ್ನು ಅಲ್ಪ ಸಮಯದಲ್ಲಿ ಶಮನ ಮಾಡಿಕೊಂಡು ಯಥಾಸ್ಥಿತಿಗೆ ಬರುವಿರಿ. ಹಳೆಯದನ್ನು ಹೊಸತನ್ನಾಗಿ ಮಾಡವ ಬಗ್ಗೆ ಯೋಚಿಸುವಿರಿ. ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಆಹ್ವಾನ ಬರಬಹುದು. ವಿದ್ಯಾರ್ಥಿಗಳು ಕೌಶಲಕ್ಕೆ ಪ್ರಶಂಸೆ ಲಭ್ಯವಾಗುವುದು. ಸಹೋದರರ ನಡುವೆ ಸೌಹಾರ್ದತೆ ಇರಲಿದೆ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು.
ಮಿಥುನ ರಾಶಿ: ಇಂದು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬೇರಡ ಕಡೆ ಹೋಗುವುದು ಅನಿವಾರ್ಯ ಆಗಬಹುದು. ತಂದೆಯಿಂದ ಯಾವುದೋ ಕಾರ್ಯಕ್ಕೆ ಧನವನ್ನು ನಿರೀಕ್ಷಿಸುವಿರಿ. ನಿಮ್ಮ ವಿದ್ಯಾರ್ಥಿಗಳ ಶುಭವಾರ್ತೆಯಿಂದ ನಿಮಗೆ ಖುಷಿಯಾಗಲಿದೆ. ಸಾಮಾಜಿಕ ಕಾರ್ಯದಿಂದ ಗೌರವವನ್ನು ಪಡೆಯಲಿದ್ದೀರಿ. ಸಹೋದರ ನಡುವೆ ನಡೆಯುತ್ತಿದ್ದ ಶೀಲತಲ ಸಮರವು ಇಂದು ಸ್ಫೋಟವಾಗಬಹುದು. ಮಧ್ಯವರ್ತಿಗಳ ಸಹಾಯದಿಂದ ಶಾಂತವಾಗಲಿದೆ. ಧಾರ್ಮಿಕ ಕಾರ್ಯವನ್ನು ನಿರ್ಮಲ ಮನಸ್ಸಿನಿಂದ ಮಾಡುವಿರಿ. ಯಾರ ಜೊತೆಯೂ ಮಿತಿಮೀರಿದ ಸಲುಗೆ ಬೇಡ. ಆಪ್ತರು ನಿಮ್ಮನ್ನು ಬಿಡಬಹುದು. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ನಿಮ್ಮ ನೋವಿಗೆ ಯಾರಾದರೂ ಸ್ಪಂದಸುವರು. ಸಂಗಾತಿಯ ಖರ್ಚನ್ನು ನಿಭಾಯಿಸುವ ಜವಾಬ್ದಾರಿಯನ್ನು ನೀವೇ ಹೊರಬೇಕಾದೀತು.
ಕಟಕ ರಾಶಿ: ಇಂದು ನೀವು ಕಛೇರಿಯ ಕಾರಣಕ್ಕೆ ಪರ ಊರಿಗೆ ಹೋಗಬೇಕಾಗಿ ಬರಬಹುದು. ಹಸಿವಿನಿಂದ ನಿಮಗೆ ಇಂದು ಕಷ್ಟವಾಗುವುದು. ಫಲವನ್ನು ನಿರೀಕ್ಷಿಸದೇ ಕಾರ್ಯವನ್ನು ಮಾಡಿ. ಉತ್ತಮವಾದ ಫಲವೇ ನಿಮಗಾಗು ಕಾಯುತ್ತಿರುವುದು. ಕೃಷಿಯಲ್ಲಿ ನಿಮ್ಮ ಪ್ರಗತಿಯನ್ನು ಕಾಣಬಹುದಾಗಿದೆ. ವ್ಯಾಪರದಲ್ಲಿ ನಷ್ಟವನ್ನು ಅನುಭವಿಸಬೇಕಾಗಿಬರಬಹುದು. ವಿಘ್ನನಿವಾರಕನಿಗೆ ನಮಸಿ ಕಾರ್ಯವನ್ನು ಆರಂಭಿಸಿ. ವ್ಯಾವಹಾರಿಕ ಜಂಜಾಟವು ನಿಮ್ಮ ಉದ್ವೇಗಕ್ಕೆ ಕಾರಣವಾಗುವುದು. ನೀವು ಇಂದು ಯಾವುದೇ ಅಪೇಕ್ಷೆ ಇಲ್ಲದೇ ಕೆಲಸವನ್ನು ಮಾಡಲಾರಿರಿ. ಸ್ಥಿರಾಸ್ತಿಯ ಭಾಗವನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. ರಾಜಕೀಯ ವ್ಯಕ್ತಿಗಳಿಗೆ ಜನಮನ್ನಣೆಯು ಹೆಚ್ಚಾಗುವುದು. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು. ಕೆಲವು ವಿಚಾರಗಳಲ್ಲಿ ಕುತೂಹಲವು ಇರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ತಲೆದೋರಬಹುದು.




