AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿಮ್ಮದಲ್ಲದ ತಪ್ಪಿಗೂ ನೀವು ಕ್ಷಮೆ ಕೇಳಬೇಕಾಗುವುದು, ಅತಿಯಾದ ಅನಾರೋಗ್ಯ ಕಾಡಲಿದೆ

ಅಕ್ಟೋಬರ್ 08,​ 2024: ನಿಮ್ಮ ವಿವಾಹವು ಮುಂದೆ ಮಂದೆ ಹೋಗುವುದಕ್ಕೆ ಕಾರಣವನ್ನು ದೈಜ್ಞರಿಂದ ಪಡೆಯಿರಿ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಓದು ಅಸಮಾಧಾನ ತರಿಸಬಹುದು. ‌ಪ್ರಶಾಂತ ವಾತಾವರಣವನ್ನು ಹುಡುಕುವಿರಿ. ಹಾಗಾದರೆ ಅಕ್ಟೋಬರ್ 08ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ನಿಮ್ಮದಲ್ಲದ ತಪ್ಪಿಗೂ ನೀವು ಕ್ಷಮೆ ಕೇಳಬೇಕಾಗುವುದು, ಅತಿಯಾದ ಅನಾರೋಗ್ಯ ಕಾಡಲಿದೆ
ನಿಮ್ಮದಲ್ಲದ ತಪ್ಪಿಗೂ ನೀವು ಕ್ಷಮೆ ಕೇಳಬೇಕಾಗುವುದು, ಅತಿಯಾದ ಅನಾರೋಗ್ಯ ಕಾಡಲಿದೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 08, 2024 | 12:05 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಸೌಭಾಗ್ಯ​, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:18 ರಿಂದ 04:47, ಯಮಘಂಡ ಕಾಲ ಬೆಳಗ್ಗೆ 09:22ರಿಂದ 10:51ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:20 ರಿಂದ 01:49 ರವರೆಗೆ.

ಮೇಷ ರಾಶಿ: ಉದ್ವೇಗದಿಂದ ಅನರ್ಥವು ನಡೆಯುವ ಸಾಧ್ಯತೆ ಇದೆ. ಆರ್ಥಿಕ ಉಳಿತಾಯವನ್ನು ಅನ್ಯರಿಂದ ಕೇಳಿ ಪಡೆಯುವುದು ಉಚಿತ. ನಿಮ್ಮ ವಿವಾಹವು ಮುಂದೆ ಮಂದೆ ಹೋಗುವುದಕ್ಕೆ ಕಾರಣವನ್ನು ದೈಜ್ಞರಿಂದ ಪಡೆಯಿರಿ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಓದು ಅಸಮಾಧಾನ ತರಿಸಬಹುದು. ‌ಪ್ರಶಾಂತ ವಾತಾವರಣವನ್ನು ಹುಡುಕುವಿರಿ. ನಿಮ್ಮ ಮಾತೇ ನಿಮಗೆ ಬೇರೆಯವರ ಮೂಲಕ ಬರಬಹುದು. ನಿಮ್ಮಿಂದ ಅತಿಥಿಗಳಿಗೆ ಸಂತೋಷವಾಗಬಹುದು.‌ ಹೊಸ ವಾಹನದ ಖರೀದಿಗೆ ಹಣವನ್ನು ಖರ್ಚು ಮಾಡಬೇಕಾದೀತು‌. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿ ಇರುವುದು. ಸಂಗಾತಿಯ ದೂರನ್ನು ಸರಿಯಾಗಿ ತಿಳಿಯುವಿರಿ. ಕೆಟ್ಟ ದೃಷ್ಟಿಯಿಂದ ಆರೋಗ್ಯ ಕೆಡುವುದು. ರಾಜಕಾರಣದ ಸ್ಪರ್ಶದಿಂದ ನಿಮ್ಮ ವ್ಯವಹಾರಕ್ಕೆ ಹೊಸ ದಿಕ್ಕನ್ನು ಸಿಗಬಹುದು. ಹಳೆಯ ವಸ್ತುಗಳನ್ನು ಹೊಸದಾಗಿ ಮಾಡಿಕೊಂಡು ಉಪಯೋಗಿಸುವಿರಿ.

ವೃಷಭ ರಾಶಿ: ನಿಮ್ಮದಲ್ಲದ ತಪ್ಪಿಗೂ ನೀವು ಕ್ಷಮೆಯನ್ನು ಕೇಳಬೇಕಾಗುವುದು. ವ್ಯವಹಾರದ ಮೋಸವನ್ನು ನೀವು ಸಹಿಸಲಾರಿರಿ. ಉಳಿದಿದ್ದ ಎಲ್ಲ ಸಾಲವನ್ನೂ ತೀರಿಸುವಿರಿ. ಬೆನ್ನು ನೋವು ನಿಮ್ಮನ್ನು ಕಾಡಬಹುದು. ಸಹೋದರನ ಅಸಹಕಾರವು ನಿಮಗೆ ಹಿಂಸೆಯನ್ನು ಕೊಡುವುದು. ಅತಿಯಾದ ಅನಾರೋಗ್ಯವು ಉಂಟಾದರೆ ವೈದ್ಯರ ಸಲಹೆಯನ್ನು ಪಡೆಯಿರಿ. ಸಕಾರಾತ್ಮ ಆಲೋಚನೆಗಳೇ ನಿಮ್ಮನ್ನು ಸಂತೋಷವಾಗಿ ಇಡುವುದು. ಇನ್ನೊಬ್ಬರ ಅನವಶ್ಯಕ ವಿಚಾರಕ್ಕೆ ನೀವು ಸಲಹೆಗಾರರಾಗುವುದು ಬೇಡ. ಉದ್ಯೋಗದ ಸ್ಥಾನದಲ್ಲಿ ನಿಮಗೆ ಸೂಕ್ತ ಸಲಹೆಯನ್ನು ಅನುಸರಿಸಿ. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವವನ್ನು ಕೊಡುವಿರಿ. ಆಸ್ತಿಯ ರಕ್ಷಣೆಯನ್ನು ಮಾಡುವುದು ನಿಮಗೆ ಬಹಳ ಕ್ಲಿಷ್ಟ ಎನಿಸಬಹುದು. ಮಧ್ಯಗತಿಯಲ್ಲಿ ಇರುವ ಆರ್ಥಿಕತೆಯನ್ನು ಬಲಗೊಳಿಸುವ ಪ್ರಯತ್ನವು ನಡೆಯುವುದು. ನೌಕರರ ನಿರ್ಲಕ್ಷ್ಯದಿಂದ ಆಗುವ ಹೊಣೆಯನ್ನೂ ಹೊರಬೇಕಾಗುವುದು. ನಿಯಮಿತ ಸಮಯವನ್ನು ನೀವು ಸರಿಯಾಗಿ ಬಳಸಿಕೊಳ್ಳಿ.

ಮಿಥುನ ರಾಶಿ: ನಿಮ್ಮ ಪ್ರಧಾನಕಾರ್ಯಕ್ಕಿಂತ ಅಪ್ರಧಾನದಿಂದ ಆದಾಯವು ಅಧಿಕವಾಗಿ ಸಿಗುವುದು. ನಿಮ್ಮ ಪ್ರಭಾವವು ಎಲ್ಲರಿಗೂ ತಿಳಿಯಬಹುದು. ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿಯಾಗಲಿದೆ. ತಂದೆಯ ಸೇವೆಯನ್ನು ಮಾಡುವ ಮನಸ್ಸು ಆಗಲಿದೆ. ಬೇರೆಯವರ ಮಾತನ್ನು ಪೂರ್ಣವಾಗಿ ನಂಬಲು ನಿಮಗೆ ಇಷ್ಟವಾಗುವುದು. ನಿಮಗೆ ಮಕ್ಕಳಿಂದ ಹೆಚ್ಚಿನ ಸಂತೋಷವು ನಿಮಗೆ ಸಿಗಲಿದೆ. ದುಶ್ಚಟಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಸ್ವಾಭಿಮಾನವು ನಿಮಗೆ ಕೈ ಕಟ್ಟಿದಂತೆ ಆಗುವುದು. ನಿಮ್ಮ ಗಮನವನ್ನು ಬೇರೆ ಕಡೆ ಸೆಳೆದು ವಂಚಿಸಬಹುದು. ಯಾರನ್ನೂ ನಿರಾಸೆಗೊಳಿಸದೇ ನಗುಮೊಗದಿಂದ ಮಾತನಾಡಿ. ಲಾಭಕ್ಕಾಗಿ ಎಂದು ಗೊತ್ತಿಲ್ಲದ ಕೆಲಸಕ್ಕೆ ಕೈ ಹಾಕಿ ಸುಟ್ಟುಕೊಳ್ಳಬೇಕಾದೀತು. ಸಾವಧಾನತೆಯಿಂದ ಇದ್ದರೆ ನಿಮಗೆ ಶುಭವಾಗುವುದು. ನಿಮ್ಮ ಮಾತು ಕೋಪವನ್ನು ತರಿಸಬಹುದು. ನಿಮ್ಮಲ್ಲಿರುವ ನ್ಯೂನತೆಗಳನ್ನು ನೀವೇ ತಿಳಿದು ಸರಿಪಡಿಸಿಕೊಳ್ಳಿ. ನೀವು ಇಂದು ಇನ್ನೊಬ್ಬರು ಹೇಳುವ ತನಕ ಕಾರ್ಯವನ್ನು ಮಾಡಲು ಕಾಯುವುದು ಬೇಡ‌.

ಕರ್ಕಾಟಕ ರಾಶಿ: ನಿಮ್ಮ ಮಿತಿಯಲ್ಲಿ ಬಯಕೆಯು ಇರಲಿ. ವೃತ್ತಿಯಲ್ಲಿ ಮೇಲೇರಿದ ಅನುಭವ ಆಗಬಹುದು.‌ ಮನೆಯಲ್ಲಿಯೇ ಇದ್ದು ನಿರುಮ್ಮಳವಾಗಿ ಇರುಲಿರುವಿರಿ. ಸಮಸ್ಯೆಗಳನ್ನು ನೀವು ಹಂಚಿಕೊಳ್ಳಲು ಹಿಂಜರಿಯುವಿರಿ. ಬಂಧುಗಳ ವಿಯೋಗವಾಗಬಹುದು. ನಿಮ್ಮ ಜೀವನದ ದಿನಚರಿಯನ್ನು ಬದಲು ಮಾಡಿಕೊಳ್ಳಲು ಇಷ್ಟಪಡುವಿರಿ. ಇಂದು ಯಾವ ಕಾರ್ಯವನ್ನು ಮೊದಲು ಮಾಡಬೇಕು ಎಂಬ ಯೋಜನೆಯನ್ನು ಇಟ್ಟುಕೊಳ್ಳುವಿರಿ. ದಾಂಪತ್ಯದಲ್ಲಿ ನಿಮಗೆ ವೈಮನಸ್ಯ ಉಂಟಾದರೂ ಅದು ಸರಿಮಾಡಿಕೊಳ್ಳುವಿರಿ. ಯಾರಿಗಾದರೂ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಕ್ಕಿಕೊಳ್ಳಬಹುದು. ಇಂದು ನಿಮ್ಮ ಮನಸ್ಸು ಉಲ್ಲಾಸದಿಂದ ಇರಲಿದೆ. ನಿಮ್ಮನ್ನೇ ನೀವು ಪರೀಕ್ಷಿಸಿಕೊಳ್ಳಬೇಕಾಗಬಹುದು. ನಿಮ್ಮ ಯೋಚನೆಯನ್ನು ಬಲಿಷ್ಠವಾಗಿದ್ದರೂ ಅದನ್ನು ಕ್ರಿಯಾರೂಪಕ್ಕೆ ತರುವುದು ಕಷ್ಟವಾದೀತು. ಯಾವುದೇ ರೀತಿಯ ವ್ಯವಹಾರಕ್ಕೆ ನಿಮ್ಮ ಕೆಲಸದ ಗುಣಮಟ್ಟಕ್ಕೆ ಹೆಚ್ಚಿನ ಗಮನ ಬೇಕಾಗುತ್ತದೆ. ಶುದ್ಧವಾದ ಬಟ್ಟೆಗೆ ಸಣ್ಣ ಕಲೆಯೂ ದೊಡ್ಡದು.

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು