Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ
ಜನ್ಮಸಂಖ್ಯೆ 4, 5, 6 ರ ಜನವರಿ 24ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4 ರವರಿಗೆ ಆರೋಪಗಳು, ಆರ್ಥಿಕ ಚಿಂತೆ ಎದುರಾಗಬಹುದು. 5 ರವರಿಗೆ ತಂದೆ-ತಾಯಿಯ ಆಶೀರ್ವಾದದಿಂದ ಯಶಸ್ಸು, ನಾಯಕತ್ವದ ಅವಕಾಶಗಳು ದೊರೆಯಲಿವೆ. 6 ರವರಿಗೆ ಬ್ಯಾಂಕ್ ವ್ಯವಹಾರ, ಹಣಕಾಸು ಸಮಸ್ಯೆ ಕಾಡಲಿದ್ದು, ಯಾವುದೇ ಒತ್ತಡಕ್ಕೆ ಮಣಿದು ನಿರ್ಧಾರ ಕೈಗೊಳ್ಳಬೇಡಿ ಎಂದು ಸಂಖ್ಯಾಶಾಸ್ತ್ರ ಭವಿಷ್ಯ ಹೇಳುತ್ತದೆ.

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ಎಲ್ಲರನ್ನೂ ನೀವು ಸಮಾನವಾಗಿ ಕಾಣುತ್ತಿಲ್ಲ ಎಂಬ ಆರೋಪವನ್ನು ಹೊತ್ತಿಕೊಳ್ಳಬೇಕಾಗುತ್ತದೆ. ನೀವು ನೀಡುವ ಯಾವ ಸಮಜಾಯಿಷಿಯನ್ನೂ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇತರರು ಇರುವುದಿಲ್ಲ. ಈ ಹಿಂದೆ ಯಾವಾಗಲೋ ನೀವಾಡಿದ ಮಾತು, ನಡೆದುಕೊಂಡ ರೀತಿಯನ್ನು ಉದಾಹರಿಸಿ, ನಿಮ್ಮನ್ನು ನಿಂದಿಸುತ್ತಾರೆ. ನೀವು ಯಾರನ್ನು ನೆರವಿಗೆ ಬರಬಹುದು ಎಂದು ಭಾವಿಸಿರುತ್ತೀರೋ ಅವರು ಸಹ ನಿಮ್ಮ ಸಹಾಯಕ್ಕೆ ಬರುವುದಕ್ಕೆ ಆಗಲ್ಲ. ಸಂಬಂಧಿಕರು ನಿಮ್ಮ ಆರ್ಥಿಕ ಪರಿಸ್ಥಿತಿ ಬಗ್ಗೆ ಹೀಗಳೆದರೆ ಅದನ್ನು ಗಂಭೀರವಾಗಿ ಪರಿಗಣಿಸದೇ ಇರುವುದು ಉತ್ತಮ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ತಂದೆ- ತಾಯಿಯ ಆಶೀರ್ವಾದ ನಿಮ್ಮ ಮೇಲೆ ಅತ್ಯುತ್ತಮವಾಗಿ ಇರಲಿದೆ. ಬಾಹ್ಯದಿಂದ ನಿಮ್ಮ ಮೇಲೆ ಒತ್ತಡ ಬಂದರೂ ಅದನ್ನು ಯಶಸ್ವಿಯಾಗಿ ನಿರ್ವಹಿಸಲಿದ್ದೀರಿ. ಸ್ತ್ರೀಶಕ್ತಿ ಸಂಘಗಳಲ್ಲಿ ಇರುವಂಥವರಿಗೆ ನಾಯಕತ್ವ ವಹಿಸುವಂಥ ಅವಕಾಶಗಳಿವೆ. ಮನೆಗೆ ಅಲಂಕಾರಿಕ ವಸ್ತುಗಳನ್ನು ಖರೀದಿಸುವಂಥ ಯೋಗ ನಿಮ್ಮ ಪಾಲಿಗೆ ಇದೆ. ಕರ್ಟನ್ ಮೊದಲಾದ ವಸ್ತುಗಳಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ಹೊಸ ಜವಾಬ್ದಾರಿಗಳನ್ನು ಧೈರ್ಯವಾಗಿ ವಹಿಸಿಕೊಳ್ಳಿ. ದೀರ್ಘಾವಧಿಯಲ್ಲಿ ಅನುಕೂಲ ಆಗಲಿದೆ.
ಇದನ್ನೂ ಓದಿ: ಜನವರಿ 25 ರಂದು ಕೇತು ಸಂಚಾರ; ಈ ಮೂರು ರಾಶಿಗೆ ಅದೃಷ್ಟವೋ ಅದೃಷ್ಟ
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಬ್ಯಾಂಕ್ ವ್ಯವಹಾರಗಳನ್ನು ಮಾಡುವಾಗ ಅತಿಯಾದ ನಿರೀಕ್ಷೆ ಇಟ್ಟುಕೊಂಡು ಮುಂದುವರಿದಲ್ಲಿ ಅಂದುಕೊಂಡಂತೆ ಕೆಲಸ ಆಗದೆ ಬೇಸರಕ್ಕೆ ಕಾರಣ ಆಗಲಿದೆ. ಈಗಾಗಲೇ ಮನೆ ನಿರ್ಮಾಣ ಮಾಡುತ್ತಿದ್ದೀರಿ, ಅದಕ್ಕೆ ಹಣಕಾಸಿನ ಸಮಸ್ಯೆ ಆಗಿದೆ ಎಂದಾದಲ್ಲಿ ಅದು ಉಲ್ಬಣ ಆಗಲಿದೆ. ಸ್ನೇಹಿತರು ಅಥವಾ ಸಂಬಂಧಿಕರು ಅಥವಾ ನೀವು ಬಹಳ ಗೌರವಿಸುವಂಥ ವ್ಯಕ್ತಿಗಳು ಒತ್ತಡ ತಂದರು ಎಂಬ ಕಾರಣಕ್ಕಾಗಿ ಯಾವುದೇ ಕೆಲಸವನ್ನು ಒಪ್ಪಿಕೊಳ್ಳುವುದಕ್ಕೆ ಹೋಗಬೇಡಿ. ನಿಮಗೇ ಸರಿ ಎಂದು ಅನಿಸುವ ತನಕ ಯಾವ ಹೊಸ ಪ್ರಾಜೆಕ್ಟ್ ಒಪ್ಪಿಕೊಳ್ಳದಿರಿ.
ಲೇಖನ- ಸ್ವಾತಿ ಎನ್.ಕೆ.
ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
