Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 27ರ ದಿನಭವಿಷ್ಯ

ಜನವರಿ 27ಕ್ಕೆ ಜನ್ಮಸಂಖ್ಯೆ 4, 5, 6ರ ದೈನಂದಿನ ಸಂಖ್ಯಾಶಾಸ್ತ್ರ ಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4ರವರು ಖರ್ಚು ಹೆಚ್ಚಾದರೂ, ಹಳೆಯ ಸಂಪರ್ಕಗಳಿಂದ ಲಾಭ ಪಡೆಯುವರು. 5ರವರು ಹಣಕಾಸಿನ ಬದಲಾವಣೆ, ಬಾಕಿ ವಸೂಲಿ ನಿರೀಕ್ಷಿಸಬಹುದು. 6ರವರು ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಸ್ಥಿರತೆಗೆ ಒತ್ತು ನೀಡಬೇಕು, ಹೊಸ ಸಾಲ ತಪ್ಪಿಸಬೇಕು.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 27ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
Edited By:

Updated on: Jan 27, 2026 | 3:00 PM

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈ ದಿನ ಖರ್ಚಿನ ವಿಚಾರವೇ ಹೆಚ್ಚು ಯೋಚನೆಗೆ ಕಾರಣ ಆಗುತ್ತದೆ. ಕೆಲವು ಅನಿವಾರ್ಯ ವೆಚ್ಚಗಳನ್ನು ತಪ್ಪಿಸಲು ಸಾಧ್ಯವೇ ಆಗುವುದಿಲ್ಲ. ಉದ್ಯೋಗ ಅಥವಾ ವ್ಯವಹಾರದಲ್ಲಿ ನಿಮ್ಮ ಸಲಹೆಗೆ ಮೌಲ್ಯ ಸಿಗುತ್ತದೆ, ಆದರೆ ತಕ್ಷಣ ಫಲವನ್ನು ನಿರೀಕ್ಷಿಸಬೇಡಿ. ಹಳೆಯ ಸಂಪರ್ಕಗಳು ನಿಮಗೆ ಸಹಾಯ ಮಾಡಬಹುದು. ಈ ಹಿಂದೆ ನಿಮ್ಮ ಜೊತೆಗೆ ಕೆಲಸ ಮಾಡಿದ್ದಂಥ ವ್ಯಕ್ತಿಗಳೇ ಕೆಲವು ಆಕರ್ಷಕ ಆಫರ್ ಗಳನ್ನು ತರಲಿದ್ದಾರೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಈ ದಿನ ನಿಮ್ಮ ಮನಸ್ಥಿತಿ ಹೇಗಿರುತ್ತದೋ ಅದು ನೀವು ಮಾಡುವ ಕೆಲಸದ ಮೇಲೆ ಪ್ರಭಾವ ಬೀರುತ್ತದೆ. ಒಂದು ವೇಳೆ ಬೇಡ ಎನಿಸಿ, ನಿಮ್ಮ ಮನಸ್ಸು ಒಪ್ಪದ ಕೆಲಸಗಳನ್ನೂ ಮಾಡಬೇಕಾದ ಅನಿವಾರ್ಯ ಎದುರಾಗಲಿದೆ. ವ್ಯಾಪಾರ- ವ್ಯವಹಾರಕ್ಕೆ ಸಂಬಂಧಿಸಿದಂತೆ ಬರಬೇಕಾದ ಹಣಕಾಸಿನ ವಿಷಯದಲ್ಲಿ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಬಹುದು. ಒಂದು ವೇಳೆ ಬಾಕಿ ಹಣ ವಸೂಲಿಗೆ ಪ್ರಯತ್ನವನ್ನು ಪಟ್ಟರೆ ಫಲ ಸಿಗಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಲಹೆ ಹಾಗೂ ಅನುಭವದ ಮಾತುಗಳನ್ನು ಕೇಳಿಸಿಕೊಳ್ಳುವುದರಿಂದ ಉಪಯುಕ್ತವಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ಕೆಲಸದ ವಿಚಾರದಲ್ಲಿ ನೀವು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲೇ ಬೇಕು ಎಂಬ ಬೇಸಂದರ್ಭ ಬರುತ್ತದೆ. ಮುಂದೂಡುತ್ತಾ ಬಂದಿದ್ದ ಕೆಲವು ಜವಾಬ್ದಾರಿಗಳನ್ನು ಇಂದೇ ಮುಗಿಸಬೇಕಾಗುತ್ತದೆ. ಗಡುವಿನೊಳಗೆ ಉತ್ತರ ಹೇಳಬೇಕಾದ ಸಂಗತಿಗಳನ್ನು ಆದ್ಯತೆ ಮೇಲೆ ಮಾಡುತ್ತಾ ಬನ್ನಿ. ಇನ್ನು ವ್ಯವಹಾರದ ವಿಷಯಕ್ಕೆ ಬಂದಲ್ಲಿ ಲಾಭಕ್ಕಿಂತ ಸ್ಥಿರತೆ ಮುಖ್ಯವಾಗುತ್ತದೆ. ಹೊಸ ಸಾಲ ಅಥವಾ ಹೂಡಿಕೆ ನಿರ್ಧಾರವನ್ನು ಈ ದಿನದ ಮಟ್ಟಿಗೆ ಕೈ ಬಿಡುವುದು ಒಳಿತು.

ಲೇಖನ- ಸ್ವಾತಿ ಎನ್.ಕೆ.

Published On - 2:48 am, Tue, 27 January 26