AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 27ರ ದಿನಭವಿಷ್ಯ

ಜನವರಿ 27ರಂದು ಜನ್ಮಸಂಖ್ಯೆ 1, 2, 3ರ ಜನರಿಗೆ ಸಂಖ್ಯಾಶಾಸ್ತ್ರದ ಪ್ರಕಾರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ರವರು ಮನೆಯ ಖರ್ಚು, ಸಂಬಂಧಗಳ ಬಗ್ಗೆ ಗಮನ ಕೊಡಿ; 2ರವರು ಹೊಸ ಅವಕಾಶಗಳನ್ನು ಎಚ್ಚರಿಕೆಯಿಂದ ನೋಡಿ, ಖರ್ಚು ನಿಯಂತ್ರಿಸಿ; 3ರವರು ತಾಳ್ಮೆಯಿಂದಿರಿ, ಕೋಪದಿಂದ ದೂರವಿರಿ. ಹಣಕಾಸು ಹಾಗೂ ಉದ್ಯೋಗದಲ್ಲಿ ಲಾಭದ ಸಾಧ್ಯತೆಯಿದ್ದು, ಪ್ರವಾಸದ ಬಗ್ಗೆ ಎಚ್ಚರಿಕೆ ಇರಲಿ. ನಿಮ್ಮ ಜನ್ಮಸಂಖ್ಯೆ ಪ್ರಕಾರ ಇಂದಿನ ಶುಭ-ಅಶುಭ ಫಲಗಳನ್ನು ತಿಳಿಯಿರಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 27ರ ದಿನಭವಿಷ್ಯ
ಸಾಂದರ್ಭಿಕ ಚಿತ್ರ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Jan 27, 2026 | 2:36 AM

Share

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಈ ದಿನ ಮನೆ ಮತ್ತು ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳು ಮುಖ್ಯ ಸ್ಥಾನ ಪಡೆದುಕೊಳ್ಳುತ್ತವೆ. ಮನೆ ಖರ್ಚು, ಅಲಂಕಾರ ಅಥವಾ ದುರಸ್ತಿ ಬಗ್ಗೆ ಚರ್ಚೆ ನಡೆಯಬಹುದು. ದಿನಸಿ ಪದಾರ್ಥಗಳ ಖರೀದಿಯಲ್ಲಿ ಖರ್ಚು ಹೆಚ್ಚಾಗಲಿದೆ. ಸಾವಯವ ಉತ್ಪನ್ನಗಳ ಖರೀದಿಗಾಗಿಯೋ ಅಥವಾ ಒಣಹಣ್ಣುಗಳ ಖರೀದಿಗೋ ಹೆಚ್ಚು ಖರ್ಚು ಬರಲಿದೆ. ಇನ್ನು ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ. ಭಾವುಕತೆಗೆ ಒಳಗಾಗಿ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ. ಸಂಬಂಧಗಳಲ್ಲಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಯುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಇಡೀ ದಿನ ಒಂದಲ್ಲಾ ಒಂದು ಚಟುವಟಿಕೆಯಲ್ಲಿ ಬಿಡುವಿಲ್ಲದಷ್ಟು ಕೆಲಸಗಳಲ್ಲಿ ತೊಡಗಿರುತ್ತೀರಿ. ಫೋನ್ ಕರೆಗಳು, ಸಂದೇಶಗಳು, ಭೇಟಿಗಳು ಜಾಸ್ತಿ ಆಗುತ್ತವೆ. ಉದ್ಯೋಗ ಅಥವಾ ವ್ಯವಹಾರದಲ್ಲಿ ಹೊಸ ಅವಕಾಶದ ಮಾತು ಬರಬಹುದು, ಆದರೆ ತಕ್ಷಣ ಒಪ್ಪಿಕೊಳ್ಳಬೇಡಿ. ಪ್ರಭಾವಿಗಳ ಸಂಪರ್ಕದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇನ್ನು ಒಂದು ಕಡೆ ಹಣ ಬರುತ್ತದೆ, ಆದರೆ ಖರ್ಚು ಸಹ ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣ ಮಾಡುವಾಗ ಸಮಯ ಮತ್ತು ಹಣ ಎರಡಕ್ಕೂ ಲೆಕ್ಕವಿರಲಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಪ್ರಯಾಣದಲ್ಲಿ, ಉದ್ಯೋಗಕ್ಕೆ ಸಂಬಂಧಿಸಿದ ವಿಚಾರದಲ್ಲಿ ಏಕಾಏಕಿ ಸಿಟ್ಟು ಹೊರ ಹಾಕುವುದಕ್ಕೆ ಹೋಗಬೇಡಿ. ಈ ದಿನ ತಾಳ್ಮೆ ಬಹಳ ಅಗತ್ಯ. ಸರ್ಕಾರಿ ಕೆಲಸ, ದಾಖಲೆ ಅಥವಾ ಬ್ಯಾಂಕ್ ಸಂಬಂಧಿಸಿದ ವಿಚಾರಗಳಲ್ಲಿ ವಿಳಂಬ ಆಗಬಹುದು. ಹಣಕಾಸಿನ ವಿಷಯದಲ್ಲಿ ಸಣ್ಣ ಲಾಭದ ಸೂಚನೆ ಇದ್ದರೂ ಅದನ್ನು ಎಲ್ಲರಿಗೂ ಹೇಳಿಕೊಳ್ಳಬೇಡಿ. ನಿಮ್ಮಲ್ಲಿ ಕೆಲವರು ಚಿನ್ನ- ಬೆಳ್ಳಿ ಇತರ ಬೆಲೆ ಬಾಳುವ ಲೋಹದಲ್ಲಿ ಹೂಡಿಕೆ ಮಾಡುವುದಕ್ಕೆ ಆಲೋಚನೆ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Follow Us
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ