
ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ. ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಪ್ರಮುಖವಾದ ಪ್ರಾಜೆಕ್ಟ್ ಒಂದನ್ನು ನಿಮಗೆ ವಹಿಸುವ ಸಾಧ್ಯತೆಯೂ ಇದೆ.
ಏಕಾಂಗಿತನ ಈ ದಿನ ನಿಮ್ಮನ್ನು ಕಾಡಲಿದೆ. ಕುಟುಂಬ ಸದಸ್ಯರು, ಸ್ನೇಹಿತರು, ಕೊನೆಗೆ ಸಹೋದ್ಯೋಗಿಗಳ ಸಹ ತಂತಮ್ಮ ಕೆಲಸದಲ್ಲಿ ಮುಳುಗಿ ಹೋಗುವುದರಿಂದ ಇಂಥದ್ದೊಂದು ಭಾವನೆ ನಿಮ್ಮಲ್ಲಿ ಹುಟ್ಟಿಕೊಳ್ಳಲಿದೆ. ಉದ್ಯೋಗ, ವೃತ್ತಿ- ವ್ಯಾಪಾರ ಹೀಗೆ ಯಾವುದೇ ವಿಚಾರದಲ್ಲಿಯೇ ಆಗಿರಲಿ, ಭೇಟಿ ಆಗಬೇಕು ಎಂದು ಸಮಯ ಕೇಳಿ, ಅದರ ಅಗತ್ಯವನ್ನು ಒತ್ತಿ ಹೇಳಿದ ನಂತರವೂ ಕೊನೆ ಕ್ಷಣದಲ್ಲಿ ನಿಮ್ಮನ್ನು ಇವತ್ತು ಕಾಣಲಿಕ್ಕೆ ಆಗಲ್ಲ ಎಂದು ವ್ಯಕ್ತಿಯೊಬ್ಬರು ಹೇಳಲಿದ್ದಾರೆ. ಇದರಿಂದ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಕುಗ್ಗುವಂತೆ ಆಗಲಿದೆ.
ಆಗಲಿ, ಮಾಡಿಕೊಡುತ್ತೇನೆ ಎಂದು ನೀವಾಗಿಯೇ ಭರವಸೆ ನೀಡಿದ್ದ ಕೆಲವು ಕಾರ್ಯಗಳನ್ನು ಅಂದುಕೊಂಡ ಸಮಯದ ಒಳಗಾಗಿ ಪೂರ್ಣ ಮಾಡುವುದು ಅಸಾಧ್ಯ ಎಂಬುದು ಖಚಿತ ಆಗಲಿದೆ. ಆದರೆ ಈ ವಿಚಾರವನ್ನು ಹೇಗೆ ಹೇಳುವುದು ಎಂಬುದು ಇಕ್ಕಟ್ಟಿಗೆ ಸಿಲುಕಿಸಲಿದೆ. ಆರ್ಥಿಕ ವಿಚಾರಗಳಿಗೆ ಅಭದ್ರತೆ ಭಾವವೊಂದು ನಿಮ್ಮನ್ನು ಮುತ್ತಿಕೊಳ್ಳಲಿದೆ. ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು.
ಲೇಖನ- ಸ್ವಾತಿ ಎನ್.ಕೆ.