AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮಗೆ ಸಹಾಯಕವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 25ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 25, 2026 | 12:30 AM

Share

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ಒಂದೊಳ್ಳೆ ಸಮಯ ದೊರೆಯಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಕುಟುಂಬದಲ್ಲಿ ಸಾಮರಸ್ಯ ಇರುತ್ತದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆಯೇ ಇತರ ಸದಸ್ಯರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ವ್ಯಾಪಾರ- ವ್ಯವಹಾರದಲ್ಲಿನ ಹೂಡಿಕೆ ವಿಚಾರಗಳಿಗೆ ಪ್ಲಾನಿಂಗ್, ಬಜೆಟ್ ಮಾಡಿಕೊಳ್ಳಲಿದ್ದೀರಿ. ಯಾರು ಉದ್ಯೋಗದಲ್ಲಿ ದೀರ್ಘ ಕಾಲದ ಅಂತರ ಬಂದು, ಈಗ ಕೆಲಸಕ್ಕೆ ಪ್ರಯತ್ನ ಮಾಡುತ್ತಾ ಇದ್ದೀರಿ ಅಂತಾದಲ್ಲಿ ಪ್ರತಿಷ್ಠಿತ ಸಂಸ್ಥೆಯೊಂದರಿಂದ ಆಫರ್ ಬರುವಂಥ ಸೂಚನೆ ಇದೆ. ಅದರಲ್ಲಿಯೂ ನಿಮಗೆ ಅನುಕೂಲ ಆಗುವಂಥ ಪಾಳಿಯಲ್ಲಿಯೇ ಅಥವಾ ಶಾಶ್ವತವಾಗಿ ವರ್ಕ್ ಫ್ರಮ್ ಹೋಮ್ ದೊರೆಯುವಂಥ ಕೆಲಸ ಅದಾಗಿರುವ ಸಾಧ್ಯತೆ ಹೆಚ್ಚಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಉದ್ಯೋಗ ಅಥವಾ ವ್ಯಾಸಂಗದ ಸಲುವಾಗಿ ವಿದೇಶದಲ್ಲಿ ವಾಸ ಆಗಿದ್ದೀರಿ ಅಂತಾದಲ್ಲಿ ಖರ್ಚು- ವೆಚ್ಚವನ್ನು ನಿಭಾಯಿಸುವುದು ಕಷ್ಟವಾಗಲಿದೆ. ಇಷ್ಟು ಸಮಯ ನಿಮಗೆ ನೆರವಾಗುತ್ತಿದ್ದ ಕೆಲವು ಪರಿಸ್ಥಿತಿ ಇನ್ನು ಮುಂದೆ ಹಾಗಿರುವುದಿಲ್ಲ ಎಂಬುದು ಗಮನಕ್ಕೆ ಬರಲಿದೆ. ಸ್ಥಳ ಬದಲಾವಣೆ ಅಥವಾ ನಿಮ್ಮ ನಿರ್ಧಾರದಲ್ಲಿಯೇ ಬದಲಾವಣೆ ಮಾಡಿಕೊಂಡು ಬಿಡುವ ಸಾಧ್ಯತೆ ಇದೆ. ಯಾವುದಾದರೂ ವಿಷಯ ಪೋಷಕರಿಂದ ಮುಚ್ಚಿಟ್ಟಿದ್ದೀರಿ ಅಂದರೆ ಅದನ್ನು ಹೇಳಿಕೊಂಡು ಬಿಡುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್