AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 26ರ ಸೋವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮಗೆ ಸಹಾಯಕವಾಗಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 26ರ ದಿನಭವಿಷ್ಯ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 26, 2026 | 12:15 AM

Share

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಪ್ಲಾನ್ ಬಿ ಮಾಡಿಕೊಳ್ಳುವ ವಿಧಾನದಿಂದ ಅನುಕೂಲ ಆಗಲಿದೆ. ಕಠಿಣವಾದ ವಿಷಯಗಳನ್ನು ಸಹ ಸಲೀಸಾಗಿ ಅರ್ಥ ಮಾಡಿಕೊಳ್ಳುವ ರೀತಿಯಿಂದಾಗಿಯೇ ಇತರರು ನಿಮ್ಮ ಕಡೆಗೆ ಬೆರಗಿನಿಂದ ನೋಡುತ್ತಾರೆ. ದೊಡ್ಡ ಮಟ್ಟದ ಖರ್ಚು ಬರಬಹುದು ಎಂದು ಅಂದಾಜು ಮಾಡಿಕೊಂಡಿದ್ದು, ತುಂಬ ಕಡಿಮೆ ಮೊತ್ತದಲ್ಲಿ ಅಂದುಕೊಂಡ ರೀತಿಯಲ್ಲಿಯೇ ಕೆಲಸ ಮುಗಿಯುತ್ತದೆ. ಉದ್ಯೋಗ ಬಿಟ್ಟು ಹೊಸ ವ್ಯವಹಾರ- ವ್ಯಾಪಾರ ಆರಂಭಿಸುವ ನಿರ್ಧಾರದ ಬಗ್ಗೆ ನಿಮ್ಮಲ್ಲಿ ಕೆಲವರು ಸ್ನೇಹಿತರ ಜೊತೆಗೆ ಚರ್ಚೆ ಮಾಡಲಿದ್ದೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಕೆಲವು ಬದಲಾವಣೆಗೆ ಸಂಬಂಧಿಸಿದಂತೆ ನಿಮ್ಮನ್ನು ಒಪ್ಪಿಸುವುದಕ್ಕೆ ಸಹೋದ್ಯೋಗಿಗಳು ಪ್ರಯತ್ನ ಮಾಡಲಿದ್ದಾರೆ. ಎಲ್ಲಿಯೂ ಹೇಳಿಕೊಳ್ಳದ ಸಂಗತಿಗಳನ್ನು ಬಾಯಿ ಬಿಟ್ಟು ಹೇಳಿಕೊಳ್ಳುವಂತೆ ಆಗಲಿದೆ. ನಿಮ್ಮ ಸಾಮರ್ಥ್ಯ, ಬದ್ಧತೆ, ಅದರಿಂದ ಆಗಿರುವ ಅನುಕೂಲಗಳ ಬಗ್ಗೆ ಮಾತನಾಡುತ್ತೀರಿ. ಇದರ ಆಚೆಗೆ ಆಗುವ ಯಾವುದೇ ಬದಲಾವಣೆಗೆ ಒಪ್ಪಿಕೊಳ್ಳುವುದಕ್ಕೆ ಸಿದ್ಧರಿಲ್ಲ ಎಂಬುದನ್ನು ಸಹ ಹೇಳಲಿದ್ದೀರಿ. ಯಾವುದಾದರೂ ನಿರ್ದಿಷ್ಟ ಕಾಯಿಲೆ ಆಗಿದೆಯಾ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ಏನಾದರೂ ಸೂಚಿಸಿದ್ದಲ್ಲಿ ಗಂಭೀರ ಸಮಸ್ಯೆ ಇಲ್ಲ ಎಂಬುದು ತಿಳಿದುಬರಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದಕ್ಕೆ ಹೋಗಬೇಡಿ. ಹೋಟೆಲ್ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದೆ. ಪ್ರೀತಿಯಲ್ಲಿ ಇರುವವರು ಜೊತೆಯಾಗಿ ಸಮಯವನ್ನು ಕಳೆಯುವಂಥ ಯೋಗ ಇದೆ.

ಲೇಖನ- ಸ್ವಾತಿ ಎನ್.ಕೆ.

Follow Us
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ಕೇಜ್ರಿವಾಲ್ ಸಿಎಂ ಆದಮೇಲೆ 100 ಕೋಟಿ ಮನೆ ಕಟ್ಟಿದರು; ಸ್ವಾತಿ ಮಲಿವಾಲ್ ಟೀಕೆ
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ಸತತ 4 ಸಿಕ್ಸರ್; ಪ್ರಫುಲ್ ಹಿಂಗೆ ವಿರುದ್ಧ ಸೇಡು ತೀರಿಸಿಕೊಂಡ ವೈಭವ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು