
ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವ ಯೋಗ ಇದೆ. ಬಹಳ ಸಮಯದಿಂದ ನೀವು ಹೇಳಬೇಕು ಅಂದುಕೊಳ್ಳುತ್ತಾ ಇದ್ದ ಕೆಲವು ವಿಚಾರಗಳನ್ನು ಸಂಬಂಧ ಪಟ್ಟವರಿಗೆ ಹೇಳಲಿದ್ದೀರಿ. ಧಾರ್ಮಿಕ ವೃತ್ತಿಯಲ್ಲಿ ಇರುವವರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ನೀವು ಕೈಯಿಂದ ಹಣ ಹಾಕಿ, ಮಾಡಿಕೊಟ್ಟ ಕೆಲಸದ ಬಾಕಿ ವಸೂಲಿ ಮಾಡುವುದು ಈ ದಿನ ಸಾಧ್ಯವಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಕುದುರುವುದು ಕಷ್ಟ ಆಗಲಿದೆ. ಸ್ನೇಹಿತರ ಜೊತೆಗೆ ದೂರ ಪ್ರಯಾಣ ಮಾಡುವಂಥ ಯೋಗ ಇದೆ.
ಮನೆಯ ಖರ್ಚು ವೆಚ್ಚಗಳು ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿಗೆ ಆಗಲಿದೆ. ಆದಾಯ ಹಾಗೂ ಅದನ್ನು ಬಳಸುವುದಕ್ಕೂ ತಾಳೆ ಆಗುತ್ತಿಲ್ಲ ಎಂಬುದು ಚಿಂತೆಗೆ ಕಾರಣ ಆಗಲಿದೆ. ಆದಾಯದ ಮೂಲ ಜಾಸ್ತಿ ಮಾಡಿಕೊಳ್ಳಲು ಹಾಕುವಂಥ ಶ್ರಮ ಫಲ ನೀಡುತ್ತದೆ. ಸಂಗಾತಿ ಜತೆಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಅವರ ಬೇಕು- ಬೇಡಗಳನ್ನು ಕೇಳಿಕೊಂಡು, ಅದನ್ನು ಒದಗಿಸಿಕೊಡಲು ಆದ್ಯತೆ ನೀಡಲಿದ್ದೀರಿ. ನಿಮ್ಮ ನಿಲವು- ಉದ್ದೇಶದ ಬಗ್ಗೆ ಸಂಬಂಧಿಕರು ಆಕ್ಷೇಪದ ಮಾತುಗಳನ್ನು ಹೇಳಲಿದ್ದಾರೆ.
ನಿರ್ಭಾವುಕ ನಿರ್ಧಾರ ತೆಗೆದುಕೊಳ್ಳಬೇಕು, ಯಾರನ್ನೂ ಹಚ್ಚಿಕೊಳ್ಳಬಾರದು ಎಂದುಕೊಳ್ಳಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮಿಂದ ನಿರೀಕ್ಷೆ ಮಾಡುತ್ತಿರುವುದು ತಲುಪಲು ಸಾಧ್ಯ ಇಲ್ಲದಷ್ಟು ಎತ್ತರದಲ್ಲಿದೆ ಎಂದೆನಿಸುವುದಕ್ಕೆ ಶುರು ಆಗಲಿದೆ. ನೀವು ಒಪ್ಪಿಸಿದ ಕೆಲಸ- ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡುವುದಾಗಿ ಮಾತು ನೀಡಿದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯವಾಗುತ್ತಿಲ್ಲ ಎನ್ನುವುದರಿಂದ ನೀವು ಇಕ್ಕಟ್ಟಿಗೆ ಸಿಲುಕಿಕೊಳ್ಳುತ್ತೀರಿ. ಪ್ರಯಾಣಕ್ಕೆ ಹೆಚ್ಚು ಖರ್ಚು ಮಾಡುವ ಯೋಗ ಇದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂಬ ನಿಮ್ಮ ಬದ್ಧತೆಗೆ ಮೆಚ್ಚುಗೆ ವ್ಯಕ್ತವಾಗಲಿದೆ.
ಲೇಖನ- ಸ್ವಾತಿ ಎನ್.ಕೆ.