
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ. ಪ್ರಾಣಿಗಳಿಂದ ಕಡಿತಕ್ಕೆ ಒಳಗಾಗುವ ಯೋಗ ಇದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ಮನಸ್ಸಿಗೆ ಸಮಾಧಾನ ತರುವಂಥ ಬೆಳವಣಿಗೆಗಳು ಆಗಲಿವೆ. ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಪ್ರತಿಷ್ಠಿತ ಸಂಸ್ಥೆಯಿಂದ ಇಂಟರ್ ವ್ಯೂ ಕರೆ ಬರಬಹುದು. ಇನ್ನು ವೃತ್ತಿಪರರು ನೀವಾಗಿಯೇ ಕೆಲವು ಕ್ಲೈಂಟ್ ಗಳಿಗೆ ಇನ್ನು ಕೆಲಸ ಮಾಡಿಕೊಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಲಿದ್ದೀರಿ. ಊಟ- ತಿಂಡಿಗಾಗಿ ದೂರದ ಸ್ಥಳಗಳಿಗೆ ಹುಡುಕಿಕೊಂಡು ಹೋಗಲಿದ್ದೀರಿ. ಇದಕ್ಕೆ ನಿಮ್ಮ ಸ್ನೇಹಿತರು ಸಹ ಜೊತೆಯಾಗುತ್ತಾರೆ. ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನಕ್ಕೆ ಪ್ರಸ್ತಾವ ಬರಲಿದೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಯಾಕೆ- ಏನು ಎಂಬ ಪ್ರಶ್ನೆ ಮಾಡದೆ ತಮಗೆ ಬೇಕಾದ ಕೆಲಸವನ್ನು ಮಾಡಿಕೊಡಬೇಕು ಎಂಬುದು ನಿಮ್ಮ ಸ್ನೇಹಿತರ ನಿರೀಕ್ಷೆ ಆಗಿರಲಿದೆ. ಇದಕ್ಕಾಗಿ ನಡೆಯುವ ಮಾತುಕತೆ ವೇಳೆ ನಿಮ್ಮ ಮೇಲೆ ಹಿಡಿತ ಸಾಧಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದೆನಿಸುವುದಕ್ಕೆ ಶುರು ಆಗಲಿದೆ. ಜಮೀನು- ಸೈಟು ಇಂಥ ದಾಖಲೆಗಳ ವಿಚಾರದಲ್ಲಿ, ಮನೆ- ಮಳಿಗೆ ನಿರ್ಮಾಣದಲ್ಲಿ ತೊಡಗಿಕೊಂಡವರು ನಿಯಮಾನುಸಾರ ಕೆಲಸ- ಕಾರ್ಯಗಳು ನಡೆಯುತ್ತಾ ಇವೆಯೇ ಎಂದು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವುದು ಒಳ್ಳೆಯದು.
ಲೇಖನ- ಸ್ವಾತಿ ಎನ್.ಕೆ.