AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 31ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 31ರ ದಿನಭವಿಷ್ಯ
ಭಾವನಾ ಹೆಗಡೆ
|

Updated on: Jan 31, 2026 | 7:11 AM

Share

ಈ ದಿನ ಶ್ಯಾಮಲಾ ದಂಡಕವನ್ನು ಪಠಣ ಮಾಡಿ. ಅಥವಾ ಯೂಟ್ಯೂಬ್ ನಲ್ಲಿಯೋ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕವಾಗಿ ಕಾಳಿದಾಸನಿಂದ ರಚಿಸಲಾದ ಅಗಾಧ ಶಕ್ತಿಯ ಶ್ಯಾಮಲಾ ದಂಡಕವನ್ನು ಕೇಳಿಸಿಕೊಳ್ಳಿ. ನಿಮ್ಮಲ್ಲಿ ಆಕರ್ಷಣೆಯ ಶಕ್ತಿ ಬರುತ್ತದೆ. ಮಾತನಾಡುವಾಗ ಆತ್ಮವಿಶ್ವಾಸ, ನೆನಪಿನ ಶಕ್ತಿ, ಸಾರ್ವಜನಿಕ ಜೀವನದಲ್ಲಿ ಇರುವಂಥವರಿಗಂತೂ ದೊಡ್ಡ ಶಕ್ತಿ ಆಗಲಿದೆ. ಹಳದಿ ಅಥವಾ ಬಿಳಿ ಬಣ್ಣದ ಬಟ್ಟೆಯನ್ನು ಧರಿಸುವುದಕ್ಕೆ ಈ ದಿನ ಆದ್ಯತೆಯನ್ನು ನೀಡಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿದ್ದೀರಿ. ಇನ್ನು ಮನೆಯಲ್ಲಿ ದೇವತಾ ಆರಾಧನೆಯನ್ನು ಮಾಡುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ಭವಿಷ್ಯಕ್ಕೆ ದೊಡ್ಡ ಜವಾಬ್ದಾರಿ ದೊರೆಯುವ ಕುರಿತು ಸೂಚನೆ ದೊರೆಯಲಿದೆ. ಯಾರು ಮರಕ್ಕೆ ಸಂಬಂಧಿಸಿದ ಕೆಲಸದಲ್ಲಿ ತೊಡಗಿಸಿಕೊಂಡವರೋ ಅಂಥವರಿಗೆ ದೀರ್ಘಾವಧಿಗೆ ಆದಾಯ ತರುವಂಥ ಅವಕಾಶಗಳು ತೆರೆದುಕೊಳ್ಳಲಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಸಮಯ ಬಂದಾಗ ನಿರ್ಧಾರ ಮಾಡಿದರೆ ಆಯಿತು ಎಂದುಕೊಂಡು ಮುಂದಕ್ಕೆ ಹಾಕಿಕೊಂಡು ಬರುತ್ತಾ ಇದ್ದ ಕೆಲವು ತೀರ್ಮಾನಗಳನ್ನು ಈಗ ತೆಗೆದುಕೊಳ್ಳಲೇಬೇಕು ಎಂಬ ಸನ್ನಿವೇಶ ಸೃಷ್ಟಿಯಾಗಲಿದೆ. ಇದೊಮ್ಮೆ ಮಾತ್ರ ಸಹಾಯ ಮಾಡಿ ಎಂದು ಕೆಲವು ವ್ಯಕ್ತಿಗಳು ನಿಮ್ಮ ಬಳಿ ಬರಲಿದ್ದಾರೆ. ನಿಮ್ಮ ಅಗತ್ಯಕ್ಕಾಗಿ ಎಂದು ಕೂಡಿಟ್ಟಿದ್ದ ಹಣದ ಬಗ್ಗೆ ಯಾವುದೇ ಕಾರಣಕ್ಕೂ ಪ್ರಸ್ತಾವ ಮಾಡದಿರುವುದು ಕ್ಷೇಮ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಮನೆ ದೇವರು ಅಥವಾ ನೀವು ವಾಸವಿರುವ ಸ್ಥಳದ ವ್ಯಾಪ್ತಿಯಲ್ಲಿ ಇರುವಂಥ ದೇಗುಲಗಳಿಂದ ವಾರ್ಷಿಕೋತ್ಸವ- ಜೀರ್ಣೋದ್ಧಾರ ಹೀಗೆ ಏನಾದರೊಂದು ಕಾರಣಕ್ಕೆ ದೇಣಿಗೆಯೋ ಸಹಾಯವನ್ನೋ ಕೇಳಿಕೊಂಡು ಬರುವ ಸಾಧ್ಯತೆಯಿದ್ದು, ಯಥಾಶಕ್ತಿ ನೆರವನ್ನು ನೀಡಿ. ಒಂದು ವೇಳೆ ನೀವು ಈಗಾಗಲೇ ಮಾತನ್ನು ನೀಡಿದ್ದಿರಿ, ಕಾರಣಾಂತರಗಳಿಂದ ಅದರಂತೆ ನಡೆದುಕೊಳ್ಳಲು ಆಗಿಲ್ಲ ಎಂದಾದರೆ ಈ ದಿನ ಆ ಮಾತನ್ನು ಪೂರೈಸುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ