AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ವಾಹನ ಸಂಚಾರದಲ್ಲಿ ಜಾಗರೂಕರಾಗಿರಿ

ಜನ್ಮಸಂಖ್ಯೆ 1, 2, 3ರ ಜನವರಿ 8ರ ಗುರುವಾರದ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ಕ್ಕೆ ಇಂದು ನಿಧಾನಗತಿಯ ಪ್ರಗತಿ, ಆರ್ಥಿಕ ಎಚ್ಚರಿಕೆ ಅಗತ್ಯ. ಜನ್ಮಸಂಖ್ಯೆ 2ಕ್ಕೆ ಬೇಸರದ ನಂತರ ಶುಭ ಸುದ್ದಿ, ವಾಹನ ಚಾಲನೆಯಲ್ಲಿ ಜಾಗ್ರತೆ ಮುಖ್ಯ. ಜನ್ಮಸಂಖ್ಯೆ 3ಕ್ಕೆ ಹೊಸ ಯೋಜನೆಗಳಿಗೆ ಸಕಾಲವಲ್ಲ, ದಾಖಲೆಗಳು ಮತ್ತು ಹೂಡಿಕೆ ಬಗ್ಗೆ ಎಚ್ಚರಿಕೆಯ ಸಲಹೆ. ಈ ಭವಿಷ್ಯವು ನಿಮ್ಮ ದಿನವನ್ನು ಯೋಜಿಸಲು ಸಹಕಾರಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ  ಜನ್ಮಸಂಖ್ಯೆಯವರು ಇಂದು ವಾಹನ ಸಂಚಾರದಲ್ಲಿ ಜಾಗರೂಕರಾಗಿರಿ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 08, 2026 | 12:30 AM

Share

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಇಂದು ನೀವು ಅಂದುಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಇದೇ ಕಾರಣಕ್ಕೆ ನಿಮ್ಮ ಆತ್ಮವಿಶ್ವಾಸ ಸ್ವಲ್ಪ ಮಟ್ಟಿಗೆ ಕಡಿಮೆ ಆದರೂ ಪ್ರಯತ್ನವೇ ಮಾಡದಂತೆ ಸುಮ್ಮನೆ ಇರುವುದು ಸರಿಯಲ್ಲ. ಆರ್ಥಿಕವಾಗಿ ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವ್ಯವಹಾರದಿಂದ ದೂರವಿರುವುದು ಒಳ್ಳೆಯದು. ಸಾಮಾಜಿಕ ಸೇವೆ- ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. ಮನೆಯಲ್ಲಿ ಸಣ್ಣಪುಟ್ಟ ರಿಪೇರಿ ಕೆಲಸಗಳಿಗಾಗಿ ಹಣ ವ್ಯಯವಾಗಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಇರಲಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ದಿನದ ಆರಂಭದಲ್ಲಿ ಮನಸ್ಸಿಗೆ ಸ್ವಲ್ಪ ಬೇಸರ ಎನಿಸಿದರೂ, ಸಂಜೆಯ ವೇಳೆಗೆ ಶುಭ ಸುದ್ದಿಯೊಂದು ಬರಲಿದೆ. ವಾಹನ ಚಾಲನೆ ಮಾಡುವಾಗ ಏಕಾಗ್ರತೆ ಬಹಳ ಮುಖ್ಯ. ಜತೆಗೆ ಇರುವವರು ಏನು ಹೇಳುತ್ತಿದ್ದಾರೆ ಎಂಬ ಧ್ವನಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳ ಕಿರಿಕಿರಿ ಇರಬಹುದು, ಮೌನವಾಗಿರುವುದು ಸೂಕ್ತ. ಹಳೆಯ ಸ್ನೇಹಿತರ ಭೇಟಿಯಿಂದ ಹಳೆಯ ನೆನಪುಗಳು ಮರುಕಳಿಸಲಿವೆ. ಹೊಟ್ಟೆಯ ಆರೋಗ್ಯಕ್ಕೆ ಸಂಬಂಧಿಸಿದಂತೆ ತೊಂದರೆಯಾದಲ್ಲಿ ಆಹಾರ ಪಥ್ಯ ಮಾಡುವುದು ಅಗತ್ಯ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳಲು ಇಂದು ಸಕಾಲವಲ್ಲ. ಮುಖ್ಯವಾದ ಕಡತಗಳ ಬಗ್ಗೆ ಗಮನವಿರಲಿ, ಕೆಲವು ಫೈಲ್ ಗಳು ಕಳೆದುಕೊಳ್ಳುವ ಸಾಧ್ಯತೆ ಇದೆ. ವಾಹನ ಸಂಚಾರದಲ್ಲಿ ಜಾಗರೂಕತೆ ಇರಲಿ. ಎಷ್ಟು ಖರ್ಚಾದರೂ ಪರವಾಗಿಲ್ಲ ಎಂಬ ಮಾತನ್ನು ನೀವು ಎಲ್ಲಿಯೇ ಆಡುವುದಕ್ಕೂ ಮುನ್ನ ನಾಲ್ಕಾರು ಬಾರಿ ಆಲೋಚಿಸುವುದು ಮುಖ್ಯ. ಇನ್ನು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಓಡಾಟ ನಡೆಸಬೇಕಾಗಬಹುದು. ಇಂದು ಯಾವುದೇ ಹೂಡಿಕೆ ಮಾಡುವ ಮುನ್ನ ಅನುಭವಿಗಳ ಸಲಹೆ ಪಡೆಯಿರಿ.

ಲೇಖನ- ಎನ್‌.ಕೆ.ಸ್ವಾತಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು