Astrology: ದಿನಭವಿಷ್ಯ: ಹಿತಶತ್ರುಗಳಿಂದ ತೊಂದರೆಯಾಗಬಹುದು, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಜಾಗೃತರಾಗಿರಿ
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 10 ಜೂನ್ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಜೂನ್ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ:ವೃದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:41 ರಿಂದ 09:18ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:55 ರಿಂದ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:09 ರಿಂದ 03:46ರ ವರೆಗೆ.
ಮೇಷ ರಾಶಿ: ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಅಧ್ಯಾತ್ಮದ ಕಡೆ ಮನಸ್ಸು ಒಲಿಯಲಿದೆ. ಹಾಗಾಗಿ ಬೇಸರದ ಸಂಗತಿಗಳು ಇದ್ದರೂ ಸುಖದಿಂದ ಖುಷಿಯಿಂದ ಇರುವಿರಿ. ಪರಾವಲಂಬನೆಯಿಂದ ದೂರ ಉಳಿಯುವಿರಿ. ಇಂದು ನಿಮ್ಮ ಜೀವನಕ್ಕೆ ಅವಶ್ಯಕವಾದ ವಸ್ತುವನ್ನು ಪಡೆಯಲು ಅನ್ಯಮಾರ್ಗವನ್ನು ಬಳಸಿಕೊಳ್ಳುವಿರಿ. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ಇಂದೇ ಒಂದಕ್ಕಿಂತ ಹೆಚ್ಷು ಕಾರ್ಯಗಳನ್ನು ಒಟ್ಟಿಗೆ ಮಾಡಬೇಕಾಗುವುದು.
ವೃಷಭ ರಾಶಿ: ಇಂದು ಇನ್ನೊಬ್ಬರ ಬಗ್ಗೆ ನಿಮಗೆ ಸಹಜವಾದ ಕರುಣೆ ಇರುವುದು. ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಸರ್ಕಾರಿ ಉದ್ಯೋಗವರಿಗೆ ಬರಬೇಕಾದ ಹಣವು ಬರಲಿದೆ. ನಿಮ್ಮ ಆಲೋಚನೆಗಳನ್ನು ಅಚಲವಾಗಿ ಇಟ್ಟುಕೊಳ್ಳಿ. ಸಮಾಜದ ಮುಖಂಡರ ಭೇಟಿಯಾಗಲಿದೆ. ದೈವಭಕ್ತಿಯನ್ನು ಬೆಳೆಸಿಕೊಳ್ಳುವುದು ಉತ್ತಮ. ಪುರುಷ ಪ್ರಯತ್ನವೇ ಶ್ರೇಷ್ಠ ಎಂದು ನಂಬುವವರು ಇಂದು ನೀವಾಗುವಿರಿ. ಈ ದಿನವನ್ನು ಅನಾಯಾಸವಾಗಿ ಕಳೆಯುವಿರಿ. ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ತೊಡಗಿಸಲು ಪ್ರಯತ್ನಶೀಲರಾಗುವಿರಿ. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂದು ನಂಬುವಿರಿ.
ಮಿಥುನ ರಾಶಿ: ಯಾರಾದರೂ ಆಮಿಷವನ್ನು ತೋರಿಸಿ ಕೆಲಸವನ್ನು ಮಾಡಿಸಿಕೊಳ್ಳಬಹುದು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಟ್ಟಾರು. ನಿಮ್ಮವರಿಗೆ ಸಹಾಯ ಮಾಡದೇ ಅವರು ನಿಮ್ಮ ಮೇಲೆ ದ್ವೇಷ ಸಾಧಿಸುವರು. ವಾಗ್ಮಿಗಳಾಗಿದ್ದರೆ ನಿಮಗೆ ಸಭೆಗಳಿಗೆ ಆಹ್ವಾನವಯ ಬರಲಿದೆ. ಎಲ್ಲರ ಜೊತೆ ಪ್ರೀತಿಯಿಂದ ಇರುವ, ವರ್ತಿಸುವ ಗುಣ ನಿಮ್ಮದು. ನಿಮ್ಮನ್ನು ಇಷ್ಟಪಡುವವರ ಸಂಖ್ಯೆ ಹೆಚ್ಚಾಗಲಿದೆ. ಮಂದಗತಿಯಲ್ಲಿ ಸಾಗುವ ಜೀವನಕ್ಕೆ ವೇಗ ಬೇಕು ಎನ್ನಿಸಬಹುದು. ಬರಬೇಕಾದ ಹಣದ ಬಗ್ಗೆ ತಿಳಿದಿರಲಿ. ಹಣವನ್ನು ನೀವೇ ಕೇಳಿ ಒಡೆಯುವುದು ಉತ್ತಮ. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ.
ಕರ್ಕಾಟಕ ರಾಶಿ: ನಿಮ್ಮ ವರ್ತನೆಯಿಂದ ಅಧಿಕಾರವು ತಪ್ಪಬಹುದು. ಆಸ್ತಿಯ ಬಗ್ಗೆ ಸರಿಯಾದ ದಾಖಲೆಗಳು ಇರಲಿ. ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಇಷ್ಟು ದಿನ ಮಕ್ಕಳ ಜೊತೆಗಿದ್ದ ನಿಮಗೆ ಇಂದು ಮಕ್ಕಳಿಲ್ಲದೇ ಬೇಸರವೆನಿಸೀತು. ಹಿತಶತ್ರುಗಳ ತೊಂದರೆಯು ಅಧಿಕವಾಗಿ ಇರಲಿದೆ. ಅಧಿಕ ಪ್ರಯಾಣದ ಆಯಾಸದಿಂದ ಬಳಲಿ ಬೆಂಡಾಗುವಿರಿ. ಮಕ್ಕಳ ಆರೋಗ್ಯದ ಬಗ್ಗೆ ಗಮನವಿರಲಿ. ನಿದ್ರೆಯು ಚೆನ್ನಾಗಿ ಆಗದೇ ಸಂಕಟಪಡುವಿರಿ. ಸಂಗಾತಿಯ ಜೊತೆ ಇಂದು ಸಂತೋಷದಿಂದ ಕಳೆಯುವಿರಿ. ಕುಟುಂಬವು ನಿಮ್ಮ ಬೆಂಬಲಕ್ಕೆ ಇರಲಿದೆ. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು. ಬದ್ಧತೆಯನ್ನು ರೂಢಿಸಿಕೊಳ್ಳುವುದು ನಿಮಗೆ ಸುಲಭವಾಗದು.