Daily Horocope: ಈ ರಾಶಿಯವರು ಧಾರ್ಮಿಕ ಕಾರ್ಯದಲ್ಲಿ ತೊಡಗಿಕೊಂಡರೆ ಶುಭ ಸುದ್ದಿ ಕೇಳುವರು
ಡಿಸೆಂಬರ್ 22, 2024 ರ ನಿತ್ಯ ಪಂಚಾಂಗದ ಪ್ರಕಾರ, ಶಾಲಿವಾಹನ ಶಕೆ 1947, ಕ್ರೋಧಿ ಸಂವತ್ಸರದ ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ತಿಥಿ ಸಪ್ತಮಿ. ವಿವಿಧ ರಾಶಿಗಳಿಗೆ ಇಂದಿನ ಭವಿಷ್ಯವನ್ನು ಈ ಲೇಖನದಲ್ಲಿ ನೀಡಲಾಗಿದೆ. ಶುಭ ಮುಹೂರ್ತಗಳು ಮತ್ತು ರಾಹು ಕಾಲ, ಯಮಘಂಡ ಕಾಲ, ಗುಳಿಕ ಕಾಲದ ವಿವರಗಳನ್ನು ಸಹ ಒಳಗೊಂಡಿದೆ. ಪ್ರತಿಯೊಂದು ರಾಶಿಯವರಿಗೂ ಆರೋಗ್ಯ, ವೃತ್ತಿ ಮತ್ತು ಕುಟುಂಬ ಜೀವನದ ಬಗ್ಗೆ ಮಾಹಿತಿ ಇದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶಿರ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಸಪ್ತಮಿ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಆಯುಷ್ಮನ್, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 54 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 08 ನಿಮಿಷಕ್ಕೆ, ರಾಹು ಕಾಲ ಸಂಜೆ 04:44 ರಿಂದ 06:08ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:32 ರಿಂದ 01:56 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 03:20 ರಿಂದ 04:44 ರವರೆಗೆ.
ಮೇಷ ರಾಶಿ: ನಿಮ್ಮ ಮನಸ್ಸಿಗೆ ಸರಿ ಎನಿಸಿದರೆ ಒಪ್ಪಿ, ಇಲ್ಲವಾದರೆ ಮುನ್ನಡೆಯಿರಿ. ವಿವಾದದಿಂದ ಕಾರ್ಯವಾಗದು. ಸ್ತ್ರೀಯರು ಸಂತೋಷದಿಂದ ದಿನ ಕಳೆಯುವಿರಿ. ಸಹೋದರರ ಪಾಲಿಗೆ ಬಂದ ಆಸ್ತಿಯು ನಿಮಗೆ ಸಿಗುವ ಸಾಧ್ಯತೆ ಇದೆ. ನಿಮಗೆ ಇಂದು ಧಾರ್ಮಿಕ ಕಾರ್ಯದಲ್ಲಿ ತೃಪ್ತಿಯು ಸಿಗಲಿದೆ. ಸಂಗಾತಿಯ ಪ್ರೀತಿಯಿಂದ ನಿಮಗೆ ಅಚ್ವರಿಯಾಗಬಹುದು. ನೌಕರರಿಗೆ ಇಂದು ನಿಮ್ಮಿಂದ ಅನಿರೀಕ್ಷಿತ ಸಂತಸ ಸಿಗಲಿದೆ. ಸಂತೋಷದ ನಡುವೆ ಯಾರನ್ನೂ ಬೇಸರಿಸುವುದು ಬೇಡ. ನಿಮ್ಮ ಅಧ್ಯಾತ್ಮ ಜೀವನದಿಂದ ಪ್ರಭಾವಿತರಾಗುವರು. ಅತಿಯಾದ ಭೋಜನದಿಂದ ಕಷ್ಟವಾದೀತು. ತಾಯಿಯ ಬಂಧುಗಳು ನಿಮಗೆ ಸಹಕಾರವನ್ನು ನೀಡಬಹುದು. ಮನೆಯ ಗಂಭೀರ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳುವುದು ಬೇಡ. ವಿದ್ಯಾರ್ಥಿಗಳಿಗೆ ಸಾಲಬಾಧೆ ತಟ್ಟುವ ಸಾಧ್ಯತೆ ಇದೆ. ಹೃದಯದ ದೌರ್ಬಲ್ಯವು ನಿಮ್ಮನ್ನು ಎಲ್ಲ ರೀತಿಯಿಂದ ಕಟ್ಟಿಹಾಕಬಹುದು.
ವೃಷಭ ರಾಶಿ: ವಿಶ್ವಾಸವನ್ನು ಮರಳಿ ಪಡೆದರೂ ಅದು ಎಂದಿನ ತೂಕವನ್ನು ಇಟ್ಟುಕೊಳ್ಳದು. ಸ್ವಯಂ ಕೃತ ತಪ್ಪಿನಿಂದ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮ ಏಳ್ಗೆಯನ್ನು ಇತರರು ಸಹಿಸಿಕೊಳ್ಳುವುದು ಕಷ್ಟವಾಗುವುದು. ಯಾರ ಬಗ್ಗೆಯೂ ಸಲ್ಲದ ಮಾತನಾಡಿ ಸಿಕ್ಕಿಕೊಳ್ಳುವಿರಿ. ಸ್ವಯಂ ಕೃತ ಅಪರಾಧದಿಂದ ಪಶ್ಚಾತ್ತಾಪವಾಗುವುದು. ಸಂಗಾತಿಯ ವಿಷಯದಲ್ಲಿ ನಿಮಗೆ ಸಮಾಧಾನ ಇರದು. ನಿಮ್ಮ ಬಾಲಿಶ ಮಾತುಗಳಿಂದ ಇತರರು ನಕ್ಕಾರು. ಕ್ರೀಡೆಯಲ್ಲಿ ಉತ್ಸಾಹವು ತೋರಿ, ಗೆಲ್ಲುವಿರಿ. ಮನೆಯಲ್ಲಿ ಇಂದು ಸ್ನೇಹ ಕೂಟವು ಏರ್ಪಡುವುದು. ನಿಮ್ಮ ಬಳಿ ಇರುವ ಸಂಪತ್ತನ್ನು ಎಲ್ಲರಿಗೂ ಹೇಳಬೇಕಾದೀತು. ನಿಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವಿರಿ. ಕಛೇರಿಯ ವ್ಯವಹಾರವನ್ನು ಮನೆಯಲ್ಲಿ ಚರ್ಚಿಸುವುದು ಬೇಡ. ಸನ್ನಿವೇಶವನ್ನು ಎದುರಿಸುವುದು ಕಷ್ಟವಾಗಲಾರದು. ನಿಮ್ಮ ಸ್ವೇಚ್ಛೆಗೆ ಭಂಗವಾಗುವುದನ್ನು ನೀವು ಸಹಿಸಲಾರಿರಿ.
ಮಿಥುನ ರಾಶಿ: ನಿಮ್ಮ ತಪ್ಪಿಗೆ ಕಾರಣ ಸರಿಯಾಗಿರಲಿ. ನಿಮ್ಮ ಆಲೋಚನೆಗಳಿಂದ ನಿಮಗೆ ಯೋಗ್ಯ ಸ್ಥಾನವು ಲಭಿಸುವುದು. ಸಂಗಾತಿಯ ಜೊತೆಗಿನ ಕಲಹವು ನಿಮ್ಮ ಇಡೀ ದಿನವನ್ನು ಸರಿಯಾಗಿ ಕಳೆಯುವಂತೆ ಮಾಡದು. ದೂರಪ್ರಯಾಣವು ಆಯಾಸವನ್ನು ಕೊಡಬಹುದು. ಯಾರನ್ನೋ ಮೆಚ್ಚಿಸಿ ಪ್ರಯೋಜನವಾಗದು. ಸಂಶೋಧನೆಯ ಮನಸ್ಸಿನಲ್ಲಿ ಇದ್ದರೆ ಹೊಸ ವಿಷಯವು ನಿಮ್ಮ ಮನಸ್ಸಿಗೆ ಬರಬಹುದು. ಆರ್ಥಿಕತೆಯು ದುರ್ಬಲವಾದ ಕಾರಣ ಆತಂಕವು ಉಂಟಾಗಬಹುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಆಪತ್ಕಾಲಕ್ಕಾಗಿ ಕೂಡಿಟ್ಟ ಹಣವು ಇಂದು ಖರ್ಚು ಮಾಡಬೇಕಾಗುವುದು. ಭವಿಷ್ಯದ ಬಗ್ಗೆ ಅಸ್ಪಷ್ಟತೆ ಇರುವ ಕಾರಣ ಮನಸ್ಸಿಗೆ ಕಿರಿಕಿರಿ ಇರುವುದು. ದೃಷ್ಟಿದೋಷಕ್ಕೆ ಸೂಕ್ತ ಔಷಧಿಯು ಸಿಗಲಿದೆ. ನಿಮ್ಮ ಅರೋಗ್ಯ ಸಮಸ್ಯೆಯನ್ನು ಆಪ್ತರ ಜೊತೆ ಚರ್ಚಿಸಿ.
ಕರ್ಕಾಟಕ ರಾಶಿ: ಸುದೀರ್ಘವಾದ ವ್ಯಾವಹಾರಿಕ ಒಪ್ಪಂದವು ಮುರಿಯಬಹುದು. ಎಲ್ಲದಕ್ಕೂ ಒಂದೇ ರೀತಿಯ ಪರಿಹಾರವಿಲ್ಲ. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು. ಅಧ್ಯಾತ್ಮದಿಂದ ಸುಖ ಸಿಗಲಿದೆ. ದುರಭ್ಯಾಸದ ಕಾರಣ ಮರ್ಯಾದಿಯನ್ನು ಕಳೆದುಕೊಳ್ಳಬೇಕಾದೀತು. ಮಹಿಳೆಯರಿಗೆ ಸಹಾಯ ಮಾಡಲು ಹೋಗಿ ಅಪವಾದಕ್ಕೆ ಸಿಕ್ಕುವಿರಿ. ನಿಮ್ಮ ನಿರುದ್ಯೋಗಕ್ಕೆ ಸೂಕ್ತ ಪರಿಹಾರ ಸಿಗಲಿದೆ. ವಿನೋದದ ಮಾತುಗಳು ಇತರರಿಗೆ ಅಚ್ಚರಿ ತರಬಹುದು. ಅನಿರೀಕ್ಷಿತವಾಗಿ ಇಂದು ಮನೆಯಲ್ಲಿಯೇ ಕಛೇರಿಯ ಕಾರ್ಯವನ್ನು ಮಾಡಬೇಕಾಗುವುದು. ನಿಮ್ಮ ವ್ಯಕ್ತಿತ್ವವು ಗೌರವವನ್ನು ಹೆಚ್ಚಿಸುವುದು. ದುಃಖವನ್ನು ಹಂಚಿಕೊಂಡು ಕಡಿಮೆ ಮಾಡಿಕೊಳ್ಳುವಿರಿ. ಸ್ವತಂತ್ರ ಆಲೋಚನೆಯು ನಿಮಗೆ ಉಪಯುಕ್ತವಾಗಲಿದೆ. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ.
ಸಿಂಹ ರಾಶಿ: ಮುಖ್ಯಸ್ಥರಾಗಿದ್ದರೆ ತಾಳ್ಮೆಯನ್ನು ಕಳೆದುಕೊಳ್ಳುವುದು ಸಹಜ. ವಾಹನವನ್ನು ಚಲಿಸುವಾಗ ಯಾವದೇ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ನೆರ ಮನೆಯವರ ವರ್ತನೆಯಿಂದ ನೀವು ಸಿಟ್ಟಾಗುವಿರಿ. ಅಧ್ಯಾತ್ಮ ಸಾಧನೆಯ ಕಡೆ ನಿಮ್ಮ ಮನಸ್ಸು ಇರಲಿದೆ. ವಾಹನವನ್ನು ಚಲಿಸುವಾಗ ಒತ್ತಡವನ್ನು ಇಟ್ಟುಕೊಳ್ಳುವುದು ಬೇಡ. ಬಂಧುಗಳ ಜೊತೆಗಿನ ಕಹಿ ಅನುಭವವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದು ಬೇಡ. ಚರಾಸ್ತಿಗಳನ್ನು ನಷ್ಟ ಮಾಡಿಕೊಳ್ಳಬೇಕಾಗುವುದು. ನಿಮಗೆ ಯಾರಾದರೂ ದಾನಕ್ಕೆ ಯೋಗ್ಯರಾದವರು ಅನ್ನಿಸಿದವರಿಗೆ ದಾನವನ್ನು ಮಾಡಿ. ಸಾಲವಾಗಿ ನೀಡಿದ ಹಣವನ್ನು ಮತ್ತೆ ಬರುವುದು ಕಷ್ಟವಾದೀತು. ಸಂಗಾತಿಯನ್ನು ನಿರ್ಲಕ್ಷಿಸಿದಂತೆ ತೋರುವುದು. ನಿಮ್ಮಿಂದ ಆಗದ ಕೆಲಸಕ್ಕೆ ಮಾಡಿ ಕೈ ಸುಟ್ಟುಕೊಳ್ಳುವಿರಿ. ಪ್ರೀತಿ ಪಾತ್ರರನ್ನು ನೀವು ಚೆನ್ನಾಗಿ ನೋಡಿಕೊಳ್ಳುವಿರಿ. ಎಲ್ಲವನ್ನೂ ಪ್ರಾರಬ್ಧ ಎಂದು ಸುಮ್ಮನಾಗುವುದಕ್ಕಿಂತ ಭಿನ್ನವಾಗಿ ಯೋಚಿಸುವಿರಿ.
ಕನ್ಯಾ ರಾಶಿ: ಎಲ್ಲ ಆಗುಹೋಗುಗಳನ್ನು ತಾಳ್ಮೆಯಿಂದ ವಿಮರ್ಶಿಸುವಿರಿ. ಇಂದು ಬಿಡಲಾಗದ ದುಶ್ಚಟಗಳು ನಿಮ್ಮ ವ್ಯಕ್ತಿತ್ವವನ್ನು ಘಾಸಿಗೊಳಿಸಬಹುದು. ವಾಹನ ಖರೀದಿಯ ಬಗ್ಗೆ ಮನೆಯಲ್ಲಿ ಪೂರ್ಣ ಬೆಂಬಲ ಇರುವುದು. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಕಳ್ಳರ ಭೀತಿಯು ಇರಲಿದೆ. ದೇಹವು ವಾತದಿಂದ ತೊಂದರೆಗೆ ಸಿಲುಕಬಹುದು. ಧಾರ್ಮಿಕ ಆಚರಣೆಗೆ ಇನ್ನೊಬ್ಬರಿಂದ ಪ್ರೇರಣೆ ಪಡೆಯುವಿರಿ. ಸ್ತ್ರೀಯರು ನಿಮ್ಮನ್ನು ಮೆಚ್ಚಿಕೊಳ್ಳುವರು. ನಿಮ್ಮ ಲಾಭದ ಉದ್ಯಮದ ಮೇಲೆ ಕೆಟ್ಟ ದೃಷ್ಟಿ ಬೀಳಬಹುದು. ಯಾರಿಗಾದರೂ ನಿಮ್ಮಿಂದ ನೆರವಾಗಬಹುದು. ಆರೋಗ್ಯವು ಚೆನ್ನಾಗಿ ಇರಲಿದ್ದು ಮಾನಸಿಕವಾದ ನೆಮ್ಮದಿಯು ಇರುವುದು. ಇಂದು ತಾಳ್ಮೆ ಕಡಿಮೆ ಆದಂತೆ ತೋರುವುದು. ನಿಮ್ಮ ಗುಣವು ದುರುಪಯೋಗ ಆಗಬಹುದು. ಬಂಧುಗಳ ಸಲಹೆಯನ್ನು ಸ್ವೀಕರಿಸದೇ ಇದ್ದುದಕ್ಕೆ ಅವರು ಬೇಸರವಾಗುವುದು. ಸಾಮರ್ಥ್ಯವನ್ನು ಬಳಕೆಯಾಗುವಲ್ಲಿ ಉಪಯೋಗಿಸಿ. ಇಂದು ನೀವು ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ.
ತುಲಾ ರಾಶಿ: ಕೆಲವರು ನಿಮ್ಮ ಭೇಟಿ ಮಾಡಿ ಸ್ವಾರ್ಥವನ್ನು ಸಾಧಿಸುವರು. ಸ್ವಾವಲಂಬನೆಯು ಮನಸ್ಸಿನಲ್ಲಿ ಎಣಿಸಿದಕೂಡಲೇ ಬರುವುದಲ್ಲ. ಹಂತಹಂತವಾಗಿ ಅತ್ತ ಸಾಗಬೇಕು. ನಿಮ್ಮ ಮಕ್ಕಳ ಬಾಂಧವ್ಯದಿಂದೆ ನಿಮಗೆ ಅಗಲಿಕೆ ಕಷ್ಟವಾದೀತು. ಸಹೋದ್ಯೋಗಿಗಳನ್ನು ಅನೌಪಚಾರಿಕವಾಗಿ ಭೇಟಿಯಾಗುವಿರಿ. ಭೂಮಿಯ ವ್ಯವಹಾರವು ನಿಮಗೆ ಹಿನ್ನಡೆಯಾಗಬಹುದು. ಓಡಾಟದಿಂದ ಸಮಯ ವ್ಯರ್ಥ ಮಾಡುವಿರಿ. ಸ್ಥಾನಮಾನವನ್ನು ಕಳೆದುಕೊಳ್ಳುವ ಸನ್ನಿವೇಶವು ಬರಬಹುದು. ನಿಮ್ಮ ತ್ಯಾಗವು ಬಹಳ ದೊಡ್ಡದೆನಿಸಬಹುದು. ಉದ್ಯೋಗವೇ ಸಾಕು ಎಂದು ಅನ್ನಿಸುವಷ್ಟು ಹಿಂಸೆಯನ್ನು ಮನಸ್ಸಿನಲ್ಲಿ ಅನುಭವಿಸುವಿರಿ. ಹೊಸ ಮನೆಗೆ ಸ್ಥಳಾಂತರ ಮಾಡಿಕೊಳ್ಳುವಿರಿ. ಸಂಪತ್ತಿನ ಬಗ್ಗೆ ನಿಮಗೆ ಆಸಕ್ತಿಯು ಇರದು. ಸಂಗಾತಿಯು ನಿಮ್ಮಿಂದ ಏನನ್ನೋ ಮುಚ್ಚಿಡುತ್ತಾನೆ ಎಂದು ಅನ್ನಿಸಬಹುದು. ನೀವು ಕರ್ತವ್ಯವನ್ನು ಬಿಡದೇ ಕೈಯ್ಯಲ್ಲಿ ಆಗುವ ಕೆಲಸವನ್ನು ಮಾಡಿ. ಕಳ್ಳರಿಂದ ಭೀತಿಯು ನಿಮಗೆ ಆಗುವುದು.
ವೃಶ್ಚಿಕ ರಾಶಿ: ಕಳೆದುಕೊಂಡಿದ್ದನ್ನು ಪಡೆಯುವ ತನಕ ಅನ್ಯ ಯೋಚನೆಯಲ್ಲಿ ಇರುವಿರಿ. ಬೇರೆಯವರ ಮುಖಾಂತರ ಪುಣ್ಯಸ್ಥಳಗಳಿಗೆ ಹೋಗಿಬರುವಿರಿ. ನೀವು ನೋಡಲಷ್ಟೇ ಸುಂದರವಗಿದ್ದರೆ ಸಾಲದು. ಎಲ್ಲ ಕಡೆಯಿಂದ ನಿಮಗೆ ಅನುಕೂಲವಾಗಬೇಕು ಎಂದುಕೊಳ್ಳುವುದು ಬೇಡ. ಅನಿಶ್ಚಿತತೆಯು ನಿಮ್ಮ ಮೇಲೆ ದಟ್ಟವಾದ ಪ್ರಭಾವವನ್ನು ಬೀರಬಹುದು. ಅಮೂಲ್ಯವಾದ ಸಂಪತ್ತು ಅಥವಾ ಸಂಬಂಧವನ್ನು ಕಳೆದುಕೊಳ್ಳಬೇಕಸದೀತು. ಕುಟುಂಬದಲ್ಲಿ ಪರಸ್ಪರ ಪ್ರೀತಿಯು ತೋರುವುದು. ಪ್ರಯಾಣದಿಂದ ಪ್ರಯಾಸವಾಗಲಿದೆ. ಹೊಸ ವ್ಯವಹಾರದ ಬಗ್ಗೆ ನಿಮಗೆ ಆಪ್ತರ ಸಲಹೆಯು ಸಿಗಲಿದೆ. ಮಕ್ಕಳ ಸ್ವಭಾವವು ಇಷ್ಟವಾಗದೇ ಹೋಗುವುದು. ಹಣಕಾಸಿನ ಕಾರಣಕ್ಕೆ ನೀವು ಮೋಸ ಹೋಗಬಹುದು. ಹೊಸ ವಸ್ತ್ರವನ್ನು ಖರೀದಿಸಿ ಧರಿಸುವಿರಿ. ವಿದ್ಯಾರ್ಥಿಗಳಿಂದ ಸಿಗುವ ಯಶಸ್ಸನ್ನು ಹೃದಯದಲ್ಲಿ ಧರಿಸಿ.
ಧನು ರಾಶಿ: ಬಲವನ್ನು ಪ್ರದರ್ಶಿಸುವ ಯೋಜನೆಗೆ ರೂಪ ಸಿಗಲಿದೆ. ಸಾಲವನ್ನು ವಸೂಲಿ ಮಾಡಲು ಯಾರನ್ನಾದರೂ ಸಾಲ ಕೊಟ್ಟವರು ಕಳುಹಿಸಬಹುದು. ವಾಹನ ಮುಂತಾದ ಉದ್ಯಮವನ್ನು ನಡೆಸುತ್ತಿದ್ದರೆ ಲಾಭವಿರಲಿದೆ. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಎಡವಟ್ಟು ಮಾಡಿಕೊಳ್ಳುವಿರಿ. ವಾಹನದಲ್ಲಿ ಸಣ್ಣ ಅಪಘಾತವಾಗಲಿದೆ. ಆಕಸ್ಮಿಕವಾಗಿ ವಿವಾಹ ಮಾತುಕತೆಗೆ ತಯಾರಿಯಾಗಬಹುದು. ಇನ್ನೊಬ್ಬರ ಬಗ್ಗೆ ದೋಷವನ್ನೇ ಹುಡುಕುತ್ತ ಕುಳಿತುಕೊಳ್ಳುವ ಬದಲು ಗುಣಗಳನ್ನು ಸ್ವೀಕರಿಸಿ ಸಖ್ಯ ಮಾಡಿಕೊಳ್ಳುವುದು ಉತ್ತಮ. ಉಪಕಾರದ ಸ್ಮರಣೆಯನ್ನು ನೀವು ಮಾಡಿಕೊಳ್ಳುವುದಿಲ್ಲ. ಮುಂಗೋಪವು ಸಂಬಂಧವನ್ನು ಹಾಳು ಮಾಡುವುದು. ವಿವಿಧ ವಸ್ತುಗಳ ಖರೀದಿಯನ್ನು ಮಾಡಲಿದ್ದೀರಿ. ಸಂಗಾತಿಯ ಒರಟಾದ ಮಾತಿಗೆ ಉತ್ತರಕೊಡಲು ಹೋಗುವುದು ಬೇಡ. ನೀವು ವಹಿಸಿಕೊಂಡ ಕಾಮಗಾರಿಯ ಬಗ್ಗೆ ಪೂರ್ಣ ವಿಶ್ವಾಸ ಬರದು. ಮನೆಯ ಕಾರ್ಯದಲ್ಲಿ ನಿಮ್ಮ ಇಡೀ ದಿನವು ಕಳೆದು ಹೋದುದ್ದು ಗೊತ್ತಾಗದೇ ಹೋಗಬಹುದು.
ಮಕರ ರಾಶಿ: ನಿಮ್ಮ ದೇಹದ ಸೂಕ್ಷ್ಮಪ್ರದೇಶಗಳನ್ನು ಸರಿಯಾಗಿ ಕಾಪಾಡಿಕೊಳ್ಳಿ. ಬೇಕೆಂದೇ ಶಸ್ತ್ರಗಳಿಂದ ಘಾಸಿ ಮಾಡಿಕೊಳ್ಳುವಿರಿ. ಮನೆಯಲ್ಲಿ ಹರ್ಷದ ವಾತಾವರಣ ಇದ್ದು ಬಂಧುಗಳು ನಿಮ್ಮ ಜೊತೆಗಿರುವಿರು. ಸರಳವಾದ ನಿಮ್ಮ ವ್ಯಕ್ತಿತ್ವಕ್ಕೆ ಯಾರೂ ಮನಸೋಲುವರು. ಕರ್ತವ್ಯವನ್ನು ನಿಷ್ಠೆಯಿಂದ ಮಾಡುವಿರಿ. ಪ್ರೀತಿಗೆ ಮಿತ್ರರಿಂದ ಸಹಕಾರವು ಇರುವುದು. ಸ್ನೇಹ ಸಂಬಂಧವನ್ನು ಹೆಚ್ಚು ಆಪ್ತ ಎನಿಸುವುದು. ಮೋಹದಿಂದ ಸತ್ಯವನ್ನು ಅರಿತುಕೊಳ್ಳಲಾಗದು. ಅಪೇಕ್ಷಿಸದಿದ್ದರೂ ನಿಮ್ಮ ಪರಿಶ್ರಮಕ್ಕೆ ಯೋಗ್ಯವಾದ ಗೌರವವು ಸಿಗುವುದು. ಕೆಟ್ಟ ಕೆಲಸಕ್ಕೆ ಯಾರಾದರೂ ಪ್ರೇರಣೆ ಕೊಡಬಹುದು. ದುರಭ್ಯಾಸವು ನಿಮಗೆ ಬೇಡವೆನಿಸುವುದು. ಸಂಗಾತಿಯ ಮೇಲೇ ಪ್ರೀತಿಯು ಹೆಚ್ಚಾಗಿ ಅದನ್ನು ಹೇಳಿಕೊಳ್ಳಲು ಸಂಕೋಚಪಡುವಿರಿ. ನಿಮಗೆ ಏಕಾಂಗಿಯಂತೆ ಅನ್ನಿಸಬಹುದು. ಪ್ರಾಣಿಗಳ ಸಹಾವಾಸದಿಂದ ಮನಸ್ಸಿಗೆ ಹಿತ ಎನಿಸುವುದು. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮ್ಮ ಉತ್ಸಾಹಕ್ಕೆ ಭಂಗ ಬರುವುದು. ಬಹಳ ದಿನಗಳಿಂದ ಹೋಗಬೇಕು ಎಂದುಕೊಂಡಲ್ಲಿಗೆ ಹೋಗಬಹುದು.
ಕುಂಭ ರಾಶಿ: ಸ್ತ್ರೀಯರು ಸಂತೋಷದಿಂದ ದಿನ ಕಳೆಯುವರು. ಇಂದು ಎಲ್ಲೇ ಇದ್ದರೂ ಕಾರ್ಯದ ಪ್ರಗತಿಯನ್ನು ಪಡೆದುಕೊಳ್ಳುವಿರಿ. ಒಂದೇ ಉದ್ದೇಶ ಹೊಂದಿದ ಹಲವರನ್ನು ಭೇಟಿ ಮಾಡುವಿರಿ. ಯಾರೊಂದಿಗೂ ಮುಕ್ತವಾಗಿ ಮಾತನಾಡಲು ಆಗದು. ಕೆಲವು ಸನ್ನಿವೇಶವು ನಿಮಗೆ ಇಷ್ಟವಾಗದು. ಅದರೂ ಅನಿವಾರ್ಯ ಎನಿಸೀತು. ಕೋಪವನ್ನು ಬಿಟ್ಟೆನೆಂದರೂ ಮತ್ತೆ ಹೇಗಾದರೂ ನಿಮ್ಮ ಬಳಿ ಬರುವುದು. ಯಾವುದಾದರೂ ರೀತಿಯಲ್ಲಿ ಮತ್ತೆ ನಿಮ್ಮನ್ನು ಸೇರಿಕೊಳ್ಳುವುದು. ನಕಾರಾತ್ಮಕ ಸೂಚನೆ ನಿಮಗೆ ಸಿಗಲಿದ್ದು, ಅದನ್ನು ನಿರ್ಲಕ್ಷ್ಯ ಮಾಡುವಿರಿ. ಸಮಾಧಾನದ ಚಿತ್ತವು ಅನೇಕ ವಿಚಾರಕ್ಕೆ ಪೂರಕ. ನಿಮ್ಮ ಮನೋಬಲದ ಪ್ರದರ್ಶನವನ್ನು ತೋರಿಸಬೇಕಾದೀತು. ಸುಮ್ಮನೇ ವಾಗ್ವಾದವನ್ನು ಮಾಡಲು ಹೋಗಿ ಸಮಯವನ್ನು ಹಾಗೂ ಇತರರ ಸಮಯವನ್ನೂ ಹಾಳು ಮಾಡುವಿರಿ. ಹಲವರ ಕಾರಣದಿಂದ ನಿಮ್ಮ ಗುರಿಯು ಬದಲಾಗಬಹುದು. ಹೃದಯ ವೈಶಾಲ್ಯವನ್ನು ತೋರಿಸುವಿರಿ. ಅಚ್ಚುಕಟ್ಟಾದ ಕಾರ್ಯದಿಂದ ಅಧಿಕಾರಿಗಳ ಮನಸ್ಸನ್ನು ಗೆಲ್ಲಬಹುದು.
ಮೀನ ರಾಶಿ: ನಿಮ್ಮ ಅಸಹಾಯಕತೆಯನ್ನು ಹೇಳಿಕೊಳ್ಳುವುದು ಬೇಡ. ನಿಮ್ಮನ್ನು ಕಂಡರೆ ಆಗದವರ ಎದುರೇ ನೀವು ಗರ್ವದಿಂದ ಇರುವಿರಿ. ನೀವು ಇಂದು ಅಕಾರಣವಾಗಿ ಚಿಂತೆ ಮಾಡುವಿರಿ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ಕಾರ್ಯದಲ್ಲಿ ಶ್ರದ್ಧೆಯಿರುವ ಕಾರಣ ಅನ್ಯ ಆಲೋಚನೆಯನ್ನು ಮಾಡಲಾರಿರಿ. ನಿಮ್ಮ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವುದು. ಇಂದು ಸೌಂದರ್ಯಕ್ಕೆ ಬೆಲೆ ಕೊಡುವಿರಿ. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರುಗಳಾದಾರು. ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಂತೆ ತೋರಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು. ಬಂಧುಗಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ನಿಮ್ಮ ಹಣವನ್ನು ಬಲಾತ್ಕಾರದಿಂದ ಪಡೆಯಬೇಕಾಗಬಹುದು.
-ಲೋಹಿತ ಹೆಬ್ಬಾರ್ – 8762924271 (what’s app only)
Published On - 6:21 am, Sun, 22 December 24