AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಆದಾಯದಲ್ಲಿ ಹಿನ್ನಡೆ, ಬುದ್ಧಿವಂತಿಕೆಯಿಂದ ವ್ಯವಹರಿಸುವಿರಿ

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ಡಿಸೆಂಬರ್​ 06: ಪರರ ಭಾಗ್ಯವನ್ನು ನೆನೆದು ಕೊರಗುವುದಕ್ಕಿಂತ ನಿಮ್ಮ ಇರುವ ಭಾಗ್ಯವನ್ನು ನೆನೆದು ಸಂತೋಷಪಡಿ. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಹಾಗಾದರೆ ಡಿಸೆಂಬರ್​ 06ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಆದಾಯದಲ್ಲಿ ಹಿನ್ನಡೆ, ಬುದ್ಧಿವಂತಿಕೆಯಿಂದ ವ್ಯವಹರಿಸುವಿರಿ
ಆದಾಯದಲ್ಲಿ ಹಿನ್ನಡೆ, ಬುದ್ಧಿವಂತಿಕೆಯಿಂದ ವ್ಯವಹರಿಸುವಿರಿ
TV9 Web
| Edited By: |

Updated on:Dec 06, 2024 | 12:12 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಧ್ರುವ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:59 ರಿಂದ ಮಧ್ಯಾಹ್ನ 12:24ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:13 ರಿಂದ 04:37 ರವರೆಗೆ, ಗುಳಿಕ ಕಾಲ ರಾತ್ರಿ 08:10ರಿಂದ 09:35 ರವರೆಗೆ.

ತುಲಾ ರಾಶಿ: ಅಸ್ತಿತ್ವವನ್ನು ಉಳಿಸಿಕೊಳ್ಳುವ ಹೋರಾಟ ನಡೆಯಲಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಹುದು. ಭೂಮಿ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯವು ಆಗುವುದು. ವೃತ್ತಿಪರರು ಇಂದು ಉತ್ತಮ ಅವಕಾಶಗಳನ್ನು ಕಂಡುಕೊಳ್ಳಬಹುದು. ಹತ್ತಿರದವರು ದೂರಾಗಬಹುದು. ಹಳೆಯ ಬಂಧುಗಳನ್ನು ಭೇಟಿ ಮಾಡುವುದು ಇಂದಿನ ಉತ್ಸಾಹಕ್ಕೆ ಕಾರಣವಾಗುವುದು. ನೀವು ಹೊಸ ಗುರಿಗಳನ್ನು ಹೊಂದಿದ್ದು ನಿಮ್ಮ ಪ್ರಯತ್ನಗಳನ್ನು ಪ್ರಾರಂಭಿಸುವಿರಿ. ನೀವು ಕೆಲವು ವ್ಯವಹಾರ ವಿಷಯಗಳನ್ನು ಜಾಣ್ಮೆಯಿಂದ ನಿಭಾಯಿಸುವಿರಿ. ಸಂಪತ್ತಿನ ಹೆಚ್ಚಳವಾಗಬಹುದು. ಇಂದು ಯಾವುದೇ ಕೆಲಸ ಮಾಡುವಾಗ, ನಿಮ್ಮ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಬೇಕು. ಹೊಸತನವನ್ನು ಕಂಡುಕೊಳ್ಳುವ ತವಕದಲ್ಲಿ ಇರುವಿರಿ. ದಾಂಪತ್ಯ ಜೀವನದಲ್ಲಿ ಕೆಲವು ಹೊಸತನವನ್ನು ಅನುಭವಿಸುವಿರಿ. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ. ಯಾರದೋ ಒತ್ತಡದಿಂದ ಮನಸ್ಸು ವಿಚಲಿತವಾಗಬಹುದು.

ವೃಶ್ಚಿಕ ರಾಶಿ: ಮಕ್ಕಳ‌ಕಾರಣದಿಂದ ಜನಪ್ರಿಯರಾಗಬಹುದು. ಇಂದು ನೀವು ಬಹಳ ಸೌಮ್ಯತೆಯಿಂದ ವ್ಯವಹರಿಸಬೇಕು. ಉದ್ಯೋಗದಿಂದ ಹೊರಬಂದು ಮನೆಯ ಬಗ್ಗೆ ಗಮನ ಹೆಚ್ಚಾಗುವುದು. ಇಂದು ಕೆಲಸದ ಸ್ಥಳದ ಸಮಸ್ಯೆಗಳಿಗೆ ನಿಮ್ಮ ನಿಷ್ಪಕ್ಷಪಾತ ವಿಧಾನವು ನಿಮ್ಮನ್ನು ಜನಪ್ರಿಯಗೊಳಿಸುವುದು. ಕೆಲವು ಆಸ್ತಿ ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ನೀವು ಇಂದು ಎಲ್ಲರ ಜೊತೆ ವಿನಯದಿಂದ ಮಾತನಾಡಬೇಕು. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ಕೆಲವು ಹೊಸ ಅವಕಾಶಗಳು ಸಿಗುವ ಲಕ್ಷಣಗಳಿವೆ. ಸರ್ಕಾರಿ ಯೋಜನೆಗೆ ಹಣ ಹೂಡುವ ಸಾಧ್ಯತೆಗಳಿವೆ. ಹಣದ ವ್ಯವಹಾರಗಳಲ್ಲಿ ಯಶಸ್ಸು ಇರುತ್ತದೆ. ಉತ್ತಮ ಕೆಲಸದಿಂದಾಗಿ, ಉದ್ಯೋಗದಲ್ಲಿ ಬಡ್ತಿ ಮತ್ತು ಉನ್ನತ ಸ್ಥಾನ ಪಡೆಯುವ ಲಕ್ಷಣವಿದೆ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಕಾದಾಟದಿಂದ ಸಮಯವು ವ್ಯರ್ಥವಾಗಲಿದೆ. ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ.

ಧನು ರಾಶಿ: ಅಧಿಕಾರಿ ವರ್ಗದ ಜೊತೆ ಸಮರ್ಪಕವಾಗಿ ಸಂವಹನ ನಡೆಸುವಿರಿ. ಸ್ನೇಹಿತರ ಜೊತೆ ನೀವು ಈ ದಿನವನ್ನು ಆನಂದದಿಂದ ಕಳೆಯುವಿರಿ. ಆದಾಯದಲ್ಲಿ ಹಿನ್ನಡೆ ಆಗುವುದು. ಬುದ್ಧಿವಂತಿಕೆಯಿಂದ ನೀವು ಹಣದ ವಂಚನೆಯಿಂದ ತಪ್ಪಿಸಿಕೊಳ್ಳುವಿರಿ. ತಂತ್ರಜ್ಞರಿಗೆ ಈ ದಿನವು ಅನುಕೂಲಕರವಾಗಿರುತ್ತದೆ. ಖರೀದಿಯಲ್ಲಿ ಉತ್ಸಾಹವು ಹೆಚ್ಚಿರುವುದು. ಮಾತು ಅತಿಯಾಗುವುದು ಬೇಡ. ಆದರೆ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ದೈಹಿಕ ದಾರ್ಢ್ಯವನ್ನು ನೀವು ಚೆನ್ನಾಗಿರಿಸಿಕೊಳ್ಳುವಿರಿ. ನಿಮ್ಮ ತಿಳುವಳಿಕೆ ಮತ್ತು ಸಭ್ಯತೆಯಿಂದ ಎಲ್ಲರೂ ಬಹಳ ಪ್ರಭಾವಿತರಾಗಬಹುದು. ಆರ್ಥಿ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಹಣದ ವಿಷಯಗಳಲ್ಲಿ ಆಸಕ್ತಿದಾಯಕ ಕೊಡುಗೆಗಳನ್ನು ಕಾಣಬಹುದು. ನಿಮ್ಮ ವಿಚಾರವನ್ನು ಇತರರ ಮುಂದೆ ಬಹಿರಂಗವಾಗಿ ಇರಿಸಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ನಿಮ್ಮವರನ್ನಾಗಿ ಮಾಡಿಕೊಳ್ಳುವ ಕಲೆ ನಿಮಗೆ ತಿಳಿಯದು.

ಮಕರ ರಾಶಿ: ಕೆಲವರ ಮಾತು ನಿಮ್ಮನ್ನು ಕಡರಳಿಸಬಹುದು. ಉದ್ಯಮವನ್ನು ಸಡಿಲಮಾಡುವುದು ಬೇಡ. ನಿರುದ್ಯೋಗದ ಕಾರಣಕ್ಕೆ ಎಲ್ಲರೂ ನಿಮ್ಮನ್ನು ತಮಾಷೆ ಮಾಡಬಹುದು. ಈ ದಿನ ಕೆಲಸದಲ್ಲಿ, ನಿಮ್ಮ ದಕ್ಷತೆಯಿಂದ ಮುಖ್ಯವಾದವರನ್ನು ನೀವು ಮೆಚ್ಚಿಸಲು ಸಾಧ್ಯವಾಗುತ್ತದೆ. ಬಂದ ಹಣದಿಂದ ಸಾಲಬಾಧೆ ನಿವಾರಣೆಯಾಗುವುದು. ಆಸ್ತಿ ವ್ಯವಹಾರವು ನಿಮಗೆ ಅನುಕೂಲವಾಗುವ ಸಾಧ್ಯತೆಯಿದೆ. ನೀವು ಎಲ್ಲರೊಂದಿಗೆ ಸಭ್ಯವಾಗಿ ಮಾತನಾಡಬೇಕು. ನಿಮ್ಮದೇ ಆದ ಒತ್ತಡಗಳು ನಿಮಗೆ ಇರಲಿದೆ. ಓಡಾಟವು ಹೆಚ್ಚಾಗಿರುವುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ. ನಿಮಗೆ ಇಂದು ಸುತ್ತಾಟ ಹೆಚ್ಚಾಗಬಹುದು. ಹಳೆಯ ಬಟ್ಟೆಗಳನ್ನು ನೀವು ಇಂದು ಧರಿಸಬಹುದು. ಸಂಗಾತಿಯನ್ನು ಮನವೊಲಿಸುವುದು ನಿಮಗೆ ಕಷ್ಟವಾಗಿ, ಸಿಟ್ಟುಗೊಳ್ಳಬೇಕಾಗುವುದು.

ಕುಂಭ ರಾಶಿ: ಎಲ್ಲ ಕಡೆಗಳಲ್ಲಿ ನಿಮ್ಮಂತೆ ನಡೆಯದು. ಇನ್ನೊಬ್ಬರ ಭಾವನೆಗೆ ಬೆಲೆ ಕೊಟ್ಟಾಗ ನಿಮಗೂ ಅದು ಸಿಗುವುದು. ನಿಮ್ಮ ವೃತ್ತಿಯ ಆದಾಯಕ್ಕಿಂತ ಬೇರೆ ಕಡೆಯಿಂದ ಆದಾಯ ಸಿಗಲಿದೆ. ಹಣಕಾಸಿನ ವಿಷಯದಲ್ಲಿ ಕೆಲವು ಲಾಭಗಳನ್ನು ನಿರೀಕ್ಷಿಸುವಿರಿ‌‌. ಕಚೇರಿಯಲ್ಲಿ ಕೆಲಸದ ಹೊರೆ ನಿಮ್ಮ ಸ್ವಂತ ಕೆಲಸವನ್ನು ಮಾಡಲು ಸ್ವಲ್ಪ ಸಮಯವನ್ನು ನೀಡುತ್ತದೆ. ನಿಮ್ಮ ವ್ಯಾಯಾಮದಲ್ಲಿ ಮಿತಿ ಇರಲಿ. ನಂಬಿಕೆಯ ಆಧಾರದಲ್ಲಿ ಹಣವನ್ನು ಕೊಡುವಿರಿ. ನಿಮ್ಮ ಈ ದಿನವು ಆತ್ಮವಿಶ್ವಾಸದಿಂದ ಇರುತ್ತದೆ. ಕುಟುಂಬದ ಯುವ ಸದಸ್ಯರ ಯಶಸ್ಸಿನಲ್ಲಿ ಹೆಮ್ಮೆ ಪಡುವಿರಿ. ಉದ್ಯಮಿಗಳಿಗೆ ಲಾಭದ ದಿನ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಜೊತೆ, ನೀವು ಖರ್ಚು ಮಾಡುವ ಪರಿಸ್ಥಿತಿಯೂ ಬರಬಹುದು. ಹೊಸ ಕೆಲಸದಲ್ಲಿ ಕೆಲವು ಅಡೆತಡೆಗಳು ಉಂಟಾಗಬಹುದು. ನಿಮ್ಮ ಕನಸಿಗೆ ಆಕಾರ ಸಿಕ್ಕಿದ್ದು ಖುಷಿಕೊಡುವುದು. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವ ಕೊಡುವಿರಿ. ನೀವು ಹೇಳಿದ್ದನ್ನು ಬಂಧುಗಳು ಮಾಡಿಕೊಡುವರು.

ಮೀನ ರಾಶಿ: ನಿಮ್ಮ ಅನುಪಮ ವ್ಯಕ್ತಿತ್ವವು ತಿಳಿದುಬರಬಹುದು. ನಿಮ್ಮ ವಿರುದ್ಧದ ಸಂಚು ಇಂದು ಬಯಲಾಗಬಹುದು. ಪರರ ಭಾಗ್ಯವನ್ನು ನೆನೆದು ಕೊರಗುವುದಕ್ಕಿಂತ ನಿಮ್ಮ ಇರುವ ಭಾಗ್ಯವನ್ನು ನೆನೆದು ಸಂತೋಷಪಡಿ. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ನಿಮ್ಮ ರಾಜಕೀಯ ಅಸ್ತ್ರವನ್ನು ವಿರೋಧಿಗಳ ಮೇಲೆ ಪ್ರಹಾರ ಮಾಡಬಹುದು. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಮಹಿಳೆಯರು ಯಾವುದೇ ದೇಶೀಯ ವ್ಯವಹಾರವನ್ನು ಆರಂಭಿಸಲು ಬಯಸುವಿರಿ. ಸಹೋದರರಿಂದ ನಿಮಗೆ ಧನಸಹಾಯವು ಸಿಗಲಿದೆ. ನಿಮ್ಮ ಅಲ್ಪ ಮಾತಿನಿಂದ ಎಲ್ಲರಿಗೂ ಸಂತೋಷವಾಗಲಿದೆ. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ.

Published On - 12:12 am, Fri, 6 December 24