AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿಮಗೆ ಸಿಕ್ಕ ಅಧಿಕಾರವನ್ನು ಕೇವಲವಾಗಿ ಕಾಣುವುದು ಬೇಡ

19 ಜನವರಿ​​ 2025: ಭಾನುವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಸ್ನೇಹಿತರ ಸಹಾಯದಿಂದ ಹೊಸ ವ್ಯವಹಾರವನ್ನು ಪ್ರಾರಂಭಿಸಲು ಸಾಧ್ಯತೆ ಕಾಣಿಸುವುದು. ನಿಮ್ಮ ಪ್ರೀತಿಪಾತ್ರರಿಂದ ನಿಮಗೆ ಬೆಂಬಲ ಸಿಗುತ್ತದೆ. ಹಾಗಾದರೆ ಜನವರಿ 19ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ನಿಮಗೆ ಸಿಕ್ಕ ಅಧಿಕಾರವನ್ನು ಕೇವಲವಾಗಿ ಕಾಣುವುದು ಬೇಡ
ನಿಮಗೆ ಸಿಕ್ಕ ಅಧಿಕಾರವನ್ನು ಕೇವಲವಾಗಿ ಕಾಣುವುದು ಬೇಡ
TV9 Web
| Edited By: |

Updated on: Jan 19, 2025 | 12:12 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಉತ್ತರಾಷಾಢ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಷಷ್ಠ, ನಿತ್ಯನಕ್ಷತ್ರ: ಹಸ್ತಾ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 24 ನಿಮಿಷಕ್ಕೆ, ರಾಹು ಕಾಲ ಸಂಜೆ 04: 59 ರಿಂದ 06:24ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:34 ರಿಂದ 04:59 ರವರೆಗೆ, ಗುಳಿಕ ಬೆಳಿಗ್ಗೆ 07:03 ರಿಂದ 08:28 ರವರೆಗೆ.

ತುಲಾ ರಾಶಿ: ನೂತನ ಮನೆಯ ನಿರ್ಮಾಣಕ್ಕೆ ಯಾರಿಂದಲಾದರೂ ವಿಘ್ನಗಳು ಬರಬಹುದು. ದೇವರ ಮೇಲೆ ನಂಬಿಕೆ ಇಟ್ಟ ಕಾರಣ ನಿಮ್ಮ ಮನೋರಥವು ಪೂರ್ತಿಯಾಗಿದ್ದು ನಿಮಗೆ ಅತಿಶಯ ಸಂತೋಷವಾಗಲಿದೆ. ದೂರದಲ್ಲಿ ಇರುವ ನಿಮಗೆ ಕುಟುಂಬದ ವಾರ್ತೆಯು ಖುಷಿಯನ್ನು ಕೊಡುವುದು. ಪ್ರೀತಿಯನ್ನು ನೀವು ಲಘುವಾಗಿ ಕಂಡು ಪ್ರಿಯಕರನಿಂದ ದೂರಾಗುವಿರಿ. ಚಿಂತನಶೀಲ ಹೂಡಿಕೆ ನಿರ್ಧಾರಗಳು ಉತ್ತಮ ಲಾಭವನ್ನು ನೀಡುತ್ತವೆ. ನಿಮ್ಮಿಂದ ಬಣ್ಣದ ಮಾತುಗಳನ್ನು ನಿರೀಕ್ಷಿಸಲಾಗದು. ನಿಮ್ಮ ಖರ್ಚುಗಳನ್ನು ನಿಯಂತ್ರಿಸುತ್ತಿರಿ. ಬಜೆಟ್‌ಗೆ ಅನುಗುಣವಾಗಿ ಖರ್ಚುಗಳನ್ನು ನಿರ್ಧರಿಸಿ. ದೀರ್ಘಾವಧಿಯ ಆರ್ಥಿಕ ಗುರಿಗಳತ್ತ ಗಮನಹರಿಸಿ. ವ್ಯವಹಾರದಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳು ದೊರೆಯುತ್ತವೆ. ಸ್ನೇಹಿತರ ಜೊತೆ ಸುತ್ತಾಟವನ್ನು ಅನಿವಾರ್ಯವಾಗಿ ಮಾಡುವಿರಿ. ಪ್ರೀತಿಯನ್ನು ತಿಳಿಸುವುದು ವಿಳಂಬವಾಗುವುದು. ನಿಮ್ಮ ಸ್ಥಾನವನ್ನು ಬೇರೆಯವರು ಆಕ್ರಮಿಸಿಕೊಳ್ಳುವರು.

ವೃಶ್ಚಿಕ ರಾಶಿ: ಯಾರನ್ನೋ ಮೆಚ್ಚಿಸಿ, ನಿಮಗೆ ಪ್ರಯೋಜನವಾಗದು. ನಿಮ್ಮವರ ಜೊತೆ ಸಂತೋಷದಿಂದ ಇರಿ. ನಿಮಗೆ ಸಿಕ್ಕ ಅಧಿಕಾರವನ್ನು ಕೇವಲವಾಗಿ ಕಾಣುವುದು ಬೇಡ. ವಾಹನ ಸೌಕರ್ಯ ಹೆಚ್ಚಾಗುವ ಸಾಧ್ಯತೆಗಳಿವೆ. ತಾಯಿಯ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ಮಾಡುವಿರಿ. ಕುಟುಂಬಗಳು ಹೆಚ್ಚಾಗುತ್ತವೆ. ಚುಚ್ಚು ಮಾತುಗಳು ನಿಮಗೆ ಅಭ್ಯಾಸವಾಗಲಿದೆ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ಇಂದು, ಚಿಂತನಶೀಲ ಹೂಡಿಕೆ ನಿರ್ಧಾರಗಳು ಉತ್ತಮ ಲಾಭವನ್ನು ನೀಡುತ್ತವೆ. ಉತ್ಸಾಹದಿಂದ ಇರಲು ನಿಮಗೆ ಮಾರ್ಗಗಳೂ ಕಡಿಮೆ‌ ಇರಬಹುದು. ಇಷ್ಟವಿಲ್ಲದಿದ್ದರೂ ಉದ್ಯೋಗಕ್ಕೆ ತೆರಳಬೇಕಾದೀತು. ಮೇಲಧಿಕಾರಿಗಳ ಮಾತು ಕಿರಿಕಿರಿ ಎನಿಸಬಹುದು. ಉದ್ಯೋಗವನ್ನು ಬದಲಿಸುವ ಮೊದಲು ಸ್ನೇಹಿತರ ಸಲಹೆಯನ್ನು ಪಡೆಯುವಿರಿ. ಯಾವುದೋ ಗುಂಗಿನಲ್ಲಿ ಇಂದಿನ ಕೆಲಸವೆಲ್ಲ ಹಾಳಾಗುವುದು. ಸ್ವಾರ್ಥದಿಂದ ನಿಮಗೇ ತೊಂದರೆಯಾಗುವುದು ಎಂದು ಮನವರಿಕೆ ಆಗುವುದು. ಕೆಲಸದ ದೊಡ್ಡ ಪಟ್ಟಿಯೇ ಇದ್ದರೂ ಬೇಗ ಮುಗಿಯುವ ಕೆಲಸವನ್ನು ಮೊದಲು ಮಾಡಿ.

ಧನು ರಾಶಿ: ಸಾಲವನ್ನು ತೀರಿಸಲಾಗದು ಎಂಬ ಅಪನಂಬಿಕೆಯು ಬರಲಿದೆ. ಸರಿಯಾದ ನಿದ್ರೆಯನ್ನು ಮಾಡಿ. ಜೀವನ ಪರಿಸ್ಥಿತಿಗಳು ಅಸ್ತವ್ಯಸ್ತವಾಗಿರಬಹುದು. ನಿಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಡಿ. ಯಾವುದೇ ನಿರ್ಧಾರವನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ. ಮಾತಿನಲ್ಲಿ ಒರಟು ಕಾಣಿಸುವುದು. ಒಳ್ಳೆಯದರ ಕಡೆಗೆ ನಿಮ್ಮ ಒಲವಿರಲಿ. ನಿಮ್ಮ ಸಂಗಾತಿಯ ವ್ಯವಹಾರದಲ್ಲಿ ಭಿನ್ನಾಭಿಪ್ರಾಯ. ಪ್ರಶಂಸೆಯನ್ನು ಯಥಾವತ್ತಾಗಿ ತೆಗೆದುಕೊಳ್ಳುವಂತಿಲ್ಲ. ‌ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ದೌರ್ಬಲ್ಯವನ್ನು ನೀವು ಸಕಾರಾತ್ಮಕವಾಗಿ ತೆಗೆದುಕೊಂಡವು ಸಾಧಿಸುವಿರಿ. ವಿದೇಶದ ಬಂಧುಗಳು ನಿಮ್ಮ ಉದ್ಯಮಕ್ಕೆ ಸಹಾಯ ಮಾಡುವರು. ಪೂರ್ವಯೋಜಿತ ಕಾರ್ಯಕ್ಕೆ ಸಮಯವನ್ನು ಹೊಂದಿಸಿಕೊಳ್ಳಲಾಗದು.

ಮಕರ ರಾಶಿ: ಬಹಳ ದಿನಗಳ ಅನಂತರ ಪ್ರೀತಿಪಾತ್ರರ ಭೇಟಿಯಿಂದ ಮನಸ್ಸು ನಿರಾಳವಾಗಬಹುದು. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಮನೆ ಮತ್ತು ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು. ನಿಮ್ಮ ಪ್ರೀತಿ ಮತ್ತು ಮಕ್ಕಳ ಬೆಂಬಲ ನಿಮಗೆ ಸಿಗುತ್ತದೆ. ಆರೋಗ್ಯವು ಉತ್ತಮವಾಗಿರುತ್ತದೆ. ನಿಮ್ಮ ಜೀವನಕ್ಕೆ ಸಂಗಾತಿಯಾವಿ ಬರುವವರ ಜೊತೆ ಮುಜುಗರದಿಂದ ಮಾತನಾಡುವಿರಿ. ಸಹವಾಸ ನಿಮಗೆ ಸಿಗುತ್ತದೆ. ರಾಜಕೀಯದಿಂದ ನಿಮಗೆ ಪ್ರೇರಣೆ ಸಿಗುವುದು. ಆರ್ಥಿಕ ಲಾಭದಿಂದ ನೀವು ಸಂತೋಷ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ಸಾಲ ಮಾಡುವಾಗ ನಿಮ್ಮ ಆದಾಯವನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ಚಿಂತೆಗೆ ಒಳಗಾಗುವಿರಿ. ಪ್ರಭಾವೀ ಜನರ ಭೇಟಿಯಿಂದ ಭವಿಷ್ಯಕ್ಕೆ ಅನೇಕ ಲಾಭವು ಆಗಲಿದೆ.

ಕುಂಭ ರಾಶಿ: ಅಲ್ಪಾವಧಿಯ ಆದಾಯವನ್ನು ಅಗತ್ಯ ವಸ್ತುಗಳ ಖರೀದಿಗೆ ಬಳಸಿ ಖಾಲಿ ಮಾಡಿಕೊಳ್ಳುವಿರಿ. ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಆರ್ಥಿಕ ಮೋಹವನ್ನು ಕಳೆದುಕೊಳ್ಳುವ ದಿನ. ಸ್ನೇಹಿತರ ಸಹಾಯದಿಂದ ಹೊಸ ವ್ಯವಹಾರವನ್ನು ಪ್ರಾರಂಭಿಸಲು ಸಾಧ್ಯವಾಗಬಹುದು. ನಿಮಗೆ ಗೊತ್ತೇ ಅಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಎಲ್ಲರ ಮೇಲೂ ವಿನಾ ಕಾರಣ ಕೋಪ‌ ಮಾಡಿಕೊಳ್ಳುವಿರಿ. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು. ನಿಮ್ಮಿಂದ ಸಂಗಾತಿಗೆ ಬೇಸರವುಂಟಾಗುವುದು. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ದೂರದ ಬಂಧುಗಳು ಪರಿಚಿತರಾಗಿ ಅವರ ಜೊತೆ ಕಾಲ ಕಳೆಯುವಿರಿ. ನಿಮಗೆ ಕೃತಜ್ಞತೆ ಇರಲಿ.

ಮೀನ ರಾಶಿ: ಪರಸ್ಥಳದ ವಾಸದಿಂದ ನಿಮಗೆ ನಿದ್ರೆಯಲ್ಲಿ ತೃಪ್ತಿ ಇರದು. ಸಮೆದುರಿನ ಸನ್ನಿವೇಶವನ್ನು ನೋಡಿ ನಿಮ್ಮ ವಾದವನ್ನು ಮುಂದುವಿರಿಸಿ. ಸ್ನೇಹಿತರ ಸಹಾಯದಿಂದ ಹೊಸ ವ್ಯವಹಾರವನ್ನು ಪ್ರಾರಂಭಿಸಲು ಸಾಧ್ಯತೆ ಕಾಣಿಸುವುದು. ನಿಮ್ಮ ಪ್ರೀತಿಪಾತ್ರರಿಂದ ನಿಮಗೆ ಬೆಂಬಲ ಸಿಗುತ್ತದೆ. ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ. ಇದರಿಂದ ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನವನ್ನು ಕೊಡಬೇಕಸದೀತು. ನಿಮ್ಮ ವೃತ್ತಿಯು ನಿಮಗೆ ಗೌರವವನ್ನು ಕೊಡಿಸುವುದು. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತ್ತದೆ ಎಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು. ಕೃಷಿಯಲ್ಲಿ ಆದ ಪ್ರಗತಿಯಿಂದ ಸಂತೋಷವಾಗುವುದು. ಅನಾರೋಗ್ಯವನ್ನು ಸರಿ ಮಾಡಿಕೊಳ್ಳುವಲ್ಲಿ ನಿಮ್ಮ ಪ್ರಯತ್ನವೂ ಬೇಕು. ಇಂದು ನಿಮ್ಮ ವಿವಾಹದ ಕೊನೆಯ ಮಾತುಕತೆಯು ನಡೆಯುವುದು.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ