Horoscope: ಈ ರಾಶಿಯವರು ತಪ್ಪು ಮಾಡಿದ್ದರೂ ಒಪ್ಪಿಕೊಳ್ಳಲಾರರು

06 ಜನವರಿ​​ 2025: ಸೋಮವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ರಾಜಕಾರಣದಿಂದ ರಾಹಕಾರಿಣಿಗೇ ಕಿರಿಕಿರಿ ಸೃಷ್ಟಿಯಾಗಬಹುದು.‌ ವೃತ್ತಿಯಲ್ಲಿ ಪ್ರಂಶಸೆ ಸಿಕ್ಕಿರುವುದು ನಿಮ್ಮ ಕಾರ್ಯದ ವೈಖರಿಯನ್ನು ತೋರಿಸುವುದು. ಶುಭ ಸಮಾರಂಭಕ್ಕೆ ಹೋಗುವಿರಿ. ಹಾಗಾದರೆ ಜನವರಿ 06ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ತಪ್ಪು ಮಾಡಿದ್ದರೂ ಒಪ್ಪಿಕೊಳ್ಳಲಾರರು
ಈ ರಾಶಿಯವರು ತಪ್ಪು ಮಾಡಿದ್ದರೂ ಒಪ್ಪಿಕೊಳ್ಳಲಾರರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2025 | 12:12 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಪರಿಘ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 00 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 16 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:25 ರಿಂದ 09:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:14 ರಿಂದ ಮಧ್ಯಾಹ್ನ 12:39 ರವರೆಗೆ, ಗುಳಿಕ ಮಧ್ಯಾಹ್ನ 02:03 ರಿಂದ 03:28 ರವರೆಗೆ.

ತುಲಾ ರಾಶಿ: ನಿಮ್ಮ ಸತ್ಯಕ್ಕೆ ಸಾಕ್ಷಿಯ ಕೊರತೆ. ಸರ್ಕಾರದ ಕೆಲಸಲದಲ್ಲಿ ಗೊತ್ತಿಲ್ಲದೇ ತಪ್ಪುಗಳು ಆಗಬಹುದು. ಸತ್ಪಾತ್ರರಿಗೆ ದಾನವನ್ನು ಕೊಟ್ಟಿದ್ದು ನಿಮಗೆ ಖುಷಿಯಾಗಲಿದೆ. ತಜ್ಞರ ಜೊತೆ ಇಂದಿನ ಸಮಯವನ್ನು ಕಳೆಯುವಿರಿ. ಸಹನೆಯಿಂದ ಅದನ್ನು ಎದುರಿಸಬೇಕಾಗುವುದು. ದುಡುಕಿ ಏನನ್ನಾದರೂ ಮಾಡಿಕೊಳ್ಳುವುದು ಬೇಡ. ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಹಿನ್ನಡೆಯ ಸಾಧ್ಯತೆ ಇದೆ. ನಿಮಗೆ ಬರಬೇಕಾದ ಹಣದ ವಿಚಾರದಲ್ಲಿಯೂ ನಿಮಗೆ ಸೋಲಾಗುವುದು. ಮನೆಯಲ್ಲಿಯೂ ನಿಮ್ಮ ಮಾತಿಗೆ ಸರಿಯಾದ ಬೆಲೆಯೂ ಸಿಗದು. ಕಛೇರಿಯಲ್ಲಿ ಇಂದು ನಿಮ್ಮಿಂದ ತಪ್ಪಾಗಿದ್ದು ಅದನ್ನು ನೀವು ಒಪ್ಪಿಕೊಳ್ಳಲಾರಿರಿ. ದುರ್ವ್ಯಸನದಿಂದ ಸಂಪತ್ತನ್ನು ನಷ್ಟ ಮಾಡಿಕೊಳ್ಳುವಿರಿ. ನಿಮ್ಮ ತಪ್ಪಿಗೆ ಪಶ್ಚಾತ್ತಾಪವಾದರೂ ಕೊನೆಯ ಹಂತವಾಗಿ ಇರಲಿ. ಏಕಾಗ್ರತೆಯ ಕೊರತೆಯನ್ನು ಸರಿ ಮಾಡಿಕೊಳ್ಳಿ. ನಿಮ್ಮ ಯೋಜನೆಗೆ ಸರಿಯಾದ ಚೌಕಟ್ಟು ಬೇಕು.

ವೃಶ್ಚಿಕ ರಾಶಿ: ಮಾನಿಸಿಕವಾದ ನೋವನ್ನು ಮರೆಯುವ ಪ್ರಯತ್ನವು ಬೇರೆ ರೀತಿಯಲ್ಲಿ ನಡೆಯುವುದು. ವಿದ್ಯಾರ್ಥಿಗಳು ಅಹಂಕಾರದ ವರ್ತನೆಯನ್ನು ತೋರಿಸಬಹುದು. ತಿಳಿವಳಿಕೆಯನ್ನು ಹೇಳಬೇಕಾದೀತು. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು. ಧೈರ್ಯದಿಂದ ಮುನ್ನಡೆದರೆ ಯಾವ ತೊಂದರೆಯೂ ತೊಂದರೆಯಾಗಿ ಉಳಿಯದು. ಪ್ರಯಾಣದಲ್ಲಿ ಯಾವುದೇ ತೊಂದರೆಯು ಬಾರದಂತೆ ದೈವವನ್ನು ಪ್ರಾರ್ಥಿಸಿ. ದಾಂಪತ್ಯದಲ್ಲಿ ಉಂಟಾದ ಕಲಹವನ್ನು ನೀವೇ ಸರಿ ಮಾಡಿಕೊಳ್ಳಿ. ನಿಮ್ಮನ್ನೇ ನೀವು ವಂಚಿಸಿಕೊಳ್ಳುವಿರಿ. ಕಲಾವಿದರಿಗೆ ಸಿಕ್ಕ ಅವಕಾಶಗಳು ತಪ್ಪಿಹೋಗಬಹುದು. ಆಸ್ತಿಯ ವಿಚಾರದಲ್ಲಿ ದುಡುಕುವುದು ಬೇಡ, ಎಲ್ಲವೂ ಶಾಂತವಾಗುವ ತನಕ ಕಾಯಬೇಕಾಗುವುದು. ವ್ಯವಸ್ಥೆಯ ಸಣ್ಣ ಕೊರತೆಗಳು ಮುಖ್ಯವಾಗಬಾರದು. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕಾಣಿಸದು.

ಧನು ರಾಶಿ: ವಿದೇಶದ ಸುತ್ತಾಟದಲ್ಲಿ ಇರುವವರಿಗೆ ಆತಂಕದ ಸೂಚನೆ ಕಾಣಿಸುವುದು. ಇಷ್ಟವಿಲ್ಲದಿದ್ದರೂ ಶುಭ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ಕಳೆದುಕೊಂಡ ಸಂಪತ್ತು ಮತ್ತಾವುದೋ ರೀತಿಯಲ್ಲಿ ಬರಬಹುದು. ಬಹಳ‌ ದಿನಗಳ‌ ಅನಂತರ ಕುಟುಂಬದವರನ್ನು ಭೇಟಿಯಾಗುತ್ತಿರುವುದು ನಿಮ್ಮ‌ ಮುಖದಲ್ಲಿ ಹರುಷ ಕಾಣುವುದು. ಸಣ್ಣ ಮಕ್ಕಳಿಂದ ನೆಮ್ಮದಿಯು ಸಿಗಲಿದೆ. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು. ರಾಜಕಾರಣದತ್ತ ನಿಮ್ಮ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಆದಾಯದ ಮೂಲವು ಸರಿಯಾಗಿ ಇರಲಿದೆ. ನಿಮ್ಮ ಸಹೋದರನ ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಬಹುದು. ಹೂಡಿಕೆಯಬ್ಯಾಂಕ್ಲ್ಲಿ ನಿಮಗೆ ಆಸಕ್ತಿಯು ಇಂದು ಕಡಿಮೆ ಇರಲಿದೆ. ದೇವರ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ.‌ ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ. ಭೂಮಿಯ ಉತ್ಪನ್ನದಿಂದ ಲಾಭವು ಸಿಗುವುದು.

ಮಕರ ರಾಶಿ: ಇಂದು ನಿಮ್ಮ ಮಕ್ಕಳ ಅಭ್ಯಾಸವನ್ನು ಸೂಕ್ಷ್ಮವಾಗಿ ಗಮನಿಸುವಿರಿ. ಆರ್ಥಿಕ ಸಂಕಷ್ಟವು ನಿಮ್ಮ ಮಾನಸಿಕ ಸ್ಥಿತಿಯನ್ನು ಹಾಳುಮಾಡುವುದು. ನಿಮಗೆ ನೆಮ್ಮದಿ ಬೇಕಾದರೆ ಸುತ್ತಲಿನವರ ಜೊತೆ ಸೌಹಾರ್ದತೆ ಮುಖ್ಯ. ಹಣವು ವ್ಯಯವಾಗಬಹುದು. ಕಳ್ಳರ ಭೀತಿಯು ಇರಲಿದೆ. ಒತ್ತಡದಿಂದ ನಿಮ್ಮ ಕಾರ್ಯವು ಮಂದಗತಿಯಲ್ಲಿ ಸಾಗುವುದು. ಯಂತ್ರಜ್ಞರು ಇಂದು ಬಹಳ ಒತ್ತಡದಿಂದ ಇರುವರು. ಸ್ವಲ್ಪ ಮಾನಸಿಕ‌ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ಪರಿಹಾರವನ್ನು ಕಂಡುಕೊಳ್ಳಬಹುದು. ನಿಮ್ಮ ಜಾಣ್ಮೆಯಿಂದ ನಿಮ್ಮ‌ ಸಂಸ್ಥೆಯು ಹೆಚ್ಚಿನ ಯಶಸ್ಸನ್ನು ಗಳಿಸಬಹುದು. ನಿಮ್ಮ ಆಲೋಚನೆಗಳೇ ನಿಮ್ಮನ್ನು ನಿರೂಪಿಸುತ್ತವೆ. ಇಂದು ಸಂಗಾತಿಯ ನಡುವೆ ಭಿನ್ನಾಭಿಪ್ರಾಯಗಳು ಕಲಹವಾಗಿ ಪರಿಣಮಿಸೀತು. ಒಬ್ಬರಾದರೂ ತಟಸ್ಥರಾಗಿರುವುದು ವಿವಾದವು ಆಗದಂತೆ ನೋಡಿಕಳ್ಳಬಹುದು. ಯಾರೇ ಏನೇ ಹೇಳಿದರೂ ಕೇಳಿಕೊಳ್ಳುವ ತಾಳ್ಮೆ ಅಗತ್ಯವಾಗಿ ಬೇಕು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು.

ಕುಂಭ ರಾಶಿ: ಸುಮ್ಮನೇ ಏನನ್ನೋ ಕಲ್ಪಿಸಿಕೊಂಡು ಹತಾಶರಾಗುವಿರಿ. ಸಾಮಾಜಿಕ ಕಾರ್ಯಕ್ಕೆ ಇಂದು ಸಮಯವು ಸಿಗದು. ವೈದ್ಯ ವೃತ್ತಿಯವರಿಗೆ ಅಪವಾದವು ಬರಬಹುದು. ಸಾಲಗಾರರಿಂದ ನಿಮ್ಮ ಮಾನಸಿಕ ಸ್ಥಿತಿಯು ಕೆಡಬಹುದು. ಯಾರದೋ ತಪ್ಪಿಗೆ ನೀವು ತಲೆಕೊಡಬೇಕಾದೀತು. ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಸಿಗಬೇಕಾದ ಲಾಭದಿಂದ ವಂಚಿತರಾಗಲಿದ್ದೀರಿ. ಅನಪೇಕ್ಷಿತ ವಿಚಾರದಲ್ಲಿ ಹೆಚ್ಚು ಮನಸ್ಸು ಇರುವುದು. ಉಸಿರಾಟ ತೊಂದರೆಯು ಸ್ವಲ್ಪ ಕಾಣಿಸಿಕೊಳ್ಳಬಹುದು. ನೆರೆಹೊರೆಯ ವಿಚಾರದಲ್ಲಿ ಅಸಮಾಧಾನ ಇರಲಿದೆ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಸ್ಥಿತಿ ತಪ್ಪಬಹುದು.

ಮೀನ ರಾಶಿ: ರಾಜಕಾರಣದಿಂದ ರಾಹಕಾರಿಣಿಗೇ ಕಿರಿಕಿರಿ ಸೃಷ್ಟಿಯಾಗಬಹುದು.‌ ವೃತ್ತಿಯಲ್ಲಿ ಪ್ರಂಶಸೆ ಸಿಕ್ಕಿರುವುದು ನಿಮ್ಮ ಕಾರ್ಯದ ವೈಖರಿಯನ್ನು ತೋರಿಸುವುದು. ಶುಭ ಸಮಾರಂಭಕ್ಕೆ ಹೋಗುವಿರಿ. ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ಹೆಚ್ಚಿನ ಸೌಕರ್ಯದಿಂದ ನೀವು ಸೋಮಾರಿಯಾಗುವಿರಿ. ಕೇಳಿದವರಿಗೆ ನಿಮ್ಮ‌ ಸಹಾಯವು ಸಿಗಲಿದೆ.‌ ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ. ಕಳೆದ ಕೆಟ್ಟ ಕಾಲವನ್ನು‌ ನೆನಪಿಸಿಕೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕೇಂದ್ರವಾಗಿ ಇರಿಸಿಕೊಂಡು ಮಾತನಾಡುವರು. ಸಹೋದ್ಯೋಗಿಗಳ ಮಾತಿನ ಬಗ್ಗೆ ಅಧಿಕವಾಗಿ ಪ್ರತಿಕ್ರಿಯೆ ಬೇಡ. ನೌಕರರ ಮೇಲೆ ನಿಮ್ಮದೊಂದು ಲಕ್ಷ್ಯ ಇರಬೇಕಾಗುವುದು. ಏಕಾಗ್ರತೆಯು ಭಂಗವಾಗಲು ಅನೇಕ ಕಾರಣಗಳು ಇರಲಿವೆ. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು.

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ