Horoscope: ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆ ಇಷ್ಟವಾಗದು

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ನವೆಂಬರ್​ 27: ಆರಾಮಾಗಿ ಇರಲು ನೀವು ಹೆಚ್ಚು ಇಷ್ಟಪಡುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ಹಾಗಾದರೆ ನವೆಂಬರ್​ 27ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆ ಇಷ್ಟವಾಗದು
ಜ್ಯೋತಿಷ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 27, 2024 | 6:24 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಆಯುಷ್ಮಾನ್, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:20 ರಿಂದ 03:45ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:06 ರಿಂದ 09:31 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 10:56 ರಿಂದ ಮಧ್ಯಾಹ್ನ 12:20 ರವರೆಗೆ.

ತುಲಾ ರಾಶಿ: ಗಳಿಸಿದ ಯಶಸ್ಸನ್ನು ನೀವೇ ಕೆಡಿಸಿಕೊಳ್ಳುವ ಸಾಧ್ಯತೆ ಇದೆ. ಇಂದಿನ ಕೆಲವು ಘಟನೆಗಳನ್ನು ಪ್ರತಿಕೂಲವಾಗಿ ತೆಗೆದುಕೊಂಡರೆ ಕಷ್ಟ. ಇಂದು ನಿಮಗೆ ಕಾರ್ಯದಿಂದ ತೃಪ್ತಿ ಸಿಗಲಿದೆ. ಇಂದಿನ ಸಮಯವನ್ನು ವ್ಯರ್ಥ ಮಾಡದೇ ನಿಮ್ಮದೇ ಸಮಯಸಾರಿಣಿಯನ್ನು ರೂಪಿಸಿಕೊಳ್ಳಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ. ಕಛೇರಿಯ ನಿಯಮಗಳು ನಿಮಗೆ ಹೊಂದಿಕೆಯಾಗದು. ಈಗಲೇ ಅಧ್ಯಯನ ವಿಧಾನವನ್ನು ಬದಲಿಸಿಕೊಳ್ಳಿ. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇವಲ ಓಡಾಟವಾಗುವುದು. ಮಾತನಾಡವೇಕಾದ ಸಂದರ್ಭದಲ್ಲಿ ಮೌನ ವಹಿಸಿ ಎಲ್ಲರ ಕೋಪಕ್ಕೆ ಗುರಿಯಾಗುವಿರಿ. ಕಾಲ್ಪನಿಕ ಜಗತ್ತಿನಿಂದ ಹೊರಬನ್ನಿ. ಹಣದ ಹಿಂದೆ ಎಷ್ಟೇ ಬಿದ್ದರೂ ಸಿಕ್ಕುವಷ್ಟು ಮಾತ್ರ ಸಿಗುವುದು. ನಿರುಪಯುಕ್ತ ವಸ್ತುಗಳನ್ನು ಇಂದು ನೀವು ಬೇರೆಯವರಿಗೆ ಕೊಡುವಿರಿ. ಅಶುಭ ಸೂಚನೆ ಬಂದರೆ ಇಂದಿನ ಪ್ರಯಾಣವನ್ನು ಮುಂದೆ ಹಾಕಿ. ವೃತ್ತಿಯಲ್ಲಿ ನಿಮಗೆ ಅನನುಕೂಲತೆಯು ಸೃಷ್ಟಿಯಾಗಬಹುದು.

ವೃಶ್ಚಿಕ ರಾಶಿ: ಅಧಿಕ ಸಂಪಾದನೆಯು ನಿಮ್ಮ ಮಾರ್ಗವನ್ನು ತಪ್ಪಿಸುವುದು. ಸಮಯಕ್ಕೆ ಸರಿಯಾಗಿ ನಿಮ್ಮ ಬುದ್ಧಿಯು ಸ್ಫುರಿಸುವುದು. ಇಂದು ನಿಮ್ಮ ಬಲವಂತದ ಪ್ರೇಮ ತಪ್ಪಿಹೋಗುವುದು. ಬಂಧುಗಳ ಎದುರು ಮಾತನ್ನು ಹರಿಬಿಡಬೇಡಿ. ಒಬ್ಬರೇ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಎಲ್ಲದರ ಬಗ್ಗೆಯೂ ನಿಮ್ಮಲ್ಲಿ ಅನಿಶ್ಚಿತತೆ ಇರುವುದು. ಕುಟುಂಬದವರ ಜೊತೆ ನಿಮ್ಮ ಸಮಯವನ್ನು ನೀಡಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯ ನಡವಳಿಕೆಯು ಇಷ್ಟವಾಗದು. ಸ್ಪರ್ಧಾಮನೋಭಾವ ನಿಮಗೆ ಸಾಕೆನಿಸಬಹುದು. ಸಂಗಾತಿಯ ಕಡೆಯಿಂದ ನಿಮಗೆ ಹೊಗಳಿಕೆ ಇರುವುದು. ನಿಮ್ಮ ಪ್ರಯತ್ನವು ಸಫಲತೆಯನ್ನು ಕಾಣುವುದು. ನಿಮ್ಮ ಗುರಿಯ ಬಗ್ಗೆ ಸ್ಪಷ್ಟತೆ ಇರಲಿ. ಇಂದು ನಿಮಗೆ ಬಂಧನದಂತೆ ಅನ್ನಿಸಬಹುದು.‌

ಧನು ರಾಶಿ: ವಾತಾವರಣದ ಬದಲಾವಣೆಯಿಂದ ಸ್ವಾಸ್ಥ್ಯವು ಹಾಳಾಗುವುದು. ಸಾಮಾಜಿಕ ಕಾರ್ಯದಲ್ಲಿ ತೊಡಗುವುದಷ್ಟೇ ಅಲ್ಲ, ಆರ್ಥಿಕ ಸಹಾಯವನ್ನೂ ನೀವು ಮಾಡಬೇಕಾಗುವುದು. ಅತಿಯಾದ ಪ್ರಯಾಣದಿಂದ ನೀವು ದುರ್ಬಲರಾಗುವಿರಿ. ಇತ್ತೀಚಿನ ಕೆಲವು ಸ್ಥಿತಿಗಳು ಒತ್ತಡವನ್ನು ತಂದಿರಬಹುದು. ನಿಮ್ಮ ಹೊಸ ಕರ್ತವ್ಯವನ್ನು ಮರೆಯಬಹುದು. ಅಗ್ನಿಗೆ ಏನೇ ಮಾಡಿದರೂ ತನ್ನ ಶಾಖ ನೀಡುವ ಸ್ವಭಾವವನ್ನು ಬಿಡದು. ಮನೆಗೆ ಬೇಕಾದ ವಸ್ತುಗಳ ಖರೀದಿ ನಡೆಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಆತಂಕ ಇರುವುದು. ಗೊಂದಲವನ್ನು ಮಾಡಿಕೊಳ್ಳದೇ ಕೆಲಸವನ್ನು ಸರಳ ಮಾಡಿಕೊಳ್ಳಿ. ಬಿಡುವಿನ ಸಮಯವನ್ನು ಅಧಿಕ ಸಂಪಾದನೆಗಾಗಿ ಬಳಸಿಕೊಳ್ಳುವಿರಿ. ಒಂದಕ್ಕಿಂತ ಹೆಚ್ಚು ಕೆಲಸವನ್ನು ಒಟ್ಟಿಗೇ ಮಾಡಲು ಹೋಗಿ ಅಸ್ತವ್ಯಸ್ತ ಮಾಡಿಕೊಳ್ಳುವಿರಿ. ನಿಮ್ಮ ವರ್ತನೆಯು ಸಂದರ್ಭಕ್ಕೆ ಸರಿಯಾಗಿ ಇರಲಿ. ನಿಮಗೆ ಬೇಕಾದ ಯಾವುದನ್ನೂ ಸುಲಭವಾಗಿ ಪಡೆಯಲಾಗದು.

ಮಕರ ರಾಶಿ: ದೊಡ್ಡ ಮಟ್ಟದ ವ್ಯವಹಾರಕ್ಕೆ ಕೈಹಾಕಲು ಆರ್ಥಿಕ ಸಬಲತೆಯೂ ಬೇಕು. ಸುಮ್ಮನೇ ಮುಖಭಂಗವಾಗುವುದು. ಕುಟುಂಬದಲ್ಲಿ ಸಲ್ಲದ ಮಾತುಗಳು ಬರಬಹುದು. ಅದನ್ನು ತೆಗೆದುಕೊಂಡು ಹೋಗುವುದು ನಿಮ್ಮದೇ ಕಾರ್ಯವಾಗಬಹುದು. ಇನ್ನೊಬ್ಬರ ವೈಯಕ್ತಿಕ ವಿಚಾರದಲ್ಲಿ ಹೆಚ್ಚು ಆಸಕ್ತಿ ಇರುವುದು. ಬೇಕಾದ ವ್ಯಕ್ತಿಯಿಂದ ನಿಮಗೆ ಬೇಕಾದುದನ್ನು ಕೇಳಿಕೊಳ್ಳುವಿರಿ. ಯಾರಿಗೋ ಸಿಗಬೇಕಾದ ಹಣವು ನಿಮ್ಮ ಕೈ ಸೇರಬಹುದು. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ಹೊಂದಾಣಿಕೆಯ ಮನೋಭಾವವು ಇರಬೇಕಾದೀತು. ಹಣವನ್ನು ಉಳಿಸಿಕೊಳ್ಳಲು ನಿಮ್ಮ ಪ್ರಯತ್ನವು ಫಲಕೊಡುವುದು. ಇಂದಿನ ನಿಮ್ಮ ವರ್ತನೆಯು ಗಾಂಭೀರ್ಯದಿಂದ ಇರಲಿದೆ. ಇಂದು ನೀವು ಮಾತನ್ನು ಅಧಿಕವಾಗಿ ಆಡುವಿರಿ. ಸಂಗಾತಿಯ ಮಾತು ಸಂಕಟವನ್ನು ತರಬಹುದು. ತುರ್ತು ಪ್ರಯಾಣವನ್ನು ನೀವು ಮಾಡಬೇಕಾಗಬಹುದು. ಎಲ್ಲ ಕಾರ್ಯದಲ್ಲಿಯೂ ನೀವೇ ಮುಂಚೂಣಿಯಲ್ಲಿ ಇರುವಿರಿ.

ಕುಂಭ ರಾಶಿ: ಮನ ಬಂದಂತೆ ವರ್ತಿಸಲು ನೀವು ಇಂದು ಸ್ವತಂತ್ರರಲ್ಲ. ನಿಮ್ಮ ಕಾರ್ಯದ ಅನುಭವದ ಮೇಲೆ ಉತ್ತಮ ಸ್ಥಾನವು ಪ್ರಾಪ್ತವಾಗುವುದು. ಮನೆಯಿಂದ ದೂರವಿರುವ ನಿಮಗೆ ಕುಟುಂಬದವರ ನೆನಪಾಗುವುದು. ಉತ್ಸಾಹದಿಂದ ಏನನ್ನಾದರೂ ಮಾಡಲು ಹೋಗುವಿರಿ. ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು. ಒಂದು ಕಾರ್ಯವು ಬಹೂಪಯೋಗಿಯಾಗುವಂತೆ ನೋಡಿ. ಇನ್ನೊಬ್ಬರನ್ನು ನೋಯಿಸುವುದು ನಿಮಗೆ ಇಷ್ಟವಾಗದು. ನೂತನ ವಸ್ತುಗಳನ್ನು ಖರೀದಿಸುವಿರಿ. ಮನೋರಂಜನೆಯಲ್ಲಿ ನಿಮ್ಮ ಹೆಚ್ಚಿನ ಸಮಯವನ್ನು ಕಳೆಯಬೇಕಾದೀತು. ನಿಮ್ಮ ಸ್ವಭಾವವನ್ನು ಸರಿ ಮಾಡಿಕೊಳ್ಳಬೇಕಾದೀತು. ಸೌಲಭ್ಯ ಹೆಚ್ಚಾದಷ್ಟೂ ಆಲಸ್ಯ ಹೆಚ್ಚಾಗುವುದು. ಮೇಲಧಿಕಾರಿಗಳ ಬೆಂಬಲವು ನಿಮಗೆ ಬಲವನ್ನು ಕೊಡಬಹುದು. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ. ದಾನದಿಂದ ನಿಮಗೆ ಸಂತೋಷವಾಗಲಿದೆ.

ಮೀನ ರಾಶಿ: ಭೂ ಉತ್ಪನ್ನಗಳ ಮಾರಾಟವನ್ನು ಹೆಚ್ಚು ಮಾಡುವಿರಿ ಮತ್ತು ಅಧಿಕ‌ಲಾಭವೂ ಆಗುವುದು. ನಿಮ್ಮ ಉದ್ಯಮಕ್ಕೆ ಮನೆಯಿಂದ ಪ್ರೋತ್ಸಾಹ ಸಹಾಯಗಳು ಸಿಗದಿದ್ದರೂ ಬಂಧುಗಳಿಂದ ಸಿಗುವುದು. ಇಂದು ನೀವು ನಿಮ್ಮ ಉದ್ದೇಶಿಸಿದ್ದಕ್ಕಿಂತ ಅಧಿಕ ಮುನ್ನಡೆ ಸಾಧಿಸುವಿರಿ. ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ಕಳೆದು ಹೋದ ಸಂಗತಿಗಳನ್ನು ಮತ್ತೆ ಮತ್ತೆ ಹೇಳುವುದು ಬೇಡ. ಸ್ನೇಹಿತರಿಂದ ಅಲ್ಪ ಆರ್ಥಿಕ ಲಾಭವು ನಿಮಗೆ ಸಿಗುವುದು. ಆರಾಮಾಗಿ ಇರಲು ನೀವು ಹೆಚ್ಚು ಇಷ್ಟಪಡುವಿರಿ. ಕಛೇರಿಯಲ್ಲಿ ಸಹೋದ್ಯೋಗಿಗಳಿಂದ ಇಂದು ನಿಮಗೆ ಸಹಾನುಭೂತಿಯು ಸಿಗುವುದು. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ನಿಮಗೆ ಯಾರ ಜೊತೆಗೂ ಗುರುತಿಸಿಕೊಳ್ಳುಬುದು ಇಷ್ಟವಾಗದು. ಆದಷ್ಟು ಚರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ. ಪರರ ಕಷ್ಟದ ಬಗ್ಗೆಯೂ ನಿಮಗೆ ಅರಿವಿರಲಿ. ಆಪ್ತರ ಸಹಕಾರವನ್ನು ನೀವು ಅಲ್ಲಗಳೆಯಬಾರದು.

Published On - 12:15 am, Wed, 27 November 24

ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಈ ರಾಶಿಯವರ ಜೀವನದಲ್ಲಿ ಸಂಪತ್ತು ಮತ್ತು ಖ್ಯಾತಿ ಹೆಚ್ಚಾಗುತ್ತದೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?