Horoscope: ಹೊಸ ವಿಚಾರಗಳ ಕಲಿಕೆಯಲ್ಲಿ ಆಸಕ್ತಿ, ಬೆಲೆಬಾಳುವ ವಸ್ತುಗಳ ಖರೀದಿ ಸಾಧ್ಯತೆ
ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ಡಿಸೆಂಬರ್ 19: ಸಂಗಾತಿಗೆ ನಿಮ್ಮ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಆಕಸ್ಮಿಕವಾಗಿ ಸ್ನೇಹಿತರಿಂದ ಉಡುಗೊರೆ ಸಿಗಲಿದೆ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಹಾಗಾದರೆ ಡಿಸೆಂಬರ್ 19ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಹಾನಕ್ಷತ್ರ: ಮೂಲಾ, ಮಾಸ: ಮಾರ್ಗಶಿರ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವೈಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 53 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 06 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:54 ರಿಂದ 03:18ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:53 ರಿಂದ 08:17 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 09:42 ರಿಂದ 11:06 ರವರೆಗೆ.
ತುಲಾ ರಾಶಿ: ಆತ್ಮರಕ್ಷಣೆ ಮೊದಲು, ಅನಂತರ ಮುಂದಿನದ್ದು. ಇಂದು ನಿಮ್ಮ ಎಂತಹ ಎಚ್ಚರಿಕೆಯೂ ಹಾದಿ ತಪ್ಪಿಸೀತು. ಬೇಗನೆ ಯಶಸ್ಸು ಸಿಗುವುದೆಂದು ದಾರಿ ಬದಲಿಸಬಾರದು. ಸಂಕುಚಿತ ಸ್ವಭಾವವನ್ನು ದೂರ ಮಾಡಿಕೊಳ್ಳುವುದು ಉತ್ತಮ. ನಿಮ್ಮದಾದ ಕಾರ್ಯದಲ್ಲಿ ನೀವು ತೊಡಗಿಗೊಳ್ಳಿ. ಖಾಲಿ ಇರುವುದು ಬೇಡ. ವಾಹನ ಸಂಚಾರದಲ್ಲಿ ಅಡಚಣೆ ಆಗಲಿದೆ. ಶತ್ರುಗಳಿಂದ ನಿಮಗೆ ಆಗಬೇಕಾದ ಕಾರ್ಯವಾಗಬಹುದು. ಇಷ್ಟವಿಲ್ಲದ ವೃತ್ತಿಯನ್ನು ಅವಲಂಬಿಸಿ ಕಷ್ಟಪಡುವಿರಿ. ಸಹೋದ್ಯೋಗಿಗಳ ಅಸಹಕಾರವು ಅವರ ಮೇಲೆ ದ್ವೇಷವನ್ನು ಮೂಡಿಸಬಹುದು. ಆಕಸ್ಮಿಕವಾಗಿ ನಿಮಗೆ ಧನನಷ್ಟವಾಗಲಿದ್ದು ಚಿಂತೆ ಕಾಡುವುದು. ನಿಮ್ಮ ಸಣ್ಣ ತಪ್ಪೂ ಅಪಹಾಸ್ಯಕ್ಕೀಡಾಗುವುದು. ಗುರಿಯ ಬಗ್ಗೆ ಸರಿಯಾದ ಮಾರ್ಗದರ್ಶನ ಪಡೆದುಕೊಳ್ಳಿ. ನಿಮ್ಮ ಸಂಕಲ್ಪವು ಫಲಿಸಲಿದ್ದು ಖುಷಿಯಾಗುವುದು. ಪ್ರಯಾಣದಲ್ಲಿ ಜಾಗರೂಕತೆ ಅವಶ್ಯಕ. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳನ್ನು ನೀವು ಕೇಳಿಬೇಕಾಗಬಹುದು.
ವೃಶ್ಚಿಕ ರಾಶಿ: ಸ್ವ ಉದ್ಯಮಕ್ಕೆ ಸಮಯ ಕೊಡುವುದು ಕಷ್ಟವಾಗಬಹುದು. ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಕೂಡಿಟ್ಟ ಹಣವನ್ನು ತೆಗೆಯಬೇಕಾದೀತು. ನಿಗದಿತ ಸಮಯಕ್ಕೆ ಕೆಲಸವಾಗದೇ ಇರುವ ಕಾರಣ ಕೆಲಸವನ್ನು ಕೊಟ್ಟವರು ನಿಮ್ಮ ಮೇಲೆ ಮುನಿಸಿಕೊಂಡಾರು. ಪ್ರೇಮವನ್ನು ಒಪ್ಪಿಕೊಳ್ಳಲಾರರು. ಆದರೆ ಪೀಡಿಸುವುದು ಬೇಡ. ಕಳೆದ ಸಮಯವನ್ನು ಮೆಲುಕು ಹಾಕುವಿರಿ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ. ಜಾಡ್ಯದಿಂದ ಇಂದು ಕಛೇರಿಗೆ ವಿಳಂಬವಾಗಿ ಹೋಗುವಿರಿ. ಬೆಲೆಬಾಳುವ ವಸ್ತುಗಳನ್ನು ಖರೀದಿಸಲಿದ್ದು ಅದರ ರಕ್ಷಣೆಯನ್ನು ಮಾಡಬೇಕಾಗುವುದು. ಹೊಸ ವಿಚಾರಗಳ ಕಲಿಕೆಗೆ ಅವಕಾಶಗಳು ಸಿಗುವುದು. ವ್ಯಾಪಾರವನ್ನು ಹೆಚ್ಚಿನ ಆದಾಯ ಬರುವಂತೆ ಮಾಡಿಕೊಳ್ಳುವಿರಿ. ಹಳೆಯ ವಾಹನದಿಂದ ನಿಮಗೆ ಲಾಭವೇ ಆಗುವುದು. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು. ಸಹೋದ್ಯೋಗಿಗಳ ಜೊತೆ ಆಪ್ತವಾಗಿ ಮಾತನಾಡುವಿರಿ.
ಧನು ರಾಶಿ: ನ್ಯಾಯಾಲಯದಲ್ಲಿ ಜಯ ಸಿಕ್ಕರೂ ಅದನ್ನು ಪಡೆಯುವ ಬಗೆ ನಿಮಗೆ ಅರಿಯದಾಗದು. ಎರಡು ದೋಣಿಯಲ್ಲಿ ಕಾಲು ಹಾಕಿ ಸಾಗಲಾಗದು. ಖರ್ಚನ್ನು ನಿಭಾಯಿಸುವ ಕೌಶಲವನ್ನು ಅನುಭವಿಗಳಿಂದ ಪಡೆಯಬೇಕು. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಗೊಂದಲ ಬರಬಹುದು. ಕಾರ್ಯಕ್ಷೇತ್ರದಲ್ಲಿ ಹೆಚ್ಚು ಸಮಯ ಕೆಲಸವನ್ನು ಮಾಡಬೇಕಾಗುವುದು. ಹೇಗಾದರೂ ಬರುವ ಹಣದಲ್ಲಿ ಉಳಿತಾಯ ಮಾಡಿಕೊಳ್ಳಿ. ನೂತನ ವಸ್ತ್ರಗಳನ್ನು ಖರೀದಿಸುವಿರಿ. ಆರ್ಥಿಕತೆಯ ತೊಂದರೆಯಿಂದ ನಿಮ್ಮ ಕೆಲವು ವಸ್ತುಗಳನ್ನು ಮಾರಾಟ ಮಾಡುವಿರಿ. ನಿಮ್ಮ ಅಪ್ರಾಮಣಿಕತೆಯು ಕೆಲವರಿಗೆ ಗೊತ್ತಾಗಬಹುದು. ಪ್ರಯಾಣ ಮಾಡವ ಮನಸ್ಸಿದ್ದರೂ ಶರೀರಕ್ಕೆ ಅಸಾಧ್ಯ ಎನಿಸಬಹುದು. ಹಠದ ಸ್ವಭಾವದಿಂದ ಸಹೋದ್ಯೋಗಿಗಳಿಗೆ ಸಹಾಯವನ್ನು ಮಾಡುವುದಿಲ್ಲ. ನಿಮ್ಮದೇ ವಸ್ತುವು ನಿಮಗೆ ಹೊಸದರಂತೆ ತೋರುವುದು. ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಪೋಷಕರ ಸಹಕಾರ ಸಿಗಲಿದೆ.
ಮಕರ ರಾಶಿ: ವಾಹನದಿಂದ ನಿಮಗೆ ಭೀತಿಯಾಗುವ ಸಾಧ್ಯತೆ ಹೆಚ್ಚು. ಜಾಣ ಕಿವುಡುತನವನ್ನು ತೋರಿಸುವಿರಿ. ಇಂದು ನಿಮಗೆ ನ್ಯಾಯಾಲಯದ ವಿಚಾರದಲ್ಲಿ ಬೇಸರವೆನಿಸಬಹುದು. ಸಾಲವನ್ನು ಮಾಡಬೇಕಾಗಿಬರಬಹುದು. ಅಪರಿಚಿತರ ಜೊತೆ ವಿವಾದಕ್ಕೆ ಎಡೆಮಾಡಿಕೊಡುವಿರಿ. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ. ನಿಮ್ಮ ಸ್ವಭಾವವನ್ನು ಮರೆಮಾಚುವುದು ಕಷ್ಟಸಾಧ್ಯ. ಅಚಾತುರ್ಯದಿಂದ ತಪ್ಪು ನಡೆಯಬಹುದು. ಹಳೆಯ ಹೂಡಿಕೆಯು ಪ್ರಯೋಜನಕ್ಕೆ ಬರಲಿದೆ. ಕಛೇರಿಯ ಒತ್ತಡದಿಂದ ವಿರಾಮವನ್ನು ಪಡೆದು ಕುಟುಂಬಕ್ಕೆ ಸಮಯವನ್ನು ಕೊಡುವಿರಿ. ಉದ್ಯೋಗದ ನಿಮಿತ್ತ ಅನಿವಾರ್ಯವಾಗಿ ಓಡಾಟ ಮಾಡುವ ಸಂದರ್ಭವು ಬರಬಹುದು. ನ್ಯಾಯವನ್ನು ಬಿಟ್ಟು ವರ್ತಿಸುವುದು ಬೇಡ. ನಂಬಿಕೆಯನ್ನು ಉಳಿಸಿಕೊಳ್ಳಲು ನೀವು ಕಷ್ಟಪಡಬೇಕಾದೀತು. ಹೊಸ ಮಿತ್ರರ ಜೊತೆ ಸಮಾಲೋಚನೆಯನ್ನು ಮಾಡುವಿರಿ. ಬಹಳ ದಿನಗಳ ಅನಂತರ ಮನೆಯ ಬಗ್ಗೆ ಆಲೋಚನೆ ಬರಲಿದೆ. ನಿರುದ್ಯೋಗವೇ ನಿಮಗೆ ಅಭ್ಯಾಸವಾಗುವ ಸಾಧ್ಯತೆ ಇದೆ.
ಕುಂಭ ರಾಶಿ: ಆಲಸ್ಯದ ಮನೋಭಾವದಿಂದ ಆಗಬೇಕಾದ ಕಾರ್ಯಗಳು ಆಗದೇಹೋಗಬಹುದು. ಸ್ಥಿರಾಸ್ತಿಯಿಂದ ಕೆಲವು ಲಾಭಗಳೂ ಆಗಲಿವೆ. ನಿಮ್ಮ ಗುರಿಯನ್ನು ಇಂದು ಯಾರಾದರೂ ಬದಲಿಸಬಹುದು. ಯಾರಾದರೂ ನಿಮ್ಮ ಕಿವಿಕಚ್ಚಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು. ಆಸ್ತಿಯನ್ನು ಪಡೆಯುವ ಬಗ್ಗೆ ಉತ್ಸಾಹವಿರಲಿದೆ. ಸುಲಭವಾಗಿ ದೊರೆಯುವುದನ್ನು ಇಂಸು ಇಷ್ಟಪಡುವುದಿಲ್ಲ. ಒಂಟಿತನವು ನಿಮಗೆ ಅಭ್ಯಾಸವಾಗಲಿದ್ದು ನಿಶ್ಚಿಂತೆಯಿಂದ ಇರುವಿರಿ. ಲೆಕ್ಕ ಶೋಧಕರು ಹೆಚ್ಚಿನ ಒತ್ತಡದಲ್ಲಿ ಇರುವರು. ಅಪರಿಚಿತರ ಜೊತೆ ಸಲುಗೆಯ ವ್ಯವಹಾರವು ಬೇಡ. ಸಂಗಾತಿಯ ಮಾತು ನಿಮಗೆ ಇಷ್ಟವಾಗದಿರುವುದು. ವಾಹನ ಖರೀದಿಗೆ ನಿಮ್ಮ ಸಹಮತವಿರದು. ನಿಜವನ್ನು ಮುಚ್ಚಿಡಬೇಕಾಗುವುದು. ಉದ್ವೇಗದಲ್ಲಿ ಏನಾದರೂ ಹೇಳುವಿರಿ. ಸಹನೆಯು ಕೈತಪ್ಪಿ ಹೋಗುವುದು. ಧಾರ್ಮಿಕ ಮುಖಂಡರು ತಮ್ಮ ನಿಲುವನ್ನು ಗಟ್ಟಿಮಾಡಿಕೊಳ್ಳಿ.
ಮೀನ ರಾಶಿ: ಅಮೂಲ್ಯವಾದ ವಸ್ತುಗಳನ್ನು ಕೇವಲ ಮಾತಿನ ಮೇಲೆ ಖರೀದಿ ಮಾಡುವುದು ಬೇಡ. ಪರೀಕ್ಷಿಸಿ ಪಡೆದುಕೊಳ್ಳಿ. ಕೆಡುಕಿನ ಆಲೋಚನೆಯಿಂದಲೇ ನೀವು ದೂರವಾಗುವುದು ಉತ್ತಮ. ನಿಮಗೆ ಸಿಗುವ ಕೆಲವು ಜವಾಬ್ದಾರಿಗಳಲ್ಲಿ ಹಿನ್ನಡೆಯಾಗಲಿದೆ. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ವ್ಯಾಪಾರದಲ್ಲಿ ಶತ್ರುಗಳು ಕಾಣಿಸಿಕೊಳ್ಳುವರು. ಸಂಗಾತಿಗೆ ನಿಮ್ಮ ವಾಸ್ತವದ ಉದ್ಯೋಗದ ವಾಸ್ತವ ಚಿತ್ರಣವನ್ನು ಕೊಡುವಿರಿ. ಆಕಸ್ಮಿಕವಾಗಿ ಸ್ನೇಹಿತರಿಂದ ಉಡುಗೊರೆ ಸಿಗಲಿದೆ. ಧಾರ್ಮಿಕ ಶ್ರದ್ಧೆಯಿಂದ ಅನುಕೂಲತೆ ಇರಲಿದೆ. ಮಿತ್ರರ ಧನಸಹಾಯದಿಂದ ವಾಹನವನ್ನು ಖರೀದಿಸುವಿರಿ. ವಿದೇಶದ ಜೊತೆ ವ್ಯಾಪಾರದ ಸಂಪರ್ಕವನ್ನು ಬೆಳೆಸಿಕೊಳ್ಳುವಿರಿ. ನಿಮ್ಮಕೆಲಸದ ಬಗ್ಗೆ ಹಗುರವಾಗಿ ಮಾತನಾಡಿಯಾರು. ಶುಭಸಮಯವನ್ನು ನಿರೀಕ್ಷೆಯಷ್ಟೇ ಮಾಡಬಹುದು. ಪಾಪಿ ಸಮುದ್ರಕ್ಕಿಳಿದರೂ ಮೊಣಕಾಲು ನೀರು ಎಂಬಂತಾಗುವುದು. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಶತ್ರುಗಳು ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ.