Daily Horoscope: ದುಷ್ಟರ ಜೊತೆ ರಾಜಿಯ ಅನಿವಾರ್ಯತೆ, ಉದ್ಯಮದಲ್ಲಿ ಅನಿರೀಕ್ಷಿತ ಬದಲಾವಣೆ

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಈ ದಿನ ನಿಮ್ಮ ಭವಿಷ್ಯದಲ್ಲಿ ಯಾವ ರೀತಿಯ ಪಾಸಿಟಿವ್ ಸಂಗತಿಗಳಿವೆ ಮತ್ತು ಯಾವುದರ ಬಗ್ಗೆ ಎಚ್ಚರ ವಹಿಸಬೇಕು ಎಂಬುದರ ಕುರಿತು ಇಲ್ಲಿದೆ ಮಾಹಿತಿ. ಇಂದಿನ ದಿನಭವಿಷ್ಯ ಓದಲು ಮರೆಯದಿರಿ.

Daily Horoscope: ದುಷ್ಟರ ಜೊತೆ ರಾಜಿಯ ಅನಿವಾರ್ಯತೆ, ಉದ್ಯಮದಲ್ಲಿ ಅನಿರೀಕ್ಷಿತ ಬದಲಾವಣೆ
ಸಾಂದರ್ಭಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಸುಷ್ಮಾ ಚಕ್ರೆ

Updated on: Nov 28, 2024 | 5:06 AM

ಶಾಲಿವಾಹನ ಶಕೆ 1947

ಕ್ರೋಧೀ ಸಂವತ್ಸರ

ದಕ್ಷಿಣಾಯನ

ಶರದ್ ಋತು

ವೃಶ್ಚಿಕ ಮಾಸ

ಮಹಾನಕ್ಷತ್ರ : ಅನುರಾಧಾ

ಮಾಸ : ಕಾರ್ತಿಕ

ಪಕ್ಷ : ಕೃಷ್ಣ

ವಾರ : ಗುರು

ತಿಥಿ : ತ್ರಯೋದಶೀ

ನಿತ್ಯನಕ್ಷತ್ರ : ಸ್ವಾತಿ

ಯೋಗ : ಸೌಭಾಗ್ಯ

ಕರಣ : ವಣಿಜ

ಸೂರ್ಯೋದಯ – ಬೆಳಗ್ಗೆ 6 – 40 ಗಂಟೆ

ಸೂರ್ಯಾಸ್ತ – ಬೆಳಗ್ಗೆ 6 ಗಂಟೆ

ಶುಭಾಶುಭಕಾಲ : ರಾಹು ಕಾಲ 13:46 – 15:10, ಯಮಘಂಡ ಕಾಲ 06:41 – 08:06, ಗುಳಿಕ ಕಾಲ 09:31 – 10:56

ತುಲಾ ರಾಶಿ :

ದುಷ್ಟರ ಜೊತೆಗೂ ರಾಜಿ ಮಾಡಿಕೊಳ್ಳಬೇಕಾಗಬಹುದು.‌ ಇಲ್ಲವಾದರೆ ನಿಮಗೆ ನೆಮ್ಮದಿ ಇರದು. ನಿಮ್ಮ ಪ್ರೇಮವು ಇತರರಿಗೆ ಗ್ರಾಸವಾಗಬಹುದು. ನಿಮಗೆ ಇಂದು ಧೈರ್ಯದ ಕೊರತೆ ಕಾಣಿಸಿಕೊಳ್ಳಬಹುದು. ಕೆಲವು ಮಾನಸಿಕ ಸ್ಥಿತಿಯನ್ನು ಬಿಡಲು ಪ್ರಯತ್ನಿಸುವಿರಿ. ಆದರೆ ಅದು ನಿಮಗೆ ಗೊತ್ತಿಲ್ಲದೇ ನಿಮ್ಮನ್ನು ಆವರಿಸಬಹುದು. ನಿಮ್ಮ ಶಕ್ತಿ ಮೀರಿದ ಕಾರ್ಯಕ್ಕೆ ಬೆಲೆ ಸಿಗದೇ ಹೋಗುವುದು. ವಾಹನ ಖರೀದಿಸಲು ನಿಮಗೆ ಹಣಕಾಸಿನ ಕೊರತೆಯಾಗಿ ಮುಂದೂಡುವಿರಿ. ದಾಂಪತ್ಯದ ಇಂದಿನ ಕಲಹವನ್ನು ಅಲ್ಲಿಗೇ ನಿಲ್ಲಿಸಿ. ಹೆಚ್ಚು ಪ್ರಯತ್ನದಿಂದ ಅಲ್ಪ ಲಾಭವಾಗುವುದು. ನೇರವಾದ ಮಾತಿನಿಂದ ನಿಮಗೇ ನೋವಾಗುವುದು. ಬಂಧುಗಳ ಭೇಟಿಯು ನಿಮಗೆ ಸಮಾಧಾನವನ್ನು ತರದು. ತಾಯಿಯ ಜೊತೆ ವಾಗ್ವಾದಕ್ಕೆ ನಿಲ್ಲುವುದು ಬೇಡ. ಅಚಾತುರ್ಯವು ನಿಮ್ಮಿಂದ ಆಗಬಹುದು. ವೃತ್ತಿಯಲ್ಲಿ ನಿಮಗೆ ಯಾರಿಂದಲಾದರೂ ಅನನುಕೂಲತೆಯು ಸೃಷ್ಟಿಯಾಗಬಹುದು.

ವೃಶ್ಚಿಕ ರಾಶಿ :

ಇಂದು ಖರ್ಚು ಮಾಡುವ ಮೊದಲು ಏನು ಲಾಭವಿದೆ ಎಂಬ ಲೆಕ್ಕಾಚಾರದಲ್ಲಿ ಇರುವಿರಿ. ಇಂದು ಅಪರಿಚಿತ ಕರೆಗಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ನೀವು ಯಾವ ಮಾತಿಗೂ ಜಗ್ಗದವರಂತೆ ಇರುವಿರಿ. ನಿಮ್ಮ ಮನೋವಿಕಾರಗಳು ಒಂದೊಂದಾಗಿಯೇ ಗೊತ್ತಾಗುವುದು. ಖರೀದಿಸಿದ ಭೂಮಿಯನ್ನು ಮತ್ತೊಬ್ಬರಿಗೆ ಕೊಟ್ಟುಬಿಡುವಿರಿ. ಹಿರಿಯರಿಂದ ನಿಮಗೆ ಮೆಚ್ಚುಗೆ ಸಿಗಬಹುದು. ದಾಂಪತ್ಯದಲ್ಲಿ ಪ್ರೀತಿಗೆ ನೀವು ಮಾರುಹೋಗಬಹುದು. ಅತಿಥಿಗಳ ಆಗಮನವು ನಿಮ್ಮ ಮನೆಗೆ ಆಗಲಿದೆ. ವೃತ್ತಿಯಲ್ಲಿ ನಿಮ್ಮ ಸಹಕಾರಕ್ಕೆ ಪ್ರಶಂಸೆಯು ಸಿಗುವುದು. ಭವಿಷ್ಯದ ಜೀವನದ ಬಗ್ಗೆ ಭಯವು ಇರುವುದು. ನಿಮ್ಮ ಬಗ್ಗೆ ಅಪ್ರಾಮಾಣಿಕತೆಯ ಬಗ್ಗೆ ಮಾತುಗಳು ಕೇಳಿಬರುವುದು. ಪರಿಚಿತರ ಮಾತು ನಿಮ್ಮ ಮನಸ್ಸಿಗೆ ನಾಟುವುದು. ಕಳೆದುಹೋದ ಸಂಬಂಧವನ್ನು ಮತ್ತೆ ಸರಿ ಮಾಡಿಕೊಳ್ಳುವಿರಿ. ನಿಮ್ಮ ದೃಷ್ಟಿಗೆ ದೋಷಬರಬಹುದು.

ಧನು ರಾಶಿ :

ಇಂದು ನೀವು ಭಾವಪರವಶರಾಗುವ ಸಾಧ್ಯತೆ ಇದೆ. ನಿಮಗೆ ಇಷ್ಟವಿಲ್ಲದ ವಿಚಾರದಲ್ಲಿ ಚರ್ಚೆ ನಡೆಯುವುದು. ವಿಳಂಬ ಕಾರ್ಯಕ್ಕೆ ಹೇಳಿಸಿಕೊಳ್ಳಬೇಕಾದೀತು. ಪದೋನ್ನತಿಯ ಬಗ್ಗೆ ಕೇಳಿದರೂ ಏನೂ ಪ್ರಯೋಜನವಾಗದು. ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಿ. ಬಂಗಾರದ ಬಗ್ಗೆ ವ್ಯಾಮೋಹ ಹೆಚ್ಚಾಗಲಿದೆ. ಸಂಗಾತಿಯನ್ನು ಹಣಕ್ಕಾಗಿ ಪೀಡಿಸುವಿರಿ. ಪ್ರೀತಿ ಪಾತ್ರರನ್ನು ನೀವು ದೂರಮಾಡುವಿರಿ. ನಿರಂತರ ಕೆಲಸದಿಂದ ಸ್ವಲ್ಪ ವಿಶ್ರಾಂತಿಯು ಮುಖ್ಯವಾದೀತು. ವಿದ್ಯಾರ್ಥಿಗಳಿಗೆ ಆಯ್ಕೆಯ ವಿಷಯದಲ್ಲಿ ನಿರಾಸಕ್ತಿ ಬರುವುದು. ಎಲ್ಲ ಸನ್ನಿವೇಶದಲ್ಲಿಯೂ ನಿಮ್ಮ ವರ್ತನೆಯನ್ನು ಸರಿಯಾಗಿ ಇರಲಿ. ಸಂಗಾತಿಯ ಮೇಲೆ ನಿಮಗೆ ಸಿಟ್ಟು ಬರಲಿದೆ. ದೂರದ ಬಂಧುಗಳ ಸಮಾಗಮವಾಗಬಹುದು. ಬೇಡವೆಂದರೂ ಕೆಲವು ಮಾತನ್ನು ಆಡುವ ಸಂದರ್ಭವು ಬರುತ್ತದೆ. ನಿಮ್ಮ ಮೆಚ್ಚುಗೆಯನ್ನು ನಿರೀಕ್ಷಿಸಿಯಾರು.

ಮಕರ ರಾಶಿ :

ಇಂದು ನಿಮ್ಮ‌ ಬಗ್ಗೆ ಬರುವ ಅಪವಾದವನ್ನು ನೀವು ಜೀರ್ಣಿಸಿಕೊಳ್ಳಲು ಕಷ್ಟವಾದೀತು. ಸಂಗಾತಿಯ ವಿಚಾರದಲ್ಲಿ ನಿಮಗೆ ಸಂಪೂರ್ಣ ತೃಪ್ತಿ ಇರದು. ನಿಮ್ಮ ಇಂದಿನ ಕೆಲಸವು ಯಶಸ್ಸಿನ ಶಿಖರವನ್ನು ಏರುವುದು. ದಿನವಿಡೀ ನಿಮಗೆ ಲಾಭದ ಅವಕಾಶಗಳು ಸಿಗುವುದು. ಮಾನಸಿಕ ಸ್ಥಿತಿಯೂ ಬಹಳ ಆಹ್ಲಾದದಿಂದ ಇರಲಿದೆಯಾವ ಹೂಡಿಕೆಯು ನಿಮಗೆ ಲಾಭದಾಯಕವಾಗುವುದು. ಸಂಗಾತಿಯ ವಿಚಾರದಲ್ಲಿ ಸಂಪೂರ್ಣ ಖುಷಿ ಇರುವುದು. ವೃತ್ತಿಯಲ್ಲಿ ಒತ್ತಡವಿದ್ದರೂ ಅದನ್ನು ತೋರಿಸುವುದಿಲ್ಲ. ಅನ್ಯರು ನಿಮ್ಮನ್ನು ಅಪಹಾಸ್ಯ ಮಾಡಬಹುದು. ಅಪರಿಚಿತ ಕರೆಗಳಿಗೆ ನೀವು ಸ್ಪಂದಿಸಲಾರಿರಿ. ಆಹಾರದ ಉದ್ಯಮಕ್ಕೆ ಎಂದಿಗಿಂತ ಅಧಿಕ ಲಾಭವು ಆಗಬಹುದು. ಮಾತಗಳನ್ನು‌ ಇಂದು ಕಡಿಮೆ ಆಡಲಿದ್ದೀರಿ. ಪ್ರಭಾವಿ ವ್ಯಕ್ತಿಗಳಿಂದ ತೊಂದರೆಯು ದೂರಾಗಬಹುದು. ನಿಮಗೆ ಹಿಡಿಸದ ವಿಚಾರದಲ್ಲಿ ಪ್ರಯತ್ನವನ್ನು ಮುಂದುವರಿಸುವುದು ಯೋಗ್ಯವಾಗದು.

ಕುಂಭ ರಾಶಿ :

ನೀವು ಉದ್ಯಮದಲ್ಲಿ ಅನಿರೀಕ್ಷಿತ ಬದಲಾವಣೆ ತರುವಿರಿ. ಅಪ್ತರ ಮೇಲಿನ ನಂಬಿಕೆಯು ನಷ್ಟವಾಗುವುದು. ನಿಮ್ಮದಲ್ಲದ ಕಾರ್ಯಕ್ಕೆ ನೀವು ತಲೆ ಕೊಡಬೇಕಾದೀತು. ನಿಮ್ಮ ಸಂಗಾತಿಯು ಕೋಪಗೊಳ್ಳಬಹುದು. ನಿಮ್ಮ ಮಾತಿನಿಂದ ಸಮಾಧಾನವು ಬರುವುದು. ದೂರದ ಮಕ್ಕಳನ್ನು ನೋಡುವ ಆಸೆ ಆಗಲಿದೆ. ಉದ್ಯಮದ ಕಾರಣ ಪ್ರಯಾಣ ಮಾಡುವ ಸ್ಥಿತಿಯು ಬರಬಹುದು. ಅಪ್ತರ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಿರಿ. ಮನೆಯಿಂದ ದೂರವಿರುವ ನಿಮಗೆ ಮನೆಗೆ ಹೋಗಬೇಕು ಎಂದು ಅನ್ನಿ್ಸುವುದು. ಖರ್ಚಿನ ದಾರಿಗಳು ಒಂದೊಂದೇ ತೆರೆಯುವುದು. ನಿಮ್ಮ ಮಾತಿಗೆ ಬೆಂಬಲವು ಸಿಗುವುದು. ನಿಮ್ಮ ಸೌಂದರ್ಯವು ಇತರರಿಗೆ ಇಷ್ಟವಾಗದು. ಹಲವು ಮಾನಸಿಕ ತೊಡಕುಗಳಿಂದ ನೀವು ಹೊರಬರುವಿರಿ. ಎಲ್ಲಿಗಾದರೂ ದೂರದ ಊರಿಗೆ ಪ್ರಯಾಣದ ಯೋಜನೆಗಳನ್ನು ಮಾಡಿಕೊಳ್ಳುವಿರಿ.

ಮೀನ ರಾಶಿ :

ಮಕ್ಕಳ ಜೀವನವನ್ನು ಕಂಡು ಇಂದು ದುಃಖವಾಗಬಹುದು. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡಲಾಗದು. ಪ್ರೀತಿಯ ಹೊಸ ಅಧ್ಯಾಯವನ್ನು ಆರಂಭ ಮಾಡುವಿರಿ. ಒಂಟಿಯಾಗಿ ಕುಳಿತು ಕಳೆದ ದಿನಗಳನ್ನು ನೆನೆಯುವಿರಿ. ಮಕ್ಕಳ ಮದುವೆಯ ಚಿಂತೆಯೂ ಒಮ್ಮಿಂದೊಮ್ಮೆಲೆ ಬರಬಹುದು. ನಿಮ್ಮ ಮಾತಿಗೆ ಕುಟುಂಬವು ಸಮ್ಮತಿಸಬಹುದು. ಔದಾರ್ಯವು ಅಧಿಕವಾಗಿ ಬೇಡ. ಆರ್ಥಿಕವಾಗಿ ಬಲಗೊಳ್ಳಲು ನೀವು ದೈವಕ್ಕೆ ಶರಣಾಗುವಿರಿ. ಇಂದು ಏಕಾಗ್ರತೆಯಿಂದ ಕಾರ್ಯವನ್ನು ಮಾಡಲು ಕಷ್ಟವಾದೀತು. ಆಗಬೇಕಾದ ಕಾರ್‍ಯಕ್ಕೆ ಇಂದಿನ ಸುತ್ತಾಟವು ವ್ಯರ್ಥವಾದೀತು. ಗೃಹನಿರ್ಮಾಣದ ಕಾರ್ಯವು ದೊಡ್ಡ ಸಮಸ್ಯೆಯಾಗಿ ಪರಿಣಮಿಸಬಹುದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಬೇಕು. ಆದಷ್ಟು ಸ್ಥಿರಾಸ್ತಿಯ ಬಗ್ಗೆ ಚರ್ಚೆ ಮಾಡುವುದನ್ನು ತಪ್ಪಿಸಿ.

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ