Horoscope: ಈ ರಾಶಿಯವರ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚುವುದು
6 ಫೆಬ್ರವರಿ 2025: ಗುರುವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಇಂದು ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ. ಅಸಾಧ್ಯವನ್ನು ನೀವು ಸಾಧಿಸುವ ಪ್ರಯತ್ನ ಮಾಡುವಿರಿ. ಹಾಗಾದರೆ ಫೆಬ್ರವರಿ 6ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ನವಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಶುಕ್ಲ, ಕರಣ : ಬವ, ಸೂರ್ಯೋದಯ – 07 – 00 am, ಸೂರ್ಯಾಸ್ತ – 06 – 32 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:13 – 15:40, ಯಮಘಂಡ ಕಾಲ 07:01 – 08:27, ಗುಳಿಕ ಕಾಲ 09:54 – 11:20.
ತುಲಾ ರಾಶಿ: ಇಂದು ನಿಮಗೆ ಸರ್ಕಾರದ ಕಡೆಯಿಂದ ಒತ್ತಡವು ಬರಲಿದ್ದು, ಪ್ರಭಾವಿ ವ್ಯಕ್ತಿಗಳಿಂದ ಅದನ್ನು ತಪ್ಪಿಸುಕೊಳ್ಳುವಿರಿ. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಯಾವುದೇ ಸಮಾಜಕ್ಕೆ ಸಂಬಂಧಿಸಿದ ವಿಷಯಗಳು ನಿಮ್ಮ ಪರವಾಗಿ ಬರಬಹುದು. ವ್ಯವಹಾರದ ದೃಷ್ಟಿಯಿಂದ ಎಲ್ಲವೂ ಚೆನ್ನಾಗಿರುತ್ತದೆ. ವಾದಗಳ ಕಡೆ ಹೆಚ್ಚು ಗಮನವಿರುವುದು. ನಿಮ್ಮ ವೈಯಕ್ತಿಕ ವಿಚಾರವನ್ನು ಹೊರಗಿನವರಿಗೆ ಹೇಳಬೇಡಿ. ಯಾವುದೇ ಯೋಜನೆಯನ್ನು ರೂಪಿಸುವ ಮೊದಲು ಮತ್ತೊಮ್ಮೆ ಯೋಚಿಸುವುದು ಅವಶ್ಯಕ. ದೂರದೂರಿಗೆ ಪ್ರಯಾಣ ಸಾಧ್ಯತೆ ಇದೆ. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ಸಾಮರಸ್ಯ ಹೆಚ್ಚಾಗುತ್ತದೆ. ಎಂದೋ ಬರುವ ಸಮಸ್ಯೆಗಳಿಗೆ ಇಂದು ಚಿಂತೆಪಡುವಿರಿ. ವೃತ್ತಿಪರ ಜೀವನದಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ಸ್ಪಷ್ಟ ನಿಲುವನ್ನು ಇಟ್ಟುಕೊಳ್ಳಿ. ಸೋಲನ್ನು ನಿರೀಕ್ಷಿಸಿದರೂ ಅದನ್ನು ಅರಗಿಸಿಕೊಳ್ಳುವುದು ಕಷ್ಟವಾದೀತು.
ವೃಶ್ಚಿಕ ರಾಶಿ: ನಿಮ್ಮ ಹಳೆಯ ತಪ್ಪುಗಳಿಂದ ಹೊಸ ಸ್ಥಾನ, ಅವಕಾಶಗಳು ಸಿಗದೇ ಇರಬಹುದು. ಪ್ರಯತ್ನಕ್ಕೆ ಪೂರ್ಣಫಲವು ಲಭ್ಯವಾಗದೇ ಹೋದೀತು. ಮನೆಯಲ್ಲಿ ಆಪ್ತರ ಆಗಮನದಿಂದ ಸಂತೋಷ. ಕೆಲವು ಜನರು ನಿಮ್ಮ ಸರಳ ಸ್ವಭಾವವನ್ನು ದುರುಪಯೋಗ ಪಡಿಸಿಕೊಳ್ಳಬಹುದು. ಆತುರದಲ್ಲಿ ನೀವು ಕೆಲವು ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬಹುದು. ನಿಮ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಗಾತಿಯ ಪೂರ್ಣ ಬೆಂಬಲ ಸಿಗುವುದು. ವೃತ್ತಿಪರ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಅವಕಾಶ ದೊರೆಯಲಿದೆ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ಸಜ್ಜನರ ಕೂಟದಲ್ಲಿ ಭಾಗವಹಿಸುವಿರಿ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವಿರಿ. ಕಠಿಣ ಪರಿಶ್ರಮದ ಆಧಾರದ ಮೇಲೆ, ಕಷ್ಟಕರವಾದ ಕೆಲಸಗಳನ್ನು ಕೂಡ ಸುಲಭವಾಗಿ ಪೂರ್ಣಗೊಳಿಸುವಿರಿ. ಹಿರಿಯರಿಗೆ ಗೌರವವನ್ನು ಕೊಡುವಿರಿ. ಸಮಯಕ್ಕೆ ಸರಿಯಾಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಾಗುವುದು.
ಧನು ರಾಶಿ: ಕಷ್ಟವನ್ನೇ ನುಂಗಿತ್ತ ಬದುಕುವವರಿಗೆ ಯಾವದೂ ಕಷ್ಟವಾಗದು. ಇಂದು ನಿಮಗೆ ಎಲ್ಲ ರೀತಿಯಲ್ಲೂ ಲಾಭವಾಗಲಿದೆ ಎಂದು ಮನಸ್ಸು ಹೇಳುವುದು. ಕೆಲವು ಸಮಯದಿಂದ ನಡೆಯುತ್ತಿರುವ ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಗಳಿವೆ. ನೀವು ಉತ್ತಮ ಆರ್ಥಿಕ ಯೋಜನೆಯನ್ನು ಮಾಡಬಹುದು. ಯುವಕರು ಹೊಸ ಉದ್ಯೋಗವನ್ನು ಪಡೆಯುವ ಸಾಧ್ಯತೆಯಿದೆ. ಉದ್ಯೋಗಸ್ಥ ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಪೂರೈಸಲು ಸಾಧ್ಯವಾಗುತ್ತದೆ. ಹಣಕಾಸಿನ ವಿಷಯದಲ್ಲಿ ಕೆಲವು ರೀತಿಯ ಆತುರ ಉಂಟಾಗಬಹುದು. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಉನ್ನತ ಅಧಿಕಾರಿಗಳಿಂದ ಪ್ರಶಂಸೆ ಪ್ರಾಪ್ತಿಯಾಗಲಿದೆ. ಮನಸ್ಸಿಗೆ ಅಧಿಕ ವಿಶ್ರಾಂತಿಯ ಅಗತ್ಯವಿರುವುದು. ಪ್ರಾರ್ಥನೆಯ ಪರಿಣಾಮ ನಿಮ್ಮ ಮನಸ್ಸು ಎಂದಿಗಿಂತ ನೆಮ್ಮದಿಯಿಂದ ಇರಲಿದೆ. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ. ಸ್ಥಗಿತಗೊಂಡ ಕೆಲಸದಲ್ಲಿ ವೇಗವನ್ನು ಪಡೆಯುವುದು ಪ್ರಯೋಜನಕಾರಿಯಾಗಿದೆ.
ಮಕರ ರಾಶಿ: ಆರೋಗ್ಯದ ಸ್ಥಿತಿಯೂ ಸರಿಯಿಲ್ಲದೇ ಯಾವುದೂ ನಿಮ್ಮ ಬುದ್ಧಿಗೆ ಸೂಚಿಸದು. ಇಂದು ನಿಮ್ಮ ಆರೋಗ್ಯದ ಮೇಲೆ ಹೆಚ್ಚಿನ ಗಮನ ಇರಿಸಿ. ಇಂದು ನೀವು ನಿಮ್ಮ ಕಾರ್ಯಗಳನ್ನು ಆತುರದ ಬದಲು ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸುತ್ತೀರಿ. ಕುಟುಂಬದ ಆಸ್ತಿಯನ್ನು ಪಡೆಯುವ ಸಾಧ್ಯತೆಗಳಿವೆ. ವಿದ್ಯುತ್ ಉಪಕರಣದಿಂದ ತೊಂದರೆಯಾದೀತು. ಮನೆಯ ಸರಿಯಾದ ಕ್ರಮವನ್ನು ಕಾಪಾಡಿಕೊಳ್ಳಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ತಾಳ್ಮೆಯಿಂದಿರಿ, ನಿಮ್ಮ ಕೋಪವು ನಿಮಗೆ ಹಾನಿಕಾರಕವಾಗಿರುತ್ತದೆ. ಹಳೆ ಆಸ್ತಿ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ಪ್ರಮುಖ ವ್ಯವಹಾರದ ಸಾಧ್ಯತೆಯಿದೆ. ದೈಹಿಕವಾಗಿ ಸದೃಢವಾಗಿರಲು ನಿಮ್ಮ ಪ್ರಯತ್ನ ಅತಿ ಮುಖ್ಯ. ಆದಾಯದಲ್ಲಿಯೂ ನಿಮಗೇ ಪೂರ್ಣತೃಪ್ತಿ ಇರದು. ಸಂಗಾತಿಯ ಸೂಕ್ಷ್ಮ ಭಾವಕ್ಕೆ ಪೆಟ್ಟು ಬೀಳಬಹುದು. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ.
ಕುಂಭ ರಾಶಿ: ಪ್ರಭಾವೀ ವ್ಯಕ್ತಿಗಳ ಸಹಕಾರವನ್ನು ಬಳಸಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಸ್ವಂತ ಉದ್ಯಮ ಬಗ್ಗೆ ಅತಿಯಾದ ಆಸಕ್ತಿ ಇರುವುದು. ಮಹತ್ವದ ಕೆಲಸವು ಹಲವು ದಿನಗಳವರೆಗೆ ಬಾಕಿಯಿದ್ದರೆ, ಅವುಗಳನ್ನು ಮುಗಿಸಿ. ನಿಮ್ಮ ತಪ್ಪನ್ನು ಯಾರ ಮೇಲೋ ಹಾಕುವಿರಿ. ಅಧ್ಯಾತ್ಮದ ಬಗ್ಗೆ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಅತ್ಯುತ್ತಮ ಜ್ಞಾನವನ್ನೂ ಪಡೆಯುವಿರಿ. ಯುವಕರ ವೃತ್ತಿ ಸಂಬಂಧಿತ ಯೋಜನೆಗಳು ದಾರಿ ತಪ್ಪಬಹುದು. ಇಂದು ಹೆಚ್ಚಿನ ಸಮಯವನ್ನು ವ್ಯಾಪಾರ ವಹಿವಾಟಿನ ವಿಚಾರದಲ್ಲಿ ಕಳೆಯಲಾಗುತ್ತದೆ. ಶಿಸ್ತನ್ನು ಅಳವಡಿಸಿಕೊಳ್ಳುವ ಮೂಲಕ ನೀವು ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವಿರಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ಇಂದು ಶೈಕ್ಷಣಿಕ ರಂಗದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ಪಡೆಯುವಿರಿ. ನಿಮ್ಮ ದಿನದ ಆರಂಭವು ಸಾಮಾನ್ಯವಾಗಿರುತ್ತದೆ. ಹಣವನ್ನು ಬಹಳ ನೈಪುಣ್ಯದಿಂದ ಖರ್ಚು ಮಾಡುವಿರಿ.
ಮೀನ ರಾಶಿ; ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಹೋಗಿ ಮುಗ್ಗರಿಸುವಿರಿ. ಮಕ್ಕಳ ಬಗ್ಗೆ ನಿಮಗೆ ಸ್ವಲ್ಪ ಅಸಮಾಧಾನವಾಗಬಹುದು. ಇಂದು ಆರ್ಥಿಕ ಲಾಭ ದೊರೆಯುವ ಸಾಧ್ಯತೆ ಇದೆ. ಅಸಾಧ್ಯವನ್ನು ನೀವು ಸಾಧಿಸುವ ಪ್ರಯತ್ನ ಮಾಡುವಿರಿ. ಕೆಲಸದ ಪರಿಸ್ಥಿತಿಗಳು ಸುಧಾರಿಸುವ ಸಾಧ್ಯತೆಯಿದೆ. ದಿನವು ಉತ್ತಮವಾಗಿ ಪ್ರಾರಂಭವಾಗುತ್ತದೆ. ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವಿರಿ. ಹಣಕಾಸಿನ ಪರಿಸ್ಥಿತಿಯಲ್ಲಿ ತೊಂದರೆ ಸಾಧ್ಯತೆಯೂ ಇದೆ. ತಾಳ್ಮೆಯಿಂದ ಸಮಯ ಕಳೆಯಿರಿ. ಕೈ ತಪ್ಪಿ ಹೋಗಿದೆ ಎಂದುಕೊಂಡಿದ್ದ ಯೋಜನೆಗಳು ಸಿಗಬಹುದು. ಹೂಡಿಕೆಯಿಂದ ಲಾಭವು ಸಿಗಲಿದೆ. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕಿನಿಂದ ಸಾಲ ತೆಗೆದುಕೊಳ್ಳಬಹುದು. ಎಲ್ಲೋ ಕೊಟ್ಟಿರುವ ಹಣವನ್ನು ನೀವು ಮರಳಿ ಪಡೆಯಬಹುದು. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.