AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಬಂಧುಗಳು ನಿಮ್ಮ ಸಹಾಯ ಕೇಳಬಹುದು, ಆಸ್ತಿ ವಿಚಾರಕ್ಕೆ ಕಾನೂನು ಹೋರಾಟ ಮಾಡುವಿರಿ

17 ಜನವರಿ​​ 2025: ಶುಕ್ರವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಗೃಹಬಳಕೆಯ ವಸ್ತುಗಳ ಮಾರಾಟದಿಂದ ಹೆಚ್ಚಿನ ಲಾಭವನ್ನು ಪಡೆಯುವಿರಿ. ಉದ್ಯಮದಲ್ಲಿ ಬರುವ ದಾಖಲೆಗಳ ಸಮಸ್ಯೆಯೂ ದೂರಾಗುವುದು. ಹಾಗಾದರೆ ಜನವರಿ 17ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಬಂಧುಗಳು ನಿಮ್ಮ ಸಹಾಯ ಕೇಳಬಹುದು, ಆಸ್ತಿ ವಿಚಾರಕ್ಕೆ ಕಾನೂನು ಹೋರಾಟ ಮಾಡುವಿರಿ
ಬಂಧುಗಳು ನಿಮ್ಮ ಸಹಾಯ ಕೇಳಬಹುದು, ಆಸ್ತಿ ವಿಚಾರಕ್ಕೆ ಕಾನೂನು ಹೋರಾಟ ಮಾಡುವಿರಿ
TV9 Web
| Edited By: |

Updated on: Jan 17, 2025 | 12:12 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಉತ್ತರಾಷಾಢ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಸೌಭಾಗ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:18 ರಿಂದ ಮಧ್ಯಾಹ್ನ 12:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:33 ರಿಂದ ಸಂಜೆ 04:58 ರವರೆಗೆ, ಗುಳಿಕ ಬೆಳಿಗ್ಗೆ 08:28 ರಿಂದ 09:53 ರವರೆಗೆ.

ತುಲಾ ರಾಶಿ; ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮ್ಮದಾದ ತಂಡದ ರಚನೆಯನ್ನು ಮಾಡಿಕೊಳ್ಳುವಿರಿ. ದೂರದ ಊರಿನಲ್ಲಿ ಉದ್ಯೋಗಕ್ಕೆ ಹೋಗಬೇಕಾಗಬಹುದು. ಇಂದಿನ ನಿಮ್ಮ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವೇ ಸೃಷ್ಟಿಸುವಿರಿ. ಸಂತೋಷವನ್ನು ಇನ್ನೊಂದರಲ್ಲಿ ಹುಡುಕುವುದಕ್ಕಿಂತ ನಿಮ್ಮೊಳಗೆ ಇದೆಯೇ ಎಂದು ಭಾವಿಸಿ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ‌ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು. ಇಂದಿನ ಕಾರ್ಯವು ಪೂರ್ಣವಾಗುವ ತನಕ ನಿಮಗೆ ಮಾನಸಿಕ ವಿಶ್ರಾಂತಿಯು ಇರದು. ನಿಮ್ಮ ಮಾತು ವಿವಾದವನ್ನು ಹುಟ್ಟುಹಾಕಬಹುದು.

ವೃಶ್ಚಿಕ ರಾಶಿ: ನಿಮ್ಮಿಂದ ಸಹಾಯವನ್ನು ನಿರೀಕ್ಷಿಸುವುದು ಸರಿಯಲ್ಲವೆಂದು ಅನ್ನಿಸಬಹುದು. ವಿದ್ಯಾಭ್ಯಾಸದ ಖರ್ಚನ್ನು ನೀವು ಸರಿದೂಗಿಸಿಕೊಳ್ಳುವಿರಿ. ನಡವಳಿಕೆಯು ಹದ ಮೀರದಿರಲಿ. ಪ್ರೇಮಿಗಳು ಇಂದು ಸ್ವತಂತ್ರವಾಗಿ ಇರಲು ಆಸೆಪಡುವರು. ವಿವಾಹಿತರ ಜೀವನವು ಆನಂದದಿಂದ ಇರುವುದು. ನಿಮ್ಮ ವರ್ಚಸ್ಸು ಅಧಿಕವಾದಷ್ಟೂ ಅಪಾಯವೇ ನಿಮಗೆ. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು. ಯುಕ್ತಿಯಿಂದ ಕೆಲಸವನ್ನು ಸಾಧಿಸಿದ ಎಲ್ಲವೂ ಕ್ಷೇಮ.

ಧನು ರಾಶಿ: ನಿಮ್ಮ ಕೆಲಸವು ಪ್ರಾಮಾಮಾಣಿಕದ್ದೇ ಎಂದು ಕೇಳಿಕೊಳ್ಳುವಿರಿ. ನ್ಯಾಯಾಲಯದಲ್ಲಿ ಜಯವನ್ನು ಸಾಧಿಸುವಿರಿ. ನಿಮಗೆ ತುಂಬಾ ಬಿಡುವಿಲ್ಲದ ದಿನವಾಗಿರುತ್ತದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡುವಿರಿ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸುವ ಅಗತ್ಯವಿದೆ. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು.‌ ಆಕಸ್ಮಿಕವಾಗಿ ಉದ್ಯೋಗವು ನಿಮ್ಮ‌ ಪಾಲಿಗೆ ಬರುವುದು.‌ ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯೂ ಬರುವುದು. ಇಂದಿನ ನಿಮ್ಮ ಉತ್ಸಾಹವು ಸಮಾರಂಭಗಳಲ್ಲಿ ಸಂತೋಷದಿಂದ ಭಾಗವಿಸುವಂತೆ ಮಾಡುವುದು. ಹೊಸ ವೃತ್ತಿಯನ್ನು ಹುಡುಕುತ್ತಿದ್ದರೆ ಉತ್ತಮ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವಿರಿ.

ಮಕರ ರಾಶಿ: ಮಾತುಗಾರಿಕೆಯಿಂದ ಹಣವನ್ನು ಗಳಿಸುವಿರಿ. ವಿದ್ಯುತ್ ಉಪಕರಣಗಳು ದುರಸ್ತಿಗೆ ಬರಬಹುದು. ಸಂಬಂಧದಲ್ಲಿ ನಂಬಿಕೆಯನ್ನು ಕಳೆದುಕೊಳ್ಳಬೇಕಾಗುವುದು. ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಅತಿಯಾದ ನಿರೀಕ್ಷೆಯನ್ನು ಇಟ್ಟು ಕಾರ್ಯ ಮಾಡುವುದು ಬೇಡ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ. ಅಸ್ಥಿರವಾದ ಮನಃಸ್ಥಿತಿಯು ಕಾರ್ಯವನ್ನು ಹಾಳುಮಾಡುವುದು. ಪ್ರಯಾಣ ಮಾಡುವ ಅನಿವಾರ್ಯತೆ ಸೃಷ್ಟಿಯಾಗಬಹುದು. ನಿಮ್ಮ ಆಸೆ ನೆರವೇರುತ್ತಿಲ್ಲ ಎಂಬ ಆತಂಕವೂ ಇರಲಿದೆ.

ಕುಂಭ ರಾಶಿ: ಪೂರ್ವಾಗ್ರಹದಿಂದ ಸರಿಯಾದ ನಿರ್ಧಾರವನ್ನು ತೆಗದುಕೊಳ್ಳಲಾಗದು. ವ್ಯವಹಾರದಲ್ಲಿ ಚಾತುರ್ಯ ಸಾಲದು.‌ ಒತ್ತಡವನ್ನು ನೀವು ಸಹಜ‌ಸ್ವಭಾವವಾಗಿ ಸ್ವೀಕರಿಸುವಿರಿ. ನೀವು ಬಹಳ ಕಾಲದಿಂದ ಪ್ರಮುಖ ಕೆಲಸದಲ್ಲಿ ತೊಂದರೆಯಾಗುತ್ತಿದ್ದು, ಅದು ಕೊನೆಗೊಳ್ಳಬಹುದು. ಅಂತಸ್ತಿನ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯು ಕಂಡುಬರುವುದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ. ಇದು ಕಾರ್ಯಕ್ಕೆ ವೇಗವನ್ನು ಹೆಚ್ಚಿಸುವುದು. ಆಪ್ತರಿಂದ ನಡೆವಳಿಕೆಗೆ ಟೀಕೆಗಳು ಬರಬಹುದು.

ಮೀನ ರಾಶಿ: ನಿಮ್ಮ ಗುರಿಯೇ ದೊಡ್ಡದಾಗಿದ್ದರೆ ಸಣ್ಣ ವಿಘ್ನಗಳೂ ನಗಣ್ಯವಾಗುವುವು. ಪಾಲುದಾರಿಕೆಯ ಸಮಸ್ಯೆಯನ್ನು ಸರಿಮಾಡಿಕೊಳ್ಳುವುದು ಹಾಗೆಯೇ ಉಳಿದುಕೊಳ್ಳುವುದು. ಗೃಹಬಳಕೆಯ ವಸ್ತುಗಳ ಮಾರಾಟದಿಂದ ಹೆಚ್ಚಿನ ಲಾಭವನ್ನು ಪಡೆಯುವಿರಿ. ಉದ್ಯಮದಲ್ಲಿ ಬರುವ ದಾಖಲೆಗಳ ಸಮಸ್ಯೆಯೂ ದೂರಾಗುವುದು. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯವು ಸುಸ್ಥಿರವಾಗಿದ್ದು ಇಂದು ಅನುಕೂಲವೇ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ.‌ ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದದಿಂದ ಬೇಸರ ಇರಲಿದೆ. ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವು ಸಂತೋಷಗೊಳ್ಳುವರು. ಅಪರಿಚಿತರನ್ನು ನಂಬಿ ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ.

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?