AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಸಂಗಾತಿಯ ಕೆಲವು ಮಾತುಗಳಿಂದ ನಿಮಗೆ ಬೇಸರವಾಗುವುದು

24 ಫೆಬ್ರವರಿ​​ 2025: ಸೋಮವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನಿಮ್ಮ ದಾಂಪತ್ಯದ ಮೇಲೆ ಇತರರ ದೃಷ್ಟಿ ಬೀಳಬಹುದು. ಪಾಲುದಾರಿಕೆಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಹಾಗಾದರೆ ಫೆಬ್ರವರಿ 24ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಸಂಗಾತಿಯ ಕೆಲವು ಮಾತುಗಳಿಂದ ನಿಮಗೆ ಬೇಸರವಾಗುವುದು
ಸಂಗಾತಿಯ ಕೆಲವು ಮಾತುಗಳಿಂದ ನಿಮಗೆ ಬೇಸರವಾಗುವುದು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 24, 2025 | 12:12 AM

Share

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸಿದ್ಧಿ, ಕರಣ : ಬಾಲವ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭಕಾಲ : ರಾಹು ಕಾಲ 08:22 – 09:50, ಯಮಘಂಡ ಕಾಲ 11:18 – 12:46, ಗುಳಿಕ ಕಾಲ 14:14 – 15:42.

ತುಲಾ ರಾಶಿ: ಆರೋಗ್ಯದ ತಪಾಸಣೆಯನ್ನು ಮಾಡಿಸಿಕೊಳ್ಳುವ ಅನಿವಾರ್ಯತೆಯನ್ನು ಉಂಟುಮಾಡುವುದು. ಸ್ತ್ರೀಯರು ತಮ್ಮ ಕೌಶಲವನ್ನು ತೋರಿಸುವರು. ಸಮಯಸ್ಫೂರ್ತಿಯಿಂದ ಕೆಲಸವನ್ನು ಮಾಡುವಿರಿ. ಪಾಲುದಾರಿಕೆಯ ಭೂ ಸಂಬಂಧದ ಕಾರ್ಯದಿಂದ ಲಾಭವಾಗಲಿದೆ. ದಾಂಪತ್ಯವು ಪರಸ್ಪರ ಸೌಹಾರ್ದದ ಮಾತುಗಳಿಂದ ನೆಮ್ಮದಿ ಸಿಗುವುದು.‌ ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ ಮುಂದುವರಿಯಿರಿ. ಯಾರಸದರೂ ಅಸತ್ಯವನ್ನು ಆಡಿದರೆ ಅದನ್ನು ಸರಳವಾಗಿ ಕಂಡು ಹಿಡಿಯುವಿರಿ.‌ ಅನಿಶ್ಚಿತ ಕೆಲಸದಲ್ಲಿ ಆದಾಯವನ್ನು ಹೆಚ್ಚು ಪಡೆಯುವಿರಿ. ವೈದ್ಯರು ಇಂದು ತಮ್ಮ ಕೆಲಸಗಳನ್ನು ಬದಲಾಯಿಸಿಕೊಳ್ಳುವ ಸ್ಥಿತಿಯು‌ ಬರಬಹದು. ನೀವು ಮೌನದಿಂದ ಇದ್ದರೆ ಒಪ್ಪಿಗೆ ಕೊಟ್ಟಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವುದು ಉತ್ತಮ. ಸಂಶೋಧನೆಯ ಅಂಶಗಳು ನಿಮಗೆ ಇಷ್ಟವಾಗಬಹುದು.

ವೃಶ್ಚಿಕ ರಾಶಿ: ವಿವಾಹ ವಿಳಂಬವು ನಿಮಗೆ ಪೂರ್ಣ‌‌ಸಂತೋಷವಿರದು. ಖಾಸಗಿ ಉದ್ಯೋಗಿಗಳು ಸ್ನೇಹಿತರ ಜೊತೆ ಎಲ್ಲಿಗಾದರೂ ಹೋಗುವರು. ನಿಮ್ಮ ಅಪನಂಬಿಕೆಗಳನ್ನು ಯಾರ ಮೇಲೂ ಹೇರುವುದು ಬೇಡ.‌ ಇಷ್ಟದ ಕಾರ್ಯವು ಸಿದ್ಧಿಯಾಗಿ ನಿಮಗೆ ಉತ್ಸಾಹವು ಹೆಚ್ಚಾಗುವುದು. ನಿಮ್ಮ ಕೆಲವು ವರ್ತನೆಯನ್ನು ಮಿತ್ರರು ವಿರೋಧಿಸುವರು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ. ನಿಮ್ಮ‌ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ಇಷ್ಟವಿಲ್ಲದಿದ್ದರೂ ಬಂಧುಗಳ ಆಗಮನವಾಗಲಿದೆ. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸಿ ಪಡೆದುಕೊಳ್ಳುವಿರಿ. ಬಂಧುಗಳ ಮೇಲೆ‌ ಊಹಾಪೋಹಗಳನ್ನು ಇಟ್ಟುಕೊಳ್ಳುವಿರಿ. ನೀವು ಮಾಡುವ ವೃತ್ತಿಯಲ್ಲಿ ಗೊಂದಲವಿದ್ದರೆ ಅನುಭವಗಳನ್ನು ಕೇಳಿ ಮಂದುವರೆಯಿರಿ. ಸಂಗಾತಿಯ ಕೆಲವು ಮಾತುಗಳಿಂದ ನಿಮಗೆ ಬೇಸರವಾಗುವುದು.

ಧನು ರಾಶಿ; ನಿಮಗೆ ತಾಂತ್ರಿಕ ಕಾರಣಗಳು ಇಂದಿನ ಕಾರ್ಯಕ್ಕೆ ಅಡ್ಡಬರಬಹುದು. ಜೀವನವನ್ನು ಸಂತೋಷದಿಂದ ಕಳೆಯುವ ವಿಧಾನವು ನಿಮಗೆ ಹೊತ್ತಿದೆ. ವಾಹನದಲ್ಲಿ ದೂರ ಸಂಚಾರವು ನಿಮಗೆ ಖುಷಿಯನ್ನು ಕೊಡುವುದು.‌ ಇಂದು ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಹೆಚ್ಚು ತಿರುಗಾಟ ಮಾಡಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಸಮಾರಂಭದಲ್ಲಿ ಹಳೆಯ ಸ್ನೇಹಿತರ ಭೇಟಿಯಾಗುವುದು. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ. ಲಾಭವನ್ನು ಅರಿತು ಯೋಜನೆ ರೂಪಿಸುವಿರಿ. ನಿಮ್ಮ ಮನಸ್ಸಿಗೆ ಪೂರ್ಣವಾಗಿ ಒಪ್ಪಿಗೆ ಆದರೆ ಮಾತ್ರ ಯಾವ ಕೆಲಸಕ್ಕಾದರೂ ಮುಂದುವರಿಯಿರಿ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯುವಿರಿ. ಉದ್ಯೋಗವಿಲ್ಲ ಎಂಬುದು ನಿಮಗೆ ಅವಮಾನದ ಸಂಗತಿಯಾಗಲಿದೆ.

ಮಕರ ರಾಶಿ: ಅನ್ಯ ಲಿಂಗದ ಮೇಲೆ ಮೋಹ ಬೆಳೆಯುವುದು. ಎಲ್ಲರ ಜೊತೆಗಿದ್ದರೂ ಒಂಟಿಯಂತೆ ಅನ್ನಿಸುವುದು.‌ ಸ್ಪರ್ಧೆಯಲ್ಲಿ ಹಿನ್ನಡೆಯಾಗಬಹುದು. ಯಾರನ್ನೂ ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಇಂದು ಸ್ತ್ರೀಯರಿಗೆ ಮಾನಿಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು. ಯಂತ್ರೋತ್ಪನ್ನಗಳ ತಯಾರಿಯಲ್ಲಿ ಹಿನ್ನಡೆಯಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ಚರಾಸ್ತಿಯ ರಕ್ಷಣೆ ಕಷ್ಟವಾಗಲಿದೆ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು. ವೈಯಕ್ತಿಕ‌ ಕೆಲಸಗಳು ಬಹಳಷ್ಟು ಇದ್ದು, ಮಾಡಲು ಸಮಯ ಸಾಲದು. ಮಿತ್ರರ ಸಹಾಯದಿಂದ ನಿಮಗೆ ಧನ ಸಹಾಯವು ಸಿಗಬಹುದು. ಸಾರ್ವಜನಿಕವಾಗಿ ಅವಮಾನವಾಗುವ ಸಾಧ್ಯತೆ ಇದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಆದೀತು. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದೇ ಇರುವುದರಿಂದ ನಿಮ್ಮ ಮೇಲೆ ಕೋಪಗೊಳ್ಳುವರು.

ಕುಂಭ ರಾಶಿ: ಹೊಸತಾದ ಉದ್ಯಮದ ಸ್ಥಳದಲ್ಲಿ ಆಯಂಕ. ನಿಮ್ಮ ಅಮೂಲ್ಯ ವಿಚಾರಗಳನ್ನು ಇನ್ನೊಬ್ಬರ ಜೊತೆ ಹಂಚಿಕೊಳ್ಳುವ ಅಗತ್ಯವಿಲ್ಲ. ಮನೆಯಲ್ಲಿ ನಡೆಯುವ ಶುಭ ಕಾರ್ಯಕ್ಕೆ ಹೆಚ್ಚು ಖರ್ಚಾಗಬಹುದು. ನಿಮ್ಮನ್ನು ನೋಡಿ ಭಯಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಅಂದಾಜು ಮೀರಬಹುದು. ಮಕ್ಕಳಿಗೆ ಇರುವ ಗೊಂದಲವನ್ನು ದೂರ ಮಾಡುವಿರಿ.‌ ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಬೇಕಾಗುವುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ವೃತ್ತಿಯನ್ನು ಹೊರತುಪಡಿಸಿದ ಅವಕಾಶಗಳು ನಿಮ್ಮನ್ನು ಹುಡುಕಿ ಬರಬಹುದು. ಉದ್ಯಮಕ್ಕಾಗಿ ಮಾಡಿದ ಸಾಲ ಮುಕ್ತಾಯವಾಗಲಿದೆ. ಕಾರ್ಯದ ಸ್ಥಳವು ಬದಲಾಗುವ ಸಾಧ್ಯತೆ ಇದೆ. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ನಿಮ್ಮ ಕೋಪವು ವ್ಯರ್ಥವಾದೀತು.

ಮೀನ ರಾಶಿ: ಕೃಷಿಭೂಮಿಯ ಅನ್ವೇಷಣೆ ಆಗಲಿದೆ. ಆರ್ಥಿಕ ಭದ್ರೆತೆಯ ಬಗ್ಗೆ ನಿಮಗೆ ತೊಂದರೆಗಳು ಆಗಬಹುದು. ಇಲ್ಲವಾದರೆ ಯಾವ ಪ್ರಯೋಜನವೂ ಇಲ್ಲದೇ ನಷ್ಟವಾಗುವುದು. ವೈವಾಹಿಕ ಜೀವನವನ್ನು ನಡೆಸುವ ಬಗ್ಗೆ ನಿಮಗೆ ಸಲಹೆಗಳು ಸಿಗುವುದು. ನಿಮ್ಮ ದಾಂಪತ್ಯದ ಮೇಲೆ ಇತರರ ದೃಷ್ಟಿ ಬೀಳಬಹುದು. ಪಾಲುದಾರಿಕೆಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ನಿಮ್ಮ ಕೆಲಸವು ಬದಲಾವಣೆಯಾಗಬಹುದು. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಒತ್ತಾಯದ ಕಾರಣ ಸಮಾರಂಭಗಳಿಗೆ ಹೋಗುವಿರಿ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು