AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ವಿದ್ಯಾಭ್ಯಾಸದಲ್ಲಿ ಯಶಸ್ಸು, ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಸಿಗಲಿದೆ

6 ಮಾರ್ಚ್​​​ 2025: ಗುರುವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಹಾಗಾದರೆ ಮಾರ್ಚ್ 6ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ವಿದ್ಯಾಭ್ಯಾಸದಲ್ಲಿ ಯಶಸ್ಸು, ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಸಿಗಲಿದೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 06, 2025 | 12:12 AM

Share

ಬೆಂಗಳೂರು, ಮಾರ್ಚ್​ 05: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವಿಷ್ಕಂಭ, ಕರಣ : ತೈತಿಲ, ಸೂರ್ಯೋದಯ – 06 – 47 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:13 – 15:42, ಯಮಘಂಡ ಕಾಲ 06:47 – 08:17, ಗುಳಿಕ ಕಾಲ 09:46 – 11:15.

ತುಲಾ ರಾಶಿ: ಪ್ರಶಾಂತವಾದ ಸ್ಥಳಗಳಲ್ಲಿ ಇಂದಿನ ಸಮಯವು ಕಳೆದುಹೋಗುವುದು. ನಿಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಧನವನ್ನು ಸಂಪಾದಿಸುವಿರಿ. ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ಸಿಗಬಹುದು. ಮಂಗಲ ಕಾರ್ಯದಲ್ಲಿ ಇಂದು ನೀವು ಸಂತೋಷದಿಂದ ಪಾಲ್ಗೊಳ್ಳುವಿರಿ. ಇದರಿಂದ ನಿಮ್ಮ ನೆಮ್ಮದಿಯೂ ದೂರವಾದೀತು. ವಿದ್ಯಾಭ್ಯಾಸದಲ್ಲಿ ಯಶಸ್ಸನ್ನು ಸಾಧಿಸಲು ಅನೇಕ ಮಾರ್ಗಗಳು ಇರಲಿದೆ. ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಟ್ಟಿಯಾದ ತೀರ್ಮಾನವನ್ನು ಪಡೆಯುವುದು ಕಷ್ಟವಾಗುವುದು. ನಿಮ್ಮನ್ನು ಬಳಸಿಕೊಳ್ಳಬಹುದು, ಯಾರನ್ನೂ ಅತಿಯಾಗಿ ನಂಬಿ ನೀವು ಮೋಸಹೋಗಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ತುರ್ತಾಗಿ ತೀರ್ಮಾನವನ್ನು ತೆಗೆದುಕೊಳ್ಳುವುದು ಸೂಕ್ತ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಭೀತಿಯು ಇರಲಿದೆ. ನಿಮ್ಮವರ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಯವನ್ನು ಕೊಡಿ. ಭೂಮಿಯ ವ್ಯವಹಾರದಿಂದ ಅಲ್ಪ ಅಭಿವೃದ್ಧಿಯು ಆಗಲಿದೆ.

ವೃಶ್ಚಿಕ ರಾಶಿ: ಇಂದು ನಿಮ್ಮ‌ ಕಾರ್ಯವನ್ನು ಪ್ರಶಂಸಿಸುವವರು ಸಿಕ್ಕಾರು. ಅವರ ಮಾತಿನಿಂದ ನಿಮ್ಮ‌ ಮನೋಬಲ ಅಧಿಕ. ಸಣ್ಣ ಅಂತರದಲ್ಲಿ ಅವಕಾಶಗಳನ್ನು ತಪ್ಪಿಸಿಕೊಂಡು ಬೇಸರಿಸುವಿರಿ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ಕುಟುಂಬದಲ್ಲಿ ಎಲ್ಲರೂ ಸುಖದಿಂದ ಜೀವಿಸುವ ಕಾರಣ ನಿಮ್ಮಲ್ಲಿಯೂ ನೆಮ್ಮದಿಯು ಕಾಣಿಸುವುದು. ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ಮನೆಯ ನಿರ್ಮಾಣ ಕಾರ್ಯವು ಬಹಳ ವಿಳಂಬದಂತೆ ಅನ್ನಿಸುವುದು. ನಿಮ್ಮ ನಡವಳಿಕೆಗೆ ಬಂಧುಗಳಿಂದ ಪ್ರಶಂಸೆಯು ಸಿಗಲಿದೆ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ನಿಮ್ಮ ಬಲದ ಮೇಲೇ ಕೆಲಸವನ್ನು ಪ್ರಾರಂಭಿಸಿ. ಆಲಂಕಾರಿಕ ವಿಚಾರಗಳ ಬಗ್ಗೆ ಹೆಚ್ಚು ಗಮನವಿರುವುದು. ಇನ್ನೊಬ್ಬರ ಗೊತ್ತಿಲ್ಲದ ವಿಚಾರವನ್ನು ಹೇಳುವುದು ಬೇಡ. ಅನೇಕ ದಿನಗಳಿಂದ ಉದ್ಯೋಗ ನಿರ್ವಹಣೆಯಲ್ಲಿ ಬೇಸರ ಉಂಟಾಗಿದ್ದು ಹೊರಗೆ ಸುತ್ತಾಡುವ, ವಿರಾಮವನ್ನು ಪಡೆಯುವ ಮನಸ್ಸು ಇರಲಿದೆ.

ಧನು ರಾಶಿ: ನಿಮ್ಮ ಹಠದ ಸ್ವಭಾವವು ಜೊತೆಗಾರರಿಗೆ ಕಿರಿಕಿರಿ ಆದೀತು. ನೀವಂದುಕೊಂಡಂತೆ ಎಲ್ಲವೂ ಆಗಬೇಕು ಎನ್ನುವುದು ತಲೆಯಿಂದ ತೆಗೆಯುವುದು ಅವಶ್ಯಕ. ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ. ಜೀವನದಲ್ಲಿ ಹೊಸ ಅನುಭವಗಳನ್ನು ಆನಂದಿಸಲು ಸಿದ್ಧರಾಗಿರಿ. ಸಂಗಾತಿಯ ಬದಲಾವಣೆಯು ನಿಮಗೆ ಅನಿರೀಕ್ಷಿತ ಆದೀತು. ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು. ನಿಮ್ಮ ವಸ್ತುಗಳು ಕಾಣೆಯಾಗಿದ್ದು ಹಲವು ದಿನಗಳ ಅನಂತರ ತಿಳಿದೀತು. ಭೂಮಿಯ ಲಾಭದ ವಿಚಾರದಲ್ಲಿ ಸರಿಯಾದ ಮಾತುಕತೆಗಳು ಆಗಲಿ. ಆರೋಪ ಪ್ರತ್ಯಾರೋಪಗಳಿಂದ ಕಲಹ. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ಮನಸ್ಸಿಗೆ ಸಹೋದರನ ಮಾತು ಘಾಸಿಮಾಡೀತು. ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು.

ಮಕರ ರಾಶಿ: ಇಂದು ಆರ್ಥಿಕ ದೃಷ್ಟಿಕೋನವನ್ನು ಇಟ್ಟುಕೊಂಡೇ ನಿಮ್ಮ ಎಲ್ಲ ಯೋಜನೆಗಳನ್ನು ಆರಂಭಿಸುವಿರಿ. ಅಸಮಾಧಾನವನ್ನು ಯಾವುದಾದರೂ ತಂತ್ರದಿಂದ ಸರಿಮಾಡಿಕೊಳ್ಳುವಿರಿ. ವೃತ್ತಿಪರ ಜೀವನದಲ್ಲಿ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ಪ್ರತಿಫಲ ದೊರೆಯುತ್ತದೆ. ಮನೋರಂಜನೆಯು ನಿಮಗೆ ಮುಖ್ಯವಾದೀತು. ಆಪ್ತರಿಗಾಗಿ ಕೊಟ್ಟ ಸಮಯವೂ ವ್ಯರ್ಥವಾದೀತು. ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಒಳ್ಳೆಯ ಭಾವಕ್ಕೆ ಫಲ ಸಿಗಲಿದೆ. ಬೇಕಾದಷ್ಟು ಕೆಲಸಗಳಿದ್ದರೂ ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ. ಉದ್ಯಮದ ಮಿತ್ರನನ್ನು ಮನೆಗೆ ಆಹ್ವಾನಿಸುವಿರಿ. ಉದ್ಯಮವು ಬೆಳೆಯುತ್ತಿರುವುದು ಸಂತೋಷ ಕೊಡುವುದು. ಚಾಲಕರಿಗೆ ಕರ್ತವ್ಯಕ್ಕೆ ಪ್ರಶಂಸೆ ಸಿಗುವುದು. ಅರಿವಿಲ್ಲದೆ ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರುವುದು. ಮಕ್ಕಳ ಶಿಕ್ಷಣದ ಬಗ್ಗೆ ನಿಮಗೆ ತೃಪ್ತಿ ಇರದು.

ಕುಂಭ ರಾಶಿ: ನೀವು ಇತರರಿಗೆ ಸಹಾಯ ಮಾಡಿ, ನೆಮ್ಮದಿಯನ್ನು ಪಡೆಯುವಿರಿ. ಯಾರ ಸಹಾಯವನ್ನೂ ನೀವು ಅಪೇಕ್ಷಿಸುವುದಿಲ್ಲ. ಕುಟುಂಬ ಸದಸ್ಯರ ನಡುವಿನ ಮನಸ್ತಾಪವನ್ನು ನೀವು ಬಗೆಹರಿಸುವುದು ತಕ್ಕಮಟ್ಟಿಗೆ ಸಾಧ್ಯವಾಗುವುದು. ವೃತ್ತಿಪರ ಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಹೊಸ ಹೊಸ ಕಾರ್ಯ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಬಾಡಿಗೆ ಮನೆಯಲ್ಲಿ ಇರುವವರು ಹೊಸ ಮನೆಗೆ ಹೋಗುವಿರಿ. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಯಾರ ಮೆಚ್ಚುಗೆಯೂ ನಿಮಗೆ ಸಮಾಧಾನ ತರದು. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಬೇಕಾಗುವುದು. ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಅವಿವಾಹಿತರಾಗಿರುವವರಿಗೆ ಕೊರಗು ಕಾಣಿಸವಹುದು. ಆದಾಯವು ಕಡಿಮೆ ಆದಂತೆ ಅನ್ನಿಸುವುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದಿನ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು.

ಮೀನ ರಾಶಿ: ಇಂದು ಕೆಲಸದ ಸ್ಥಳದಲ್ಲಿ ನಿಮ್ಮ ವ್ಯವಸ್ಥೆಯನ್ನು ಬದಲಾಯಿಸುವಿರಿ. ಮಹಿಳೆಯರ ಜೊತೆ ಹೆಚ್ಚು ಸಮಯವನ್ನು ನಗಿಸುತ್ತಾ ಕಳೆಯುವಿರಿ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಶುಭ ಸಮಯ. ವೈವಾಹಿಕ ಸಮಸ್ಯೆಗಳು ಬಹಳ ಸಮಯದಿಂದ ಇದ್ದರೆ, ಹಿರಿಯರ ಸಹಾಯದಿಂದ ಪರಿಹರಿಸಲು ಸಾಧ್ಯವಾಗುತ್ತದೆ. ಇರುವ ಒಂದು ವ್ಯಾಪಾರವನ್ನು ಕ್ರಮಬದ್ಧವಾಗಿ ನೋಡಿಕೊಳ್ಳಲಾಗದು. ಸಹವಾಸದಿಂದ ದಾರಿಯು ಬದಲಾಗುವುದು ಸಾಧ್ಯತೆ ಇದೆ. ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಸಹೋದ್ಯೋಗಿಗಳು ನಿಮ್ಮನ್ನು ಎಲ್ಲದಕ್ಕೂ ಬೊಟ್ಟು ಮಾಡಿ ತೋರಿಸಿಯಾರು‌. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ.