ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನು ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದಶಮೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 01 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 18 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:29ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:01 ರಿಂದ 08:26 ರವರೆಗೆ, ಗುಳಿಕ ಬೆಳಿಗ್ಗೆ 09:51 ರಿಂದ ಮಧ್ಯಾಹ್ನ11:15 ರವರೆಗೆ.
ತುಲಾ ರಾಶಿ: ಎಲ್ಲದಕ್ಕೂ ನಿಮ್ಮ ಕರ್ಮವೇ ಕಾರಣವೆಂದು ಸುಮ್ಮನಾಗುವಿರಿ. ಇಂದು ನೀವು ವ್ಯವಸ್ಥೆಯನ್ನು ಸರಿ ಮಾಡುವ ಯೋಜನೆ ಹಾಕಿಕೊಳ್ಳುವಿರಿ. ಅತಿಯಾದ ಚಿಂತೆಯು ನಿಮ್ಮ ಜೊತೆಗಿರುವವರ ಮನಸ್ಸನ್ನೂ ಕೆಡಿಸೀತು. ಉದ್ಯೋಗದ ಬದಲಾವಣೆ ಆಗಲಿದ್ದು ಸರಿಯಾದ ಪ್ರತ್ಯುತ್ತರ ಸಿಗದೇ ಬೇಸರವಾಗುವುದು. ನಿಮ್ಮ ನಿಯಮಗಳನ್ನು ನೀವೇ ಭಂಗ ಮಾಡಿಕೊಳ್ಳುವಿರಿ. ಎಚ್ಚರಿಕೆಯಿಂದ ನಿಮ್ಮ ಹೆಜ್ಜೆಯನ್ನು ಇಡಿ. ಅಳುಕಿನಿಂದ ಇರುವಿರಿ. ವೈದ್ಯ ವೃತ್ತಿಯಲ್ಲಿ ಒತ್ತಡವು ಅಧಿಕವಾಗಿ ಬರಬಹುದು. ಬೇಡದ ಕಾರ್ಯಕ್ಕೆ ಪ್ರೇರಣೆ ಸಿಗಲಿದೆ ಯಾರದ್ದೋ ಮೂಲಕ ನೀವು ಶತ್ರುಗಳ ಯೋಜನೆಯನ್ನು ತಿಳಿಯುವಿರಿ. ಸಹನೆಯಿಂದ ಆಗುವ ಲಾಭವು ಅನುಭವಕ್ಕೆ ಬರಬಹುದು. ಮಕ್ಕಳು ನಿಮ್ಮ ಮಾತನ್ನು ಕೇಳದೇ ತಮಗೆ ತೋಚಿದಂತೆ ನಡೆದುಕೊಳ್ಳುವುದು ನಿಮಗೆ ಇಷ್ಟವಾಗದು. ಪದೋನ್ನತಿಯ ವಿಚಾರದಲ್ಲಿ ನಿಮಗೆ ಸ್ಪಷ್ಟ ಮಾಹಿತಿ ಸಿಗದು. ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಎಲ್ಲರದ್ದೂ ಒಂದು ದಾರಿಯಾದರೆ ನಿಮ್ಮದೇ ಒಂದು ದಾರಿ.
ವೃಶ್ಚಿಕ ರಾಶಿ: ಇಂದು ವಿಳಂಬವಾದ ಕಾರ್ಯಕ್ಕೆ ದಂಡಕಟ್ಟುವ ಸಂದರ್ಭ ಬರಬಹುದು. ಅನಿರೀಕ್ಷಿತ ಹಣದ ಆಗಮನದಿಂದ ಕೊಡಬೇಕಾದವರಿಗೆ ಕೊಟ್ಟು ಮುಗಿಸುವಿರಿ. ಜೋಪಾನವಾಗಿ ಇಟ್ಟುಕೊಂಡಷ್ಟೂ ಅಪಾಯ ಅಧಿಕವಾಗಬಹುದು. ಎಂದಿಗಿಂತ ಇಂದು ವ್ಯಾಪಾರದಲ್ಲಿ ಹಿನ್ನಡೆ ಇರಲಿದೆ. ಪಾಲುದಾರಿಕೆಯಲ್ಲಿ ನಿಮಗೆ ಹೊಂದಾಣಿಕೆಯ ಕೊರತೆ ಆಗಬಹುದು. ಅನಿರೀಕ್ಷಿತ ವೆಚ್ಚವನ್ನು ಮಾಡಬೇಕಾಗಬಹುದು. ಏರುದನಿಯಲ್ಲಿ ಮಾತನಾಡಿದರೆ ಕೆಲಸವಾಗದು. ಪ್ರಯಾಣದಲ್ಲಿ ತೊಂದರೆಗಳು ಬಂದರೂ ತಲುಪಬೇಕಾದ ಸ್ಥಳಕ್ಕೆ ಹೋಗುವಿರಿ. ಸರ್ಕಾರಿ ನೌಕರರು ಅಧಿಕಾರಿಗಳಿಂದ ಸಮಸ್ಯೆಯನ್ನು ಎದುರಿಸಬೇಕಾದೀತು. ಮಾನಸಿಕ ಒತ್ತಡಗಳು ನಿಮ್ಮ ಕೆಲಸವನ್ನು ಹಾಳುಮಾಡುವುವು. ಇಂದು ಸಂಗಾತಿಯ ಮೌನದಿಂದ ನಿಮಗೆ ಆತಂಕವಾಗಲಿದೆ. ಬೇಕಾದಷ್ಟು ಮಾತುಗಳು ಮಾತ್ರ ಆಡಿರಿ. ಇಂದು ನಿಮ್ಮನ್ನು ಅಪರಿಚಿತರು ಭೇಟಿ ಮಾಡಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು.
ಧನು ರಾಶಿ; ಇಂದು ವ್ಯಾಪಾರಕ್ಕೆ ಬೇಕಾದ ಹಣವನ್ನು ಸಾಲವಾಗಿ ಜನರಿಂದ ಪಡೆಯುವಿರಿ. ಮಕ್ಕಳ ವಿಚಾರದಲ್ಲಿ ಅಧಿಕ ಬದಲಾವಣೆ ಅವಶ್ಯಕವಾದೀತು. ಪ್ರೀತಿಯು ಸುಖಾಂತ್ಯ ಕಾಣಬಹುದು. ಅಲ್ಪವಾದರೂ ದಾನ ಮಾಡಬೇಕು ಎಂಬ ಮನಸ್ಸಾಗುವುದು. ಸಂತೋಷಕ್ಕಾಗಿ ನೀವು ಕೆಲವನ್ನು ತ್ಯಾಗಮಾಡಬೇಕಾದೀತು. ವ್ಯಾಪಾರಸ್ಥರು ಶ್ರಮದಾಯಕ ಲಾಭವನ್ನು ಮಾಡಿಕೊಳ್ಳುವರು. ದೇಹದ ಸಮಸ್ಯೆಯನ್ನು ನೀವು ಯಾರ ಬಳಿಯೂ ಹೇಳದೇ ಗೌಪ್ಯವಾಗಿ ಇಟ್ಟಕೊಳ್ಳುವಿರಿ. ನಿರ್ಲಕ್ಷ್ಯವು ನಿಮ್ಮ ಸ್ವಭಾವವಾದರೂ ಕೆಲವು ಸಂದರ್ಭಗಳಲ್ಲಿ ಅದನ್ನ ಬದಲಿಸಿಕೊಳ್ಳುವುದು ಉತ್ತಮ. ವೃತ್ತಿಯಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಆಗಬಹುದು. ಪ್ರಭಾವಿ ವ್ಯಕ್ತಿಗಳ ಭೇಟಿಯು ಸಂತೋಷವನ್ನು ಕೊಡುವುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಿ ನಗೆಪಾಟಲಿಗೆ ಸಿಕ್ಕಿಕೊಳ್ಳುವಿರಿ. ನಿಮ್ಮ ಅಹಂಕಾರವೇ ನಿಮಗೆ ಪಾಠವಾಗಬಹುದು. ಸುತ್ತಾಟದಿಂದ ಆಯಾಸ ಅಧಿಕವಾಗುವುದು.
ಮಕರ ರಾಶಿ; ಇಂದು ನಿಮಗೆ ಅಪರಿಚಿತ ಮಹಿಳೆಯರಿಗೆ ಸಹಾಯ ಮಾಡಿದ್ದರಿಂದ ಸಂಕಷ್ಟಕ್ಕೆ ಸಿಲುಕುವಿರಿ. ನಿಮ್ಮ ನಿಲುವನ್ನು ಎಂದಿಗೂ ಬದಲಿಸುವ ಯೋಚನೆ ಬೇಡ. ವಿದ್ಯಾಭ್ಯಾಸದಲ್ಲಿ ಅತಂತ್ರ ಸ್ಥಿತಿಯನ್ನು ನೀವಾಗಿಯೇ ತಂದುಕೊಳ್ಳುವಿರಿ. ಅವಶ್ಯಕತೆ ಇರುವಷ್ಟು ಮಾತ್ರ ಮಾತನಾಡಿ. ನಿಮಗೆ ಅತಿಥಿ ಸತ್ಕಾರದ ಯೋಗ ಬರುವುದು. ರಾಜಕೀಯದಿಂದ ಹೊರಬರಲು ಮನಸ್ಸಾಗುವುದು. ಅನಿರೀಕ್ಷಿತ ಅಮೂಲ್ಯ ವಸ್ತುಗಳು ಪ್ರಾಪ್ತವಾಗುವುದು. ನಿಮ್ಮ ಹಠದ ಸ್ವಭಾವವು ವ್ಯವಸ್ಥೆಯನ್ನು ಹಾಳುಮಾಡೀತು. ಇಂದಿನ ಅಧಿಕ ಸಮಯದಲ್ಲಿ ಮೌನವಾಗಿಯೇ ಇರುವಿರಿ. ಯಾವುದೋ ಹತ್ತಾರು ವಿಚಾರದಲ್ಲಿ ನೀವು ಒತ್ತಡಕ್ಕೆ ಒಳಗಾಗುವಿರಿ. ನೇರ ಮಾತಿನಿಂದ ಬೇಸರವನ್ನು ಉಂಟುಮಾಡುವಿರಿ. ಸರಳವಾಗಿ ಇರಲು ಇಷ್ಟವಾಗದು. ಹಿತಶತ್ರುಗಳ ಬಗ್ಗೆ ಅಧಿಕ ಯೋಚನೆ ಮಾಡುವಿರಿ. ನಿಮ್ಮ ಇಂದಿನ ಅಸಹಾಯಕ ಸ್ಥಿತಿಯನ್ನು ಯಾರಲ್ಲಿಯೂ ಹೇಳಿಕೊಳ್ಳುವುದು ಕಷ್ಟ. ಇಂದು ನೀವು ಉದ್ಯೋಗದಿಂದ ಸ್ವಲ್ಪ ವಿಶ್ರಾಂತಿ ಪಡೆಯುವಿರಿ.
ಕುಂಭ ರಾಶಿ; ಇಂದು ಕೂಡಿಟ್ಟ ಹಣದಿಂದ ವಾಹನ ಖರೀದಿ ಮಾಡುವ ಯೋಚನೆ ಬರುವುದು. ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ದಾಖಲೆಗಳ ಬಗ್ಗೆ ಸರಿಯಾದ ಜ್ಞಾನವಿರಲಿ. ಸಂಗಾತಿಯಿಂದ ಸಿಗುವ ಸುಖದಿಂದ ನೀವು ವಂಚಿತರಾಗುವಿರಿ. ಇಂದಿನ ನಿಮ್ಮ ನಿರೀಕ್ಷೆಗಳು ಹುಸಿಯಾಗಬಹುದು. ನಿಮಗೆ ಬೇಕಾದ ವ್ಯಕ್ತಿಯ ಆಯ್ಕೆಯಲ್ಲಿ ನೀವು ಸೋಲುವಿರಿ. ನೀವು ಇಂದು ಅಸಹಜವಾಗಿ ನಡೆದುಕೊಳ್ಳುವುದು ಇಷ್ಟವಾಗದು. ಆಲಸ್ಯವು ಅಧಿಕವಾಗಬಹುದು. ಬಹಳ ದಿನದಿಂದ ಅಂದುಕೊಂಡ ಸ್ಥಳಕ್ಕೆ ಹೋಗುವಿರಿ. ಸಾಧಿಸಲಾಗದ ಕೆಲಸಕ್ಕೆ ಹೆಚ್ಚು ಶ್ರಮವನ್ನು ಹಾಕುವಿರಿ. ಸ್ನೇಹ ಸಂಬಂಧಗಳನ್ನು ದೂರ ಮಾಡಿಕೊಳ್ಳದೇ ನಿರ್ವಹಿಸಿ. ಬೇಡದ ವಿಚಾರದ ಕಡೆ ಮನಸ್ಸು ಹೋಗುವುದು. ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗುವುದು. ಹೂಡಿಕೆಯನ್ನು ಮಾಡುವಾಗ ಲೆಕ್ಕಾಚಾರದ ಬಗ್ಗೆ ಗಮನ ಬೇಕು.
ಮೀನ ರಾಶಿ; ಇಂದು ನೀವು ಹೊಸ ಆಲೋಚನೆಗಳಿಂದ ಬಹಳ ಉತ್ಸಾಹವಿರುವುದು. ಇದೇ ಅನೇಕ ದಿನಗಳ ಅನಂತರ ಬಂದ ಉತ್ಸಾಹದ ದಿನವಾಗಿದೆ. ತಮ್ಮ ಕಾರ್ಯಕ್ಕೆ ಯಾರನ್ನಾದರೂ ಬಳಸಿಕೊಳ್ಳಬಹುದು. ವೃತ್ತಿಯ ಜೀವನದಲ್ಲಿ ಯಾವುದೇ ಪ್ರಮುಖ ಸಮಸ್ಯೆಯು ನಿಮ್ಮ ದಕ್ಷತೆಯ ಮೇಲೆ ಯಾವ ಪರಿಣಾಮವನ್ನು ಉಂಟುಮಾಡದು. ಇಂದು ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಕಾಡುವುದಿಲ್ಲ. ದಾಂಪತ್ಯದಲ್ಲಿ ಅನಿರೀಕ್ಷಿತವಾಗಿ ಸಿಕ್ಮ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸನ್ನು ಉದ್ವೇಗಕ್ಕೆ ಒಡ್ಡದೇ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ದ್ವೇಷವನ್ನು ಮುಂದುವರಿಸುವುದು ನಿಮಗೆ ಇಷ್ಟವಾಗದು.