Horoscope: ಒಡಹುಟ್ಟಿದವರು ಮತ್ತು ಸ್ನೇಹಿತರಿಂದ ಉದ್ವಿಗ್ನತೆ ಉಂಟಾಗಬಹುದು

ನೀವು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ನವೆಂಬರ್​ 14: ಅಲಂಕಾರಕ್ಕೆ ಹೆಚ್ಚು ಸಮಯವನ್ನು ಕೊಡುವಿರಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸುವಿರಿ. ಯೋಗಾಭ್ಯಾಸದಿಂದ ನಿಮಗೆ ಆಯಾಸವಾಗಲಿದೆ. ಹಾಗಾದರೆ ನವೆಂಬರ್​ 14ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಒಡಹುಟ್ಟಿದವರು ಮತ್ತು ಸ್ನೇಹಿತರಿಂದ ಉದ್ವಿಗ್ನತೆ ಉಂಟಾಗಬಹುದು
ಒಡಹುಟ್ಟಿದವರು ಮತ್ತು ಸ್ನೇಹಿತರಿಂದ ಉದ್ವಿಗ್ನತೆ ಉಂಟಾಗಬಹುದು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 14, 2024 | 12:15 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಗುರುವಾರ, ತಿಥಿ: ತ್ರಯೋದಶೀ/ತ್ರಯೋದಶೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಸಿದ್ಧಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 01:43 ರಿಂದ 03:08ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:34 ರಿಂದ 08:00ರವರೆಗೆ, ಗುಳಿಕ ಕಾಲ ಬೆಳಿಗ್ಗೆ 09:26ರಿಂದ 10:51 ರವರೆಗೆ.

ತುಲಾ ರಾಶಿ: ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇಂದು ಕಷ್ಟವಾದೀತು. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ಕೌಟುಂಬಿಕ ಕೆಲಸ ಮತ್ತು ಖರ್ಚು ಹೆಚ್ಚಾಗುವ ಪರಿಸ್ಥಿತಿ ಉಂಟಾಗಬಹುದು. ಒಡಹುಟ್ಟಿದವರು ಮತ್ತು ಸ್ನೇಹಿತರಿಂದ ಉದ್ವಿಗ್ನತೆ ಉಂಟಾಗಬಹುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ.ನಿಮ್ಮ ಶ್ರಮವು ಫಲ ನೀಡುತ್ತದೆ ಮತ್ತು ನೀವು ಹೊಸ ಅವಕಾಶವನ್ನು ಪಡೆಯಬಹುದು. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ. ತಂದೆಯ ಮೇಲೆ‌ ನಿಮ್ಮ‌ ಗೌರವವು ಅಧಿಕಾಗಿದ್ದು ಅನಿರೀಕ್ಷಿತ ಉಡುಗೊರೆಯನ್ನು ಕೊಡುವಿರಿ. ಹಿತಶತ್ರುಗಳನ್ನು ಸರಿಯಾಗಿ ಬಳಸಿಕೊಳ್ಳುವುದು ನಿಮಗೆ ಗೊತ್ತಾಗುವುದು.

ವೃಶ್ಚಿಕ ರಾಶಿ: ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಟ್ಟಾರು. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ದೂರ ಪ್ರಯಾಣದ ಖರ್ಚು ಹೆಚ್ಚಾಗಬಹುದು. ನೀವು ಸ್ಪರ್ಧೆಯಲ್ಲಿ ಜಯವನ್ನು ಪಡೆಯಬಹುದು. ನಿಮಗೆ ಖುಷಿ ಕೊಡುವ ಸಂಗತಿಯ ಕಡೆಗೆ ಗಮನಹರಿಸಿ. ಹಲವು ದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗದ ಭಡ್ತಿಯು ಸಿಗಲಿದೆ. ನಿಮ್ಮ ವಾಹನವನ್ನು ಬದಲಾಯಿಸುವ ಸಾಧ್ಯತೆ ಇದೆ.‌ ನಿಮ್ಮ ನಾಯಕತ್ವದ ಕೌಶಲ್ಯಗಳನ್ನು ಸಹ ಗುರುತಿಸುವರು. ಪ್ರೇಮ ಸಂಬಂಧಗಳಲ್ಲಿ ಅಡೆತಡೆಗಳು ಉಂಟಾಗಬಹುದು. ಹಣವನ್ನು ವೃಥಾ ಖಾಲಿ ಮಾಡುವುದು ಬೇಡ. ಸ್ನೇಹಿತರ ಜೊತೆ ಎಲ್ಲಿಗಾದರೂ ಪ್ರಯಾಣವನ್ನು ಮಾಡುವಿರಿ. ಸತ್ಯವನ್ನು ಸಂಗಾತಿಯಿಂದ ಮುಚ್ಚಿಡಲು ಪ್ರಯತ್ನಿಸುವಿರಿ.

ಧನು ರಾಶಿ: ಅಲಂಕಾರಕ್ಕೆ ಹೆಚ್ಚು ಸಮಯವನ್ನು ಕೊಡುವಿರಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸುವಿರಿ. ಯೋಗಾಭ್ಯಾಸದಿಂದ ನಿಮಗೆ ಆಯಾಸವಾಗಲಿದೆ. ಕೊಟ್ಟ ಹಣವನ್ನು ನೀವು ಪುನಃ ಕೇಳುವಿರಿ. ಹೋರಾಟದ ನಂತರ ಉದ್ಯೋಗದಲ್ಲಿ ಬಡ್ತಿ ಮತ್ತು ಬದಲಾವಣೆ ಬರಬಹುದು. ಕೋಪದ ಕಾರಣ, ಸಂಗಾತಿಯೊಂದಿಗೆ ದೂರವಾಗುವ ಪರಿಸ್ಥಿತಿ ಉದ್ಭವಿಸಬಹುದು. ನಿಮ್ಮಿಂದ ಸಹಾಯವನ್ನು ಪಡೆದ ಹಿರಿಯರು ಆಶೀರ್ವದಿಸುವರು. ಇದರಿಂದ ಸಂತೋಷವಾಗಲಿದೆ. ಸ್ನೇಹಿತನ ಸಹವಾಸದಿಂದ ದುರಭ್ಯಾಸವು ಬರಬಹುದು. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ನಂಬಿಕೆಯನ್ನು ಕಳೆದುಕೊಳ್ಳುವವ ಪ್ರಸಂಗವು ಬರಬಹುದು. ಉದ್ಯಮವನ್ನು ಮುನ್ನಡೆಸಲು ಉತ್ತಮ ವ್ಯಕ್ತಿಗಳ ಅನ್ವೇಷಣೆ ಮಾಡುವಿರಿ. ದೇವತಾರಾಧನೆಯಲ್ಲಿ ಮನಸ್ಸು ನಿಲ್ಲಲಿದೆ.

ಮಕರ ರಾಶಿ: ಇಂದಿನ ಕೆಲವು ಮಾತುಗಳನ್ನು ನೀವು ನಿರ್ಲಕ್ಷಿಸುವಿರಿ. ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು. ಹಳೆಯ ಸ್ನೇಹಿತೆಯ ಸಖ್ಯವಾಗಬಹುದು. ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವ್ಯವಹರಿಸುವುದು ಉತ್ತಮ. ಬೌದ್ಧಿಕ ಸಾಮರ್ಥ್ಯವನ್ನು ಅರ್ಥಪೂರ್ಣವಾಗಿ ಬಳಸಲು ಸಾಧ್ಯವಾಗುತ್ತದೆ. ಅಧ್ಯಯನ ಮತ್ತು ಬೋಧನೆಯಲ್ಲಿ ಸಾಮಾನ್ಯ ಅಡಚಣೆಯ ಪರಿಸ್ಥಿತಿ ಉದ್ಭವಿಸಬಹುದು. ಹೊಟ್ಟೆಯ ಸಮಸ್ಯೆಗಳು ಒತ್ತಡಕ್ಕೆ ಕಾರಣವಾಗಬಹುದು. ಹೊಸ ಉದ್ಯೋಗಕ್ಕೆ ಪ್ರಯತ್ನಗಳು ಆರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ. ಹಿರಿಯರಿಂದ ಮಾರ್ಗದರ್ಶನವು ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಓಡಾಟವು ವ್ಯರ್ಥಯವಾಗುವುದು. ಉಚಿತವಾಗಿ ಸಿಕ್ಕಿದ್ದನ್ನು ಪಡೆಯಲು ಇಚ್ಛಿಸುವುದಿಲ್ಲ. ಶ್ರಮಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ.

ಕುಂಭ ರಾಶಿ: ಹಳೆಯ ಬಂಧುಗಳ ಸಮಾಗಮವಾಗಲಿದ್ದು, ಸಂತೋಷವಾಗಲಿದೆ. ದೇವಾಲಯಕ್ಕೆ ಹೋಗಿ ನೆಮ್ಮದಿಯನ್ನು ಪಡೆದುಕೊಳ್ಳುವಿರಿ. ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ಕೆಲವು ಸಂದರ್ಭಗಳು ನಿಮ್ಮ ಚಿತ್ರಣವನ್ನು ಬಲಪಡಿಸುತ್ತವೆ. ಸಹೋದರಿಯರು ಮತ್ತು ಸ್ನೇಹಿತರ ಮೇಲೆ ಖರ್ಚು ಹೆಚ್ಚಾಗಬಹುದು. ಸಂಗಾತಿಯ ಆರೋಗ್ಯದ ಮೇಲಿನ ಖರ್ಚು ಹೆಚ್ಚಾಗಬಹುದು. ದೂರ ಪ್ರಯಾಣ ಮಾಡುವ ಪರಿಸ್ಥಿತಿ ಬರಬಹುದು. ನಿಮಗೆ ಬೇಕಾದ ವಾತಾವರಣದಲ್ಲಿ ಇರುವುದು ಇಷ್ಟವಾಗುವುದು. ಸಹೋದರನ ಜೊತೆ ಸಣ್ಣ ವಿಷಯಕ್ಕೆ ವಿವಾದವಾಗಬಹುದು.‌ ನಿಮ್ಮ ಖರ್ಚುಗಳನ್ನು ನೀವು ನಿಯಂತ್ರಿಸಬೇಕಾಗುತ್ತದೆ. ಕಾರ್ಯದ ಅನಿವಾರ್ಯತೆಯು ಎದ್ದು ಕಾಣಿಸುವುದು. ನಿಮ್ಮ ಸರಳ ವ್ಯಕ್ತಿತ್ವವು ಮಾದರಿಯಾಗುವುದು.

ಮೀನ ರಾಶಿ; ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು. ಕಳೆದ ವಿಚಾರವನ್ನು ಮತ್ತೆ ಮತ್ತೆ ನೆನಪಿಸಿಕೊಂಡು ದುಃಖಿಸುವಿರಿ. ಅಪರಿಚಿತ ಕರೆಗಳು ನಿಮ್ಮನ್ನು ಪೀಡಿಸಬಹುದು. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ‌ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು.ಲ. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮ ಮತ್ತು ಸಕಾರಾತ್ಮಕ ಬೆಳವಣಿಗೆಯ ಸಾಧ್ಯತೆಯಿದೆ. ತಾಯಿಯ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರವಾಗಿ ಪರಿವರ್ತಿತವಾಗಬಹುದು. ಅಶಕ್ತರಿಗೆ ನಿಮ್ಮ ಕೈಲಾದ ಸಹಕಾರವನ್ನು ಮಾಡುವಿರಿ. ನೂತನ ಸಂಬಂಧವನ್ನು ಬೆಳೆಸಿಕೊಳ್ಳಲು ಉತ್ಸುಕರಾಗುವಿರಿ. ಅರ್ಥಿಕ ಕ್ರಮವನ್ನು ಸರಿಯಾಗಿ ಇಟ್ಟುಕೊಳ್ಳುವಿರಿ.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್