Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ವಾಹನ ಚಲಾಯಿಸುವಾಗ ಜಾಗರೂಕತೆ ಇರಲಿ

30 ಜನವರಿ​​ 2025: ಗುರುವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ಆಗಿಹೋದ ಕಾಯಗಳನ್ನು ನೆನೆದುಕೊಂಡು ಸಂತೃಪ್ತಿಪಡುವಿರಿ. ನಿಮಗೆ ನೀಡಿದ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಹಾಗಾದರೆ ಜನವರಿ 30ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ವಾಹನ ಚಲಾಯಿಸುವಾಗ ಜಾಗರೂಕತೆ ಇರಲಿ
ಈ ರಾಶಿಯವರು ವಾಹನ ಚಲಾಯಿಸುವಾಗ ಜಾಗರೂಕತೆ ಇರಲಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 30, 2025 | 12:12 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯನ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಶ್ರವಣಾ, ಮಾಸ : ಮಾಘ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ದ್ವಿತೀಯಾ ನಿತ್ಯನಕ್ಷತ್ರ : ಶತಭಿಷಾ, ಯೋಗ : ವ್ಯತಿಪಾತ್, ಕರಣ : ಬವ , ಸೂರ್ಯೋದಯ – 07 – 02 am, ಸೂರ್ಯಾಸ್ತ – 06 – 29 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:12 – 15:38, ಯಮಘಂಡ ಕಾಲ 07:02 – 08:28, ಗುಳಿಕ ಕಾಲ 09:54 – 11:20

ತುಲಾ ರಾಶಿ: ನಿಮ್ಮ ಒತ್ತಡದ ಸ್ಥಿತಿಯಲ್ಲಿ ಯಾರಾದರೂ ಜೊತೆಗೆ ಬರುವರು. ಆದರೆ ಅದರ ದುರುಪಯೋಗ ಮಾಡಿಕೊಳ್ಳಬಹುದು. ವೃತ್ತಿಯಲ್ಲಿ ಪರಿಣಿತಿಯನ್ನು ಸಾಧಿಸಿಕೊಳ್ಳುವಿರಿ. ಸಹೋದ್ಯೋಗಿಗಳಿಂದ ಒತ್ತಡವು ಬರಬಹುದು. ವಿವಾಹದ‌ ಮಾತುಕತೆಗೆ ಹಿರಿಯರನ್ನು ಮುಂದಿಟ್ಟುಕೊಳ್ಳಬೇಕು. ಅಪರೂಪದ ಮಿತ್ರರ ಭೇಟಿಯಿಂದ ಸಂತೋಷವಾಗಲಿದೆ. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ವಿದೇಶದ ವ್ಯಕ್ತಿಗಳ ಸಂಪರ್ಕ ಉಂಟಾಗುವುದು. ನಿರಪೇಕ್ಷೆಯಿಂದ ಕೆಲಸ ಮಾಡಿದರೆ, ಅಧಿಕ ಸಂತೋಷ. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಕಠೋರ ಮಾತುಗಳಿಂದ ನಿಮ್ಮ ವಲಯ ಖಾಲಿಯಾಗಿ, ಒಂಟಿಯಾಗುವಿರಿ. ಯೌವನಾವಸ್ಥೆಯಲ್ಲಿ ಇರುವವರಿಗೆ ಯಾರನ್ನಾದರೂ ಪ್ರೀತಿಸುವ ಇಚ್ಛೆಯು ಬರಬಹುದು. ಸಹೋದರರ ನಡುವೆ ಭಿನ್ನಾಭಿಪ್ರಾಯ ಬರಬಹುದು. ಜೀವನದ ಬಗ್ಗೆ ನಕಾರಾತ್ಮಕ ಅಂಶಗಳೇ ಕಾಣಿಸುವುದು.

ವೃಶ್ಚಿಕ ರಾಶಿ: ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಸಹಜ. ದೊಡ್ಡ ಉದ್ದೇಶಕ್ಕೆ ಅದನ್ನು ಗೌಣ ಮಾಡಿಕೊಂಡರೆ ಮಾನಸಿಕ ಆರೋಗ್ಯದಲ್ಲಿ ಚೇತರಿಕೆ. ಹೂಡಿಕೆಯಿಂದ ಲಾಭವು ಸಿಗುವ ನಿರೀಕ್ಷೆಯಲ್ಲಿ ಇರುವಿರಿ. ಅನಿರೀಕ್ಷಿತವಾಗಿ ದೂರಪ್ರಯಾಣ ಮಾಡಬೇಕಾದೀತು. ನಿಮ್ಮ ಕೆಲಸಕ್ಕೆ ವೃತ್ತಿಯಲ್ಲಿ ಉತ್ತಮ ಪ್ರಶಂಸೆಯು ಸಿಗುವುದು. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಯೋಜನೆ ಮಾಡಬೇಕು. ಇಂದು ನಿಮಗೆ ಉತ್ಸಾಹದ ದಿನವೂ ಆಗಲಿದೆ. ರಾಜಕೀಯವಾದ ಲಾಭದ ಗಳಿಕೆಯು ಇರಲಿದೆ. ನಿಮ್ಮ ಯೋಜನೆಗೆ ಸ್ಪಂದಿಸದೇ ಅದು ಹಾಳಾಗುವುದು. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ. ಯಾರದೋ ದಾಳವಾಗಿ ಇಂದು ಕೆಲಸವನ್ನು ಮಾಡಬೇಕಾಗಬಹುದು. ಸರ್ಕಾರಿ ಉದ್ಯೋಗಿಗಳ ಸ್ಥಾನವು ಹೆಚ್ಚಾಗಬಹುದು. ನಿಮ್ಮನ್ನು ನಿರ್ಲಕ್ಷಿಸುವ ಸ್ಥಳದಲ್ಲಿ ಇರಲು ಇಷ್ಟಪಡುವುದಿಲ್ಲ. ಎಲ್ಲ ತಪ್ಪುಗಳಿಗೂ ಸಂಗಾತಿಯನ್ನು ಬೊಟ್ಟು ಮಾಡಿ ತೋರಿಸುವಿರಿ.

ಧನು ರಾಶಿ: ಯಶಸ್ಸಿನ ಅಪೇಕ್ಷೆ ಉಳ್ಳವರು ಮತ್ತೊಬ್ಬರ ಒಳ್ಳೆಯದನ್ನೂ ಕೀರ್ತನೆ ಮಾಡಬೇಕು. ಶೀಘ್ರಫಲಾಪೇಕ್ಷೆಯಿಂದ ಅನಾಹುತವು ಸಂಭವಿಸೀತು. ಗಾಯಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ. ವಿಷಯಕ್ಕೆ ತಕ್ಕಂತೆ ಮಾತಿನಲ್ಲಿ ಏರಿಳಿತವಿರಲಿ. ಆತ್ಮಸಂತೋಷವು ನಿಮ್ಮ ಕಾರ್ಯಕ್ಕೆ ಇನ್ನಷ್ಟು ಉತ್ಸಾಹವನ್ನು ಕೊಡುವುದು. ಯಾರಿಲ್ಲಿರುವ ನ್ಯೂನತೆಯನ್ನು ಸಹಜವಾಗಿ ಸ್ವೀಕರಿಸುವ ಸ್ವಭಾವ ಉತ್ತಮ. ಶತ್ರುಗಳಿಂದ ನಿಮಗೆ ವಂಚನೆಯಾಗಿದ್ದು ವಿಳಂಬವಾಗಿ ಗೊತ್ತಾಗುವುದು. ಮಿತ್ರರಿಂದ ನಿಮ್ಮ ಇಚ್ಛೆಯು ಪೂರ್ಣವಾಗುವುದು. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಬಹಳ ದಿನಗಳ ಅನಂತರ ಬಂಧುಗಳ ಮನೆಗೆ ಹೋಗಲಿದ್ದೀರಿ. ಸಂಗಾತಿಯ ವಿಚಾರದಲ್ಲಿ ಉದ್ವೇಗಕ್ಕೆ ಒಳಗಾಗುವುದು ಬೇಡ. ದೃಢವಾದ ಗುರಿಯ ಕಡೆ ಗಮನವಿರಲಿ.

ಮಕರ ರಾಶಿ: ಗೌಪ್ಯ ವ್ಯವಹಾರದಲ್ಲಿ ತೊಂದರೆ ಕಾಣಿಸುವುದು. ಮಾಡುವ ಕಾರ್ಯದಲ್ಲಿರುವ ಆರಂಭಶೂರತ್ವವು ಕೊನೆಗೆ ಇರಲಾರದು. ಸಿದ್ಧವಸ್ತುಗಳ ಮಾರಾಟದಿಂದ ಲಾಭವನ್ನು ಕಾಣುವಿರಿ. ವಿದ್ಯಾರ್ಥಿಗಳು ಪ್ರೇಮದಲ್ಲಿ ಬೀಳುವ ಸಾಧ್ಯತೆ ಇದೆ. ಕೌಶಲವನ್ನು ಕರಗತ ಮಾಡಿಕೊಳ್ಳುವಿರಿ. ಮನೆಯವರ ಮಕ್ಕಳ ಮೇಲೆ ಗಮನ ಇರಿಸುವುದು ಮುಖ್ಯ. ಪ್ರಚೋದನಕಾರಿ ಮಾತುಗಾರರಿಗೆ ಅವಕಾಶವು ಸಿಗಲಿದೆ. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ. ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಬಹಳ ದಿನಗಳ ಅನಂತರ ಸಮಾಜಮುಖಿಯಾಗಿ ಕಾಣಿಸುವಿರಿ. ನಿಮ್ಮ ಪಾಲಿಗೆ ಬಂದಿದ್ದನ್ನು ಬಿಟ್ಟುಕೊಡಲಾರಿರಿ. ಇನ್ನೊಬ್ಬರ ಸಂಕಷ್ಟವನ್ನು ನಿವಾರಿಸಲು ಉತ್ಸಾಹದಿಂದ ಇರುವಿರಿ. ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುವಿರಿ.

ಕುಂಭ ರಾಶಿ: ನಿಮ್ಮ ಉದ್ಯೋಗಕ್ಕೆ ಆರ್ಥಿಕ ಬೆಂಬಲ ಸಿಗದಿದ್ದರೂ ನೈತಿಕ ಬೆಂಬಲ ಸಿಗಲಿದೆ. ಇಂದು ನಿಮ್ಮ ಉದ್ಯಮದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಕಷ್ಟವಾದೀತು. ಸಣ್ಣ ಮಟ್ಟಿನ ಸಾಲವನ್ನು ನೀವು ಮಾಡಬೇಕಾದ ಸ್ಥಿತಿಯು ಬರಬಹುದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಉತ್ಪನ್ನಗಾರರಿಗೆ ಸಂತೋಷದ ದಿನವು ಇದಾಗಲಿದೆ. ನೂತನ ಗೃಹನಿರ್ಮಾಣದ ಬಗ್ಗೆ ಮನೆಯವರ ಜೊತೆ ಮಾತನಾಡುವಿರಿ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಸುಂದರ ಸ್ಥಳಗಳಿಗೆ ಹೋಗಿ ಮನಸ್ಸು ಹಗುರಾಗುವುದು. ಮನಸ್ಸಿನ ಬಂಧಗಳು ಸಡಿಲಾಗುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಯಾವ ಕಾರ್ಯವನ್ನೇ ಮಾಡುವುದಾದರೂ ಪ್ರಮಾಣದ ಅಗತ್ಯವಿರಲಿದೆ. ಮನೆಯ ಸದ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಪತ್ರ ವ್ಯವಹಾರಗಳಿಲ್ಲದೇ ಯಾವದನ್ನೂ ಒಪ್ಪಿಕೊಳ್ಳುವುದು ಬೇಡ.

ಮೀನ ರಾಶಿ: ಇಂದು ನಿಮ್ಮ ಸಂಗಾತಿಯಾಗುವವರ ಜೊತೆ ಹೆಚ್ಚು ಸಮಯ ಕಳೆದು, ಭವಿಷ್ಯದ ಬಗ್ಗೆ ಚಿಂತನೆ ನಡೆಸುವಿರು. ಆಗಿಹೋದ ಕಾಯಗಳನ್ನು ನೆನೆದುಕೊಂಡು ಸಂತೃಪ್ತಿಪಡುವಿರಿ. ನಿಮಗೆ ನೀಡಿದ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಲವಲವಿಕೆ ಇರಲಿದೆ. ಬಾಂಧವ್ಯವನ್ನು ಬೆಸೆಯಲು ಒಳ್ಳೆಯ ಸನ್ನಿವೇಶ ಸೃಷ್ಟಿಯಾಗುವುದು. ಸಣ್ಣ ಕಾರ್ಯಕ್ಕೆ ಹೆಚ್ಚು ಶ್ರಮವಹಿಸಬೇಕಾದೀತು. ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ. ಪ್ರಯತ್ನವೇ ಇಲ್ಲದೇ ಫಲವನ್ನು ಬಯಸುವುದು ಸರಿಯಲ್ಲ. ಹಣದ ವಿಚಾರದಲ್ಲಿ ನಿಮಗೆ ಇಂದು ಲೋಭವು ಇರದು. ನೀವು ಇಂದು ಯಾರ ಮಾತನ್ನೂ ನಂಬುವ ಮನಃಸ್ಥಿತಿಯಲ್ಲಿ ಇಲ್ಲ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುವರು.

ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ